ಬಂಟರ ಯಾನೆ ನಾಡವರ ಸಂಘ ಹಾಗೂ ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಜಂಟಿ ಆಶ್ರಯದಲ್ಲಿ ಸೂರು ಇಲ್ಲದ ಕುಟುಂಬಕ್ಕೆ 2 ನೇ ಮನೆ ಹಸ್ತಾಂತರ ಕಾರ್ಯಕ್ರಮ ಹೇರೂರಿನಲ್ಲಿ ನಡೆಯಿತು. ಪ್ರಥಮ ದರ್ಜೆ ಗುತ್ತಿಗೆದಾರ ಟಿ. ಎನ್. ರಘುರಾಮ್ ಶೆಟ್ಟಿ ನೂತನ ಮನೆಯನ್ನು ಉದ್ಘಾಟಿಸಿದರು. ನಾಗೂರು ಶ್ರೇಷ್ಠಪಾನಿ ಕ್ಲಿನಿಕ್ ಡಾ. ಪ್ರವೀಣ್ ಶೆಟ್ಟಿ ಅವರು ನಾಮಫಲಕ ಅನಾವರಣಗೊಳಿಸಿದರು.
ಬೈಂದೂರು ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ಜಿ. ಗೋಕುಲ್ ಶೆಟ್ಟಿ ಉಪ್ಪುಂದ ದೀಪ ಬೆಳಗಿಸಿದರು. ಬಂಟ ಸಮುದಾಯದ ಕಡು ಬಡತನದ ಹೇರೂರಿನ ಜ್ಯೋತಿ ಗಣೇಶ್ ಶೆಟ್ಟಿ ಅವರಿಗೆ ಬೈಂದೂರು ತಾಲೂಕು ಯುವ ಬಂಟರ ವೇದಿಕೆಯ ಗೌರವ ಸಲಹೆಗಾರ ಸಮರ್ ಶೆಟ್ಟಿ ನೂತನ ಮನೆಯ ಕೀ ಹಾಸ್ತಾಂತರಿಸಿದರು.
ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಕುದ್ರುಕೋಡು, ಯುವ ಬಂಟರ ವೇದಿಕೆಯ ಉಪಾಧ್ಯಕ್ಷ ವಿಜಯ ಶೆಟ್ಟಿ ಮೂರೂರು ಉಪಸ್ಥಿತರಿದ್ದರು.
ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಯುವ ಬಂಟರ ವೇದಿಕೆಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಪ್ರಸ್ತಾವಿಸಿ ಖಜಾಂಚಿ ರವೀಂದ್ರ ಶೆಟ್ಟಿ ಕಟ್ಗೆರಿ ವಂದಿಸಿದರು.