ನಮ್ಮ ಟಿವಿ ವಾಹಿನಿಯು ಆಯೋಜಿಸುವ ಬಲೇ ತೆಲಿಪಾಲೆ 10 ನೇ ಆವೃತ್ತಿಯನ್ನು ನಮ್ಮ ಸಂಘದ ಭವನದಲ್ಲಿ ಆಯೋಜಿಸಲು ಅವಕಾಶ ನೀಡಿದ ವಾಹಿನಿಯ ಆಡಳಿತ ನಿರ್ದೇಶಕರಾದ ಡಾ. ಶಿವಶರಣ್ ಶೆಟ್ಟಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ತುಳು ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಉಳಿಸುವಲ್ಲಿ ನಿಸ್ವಾರ್ಥ ಭಾವದಿಂದ ಶ್ರಮಿಸುತ್ತಿರುವ ಸಂಸ್ಥೆ ಇದಾಗಿದ್ದು ಇವರು ಮಾಡುತ್ತಿರುವ ಕಾರ್ಯಕ್ರಮಕ್ಕೆ ಸಹಕಾರ ನೀಡುವುದಕ್ಕೆ ಹೆಮ್ಮೆಯೆನಿಸುತ್ತಿದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಬಾಳಿಕೆ ಅಭಿಪ್ರಾಯಪಟ್ಟರು.
ಅವರು ಫೆ 26 ರಂದು ಪುಣೆ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ನಡೆದ ನಮ್ಮ ಟಿವಿ ವಾಹಿನಿಯ ಬಲೇ ತೆಲಿಪಾಲೆ ಸೀಸನ್ 10 ರ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡುತ್ತಾ ನಮ್ಮ ಟಿವಿ ವಾಹಿನಿಯು ಬಲೇ ತೆಲಿಪಾಲೆ ಎನ್ನುವ ವಿನೂತನ ಪರಿಕಲ್ಪನೆಯ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಿ ಜನರನ್ನು ರಂಜಿಸುವ ಕಾರ್ಯಕ್ರಮಗಳಿಗೆ ಮುನ್ನುಡಿಯನ್ನು ಬರೆದಿದ್ದು ತದ ನಂತರದಲ್ಲಿ ಎಲ್ಲಾ ವಾಹಿನಿಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ಬರಲಾರಂಭಿಸಿದವು. ಅವರ ಈ ಕಾರ್ಯಕ್ರಮದಿಂದಾಗಿ ಇಂದು ತುಳುನಾಡಿನ ನೂರಾರು ಕಲಾವಿದರು ಬೆಳಕಿಗೆ ಬರುವಂತಾಗಿದೆ. ಸಂಘದ ಮೂಲಕ ಕಾರ್ಯಕ್ರಮಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ವೇದಿಕೆಯಲ್ಲಿ ನಮ್ಮ ಟಿವಿ ವಾಹಿನಿಯ ಆಡಳಿತ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಮುಖ್ಯ ನಿರೂಪಕರಾದ ನವೀನ್ ಶೆಟ್ಟಿ ಎಡ್ಮೆಮಾರ್, ಸಂಘದ ಉಪಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಕೆ.ಅಜಿತ್ ಹೆಗ್ಡೆ, ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ, ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ, ಸತೀಶ್ ಶೆಟ್ಟಿ, ದಿನೇಶ್ ಶೆಟ್ಟಿ ಕಳತ್ತೂರು,ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಸುಧೀರ್ ಶೆಟ್ಟಿ ಕಣಂಜಾರು ಕೊಳಕೆಬೈಲು, ಕಿಶೋ ರ್ ಹೆಗ್ಡೆ, ಪಿಂಪ್ರಿ- ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕಡ್ತಲ, ತುಳು ಸಂಘ ಪಿಂಪ್ರಿ- ಚಿಂಚ್ವಾಡ್ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್, ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸುಭಾಷ್ ಶೆಟ್ಟಿ, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿ ಮತ್ತು ಸದಸ್ಯರು, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಸಿ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ, ಯುವ ವಿಭಾಗದ ಕಾರ್ಯಾಧ್ಯಕ್ಷ ಉದಯ್ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು. ಡಾ.ಶಿವಶರಣ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸಂಸ್ಥೆಯ ವತಿಯಿಂದ ಗೌರವಿಸಿದರು.