Author: admin
ಕರ್ನಾಟಕ ಸಂಘ ಕತಾರ್ : ಹಾಸಿಗೆ ಹಿಡಿದಿದ್ದ ಕುಂದಾಪುರದ ಜಯರಾಮ ಶೆಟ್ಟಿಯವರಿಗೆ ‘ಮನೋಬಲದ ಜಯವೀರ’ ಬಿರುದಿನೊಂದಿಗೆ ಗೌರವ, ಸಹಾಯಹಸ್ತ
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) 2025 ರ ಆಗಸ್ಟ್ 10 ರಂದು ಬೆಂಗಳೂರಿನ ಬಸವೇಶ್ವರ ನಗರದ ಕರ್ನಾಟಕ ಎಂಜಿನಿಯರ್ಸ್ ಅಕಾಡೆಮಿಯಲ್ಲಿ ಸಂಸ್ಥಾಪಕರಿಗೆ, ರಜತಪಥದ ಹರಿಕಾರರಿಗೆ ಅಭಿವಂದನಾ ಕಾರ್ಯಕ್ರಮವನ್ನು ಆಯೋಜಿಸಿ, ತನ್ನ ಬೆಳ್ಳಿಹಬ್ಬದ ಸಂಭ್ರಮವನ್ನು ತವರು ನೆಲಕ್ಕೆ ತರುವುದರ ಮೂಲಕ ರಜತ ವರ್ಷಕ್ಕೆ ಇನ್ನಷ್ಟು ಮೆರುಗನ್ನು ನೀಡಿತು. ಈ ಸುಸಂಧರ್ಭದಲ್ಲಿ “25 ವರ್ಷ – 25 ನೊಂದ ಮುಖಗಳಲ್ಲಿ ಹರ್ಷ” ಎಂಬ ಧ್ಯೇಯದೊಂದಿಗೆ, ಸದಸ್ಯರು ಮತ್ತು ಹಿತೈಷಿಗಳಿಂದ ಸಂಗ್ರಹಿಸಿದ ನಿಧಿಯ ಮೂಲಕ, ರಾಜ್ಯದ ಬೇರೆ ಬೇರೆ ಕಡೆ ಅನಾಥರಿಗೆ, ವಿಶೇಷ ಚೇತನರಿಗೆ, ಏಡ್ಸ್ ಕ್ಯಾನ್ಸರಿನಂಥಹ ಭೀಕರ ಕಾಯಿಲೆಗಳಿಂದ ಬಳಲುವರಿಗೆ ಆಶ್ರಮಗಳನ್ನು ಸ್ಥಾಪಿಸಿ ನಡೆಸುವ 12 ನಿಸ್ವಾರ್ಥ ಸಮಾಜಸೇವಕರನ್ನು ಬಿರುದಿನೊಂದಿಗೆ ಗೌರವ ಧನವನ್ನು ನೀಡಿ ಸನ್ಮಾನಿಸಲಾಯಿತು. ಕೊಂಕಣ್ ರೈಲ್ವೆಯಲ್ಲಿ ಕೆಲಸ ಮಾಡುವಾಗ ಅಪಘಾತಕ್ಕೊಳಗಾಗಿ 34 ವರ್ಷಗಳಿಂದ ಹಾಸಿಗೆಯಲ್ಲಿರುವ ಕುಂದಾಪುರದ ಜಯರಾಮ ಶೆಟ್ಟಿಯವರನ್ನು ‘ಮನೋಬಲದ ಜಯವೀರ’ ಬಿರುದಿನೊಂದಿಗೆ ಸ್ಮರಣಿಕೆ, ರಜತ ವರ್ಷದ ವಿಶೇಷ ಶಾಲು, ಗೌರವ ಧನದೊಂದಿಗೆ ಸನ್ಮಾನಿಸಲಾಯಿತು. ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಡಾ|…
ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಣಂಜಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ಮಂಜುನಾಥ ನಾಯಕ್, ಟ್ರಸ್ಟಿಗಳಾದ ವಿಕ್ರಂ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಾಲಾ ಸಂಚಾಲಕರಾದ ಸಿಎ ಚಂದನ್ ಹೆಗ್ಡೆ, ಟ್ರಸ್ಟ್ ನ ಕೋಶಾಧಿಕಾರಿ ಪ್ರಕಾಶ್ ಪ್ರಭು, ಮೇಲ್ಬಂಟ ಫ್ರೆಂಡ್ಸ್ ಅಧ್ಯಕ್ಷರಾದ ಮಹೇಶ್ ಹೆಗ್ಡೆ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಹರಿದಾಸ್ ನಾಯಕ್ ಹಾಗೂ ದಿನೇಶ್ ಯು.ಎಸ್, ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ರಾವ್, ಊರಿನ ಹಿರಿಯರು, ಸ್ಥಳೀಯರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಈ ಹಿಂದಿನ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಶಾಲಾ ಹಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಯಿತು. ಶಾಲಾ ಪ್ರಭಾರ…
