ಉಡುಪಿ: ನಿವೃತ್ತ ಪ್ರಾಂಶುಪಾಲ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ವತಿಯಿಂದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಎಸ್. ನಾಡಗೌಡ ಅಪ್ಪಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಕಾಲಜ್ಞಾನ ಮಠದ ಶ್ರೀ ಅಪ್ಪಯ್ಯ ಮಹಾಸ್ವಾಮಿಗಳು, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರಾದ ಎ.ಎಸ್. ಪಾಟೀಲ್, ರಾಜ್ಯ ಒಕ್ಕೂಟದ ಅಧ್ಯಕ್ಷ ಡಾ. ಎಸ್. ಬಾಲಾಜಿ ಉಪಸ್ಥಿತರಿದ್ದರು. ರಾಜ್ಯದ 31 ಜಿಲ್ಲೆಯ 31 ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಡಾ. ಎಕ್ಕಾರು ಅವರು ಕಳೆದ ಮೂರು ದಶಕಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಾರಣರಾಗಿದ್ದಾರೆ ಎಂದು ಪ್ರಶಂಸಿಸಿ ಪ್ರಶಸ್ತಿ ನೀಡಲಾಯಿತು. ಅವರ ಸಾಧನೆಗೆ ಈ ಹಿಂದೆ ಎರಡು ಬಾರಿ ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರ ಪ್ರಶಸ್ತಿ ಲಭಿಸಿದೆ.
Previous Articleಉಚಿತ ಪ್ರಣಾಳಿಕೆಗಳು ರಾಜ್ಯದ ಅಭಿವೃದ್ಧಿಗೆ ಅಡ್ಡಿ
Next Article ತೋನ್ಸೆ ವಿಜಯಕುಮಾರ್ ಶೆಟ್ಟಿ ಮತ್ತು ಕಲಾ ಜಗತ್ತು ಮುಂಬೈ