Author: admin
ಸಾಲಿಗ್ರಾಮದ ವಾಣಿಜ್ಯ ಸಂಕೀರ್ಣದಲ್ಲಿ ಮಾಂಸಾಹಾರಿ ಹೋಟೆಲ್ ಫೆಬ್ರವರಿ 21ರಂದು ಉದ್ಘಾಟನೆಗೊಂಡಿತು. ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಸಿ ಕುಂದರ್ ಹೋಟೆಲ್ ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಸಂಸ್ಥೆಯ ಮುಖ್ಯಸ್ಥ ವಿಜಯ ಶೆಟ್ಟಿ ಹವರಾಲು ಮಾತನಾಡಿ, ಸಂಸ್ಥೆ ಮಾಂಸಾಹಾರಿ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಗಳಿಸಿದ್ದು ರಾಜ್ಯದ ನಾಲ್ಕು ಶಾಖೆಗಳನ್ನು ಹೊಂದಿದೆ ಎಂದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಚಿತ್ರ ಸಾಹಿತ್ಯ ರಚನೆಗಾರ ಪ್ರಮೋದ್ ಮರವಂತೆ, ಬಿಗ್ ಬಾಸ್ ರನ್ನರ್ ಅಪ್ ತ್ರಿವಿಕ್ರಮ್, ಝೀ ಕನ್ನಡ ಮಹಾನಟಿಯ ಗಗನ, ಚಿತ್ರನಟ ಕವೀಶ್ ಶೆಟ್ಟಿ, ಪ್ರತಿಮಾ ನಾಯ್ಕ್, ಉದ್ಯಮಿ ವೆಂಕಟೇಶ್, ಕಟ್ಟಡ ಮಾಲಕ ಅಯ್ಯಪ್ಪ ರೋಟರಿ ಕೋಟ ಸಾಲಿಗಾಮ ಅಧ್ಯಕ್ಷ ತಿಮ್ಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಅಲ್ತಾರು ಕಾರ್ಯಕ್ರಮ ನಿರೂಪಿಸಿದರು.
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಜಪಾನ್‌ನ ಕುಮಾಮೋಟೋ ವಿಶ್ವಿವಿದ್ಯಾಲಯದ ಸಹಯೋಗದಲ್ಲಿ, ಫೆಬ್ರವರಿ 27 ಮತ್ತು 28ರಂದು ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣವನ್ನು ಹಮ್ಮಿಕೊಂಡಿದೆ. ಈ ವಿಚಾರಸಂಕಿರಣದಲ್ಲಿ ದೇಶ ವಿದೇಶಗಳಿಂದ ಸುಮಾರು 40ಕ್ಕೂ ಹೆಚ್ಚು ವಿಷಯ ತಜ್ಞರು ಹಾಗೂ ಪ್ರತಿನಿಧಿಗಳು ಆಗಮಿಸಿ ಪ್ರಬಂಧವನ್ನು ಮಂಡಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಹಾಗೂ ವಿಚಾರಸಂಕಿರಣದ ಸಂಯೋಜಕರು, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯನಾರಾಯಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
54 ವರ್ಷಗಳ ಇತಿಹಾಸವಿರುವ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ (KGMOA)ದ 2027-29ರ ಸಾಲಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಸಮರ್ಥ ನಾಯಕ, ಉಡುಪಿ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯ ಹಿರಿಯ ತಜ್ಞ ವೈದ್ಯ ಡಾ. ನಿಕಿನ್ ಸಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಾದ ಡಾ. ನಿಕಿನ್ ಶೆಟ್ಟಿ ಅವರು, ಕಂದಾವರ ಚಂದ್ರಶೇಖರ್ ಶೆಟ್ಟಿ ಹಾಗೂ ಗಿಳಿಯಾರು ನಿರ್ಮಲ ಶೆಟ್ಟಿ ಅವರ ಪುತ್ರ. ಕೋಲಾರದ ಎಸ್.ಡಿ.ಯು.ಎಂ.ಸಿ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿರುವ ನಿಕಿನ್ ಮಣಿಪಾಲದ ಕೆಎಂಸಿಯಲ್ಲಿ ಜನರಲ್ ಮೆಡಿಸಿನ್ ನಲ್ಲಿ ಎಂ.ಡಿ. ಪಡೆದಿದ್ದಾರೆ. 1998ರಲ್ಲಿ ಸೇವೆಗೆ ಸೇರಿರುವ ಡಾ. ನಿಕಿನ್ ಶೆಟ್ಟಿಯವರು ಕೊಕ್ಕರ್ಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಹೆಬ್ರಿಯ ಸಿ.ಹೆಚ್.ಸಿಯಲ್ಲಿ, ಬಳಿಕ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಹಿರಿಯ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಈ ಹಿಂದೆ ಉಡುಪಿ ಜಿಲ್ಲಾ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದಲ್ಲಿ ಎರಡು…