ಬಂಟರ ಸಂಘ ಸಾಲೆತ್ತೂರು ವಲಯ ಇದರ ವತಿಯಿಂದ ಆಗಸ್ಟ್ 10 ರಂದು ಜರಗಿದ “ಬಂಟೆರ್ನ ಆಟಿದ ಅಜನೆ” ಕಾರ್ಯಕ್ರಮದಲ್ಲಿ ಬಂಟರ ಸಂಘ ಸಾಲೆತ್ತೂರು ವಲಯದ ಮಾಜಿ ಅಧ್ಯಕ್ಷರಾದ ದೇವಪ್ಪ ಶೇಖ ಹಾಗೂ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಶ್ರೀಮತಿ ವಿಜಯ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಉದಯ ಕುಮಾರ್ ರೈ ಅಗರಿ, ಅರವಿಂದ್ ರೈ ಮೂರ್ಜೆಬೆಟ್ಟು, ಸುದೇಶ್ ಭಂಡಾರಿ ಎರ್ಮೆನಿಲೆ, ಮೂಲ್ಕಿ ಬಂಟರ ಸಂಘದ ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಮುಂಡ್ಕೂರು, ಕುಲ್ಯಾರ್ ನಾರಾಯಣ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ನಗ್ರಿ ಕೆವುಳ, ಸಂಕಪ್ಪ ಶೆಟ್ಟಿ ಮಲಾರಬೀಡು, ಅಮರೇಶ್ ಶೆಟ್ಟಿ ತಿರುವಾಜೆ, ಸುನೀತಾ ಯು ರೈ ಗೌರಿಕೋಡಿ, ಗಾಯತ್ರಿ ಎಸ್. ರೈ ಕೊಲ್ಲಾಡಿ, ವಿನುತಾ ಎ. ಶೆಟ್ಟಿ ಕೊಲ್ಲಾಡಿ, ಪವಿತ್ರ ಪೂಂಜ ಕೊಡಂಗೆ, ಪ್ರದೀಪ್ ಕುಮಾರ್ ರೈ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಆಗಸ್ಟ್ : ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನು ಹೊಂದಿದ ಅರ್ಥಪೂರ್ಣ ಆಡಂಬರರಹಿತ ಜ್ಞಾನಸುಧಾದ ಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯ ಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದು ಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ, ಸ್ತಿರೋಗ ತಜ್ಞ ಡಾ. ಸಂಜಯ್ ಹೇಳಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ ೧೦೪ನೇ ಜನ್ಮದಿನದ ಅಂಗವಾಗಿ ಆಗಸ್ಟ್ ೨೧ರಂದು ನಡೆದ ಸಾಮಾಜಿಕ ನೆರವಿನ ಸೇವಾ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾಜಿಕ ಕಾರ್ಯಕ್ರಮ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಹಾಗೂ ಸ್ವಚ್ಛ ಕಾರ್ಕಳದ ರಾಯಭಾರಿ ಫೆಲಿಕ್ಸ್ ಜೋಸೆಫ್ ವಾಜ್ರವರಿಗೆ ತಲಾ ೧೦ಸಾವಿರ, ಕುಕ್ಕುಂದೂರು, ಹಿರ್ಗಾನ, ಅಜೆಕಾರ್ ಹಾಗೂ ಬೈಲೂರು ಗ್ರಾಮದ ೧೮ ಸ್ವಚ್ಛತಾ ಸಿಬ್ಬಂದಿಗಳಿಗೆ ತಲಾ ೫ ಸಾವಿರ ನೀಡಿ ಗೌರವಿಸಲಾಯಿತು. ಕ್ಷಯಪೀಡಿತ ೮ ಜನರಿಗೆ ತಲಾ ೩ ಸಾವಿರದಂತೆ ರೂ.೨೪ಸಾವಿರ, ಅಪಘಾತಕ್ಕೀಡಾದ ಹಳೆವಿದ್ಯಾರ್ಥಿ ಕಿರಣ್ ನಾಯಕ್ರವರಿಗೆ ರೂ.೨೦ ಸಾವಿರ,…
