ಮುಂಬಯಿ (ಆರ್ಬಿಐ), ಜ.25: ಬೃಹನ್ಮುಂಬಯಿ ಚೆಂಬೂರು ಛೆಡ್ಡಾ ನಗರದಲ್ಲಿನ ಶ್ರೀನಾಗ ಸುಬ್ರಹ್ಮಣ್ಯ ಪ್ರತಿಷ್ಠಾಪಿತ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಜರುಗುತ್ತಿರುವ ಬ್ರಹ್ಮಕಲಶಾಭಿಷೇಕ ಸಮಾರಂಭದಲ್ಲಿ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ.ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನವಾದ ಶ್ರೀ ಸಂಪುಟ ನರಸಿಂಹಸ್ವಾಮೀ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಪೀಠಾಧಿಪತಿ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರು ಗೋಪಾಲ್ ಶೆಟ್ಟಿ ಮತ್ತು ಉಷಾ ಜಿ.ಶೆಟ್ಟಿ ದಂಪತಿ ಹಾಗೂ ಅತಿಥಿಯಾಗಿದ್ದ ಶ್ರೀ ಗೋಪಾಲ್ ಸಿ.ಶೆಟ್ಟಿ (ಸಂಸದ) ತುಳು ಕನ್ನಡಿಗರ ಅಭಿಮಾನಿ ಬಳಗದ ಸಂಚಾಲಕ, ಮಹಾನಗರದಲ್ಲಿನ ಹೆಸರಾಂತ ಸಂಘಟಕ ಎರ್ಮಾಳ್ ಹರೀಶ್ ಶೆಟ್ಟಿ, ಕನ್ನಡ ಸಂಘ ಸಾಂತಾಕ್ರೂಜ್ ಅಧ್ಯಕ್ಷೆ ಸುಜತಾ ಆರ್.ಶೆಟ್ಟಿ ಉಪಸ್ಥಿತರಿದ್ದು ಗಣ್ಯರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆಗಳನ್ನೀಡಿ ಸನ್ಮಾನಿಸಿ ಶುಭಾರೈಸಿ ಮಂತ್ರಾಕ್ಷತೆಯನ್ನಿತ್ತು ಅನುಗ್ರಹಿಸಿದರು.
ಅರುಣಾ ನಾಗೇಂದ್ರ ಆಚಾರ್ಯ ದಂಪತಿ ಸಂಸದರನ್ನು ಬರಮಾಡಿ ಕೊಂಡರು. ವಿದ್ವಾನ್ ಹೆರ್ಗ ರವೀಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಪ್ರಸಾದ್ ಭಟ್ ಉಪಸ್ಥಿತರಿದ್ದು ಸುಬ್ರಹ್ಮಣ್ಯ ಮಠದ ಮುಂಬಯಿ ಶಾಖೆಯ ವ್ಯವಸ್ಥಾಪಕ ವಿಷ್ಣು ಕಾರಂತ್ ವಂದಿಸಿದರು.