ಸಾಗರ ಬಂಟರ ಸಂಘದ ಆರ್ಥಿಕ ಅಶಕ್ತ ಬಂಟ ಕುಟುಂಬಕ್ಕೆ ಬೆಂಗಳೂರು ಬಂಟರ ಸಂಘದ ವತಿಯಿಂದ ಮಾಂಗಲ್ಯ ಸರವನ್ನು (ಕರಿಮಣಿ) ಆನಂದ್ಪುರ ಭಾಗದ ಎಡೆಹಳ್ಳಿ ಗ್ರಾಮದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ಸಹ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಅಮರ್ ಶೆಟ್ಟಿ, ಶ್ರೀಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಸದಾನಂದ ಶೆಟ್ಟಿ ಸುರೇಶ್ ಶೆಟ್ಟಿ, ಸುನಿಲ್ ಶೆಟ್ಟಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೆಂಗಳೂರು ಬಂಟರ ಸಂಘದಿಂದ ಮಾಡಲಾಗುವ ಎಲ್ಲಾ ಸಮಾಜ ಕಲ್ಯಾಣ ಚಟುವಟಿಕೆಗಳಿಗೆ ಸಾಗರ ಬಂಟರ ಸಂಘ ಕೃತಜ್ಞತೆಯನ್ನು ಸಲ್ಲಿಸಿತು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಿಗೆ , ಕಾರ್ಯದರ್ಶಿಗಳಿಗೆ , ಉಪಾಧ್ಯಕ್ಷರಿಗೆ , ಖಜಾಂಚಿಗಳಿಗೆ , ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಹಾಗೂ ಸರ್ವ ಸದಸ್ಯರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.