ನಮ್ಮ ಸಂಘದ ಮೂಲಕ ಪ್ರತೀ ವರ್ಷ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದು ನಮ್ಮ ಸಂಘದ ಕ್ರೀಡಾ ಸಮಿತಿ ಈ ಕಾರ್ಯಕ್ರಮವನ್ನು ಬಹಳ ಶಸ್ತುಬದ್ಧವಾಗಿ ಆಯೋಜಿಸುತ್ತಿದ್ದು ಅಭಿನಂದನೀಯವಾಗಿದೆ . ಇಂದಿನ ಬದಲಾದ ಕಾಲಘಟ್ಟದಲ್ಲಿ ಕ್ರೀಡಾಕೂಟದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು ಮುಖ್ಯವಾಗಿ ಯುವ ಪೀಳಿಗೆಗೆ ಉತ್ಸಾಹ ತುಂಬುವಲ್ಲಿ ಪೂರಕವಾಗಿದೆ . ನಮ್ಮ ದಿನನಿತ್ಯದ ಜೀವನದಲ್ಲಿ ನಡಿಗೆ ,ಯೋಗ ,ವ್ಯಾಯಾಮ ,ಪ್ರಾಣಾಯಾಮಗಳನ್ನೂ ಅಳವಡಿಸಿಕೊಳ್ಳುವುದರಿಂದ ನಮ್ಮ ಜೀವನ ಶೈಲಿ ಬದಲಾಗುವುದರೊಂದಿಗೆ ನಮ್ಮ ದೈಹಿಕ ,ಮಾನಸಿಕ ಆರೋಗ್ಯದೊಂದಿಗೆ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಉತ್ತಮ ಕೊಡುಗೆ ನೀಡುವಂತಾಗುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಅಭಿಪ್ರಾಯಪಟ್ಟರು . ಅವರು ಜ . ೧೫ ರಂದು ನಗರದ ಎಸ್ . ಪಿ . ಕಾಲೇಜು ಮೈದಾನದಲ್ಲಿ ನಡೆದ ಪುಣೆ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂದಿನ ಕ್ರೀಡಾಕೂಟದಲ್ಲಿ ಮಕ್ಕಳು ಉತ್ಸಾಹಪೂರ್ಣವಾಗಿ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ . .ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯವಾಗಿದ್ದು ಸೋಲು ಗೆಲುವುಗಳ ಬಗ್ಗೆ ಚಿಂತಿಸದೆ ಸಮಾನತೆಯಿಂದ ಸ್ವೀಕರಿಸಿ . . ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಾಷ್ಟ್ರಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುವಲ್ಲಿ ಯೋಜನೆ ಹಾಕಿಕೊಂಡಿದ್ದೇವೆ. ಸಮಾಜಬಾಂಧವರೆಲ್ಲರ ಪ್ರೋತ್ಸಾಹ, ಸಹಕಾರ ಮುಖ್ಯ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷರಾದ ಗಣೇಶ್ ಹೆಗ್ಡೆ ಪುಂಚೂರು ಮಾತನಾಡಿ ಇಂದಿನ ಕ್ರೀಡಾಕೂಟದಲ್ಲಿ ಭಾಗವಹಿಸುವುದಕ್ಕೆ ಆನಂದವಾಗುತ್ತಿದೆ . ನಮ್ಮ ಯುವ ಜನತೆಗೆ ಕ್ರೀಡಾಕೂಟದಿಂದ ಮನೋಬಲ ವೃದ್ಧಿಯಾಗುತ್ತದೆ . ಯೋಗ ,ವ್ಯಾಯಾಮ ,ಈಜು ಇವೆಲ್ಲವುಗಳಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ವನ್ನು ಕಾಪಾಡಿಕೊಳ್ಳಬಹುದಾಗಿದೆ . ಕ್ರೀಡಾಳುಗಳಲ್ಲಿ ಮುಖ್ಯವಾಗಿ ಜೀವನವನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಇರುತ್ತದೆ .ನಮ್ಮ ಮಕ್ಕಳನ್ನು ಆದಷ್ಟು ಮೊಬೈಲ್ ಗಳಿಂದ ದೂರವಿರಿಸಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕಾಗಿದೆ ಎಂದರು.
