ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜೂ. ೧೮ ರಂದು ಪುತ್ತೂರು ಎಮ್. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು. ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವಾಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು ನೃತ್ಯ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಅಧಿಕಾರದಲ್ಲಿರುವ ಕರ್ನಾಟಕ ಸರ್ಕಾರದ ಏಕ ಮಾತ್ರ ಬಂಟ ಶಾಸಕ ಶಾಸಕ ಅಶೋಕ್ ಕುಮಾರ್ ರೈಯವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ಸಭಾ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸನ್ಮಾನಿಸಿದರು. ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಅಭಿನಂದನಾ ಭಾಷಣ ಮಾಡಿದರು. ಬಂಟರ ಸಂಘದ ಮಾಜಿ ಅಧ್ಯಕ್ಷ ‘ಸಹಕಾರರತ್ನ’ ಸವಣೂರು ಕೆ.ಸೀತಾರಾಮ ರೈಯವರು ವಿದ್ಯಾರ್ಥಿ ವೇತನ ವಿತರಿಸಿದರು. ಮಾತೃ ಸಂಘದ ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತುರವರು ಪ್ರತಿಭಾ ಪುರಸ್ಕಾರವನ್ನು ನಡೆಸಿಕೊಟ್ಟರು.
ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ನುಳಿಯಾಲು ಜಗನ್ನಾಥ ರೈ ಮಾದೋಡಿ, ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ, ನಿಕಟಪೂರ್ವಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಭಾಗವಹಿಸಿದರು. ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ರವರುಗಳು ಉಪಸ್ಥಿತರಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕ ಕುಂಬ್ರ ದುರ್ಗಾಪ್ರಸಾದ್ ರೈ, ಪುತ್ತೂರು ಕಂಬಳ ಸಮಿತಿ ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.