Author: admin

ಜಿಲ್ಲೆಯ ಕಂಬಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಿದ್ಧಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ವತಿಯಿಂದ ಒಂದೇ ವರ್ಷದಲ್ಲಿ ಮೂರು ಕಂಬಳ ಆಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ರೂ ೧ ಲಕ್ಷಕ್ಕೂ ಮಿಕ್ಕಿ ಮೊತ್ತದ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಹೋಟೆಲ್ ಅಶ್ವಿನಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಕಂಬಳ ಲೆಕ್ಕಪತ್ರ ಮಂಡನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗೌರವ ಸಲಹೆಗಾರರಾದ ವಾಮದ ಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಕೀಲ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಉದ್ಯಮಿ ಕಿರಣ್ ಕುಮಾರ್ ಮಂಜಿಲ, ಕಂಬಳ ಕೋಣಗಳ ಯಜಮಾನ ಬಾಬು ರಾಜೇಂದ್ರ ಶೆಟ್ಟಿಯವರು ವಿವಿಧ ಸಲಹೆ ನೀಡಿದರು. ಇದೇ ವೇಳೆ ಸಮಿತಿ…

Read More

ಪುಣೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಅರೋಗ್ಯ ತಪಾಸಣಾ ಶಿಬಿರವು ಜನವರಿ 19 ರವಿವಾರದಂದು ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಗುರುನಾನಕ್ ದರ್ಬಾರ್ ಹಾಲ್ (ಹಾಲಿವುಡ್ ಗುರುದ್ವಾರ) ಕ್ಯಾಂಪ್ ಪುಣೆ ಇಲ್ಲಿ ನಡೆಯಿತು. ಈ ಉಚಿತ ಅರೋಗ್ಯ ತಪಾಸಣಾ ಶಿಬಿರದಲ್ಲಿ ಮಲ್ಟಿಸ್ಪೆಷಾಲಿಟಿ ಆರೋಗ್ಯ ತಪಾಸಣೆ, ಸ್ತ್ರೀರೋಗ ಶಾಸ್ತ್ರ, ಮಕ್ಕಳ ರೋಗ ತಪಾಸಣೆ, ಕಣ್ಣು, ಹಲ್ಲು ತಪಾಸಣೆ, ಔಷದಿ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ, ಸಕ್ಕರೆ ರೋಗ ತಪಾಸಣೆ ನಡೆಸಲಾಯಿತು.ಈ ಶಿಬಿರವನ್ನು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು, ಶಿಬಿರದ ಸಂಯೋಜಕರಾದ ಸಂಘದ ಉಪಾಧ್ಯಕ್ಷರಾದ ಡಾ ಸುಧಾಕರ್ ಶೆಟ್ಟಿ, ಸತೀಶ್ ರೈ ಕಲ್ಲಂಗಳ ಗುತ್ತು, ಗುರುದ್ವಾರ ಗುರುನಾನಕ್ ದರ್ಬಾರ್ ನ ಅಧ್ಯಕ್ಷ ಸರ್ದಾರ್ ಚರಣ್ ಜೀತ್ ಸಿಂಗ್ ಶೈನಿ, ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಕಾರ್ಯಾಧ್ಯಕ್ಷ ಸರ್ದಾರ್ ಸಂತ್ ಸಿಂಗ್ ಮೋಕ್ಷಾ ಮತ್ತು…

Read More

ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು. ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ಯಕ್ಷದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈಯವರ 35 ವರುಷಗಳ ಯಕ್ಷಯಾನದ ಸಂಭ್ರಮ ಯಕ್ಷದ್ಯುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನದ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕಾಗಿದೆ. ಯಕ್ಷಗಾನದಿಂದ ಸಂಸ್ಕೃತಿ, ಆಚಾರ, ವಿಚಾರಗಳನ್ನು ತಿಳಿಯಬಹುದಾಗಿದೆ ಎಂದರು. ಸಮಾರಂಭದಲ್ಲಿ ಹರಿನಾರಾಯಣ ದಾಸ ಅಸ್ರಣ್ಣ, ನಾಗೇಂದ್ರ ಭಾರದ್ವಾಜ್, ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಮೂಡಬಿದ್ರೆ, ಸುಧಾಕರ ಪೂಂಜ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಯಶಸ್ವಿನಿ ಶೆಟ್ಟಿ, ಪುರಂದರ ರೈ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಸದಾಶಿವ ಶೆಟ್ಟಿ ಕನ್ಯಾನ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಉನ್ನತ ಸೌಲಭ್ಯಗಳನ್ನು ಒಳಗೊಂಡ ಸದಾಶಿವ ಶೆಟ್ಟಿ ಕನ್ಯಾನ ಕನ್ವೆನ್ಷನ್ ಸೆಂಟರ್ ಸಭಾಭವನದ ನಿರ್ಮಾಣ ಕಾಮಗಾರಿಯ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿ ಶ್ರೀಮತಿ ಬಿಂದಿಯಾ ನಾಯಕ್ ರವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಪಂಚಾಯತ್ ರಾಜ್ ಅಸಿಸ್ಟೆಂಟ್ ಇಂಜಿನಿಯರ್ ಪ್ರಶಾಂತ್ ಆಳ್ವ ಕಾವೂರು,  ಮತ್ತಿತರರು ಉಪಸ್ಥಿತರಿದ್ದರು.

