ಹೊಟೇಲ್ ಬಾರ್ ಎಂಡ್ ರೆಸ್ಟೋರೆಂಟ್ ಗಳ 2023-2024 ರ ಸಾಲಿನ ಶೇ 15 ರಷ್ಟು ಅಬಕಾರಿ ಸುಂಕ ಹೆಚ್ಚಳವನ್ನು ಕಡಿತ ಮಾಡುವಂತೆ ಫೆಡರೇಶನ್ ಆಫ್ ಹೊಟೇಲ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಶನ್ ನಿಯೋಗವು ವಿರಾರ್ ಶಂಕರ್ ಶೆಟ್ಟಿಯವರ ನೇತೃತ್ವದಲ್ಲಿ ಮೀರಾ ಭಯಂಧರ್ ಶಾಸಕಿ ಗೀತಾ ಜೈನ್ ರವರ ಮುಂದಾಳತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರನ್ಮು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.
ಈಗಾಗಲೇ ಕೊರೊನಾ ಹಾವಳಿಯಿಂದ ಕಂಗೆಟ್ಟಿರುವ ಹೊಟೇಲ್ ಉದ್ಯಮ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುವ ಸಮಯದಲ್ಲಿಯೇ ಸುಂಕ ಹೆಚ್ಚಳವು ಉದ್ಯಮಕ್ಕೆ ಮಾರಕ ಹೊಡೆತ ಬಿದ್ದಂತಾಗಿದೆ. ಮಾತ್ರವಲ್ಲದೆ ಸರಕಾರದ ನಿಯಮಾವಳಿಗಳ ಪ್ರಕಾರ ಕ್ರಮಬದ್ದವಾಗಿ ಉದ್ಯಮವು ಮುಂದುವರಿಯುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಉದ್ಯಮಕ್ಕೆ ಅಬಕಾರಿ ಸುಂಕ ಹೆಚ್ಚಳದಿಂದ ತುಂಬಲಾರದ ನಷ್ಟವಾಗುತ್ತಿದೆ ಎಂದು ನಿಯೋಗವು ಮುಖ್ಯಮಂತ್ರಿಯವರಿಗೆ ಪೂರ್ಣ ಮಾಹಿತಿಯೊಂದಿಗೆ ಮನವರಿಕೆ ಮಾಡಲಾಯಿತು. ನಿಯೋಗದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಯವರು ವಿಮರ್ಷಾತ್ಮಕವಾಗಿ ನಿಯೋಗದೊಂದಿಗೆ ಚರ್ಚಿಸಿದರು.
ಹೊಟೇಲ್ ಉದ್ಯಮದ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಯವರು ಸರಕಾರದ ಅಬಕಾರಿ ಮಂತ್ರಿ ಶಂಭುರಾಜ್ ದೇಸಾಯಿಯವರಿಗೆ ಪೋನಾಯಿಸಿ ಸುಂಕ ಹೆಚ್ಚಳವನ್ನು ಕಡಿಮೆಗೊಳಿಸುವಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಹಾಗೂ ಅಬಕಾರಿ ಸುಂಕದ ಹೆಚ್ಚಳವನ್ನು ಶೇ. 5 ರಿಂದ 10ರಷ್ಟು ಕಡಿಮೆ ಮಾಡುವ ಭರವಸೆಯನ್ನು ನಿಯೋಗಕ್ಕೆ ನೀಡಿದರು.
ಇದೇ ಸಂದರ್ಭದಲ್ಲಿ ಅಲ್ಲಲ್ಲಿ ತಲೆ ಎತ್ತುತ್ತಿರುವ ಅನಧಿಕೃತ ಡಾಬಗಳಿಂದಾಗುವ ತೊಂದರೆಗಳ ಬಗ್ಗೆಯೂ ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನಿಯೋಗದಲ್ಲಿ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಸಾಲ್ಯಾನ್ ಉಪಾಧ್ಯಕ್ಷರುಗಳಾದ ಶ್ಯಾಮ್ ಯನ್. ಶೆಟ್ಟಿ, ದಯಾನಂದ ಎಸ್. ಶೆಟ್ಟಿ, ಸುರೇಂದ್ರ ರೈ, ಜೊತೆ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ, ಕಲ್ಯಾಣ್ ಹೊಟೇಲ್ ಎಸೋಸಿಯೇಶನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಾಕೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಬಾಬು ಶೆಟ್ಟಿ, ಫೆಡರೇಶನ್ ನ ಸಲಹೆಗಾರರಾದ ಕಳತ್ತೂರು ವಿಶ್ವನಾಥ ಶೆಟ್ಟಿ, ಮೀರಾ ಭಯಂದರ್ ಹೊಟೇಲ್ ಎಸೋಸಿಯೇಶನ್ ಅಧ್ಯಕ್ಷ ಮಧುಕರ್ ಶೆಟ್ಟಿ ಮೊದಲಾದವರು ಇದ್ದರು.