ಏನಾದರೂ ಆಗು ಮೊದಲು ಮಾನವನಾಗು ಎಂಬ ಕವಿವಾಣಿಯಂತೆ ಡಾ. ನಿರಂಜನ್ ಶೆಟ್ಟಿ ಅವರ ಕನಸಿನ ಕೂಸು ಸುಮತಿ ಮಾನವಾಲಯ ಭಾನುವಾರ ಅಧಿಕೃತವಾಗಿ ಲೋಕಾರ್ಪಣೆಗೊಂಡಿತು. ಸಮಾಜ ಸೇವೆ ಮತ್ತು ಮನುಜ ಸೇವೆ ಇವೆರಡನ್ನು ಉದ್ದೇಶವಾಗಿಟ್ಟುಕೊಂಡು ಅದಕ್ಕೆ ತನ್ನನ್ನು ಮುಡುಪಾಗಿಟ್ಟು ಸೇವೆ ಸಲ್ಲಿಸುತ್ತಿರುವ ಮನೋವೈದ್ಯ ಡಾ. ನಿರಂಜನ್ ಶೆಟ್ಟಿ ಮತ್ತು ಕುಟುಂಬ ಹಲವು ವರ್ಷಗಳಿಂದ ಮಾನವಾಲಯ ಎಂಬ ಸಂಸ್ಥೆಯನ್ನು ಆರಂಭಿಸುವ ಉದ್ದೇಶ ಹೊಂದಿತ್ತು. ಹಲವು ಸಮಯಗಳ ಇವರ ಕನಸು ಆಗಸ್ಟ್ 17ರಂದು ಬೆಳಗ್ಗೆ 10 ಗಂಟೆಗೆ ‘ಸುಮತಿ ಮಾನವಾಲಯ’ ಎಂಬ ಹೆಸರಿನೊಂದಿಗೆ ಮಂಗಳೂರು ಎಸ್.ಡಿ.ಎಂ ಲಾ ಕಾಲೇಜು ಹಿಂಭಾಗ ಅಧಿಕೃತವಾಗಿ ಮಧು ಕನ್ಸ್ಟ್ರಕ್ಷನ್ ಮತ್ತು ಆಟಂ ಫಿಟ್ನೆಸ್ ಕ್ಲಬ್ ನ ಮಾಲಕಿ ಶ್ರೀಮತಿ ವಿಜಯಲಕ್ಷ್ಮಿ ಮಲ್ಲಿ, ಡೈಜಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಶ್ರೀಮತಿ ಸುನಂದ ಶೇಖರ್ ಶೆಟ್ಟಿ ಮಲ್ಲಾರ್ ಇವರ ಸಮ್ಮುಖದಲ್ಲಿ ಆರಂಭಗೊಂಡಿತು. ನಂತರ ಸಂಸ್ಥೆಯ ವತಿಯಿಂದ ಓಶಿಯನ್ ಪರ್ಲ್ ಹೋಟೆಲಿನ ಸಭಾಂಗಣದಲ್ಲಿ ಜನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಂದ…
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) 2025 ರ ಆಗಸ್ಟ್ 10 ರಂದು ಬೆಂಗಳೂರಿನ ಬಸವೇಶ್ವರ ನಗರದ ಕರ್ನಾಟಕ ಎಂಜಿನಿಯರ್ಸ್ ಅಕಾಡೆಮಿಯಲ್ಲಿ “ಸಂಸ್ಥಾಪಕರಿಗೆ, ರಜತಪಥದ ಹರಿಕಾರರಿಗೆ ಅಭಿವಂದನಾ“ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಿ, ತನ್ನ ಬೆಳ್ಳಿಹಬ್ಬದ ಸಂಭ್ರಮವನ್ನು ತವರು ನೆಲಕ್ಕೆ ತರುವುದರ ಮೂಲಕ ರಜತ ವರ್ಷಕ್ಕೆ ಇನ್ನಷ್ಟು ಮೆರುಗನ್ನು ನೀಡಿದೆ. ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಅವರು “ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು” ಎಂಬ ಡಿವಿಜಿ ಅವರ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಕೃತಜ್ಞತೆಯ ಮನೋಭಾವವನ್ನು ಮೂಡಿಸಿದರು. ಕಾರ್ಯಕ್ರಮ ನಿರೂಪಕರಾಗಿದ್ದ ಮಾಜಿ ಅಧ್ಯಕ್ಷ ಎಚ್.ಕೆ. ಮಧು ಅವರು, ಈ ಮಹತ್ವದ ಮೈಲಿಗಲ್ಲನ್ನು ಅಧ್ಯಕ್ಷ ರವಿ ಶೆಟ್ಟಿಯವರ ನಾಯಕತ್ವ ಮತ್ತು ಅವರ ಉತ್ಸಾಹಿ ತಂಡಕ್ಕೆ ಸಮರ್ಪಿಸಿದರು. ಅವರು ಡಿವಿಜಿ ಅವರ ಮತ್ತೊಂದು ಕಗ್ಗದ “ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು” ಎಂಬ ಸಾಲನ್ನು ಉಲ್ಲೇಖಿಸಿ, ಸಂಪ್ರದಾಯ ಮತ್ತು ಹೊಸ ಶಕ್ತಿಯ ಮಹತ್ವವನ್ನು ಸಾರಿದರು. ಉದ್ಘಾಟನೆ ಮತ್ತು ಪ್ರಥಮ ಹಂತ ಕಾರ್ಯಕ್ರಮಕ್ಕೆ ಪದ್ಮಶ್ರೀ ಡಾ.…