Read More

ಮೂಡಬಿದಿರೆ: ಅರೆವಾಹಕ ಚಿಪ್‌ಗಳು(ಸೆಮಿಕಂಡಕ್ಟಡ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ. ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್‌ಗಳನ್ನು ತಯಾರಿಸಲು ಎಪ್ಪತ್ತಾರು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್‌ಡಿಒ ಹಾಗೂ ಸಿತಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು. ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರೋನಿಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ “ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್” ಎಂಬ ನಾಲ್ಕು ದಿನಗಳ ಉಪನ್ಯಾಸಕರ ಕೌಶಲ್ಯಾಭಿವೃದ್ಧಿ(ಎಫ್‌ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್  ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್‌ಗೆ ಸಂಬಂದಿಸಿದ ನೂರೈವತ್ತುಕ್ಕೂ ಅಧಿಕ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿದ್ದೇವೆ. ಭಾರತದಲ್ಲಿ ಉಡಾವಣೆಗೊಳ್ಳುವ ಕ್ಷಿಪಣಿಗಳು ಶೇ 99…

Read More

ಕ್ರಿಕೆಟ್ ಪಂದ್ಯಕೂಟಗಳನ್ನು ಆಯೋಜನೆ ಮಾಡುವುದರಿಂದ ಯುವ ಮನಸ್ಸುಗಳು ಒಂದೆಡೆ ಸೇರುವಂತೆ ಮಾಡಲು ಅವಕಾಶವನ್ನು ಮಾಡಿಕೊಟ್ಟಂತೆ ಆಗುತ್ತದೆ. ಜತೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ಕೆಲಸ ಮಾಡಲು ಒಳ್ಳೆಯ ವೇದಿಕೆಯಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಹೊಸಾಡು ವತಿಯಿಂದ ಸೀತಾರಾಮ ಶೆಟ್ಟಿ ಕೇರಿಕೊಡ್ಲು ಅವರ ಸ್ಮರಣಾರ್ಥವಾಗಿ ಮುಳ್ಳಿಕಟ್ಟೆಯಲ್ಲಿ ನಡೆದ ರಾಘು ಟ್ರೋಪಿ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಉದ್ಘಾಟಿಸಿದರು. ಅಭಿನಂದನ್ ಶೆಟ್ಟಿ, ಮಂಜು ಪೂಜಾರಿ ಸೇನಾಪುರ, ಪಾತ್ರಿ ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ, ನವೀನ್ ಶೆಟ್ಟಿ ನಾರ್ಕಳಿ, ಕುಶಲ ಶೆಟ್ಟಿ ಬೆಳ್ಳಾಡಿ, ಚಂದ್ರಶೇಖರ್ ಪೂಜಾರಿ ಅರಾಟೆ, ಹರ್ಷವರ್ಧನ್ ಶೆಟ್ಟಿ ಕಾಳವಾರ, ಪ್ರದೀಪ್ ಕುಮಾರ್ ಶೆಟ್ಟಿ, ಕ್ರಿಕೆಟ್ ತಂಡದ ನಾಯಕರುಗಳಾದ ಸತೀಶ ಶೆಟ್ಟಿ, ರಾಘು ಶೆಟ್ಟಿ ಜಾಜಿಮಕ್ಕಿ, ಪ್ರವೀಣ್ ಪೂಜಾರಿ, ಶಶಿಕುಮಾರ್ ಶೆಟ್ಟಿ, ನರಸಿಂಹ ಶೆಟ್ಟಿ, ಸತೀಶ್ ದೇವಾಡಿಗ, ಸುತನ ಕುಮಾರ್ ಶೆಟ್ಟಿ, ಅಮರನಾಥ ಶೆಟ್ಟಿ, ಅಜಿತ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ರಾಜೇಶ…

