ಬಂಟರ ಸಂಘ ಪಿಂಪ್ರಿ – ಚಿಂಚ್ವಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮವು ಚಿಂಚ್ವಾಡದ ರಂಗೋಲಿ ಸಭಾಗೃಹದಲ್ಲಿ ಜ.20 ರಂದು ನಡೆಯಿತು. ಸೌಮ್ಯಾ ಶೆಟ್ಟಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜ್ಯೋತಿ ವಿ ಶೆಟ್ಟಿ ಹಾಗೂ ಮಾಜಿ ಕಾರ್ಯಾಧ್ಯಕ್ಷೆಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜ್ಯೋತಿ ಶೆಟ್ಟಿಯವರು ಕಾರ್ಯಕ್ರಮಕ್ಕೆ ಆಗಮಿಸಿದ ಸದಸ್ಯರನ್ನು ಸ್ವಾಗತಿಸಿದರು. ಸೌಮ್ಯಾ ಶೆಟ್ಟಿಯವರು ಅರಶಿನ ಕುಂಕುಮದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸ್ಥಳೀಯ ನಗರಸೇವಕಿ ಸುಜಾತಾ ಪಾಲಂದೆಯವರನ್ನು ಮಹಿಳಾ ವಿಭಾಗದಿಂದ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಬಂಟರ ಸಂಘ ಪುಣೆ ಹಾಗೂ ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಮಹಿಳಾ ವಿಭಾಗದ ಸದಸ್ಯೆಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು.
ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಧ್ಯಕ್ಷೆಯರಾದ ಪ್ರೇಮಾ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ, ಸುಪ್ರಿಯಾ ಶೆಟ್ಟಿ, ತನುಜಾ ಶೆಟ್ಟಿ, ಸಮಿತಿಯ ಕಾರ್ಯದರ್ಶಿ ತಾರಾ ಶೆಟ್ಟಿ, ಕೋಶಾಧಿಕಾರಿ ಸ್ಮಿತಾ ಹೆಗ್ಡೆ, ಉಪಾಧ್ಯಕ್ಷೆಯರಾದ ಸುನಿತಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷೆ ದಿವ್ಯಾ ಶೆಟ್ಟಿ, ಬಂಟ್ಸ್ ಹೆಲ್ತ್ ಕೇರ್ ನ ಕಾರ್ಯಾಧ್ಯಕ್ಷೆ ಡಾ. ಸ್ಮಿತಾ ಚೌಟ ಉಪಸ್ಥಿತರಿದ್ದರು.
ಮನೋರಂಜನೆಯಂಗವಾಗಿ ಮ್ಯೂಸಿಕ್ ತಾಂಬೊಲ ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಸಂಘದ ಸದಸ್ಯರಿಗೆ ಅರಶಿನ ಕುಕುಮ ಹಚ್ಚಿ ನೆನಪಿನ ಕಾಣಿಕೆಗಳನ್ನು ನೀಡಿ ಶುಭ ಹಾರೈಸಲಾಯಿತು. ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಜಯಲಕ್ಸ್ಮಿ ಪಿ ಶೆಟ್ಟಿ ಸಭಾಗೃಹದ ವ್ಯವಸ್ಥೆಯನ್ನು ಪ್ರಾಯೋಜಿಸಿದರು. ಕಾರ್ಯಕ್ರಮದ ಕೊನೆಗೆ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.