ಪೂಜ್ಯ ಪದ್ಮವಿಭೂಷಣ ಡಾl ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನ ಪರಿಕಾ ಪರ್ಕಳದಲ್ಲಿ ಆಯೋಜಿಸಲಾದ “9ನೇ ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಶ್ರೀ ಧರ್ಮಸ್ಥಳ ಶಾಂತಿವನ ಟ್ರಸ್ಟ್ (ರಿ.) ಕಾರ್ಯದರ್ಶಿಗಳಾದ ಬಿ. ಸೀತಾರಾಮ್ ತೋಳ್ಪಡಿತ್ತಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನದ ಮುಖ್ಯ ವೈದ್ಯಕೀಯ ಅಧಿಕಾರಿಗಳಾದ ಗೋಪಾಲ್ ಪೂಜಾರಿ, ರೆಸಿಡೆಂಟಲ್ ವೈದ್ಯಕೀಯ ಅಧಿಕಾರಿಗಳಾದ ಶೋಭಿತ್ ಶೆಟ್ಟಿ ಉಪಸ್ಥಿತರಿದ್ದರು.