ಯಕ್ಷಗಾನದಲ್ಲಿ ಮಹಿಳೆಯರು, ಮಕ್ಕಳು ತೊಡಗಿಕೊಳ್ಳಬೇಕು. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹಿಳಾ ಘಟಕ ಕೆಲಸ ಮಾಡುವಂತಾಗಲಿ. ಇದಕ್ಕೆ ಪ್ರತೀ ವರ್ಷ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಐದು ಲಕ್ಷ ದೇಣಿಗೆಯನ್ನು ನೀಡುವುದಾಗಿ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ತಿಳಿಸಿದರು.
ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕೇಂದ್ರೀಯ ಮಹಿಳಾ ಘಟಕದ “ಪ್ರಮುದಾ ಪ್ರಭಾ” ವಾರ್ಷಿಕ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಮಹಿಳಾ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಮಹಿಳಾ ಘಟಕ ಇನ್ನಷ್ಟು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದರು. ಇನ್ನೋರ್ವ ಮುಖ್ಯ ಅತಿಥಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಟ್ರಸ್ಟ್ ನ ಪ್ರಧಾನ ಸಂಚಾಲಕ ಐಕಳ ಹರೀಶ್ ಶೆಟ್ಟಿ ಮಾತನಾಡಿ ಮಹಿಳಾ ಘಟಕವು ಪಟ್ಲ ಪೌಂಡೇಶನ್ ಟ್ರಸ್ಟ್ ನ ಆಸ್ತಿ. ಮಹಿಳೆಯರು ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.
ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಇಡ್ಯಾದ ರಮಾನಂದ ಭಟ್ ರವರ ದಿವ್ಯ ಉಪಸ್ಥಿಯಲ್ಲಿ ಶ್ರೀಮತಿ ಶಕುಂತಳಾ ಆರ್. ಭಟ್ ರವರು ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಟ್ರಸ್ಟಿನ ಗೌರವಾಧ್ಯಕ್ಷರಾದ ಕನ್ಯಾನ ಸದಾಶಿವ ಶೆಟ್ಟಿ, ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡಾ, ಐಕಳ ಹರೀಶ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಉದ್ಯಮಿ ಅಗರಿ ರಾಘವೇಂದ್ರ ರಾವ್, ನ್ಯಾಯವಾದಿ ಕಿಶೋರ್ ಕುಮಾರ್, Ln. ಶಾಲಿನೀ ಸುವರ್ಣ, ಟ್ರಸ್ಟಿನ ಉಪಾಧ್ಯಕ್ಷ ಡಾ. ಮನು ರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್, ಕೋಶಾಧಿಕಾರಿ C. A. ಸುದೇಶ್ ಕುಮಾರ್ ರೈ, ಹಿರಿಯ ವಿದ್ವಾಂಸರಾದ ಡಾ. ಪ್ರಭಾಕರ ಜೋಷಿ, ಬೆಳ್ತಂಗಡಿ ಘಟಕದ ಭುಜಬಲಿ ಧರ್ಮಸ್ಥಳ, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ಹವ್ಯಾಸಿ ಘಟಕದ ಸಂಜಯ ರಾವ್, ಮಹಿಳಾ ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ದಿತರಿದ್ದರು. ಪ್ರಾರಂಭದಲ್ಲಿ ಪುಟಾಣಿಗಳ ಯಕ್ಷ ನೃತ್ಯ ವಂದನಾ ಕಲಾಸಕ್ತರ ಮನಸೂರೆಗೊಂಡಿತು. ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮ ಯತೀಶ್ ರೈ ಸ್ವಾಗತಿಸಿ, ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಕಾರ್ಯದರ್ಶಿ ಸುಮಂಗಳ ರತ್ನಾಕರ್ ಮತ್ತು ಸಾಯಿಸುಮ ನಿರೂಪಿಸಿದರು.