Read More

ಸೇನಾಪುರ ಗ್ರಾಮದ ಬಂಟ್ವಾಡಿ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವವು ಜನವರಿ 24, 25ರಂದು ನಡೆಯಲಿದೆ. ಜನವರಿ 24 ರಂದು ಬೆಳಗ್ಗೆ ಅಮೃತ ಮಹೋತ್ಸವದ ಸ್ವಾಗತ ಗೋಪುರ ಉದ್ಘಾಟನೆ ನಡೆಯಲಿದೆ. ನಾರಾಯಣ ಶೆಟ್ಟಿ ಅತ್ರಾಡಿ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಲೆಯ ಸಂಚಾಲಕ ಬಿ. ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೋಟೇಶ್ವರ ಕಾಲೇಜಿನ ಉಪನ್ಯಾಸಕ ಗಣೇಶ ಹೆಬ್ಬಾರ್ ಕೆಳಾಕಳಿ ಶುಭಾಶಂಶನೆ ಮಾಡುವರು. ಕುಂದಾಪುರ ಉದ್ಯಮಿ ಅಭಿನಂದನ ಎ. ಶೆಟ್ಟಿ, ನಾರಾಯಣ ಎಂ. ಚಂದನ್ ಮುಂಬೈ, ನಿವೃತ್ತ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್, ಜಗದೀಶ ಶೆಟ್ಟಿ ಗುಡ್ಡಮ್ಮಾಡಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ. ವೈ. ರಾಘವೇಂದ್ರ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಆದರ್ಶ ದೇವಾಡಿಗ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. 25ರಂದು ಸಂಜೆ ಕಾರ್ಯಕ್ರಮದಲ್ಲಿ…

Read More

ತುಳು, ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಜನವರಿ 19 ರಂದು ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್ ನ ಆಡಳಿತ ನಿರ್ದೇಶಕ ಸುಧಾಕರ ಶೆಟ್ಟಿ ಮಾತನಾಡುತ್ತಾ, ಬಂಟರು ಸ್ವಂತಿಕೆ, ಸ್ವಾಭಿಮಾನದಡಿಯಲ್ಲಿ ಬದುಕಿದವರು ಹಾಗೂ ಸಂಘಟನಾ ಚತುರರು. ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸುವುದರ ಜೊತೆಗೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವಿಷಯಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದವರು. ಬಂಟರು ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವ ಮೂಲಕ ಸಾಮಾಜಿಕವಾಗಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡವರು ಎಂದು ಹೇಳಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋವಾ ಬಂಟರ ಸಂಘದ ರಜತ ಸಂಭ್ರಮದ ಅಧ್ಯಕ್ಷರಾದ ಕಾವಡಿ…

Read More

ಕರ್ನಾಟಕ ಸರಕಾರ ಡಾ| ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಹಾಗೂ ಕೇಂದ್ರೀಯ ಸಂಸ್ಕೃತ ವಿದ್ಯಾಲಯದ ಕುಲಪತಿಗಳು ಮತ್ತು ವಿಶ್ವವಿದ್ಯಾಲಯದ ಉಪಕುಲಪತಿಗಳ ಸಮಕ್ಷಮದಲ್ಲಿ ಯುವ ಉದ್ಯಮಿ, ಸಮಾಜ ಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಬೆಂಗಳೂರು ಬಂಟರ ಸಂಘದ ಮಾಜಿ ಕೋಶಾಧಿಕಾರಿ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.

Read More

“ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಹಾಗೆಯೇ ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರು. ಇಲ್ಲಿ ಯಾರಿಗಾದರೂ ಸಮಸ್ಯೆ ಎದುರಾದರೂ ಆಡಳಿತ ಮಂಡಳಿ ಮತ್ತು ಎಲ್ಲರೂ ಜೊತೆಗೆ ನಿಂತು ಸಹಕರಿಸುತ್ತಾರೆ. ಅಂತೆಯೇ ನಮ್ಮ ಸಂಸ್ಥೆಯೂ ಹಿಂದಿನಿಂದಲೂ ಈ ಸಹಕಾರ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ರೀತಿ ಸಹಕಾರ ಮತ್ತು ಹೊಂದಾಣಿಕೆಯಿಂದ ಸಂಸ್ಥೆಗಳು ಉತ್ತಮವಾಗಿ ಮುನ್ನೆಡೆಯಲು ಸಾಧ್ಯವಾಗುತ್ತದೆ” ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು. ಇವರು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ…

Read More