ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಶ್ರೀಮನ್ಮಹಾರಥೋತ್ಸವವು ಬುಧವಾರ ಸಂಪನ್ನಗೊಂಡಿತು. ಬೆಳಗ್ಗೆ ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಐದು ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ಸ್ಯಾಕ್ಸಫೋನ್ ಕಛೇರಿ, ರಾತ್ರಿ ಶ್ರೀಮನ್ಮಹಾರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತ ಬಲಿ, ಶಯನೋತ್ಸವ ನಡೆಯಿತು.
ಪರ್ಯಾಯ ತಂತ್ರಿ ವೇ| ಮೂ| ಪಾದೂರು ಲಕ್ಷ್ಮೀನಾರಾಯಣ ತಂತ್ರಿಗಳ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ| ಮೂ| ಶ್ರೀನಿವಾಸ ಭಟ್, ವೇ| ಮೂ| ವೆಂಕಟೇಶ ಭಟ್, ವೇ| ಮೂ| ಗುರುರಾಜ ಭಟ್ ಅರ್ಚಕತ್ವದಲ್ಲಿ, ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರುಣಾಕರ ಶೆಟ್ಟಿ ಕಳತ್ತೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ವೆಂಕಟೇಶ್ ಭಟ್, ಜೆನ್ನಿ ನರಸಿಂಹ ಭಟ್, ಕುತ್ಯಾರು ಪ್ರಸಾದ್ ಶೆಟ್ಟಿ, ಕೆ. ಕೊರಗ, ಸುಜಾತಾ ಆರ್. ಶೆಟ್ಟಿ, ಕುಶಲ ದೇವಾಡಿಗ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಜಗದೀಶ ಅರಸ ಕುತ್ಯಾರು, ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೇ| ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಮನೆ ದೇವರಾಜ ರಾವ್, ಶ್ರೀ ಕ್ಷೇತ್ರ ಎಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಮೊದಲಾದವರು ಪಾಲ್ಗೊಂಡಿದ್ದರು.