ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಬುಧವಾರ ಶ್ರೀ ಮನ್ಮಹಾರಥೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು. ಕ್ಷೇತ್ರದ ಕೂಡುವಳಿಗೆಯ 7 ಗ್ರಾಮದ ಗ್ರಾಮಸ್ತರು ಮತ್ತು ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರೂ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದರು. ಭಕ್ತರನ್ನು ದೇಗುಲದ ಅನುವಂಶಿಕ ಆಡಳಿತ ಧರ್ಮದರ್ಶಿ ಶೆಟ್ಟಿಪಾಲು ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಅವರು ಬರಮಾಡಿಕೊಂಡರು.