ಪಿಯುಸಿ ಹಂತವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟ. ಈ ಅವಧಿಯಲ್ಲಿ ಪ್ರತಿಯೊಬ್ಬರೂ ತಮ್ಮ ಗುರಿಯನ್ನು ಸಾಧಿಸಲು ಕ್ರಿಯಾಶೀಲರಾಗಬೇಕು. ನಿಜವಾದ ಕ್ರಿಯಾಶೀಲತೆಯೇ ಯಶಸ್ಸಿನ ದಾರಿಯನ್ನು ತೆರೆದಿಡುತ್ತದೆ ಎಂದು ಆಳ್ವ ಫಾರ್ಮಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗ್ರೀಷ್ಮಾ ಆಳ್ವ ನುಡಿದರು. ಅವರು ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ಸಮಿತಿಯ ೨೦೨೫-೨೬ರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವಕಾಶಗಳು ಎಲ್ಲರಿಗೂ ಸಮಾನವಾಗಿ ಲಭ್ಯ. ಆದರೆ ಅದನ್ನು ಬಳಸಿಕೊಳ್ಳುವ ರೀತಿಯೇ ಭವಿಷ್ಯವನ್ನು ನಿರ್ಧರಿಸುತ್ತದೆ. ತಪ್ಪು ಸರಿಗಳನ್ನು ಅರಿತು ಯೌವ್ವನದಲ್ಲಿ ಜಾಗರೂಕತೆಯಿಂದ ಹೆಜ್ಜೆಯಿಡಬೇಕು. ಸಾಧನೆಯ ಹಂಬಲವಿದ್ದರೆ ಅಸಾಧ್ಯವೂ ಸಾಧ್ಯವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಜನರಲ್ಲಿ ಗೊಂದಲ, ನೋವು, ರೋಷ, ಹತಾಶೆ, ಆತಂಕ ಇಂತಹ ಭಾವನೆಗಳು ಸಾಮಾನ್ಯ. ಇದು ವ್ಯಕ್ತಿತ್ವದ ಬೆಳವಣಿಗೆಯ ಒಂದು ಹಂತ. ಇಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಭಾವನೆಗಳೊಂದಿಗೆ…
ಲಯನ್ಸ್ ಕ್ಲಬ್ ಮೂಡುಬಿದಿರೆ ಇದರ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆಯನ್ನು ಕ್ಲಬ್ ಅಧ್ಯಕ್ಷ ಲ. ಶಿವಪ್ರಸಾದ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಆಲಂಗಾರಿನ ಮೌಂಟ್ ರೋಸರಿ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು. ಈ ಸಂದರ್ಭ ಆಶ್ರಮದ ನಿರ್ದೇಶಕ 94 ವರ್ಷ ವಯಸ್ಸಿನ ಮೋನ್ಸಿಂಜೊರ್ ಎಡ್ವಿನ್ ಸಿ. ಪಿಂಟೋ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಡ್ವಿನ್ ಸಿ. ಪಿಂಟೋ ಅವರು ಸನ್ಮಾನಕ್ಕೆ ಕೃತಜ್ಞತೆಗಳನ್ನು ತಿಳಿಸಿದರಲ್ಲದೆ ಈ ಸನ್ಮಾನವು 94ರ ವಯಸ್ಸಿನಲ್ಲಿ ತಾವು ವೃದ್ಧಾಶ್ರಮ ಮತ್ತು ಮೌಂಟ್ ರೋಸರಿ ಆಸ್ಪತ್ರೆಯ ಮೂಲಕ ಕೈಗೊಳ್ಳುವ ಸೇವಾ ಕಾರ್ಯಗಳಿಗೆ ಇನ್ನಷ್ಟು ಸ್ಪೂರ್ತಿ ತುಂಬಲಿದೆ ಎಂದರಲ್ಲದೆ ತಮ್ಮ ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಅತ್ಯುತ್ತಮ ರೀತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡುವ ಯೋಜನೆ ಹಾಕಿಕೊಂಡಿದ್ದು ದಾನಿಗಳು ಉದಾರ ಮನಸ್ಸಿನಿಂದ ಈ ಯೋಜನೆಗೆ ಮುಕ್ತ ಮನಸ್ಸಿನಿಂದ ಸಹಾಯ ನೀಡಬೇಕೆಂದು ವಿನಂತಿಸಿದರು. ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ, ವಂ. ಎಡ್ವಿನ್ ಸಿ. ಪಿಂಟೋ ಅವರಿಗೆ ಉನ್ನತ ಸ್ಥಾನಮಾನಗಳು ಸಿಗುವ ಅವಕಾಶಗಳು ಪ್ರಾಪ್ತವಾಗಿದ್ದರೂ, ಅದನ್ನೆಲ್ಲಾ ನಿರಾಕರಿಸಿ 94ರ…
ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಆ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳಾಗಿ ಸುಸಂಸ್ಕೃತ ಜೀವನ ನಡೆಸುವಂತಾಗಬೇಕೆಂಬ ದೃಷ್ಟಿಯಿಂದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಪ್ರಾರಂಭದಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯೊಂದಿಗೆ ಯಾವಾಗಲೂ ಯಶಸ್ವಿ ಜೀವನದ ಬಗ್ಗೆ ಯೋಚಿಸಬೇಕು. ಕಠಿಣ ಪರಿಶ್ರಮ, ಶ್ರದ್ಧೆಯಿಂದ ಶಿಕ್ಷಣ ಪಡೆದು ಗುರಿ ತಲುಪಬೇಕು ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ ತಿಳಿಸಿದರು. ಜುಯಿ ನಗರದ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ದಿ. ಪ್ರಮೋದ ಶಿವರಾಮ ಕೆ ಶೆಟ್ಟಿ ವೇದಿಕೆಯಲ್ಲಿ ಆಗಸ್ಟ್ 17 ರಂದು ಜರಗಿದ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ವಾರ್ಷಿಕ ಶೈಕ್ಷಣಿಕ ನೆರವು ವಿತರಣಾ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಪ್ರತೀ ವರ್ಷ ಲಕ್ಷಾಂತರ ರೂಪಾಯಿಗಳನ್ನು ಶೈಕ್ಷಣಿಕ ನೆರವಿಗಾಗಿ ವಿನಿಯೋಗಿಸುತ್ತಿದೆ. ಸಮಾಜದ ದಾನಿಗಳು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ದಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. …
ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ನ 29 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆಗಸ್ಟ್ 23 ರಂದು ಮಂಗಳೂರಿನ ಎಜೆ ಗ್ರ್ಯಾಂಡ್ ಹೋಟೆಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಎಜೆ ಶೆಟ್ಟಿ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮದ್ಯಾಹ್ನ 12 ಗಂಟೆಗೆ ಆಳ್ವಾಸ್ ಎಜುಕೇಶನ್ ಟ್ರಸ್ಟ್ ನ ಚೇರ್ಮನ್ ಡಾ. ಎಂ ಮೋಹನ್ ಆಳ್ವರವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ ಮಾಡಲಾಗುವುದು. ಯಕ್ಷಗಾನ ಕಲಾವಿದ ಸಂಜಯ್ ಕುಮಾರ್ ಶೆಟ್ಟಿ ಗೋಣಿಬೀಡುರವರಿಗೆ ದಿವಂಗತ ಡಿ.ಕೆ ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿಯವರಿಗೆ ದಿ ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24 ನೇ ರಾಂಕ್ ಪಡೆದ ನಿಶ್ಚಲ್ ರೈ ಅವರಿಗೆ ಸಿಎ ವೈ ಆರ್ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ರಕ್ಷಾ ಆರ್ ಶೆಟ್ಟಿಯವರಿಗೆ ಸಿಎ ಗೋಪಾಲ ಬಿ ಶೆಟ್ಟಿ…