ಮೂಡುಬಿದಿರೆಯ ಯುವ ಬಂಟರ ಸಂಘದ ವತಿಯಿಂದ ಮೂರನೇ ವರ್ಷದ ಬಂಟರ ಸಮ್ಮಿಲನ – ಬಂಟ ಕ್ರೀಡೋತ್ಸವ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಮೂರು ವರ್ಷಗಳಲ್ಲಿ ಯುವ ಬಂಟರ ಸಂಘದ ವತಿಯಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಕೊರೋನಾ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ನೀಡಿದ ನೆರವು ಹಾಗೂ ಸಹಕರಿಸಿದ ಸದಸ್ಯರ ಬಗ್ಗೆ ಉಲ್ಲೇಖಿಸಿ, ಸಂಘವು ನಡೆಸಿದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
19 ರಂದು ಬೆಳಿಗ್ಗೆ 9 ಗಂಟೆಗೆ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಹಾಗೂ ಬಾರ್ಕೂರು ಸಂತೋμï ಗುರೂಜಿ ಆಶೀರ್ವಚನ ನೀಡಲಿದ್ದು ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಅವರು ಪುμÁ್ಪರ್ಚನೆಗೈಯಲಿದ್ದಾರೆ. ಉದ್ಯಮಿ ಪ್ರಕಾಶ್ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಿದ್ದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಉದ್ಯಮಿ ತಮ್ಮಯ್ಯ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲ್, ಡಾ.ಎಂ.ಮೋಹನ ಆಳ್ವ,ಮಿಥುನ್ ರೈ, ಮೇಘನಾಥ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ, ಮಂಜುನಾಥ ಭಂಡಾರಿ, ಶಶಿಧರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ, ರವೀಂದ್ರ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ, ನ್ಯಾಯವಾದಿ ಶರತ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ದ.ಕ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ಸುಮಾರು ಎರಡು ಸಾವಿರ ಬಂಟ ಸಮುದಾಯದ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು ವಿವಿಧ ಆಟೋಟ ಸ್ಪರ್ಧೆಗಳು, ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದೆಂದು ಮಾಹಿತಿ ನೀಡಿದರು.
ಉಪಾಧ್ಯಕ್ಷರಾದ ಭರತ್ ಶೆಟ್ಟಿ ಇರುವೈಲು, ರಮೇಶ್ ಶೆಟ್ಟಿ ಮಿಜಾರ್, ಸಂದೀಪ್ ಶೆಟ್ಟಿ, ಗೌರವ ಸಲಹೆಗಾರ ಅರುಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ, ಅಶೋಕ್ ಶೆಟ್ಟಿ ಕರಿಂಜೆ, ಸಂತೋμï ಶೆಟ್ಟಿ, ಸುಧಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಶ್ರೀನಿತ್ ಶೆಟ್ಟಿ, ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.