ವಿದ್ಯಾರ್ಥಿಗಳ ಆಶೋತ್ತರಗಳನ್ನು ಈಡೇರಿಸಲು ಬಂಟರ ಸಂಘಗಳು ಪ್ರಯತ್ನಿಸಬೇಕು. ಜಿಲ್ಲೆಯಲ್ಲಿ ಬಂಟರ ಮೆಡಿಕಲ್ ಕಾಲೇಜುಗಳು ಇವೆ. ಬಂಟರ ಸಂಘಗಳು ಕನಿಷ್ಠ ಐದು ಪರ್ಸಂಟ್ ಸೀಟುಗಳನ್ನು ಬಂಟ ವಿದ್ಯಾರ್ಥಿಗಳಿಗೆ ನೀಡುವಂತೆ ಬಂಟರ ಮಾತೃ ಸಂಘ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲಕ ಒತ್ತಡ ಹೇರಬೇಕು ಎಂದು ಕಟ್ಲ ಬಾಳಿಕೆ ಅಗೊಳಿ ಮಂಜಣ್ಣ ಜಾಗದ ಧರ್ಮ ದೈವಗಳ ದೈವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಶೆಟ್ಟಿ ಕಟ್ಲ ಬಾಳಿಕೆ ತಿಳಿಸಿದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಇಡ್ಯಾ ಗ್ರಾಮದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಕನಸು ಹೊತ್ತು ವಿದ್ಯೆ ಕಲಿಯುತ್ತಾರೆ. ಅತ್ಯಧಿಕ ಅಂಕವನ್ನೂ ಗಳಿಸುತ್ತಾರೆ. ಆದರೆ ಅವರ ಇಚ್ಚೆಗೆ ತಕ್ಕಂತೆ ಮೆಡಿಕಲ್, ಇಂಜಿನಿಯರಿಂಗ್ ಸೀಟು ಸಿಗುವುದಿಲ್ಲ. ಹಣ ಕೊಟ್ಟು ಸೀಟು ಪಡೆಯಲು ಅಸಮರ್ಥರಾದಾಗ ಬೇರೆ ಪಠ್ಯದತ್ತ ಆಸಕ್ತಿ ವಹಿಸುತ್ತಾರೆ. ಇದಕ್ಕೆ ಜಿಲ್ಲೆಯಲ್ಲಿರುವ ಬಂಟರ ಸಂಘಗಳು ಬಂಟರ ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವ ಪ್ರಯತ್ನ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ಆಗುತ್ತದೆ ಎಂದರು.
ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅದೇ ರೀತಿ ಸುರತ್ಕಲ್ ಬಂಟರ ಸಂಘ ಆಯೋಜಿಸಿದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಇಡ್ಯಾ ಗ್ರಾಮದ ಕಲಾವಿದರನ್ನು ಮತ್ತು ನಿರ್ದೇಶಕ ರಜತ್ ಸಸಿಹಿತ್ಲು ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ಪೆರ್ಮುದೆ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಶೆಟ್ಟಿ, ವೇದಾವತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಮತ್ತು ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ದೇವೇಂದ್ರ ಶೆಟ್ಟಿ, ಪ್ರವೀಣ್ ಶೆಟ್ಟಿ, ಯಶ್ ರಾಜ್, ಅನೂಪ್, ಬಿಂದಿಯಾ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.