ಖಾಸಗಿ ವಾಹಿನಿಯ ಮುಖ್ಯ ನಿರೂಪಕ ನವೀನ್ ಶೆಟ್ಟಿ ಎಡ್ಮೆಮಾರ್ ಮಾತನಾಡಿ ಪುಣೆ ಬಂಟರ ಸಂಘದ ಇಂದಿನ ಕ್ರೀಡಾಕೂಟದಲ್ಲಿ ಭಾಗವಹಿಸುವುದಕ್ಕೆ ಆನಂದವಾಗುತ್ತಿದೆ . ಹೊರನಾಡಿನಲ್ಲಿದ್ದರೂ ಪುಣೆ ಬಂಟರ ಸಂಘದ ಪದಾಧಿಕಾರಿಗಳು ನಮ್ಮ ಹಿರಿಯರ ಪರಂಪರೆ ,ಆದರ್ಶಗಳನ್ನು ಮರೆತಿಲ್ಲ . ಇಂದು ದೀಪ ಪ್ರಜ್ವಲಿಸಿ ತೆಂಗಿನಕಾಯಿ ಒಡೆದು ಬಲೂನು ಹಾರಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿರುವುದು ಅರ್ಥಪೂರ್ಣವಾಗಿದೆ . ಕ್ರೀಡಾಸ್ಪರ್ಧೆಗಳಲ್ಲಿ ಸೋಲು ಗೆಲುವುಗಳಲನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ . ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ರಾಷ್ಟ್ರೀಯ ,ಅನಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪುಣೆ ಬಂಟರ ಸಂಘ ಪ್ರೇರಣೆಯಾಗಲಿ ಎಂದರು .
ವೇದಿಕೆಯಲ್ಲಿ ಖಾಸಗಿ ಟಿವಿ ವಾಹಿನಿಯ ಜಾಹೀರಾತು ಮುಖ್ಯಸ್ಥರಾದ ರಿಯಾಜ್ ,ಪುಣೆ ಬಂಟರ ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು ,ಪ್ರಧಾನ ಕಾರ್ಯದರ್ಶಿ ಅಜಿತ್ ಕೆ ಹೆಗ್ಡೆ ,ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ , ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ ಇಸಾರಮಕ್ಕಿ , ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ತಾರಾನಾಥ ಕೆ ರೈ ಮೇಗಿನಗುತ್ತು ,,ಕ್ಯಾಟರಿಂಗ್ ವಿಭಾಗದ ಕಾರ್ಯಾಧ್ಯಕ್ಷ ದಿನೇಶ್ ಕುಮಾರ್ ಶೆಟ್ಟಿ ಕಳತ್ತೂರು ,ಜೊತೆ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ನಿಟ್ಟೆ ,ಜೊತೆ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು ,ವಿಶ್ವವಸ್ಥರಾದ ಸುಧೀರ್ ಶೆಟ್ಟಿ ಕಣಂಜಾರು ಕೊಳಕೆಬೈಲು , ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ ,ಯುವ ವಿಭಾಗದ ಕಾರ್ಯಾಧ್ಯಕ್ಷ ಉದಯ್ ಶೆಟ್ಟಿ , ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿ ,ಕ್ರೀಡಾ ಕಾರ್ಯಾಧ್ಯಕ್ಷೆ ಸಾರಿಕಾ ಸಿ ಶೆಟ್ಟಿ ,ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಯು ಶೆಟ್ಟಿ ಉಪಸ್ಥಿತರಿದ್ದರು . ದೀಪ ಪ್ರಜ್ವಲಿಸಿ ,ತೆಂಗಿನಕಾಯಿ ಒಡೆದು ಬಲೂನು ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು . ಅತಿಥಿಗಣ್ಯರು ಬೆಳಗಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾ ಸಮಿತಿಗೆ ಹಸ್ತಾಂತರಿಸಿದರು . ಸ್ಪರ್ಧಿಗಳು ಮೈದಾನದ ಸುತ್ತ ಪಥಸಂಚಲನ ನಡೆಸಿದರು . ನಂತರ ಸಣ್ಣ ಮಕ್ಕಳ ಓಟದ ಸ್ಪರ್ಧೆಯನ್ನು ಆರಂಭಿಸಲಾಯಿತು . ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಆವರ್ಸೆ ಇಸಾರಮಕ್ಕಿ ಸ್ವಾಗತಿಸಿದರು . ಗಣೇಶ್ ಹೆಗ್ಡೆಯವರನ್ನು ಶಾಲು ಹೊದೆಸಿ ಸ್ಮರಣಿಕೆ ಹಾಗೂ ಪುಷ್ಪಗುಚ್ಛವನ್ನು ನೀಡಿ ಗೌರವಿಸಲಾಯಿತು . ಚಹಾ ,ಉಪಾಹಾರವನ್ನು ಪ್ರಾಯೋಜಿಸಿದ ಶಶೀನ್ದ್ರ ಶೆಟ್ಟಿ ,ಸುಧೀರ್ ಶೆಟ್ಟಿಯವರನ್ನು ಗೌರವಿಸಲಾಯಿತು . ಪತ್ರಕರ್ತ ಕಿರಣ್ ಬಿ ರೈ ಕರ್ನೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಚಿತ್ರ ,ವರದಿ : ಕಿರಣ್ ಬಿ ರೈ ಕರ್ನೂರು