ಬೆಂಗಳೂರಿನ ಪ್ರತಿಷ್ಠಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಪಾತ್ರವಾಗಿದೆ. ಫೆಬ್ರವರಿ 13 ರಂದು ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್‌ರವರಿಂದ ಸಂಸ್ಥೆಯ ಆಡಳಿತ ನಿರ್ದೇಶಕರಾದ ಎಸ್.ಎಸ್ ಹೆಗ್ಡೆಯವರು “ಸೆಕ್ಟರ್ ಎಕ್ಸಲೆನ್ಸ್ ಅವಾರ್ಡ್” ಪ್ರಶಸ್ತಿ ಸ್ವೀಕರಿಸಿದರು. ಕೊಡುಗೈ ದಾನಿ ಎಸ್.ಎಸ್ ಹೆಗ್ಡೆಯವರು ಉದ್ಯಮಿಯಾಗಿದ್ದುಕೊಂಡು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ಮಕ್ಕಳಿಗೆ ಚಿಕ್ಕಂದಿನಲ್ಲೇ ಸನ್ಮಾರ್ಗ ತೋರಿ, ನೈತಿಕತೆ ಬೆಳೆಸುವುದರಿಂದ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿಸಲು ಸಾಧ್ಯ. ಸರ್ವಾಂಗೀಣ ಶಿಕ್ಷಣ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಅವರು ಕೊಕ್ಕರ್ಣೆ ಶ್ರೀ ಅನಿತಾ ಎಜ್ಯುಕೇಶನಲ್ ಸೊಸೈಟಿಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಮತಿ ಕನಕ ಶಂಕರ ಶೆಟ್ಟಿ ಪ್ಲೇ ಸ್ಕೂಲ್ ಉದ್ಘಾಟಿಸಿ ಮಾತನಾಡಿದರು. ಸರಕಾರದ ಜತೆ ದಾನಿಗಳು ಕೈ ಜೋಡಿಸುವುದರಿಂದ ಊರಿನ ಅಭಿವೃದ್ಧಿಯಾಗುತ್ತದೆ ಎಂದರು. ಹುಬ್ಬಳ್ಳಿಯ ಶೆಟ್ಟೀಸ್ ಕನ್ಸ್ಟ್ರಕ್ಷನ್ ನ ನಿರ್ದೇಶಕಿ ಕನಕ ಶಂಕರ್ ಶೆಟ್ಟಿಯವರು ಶುಭಾರಂಭಗೊಳಿಸಿದರು. ಅನಿತಾ ಎಜ್ಯುಕೇಶನಲ್ ಸೊಸೈಟಿ ಅಧ್ಯಕ್ಷ ಸಿಎ ಎಸ್ ಬಿ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ಯಶ್ ಪಾಲ್ ಎ. ಸುವರ್ಣ, ದಾನಿ ಶೆಟ್ಟೀಸ್ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಪ್ರಸನ್ನ ಎಸ್. ಶೆಟ್ಟಿ ಹುಬ್ಬಳ್ಳಿ, ಕೆ. ಶಂಕರ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟೀ ವಿಜಯಕಲಾ ಪಿ. ಶೆಟ್ಟಿ, ಬಿಇಓ ಶಬಾನಾ ಅಂಜುಮ್, ಹುಬ್ಬಳ್ಳಿ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಸುಜಾತಾ…
ಬೆಂಗಳೂರಿನ ಪ್ರತಿಷ್ಠಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಶ್ರೀ ಎಸ್.ಎಸ್. ಹೆಗ್ಡೆಯವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ ಸ್ವಗೃಹದಲ್ಲಿ ಫೆಬ್ರವರಿ 24 ರಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿಯವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಯುತ ಎಸ್ ಎಸ್ ಹೆಗ್ಡೆಯವರು ನಮ್ಮ ಸಮಾಜದ ಬಹುದೊಡ್ಡ ಆಸ್ತಿ ಎಂದರು. ಈ ಸಂದರ್ಭ ಶ್ರೀಮತಿ ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿಧರ ಶೆಟ್ಟಿ…
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಶ್ರೀ ಮುಜಿಲ್ನಾಯ ದೈವಸ್ಥಾನ ಉಪ್ಪಿರ ಎಲಿಯನಡಗೋಡು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಕುತ್ಲೋಡಿ ಇವರು ಆಯ್ಕೆಯಾದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಹರೀಶ್ ಹಿಂಗಣಿ, ಸೀತಾರಾಮ ಶೆಟ್ಟಿ ಅಗರ ಕುಮೇರು, ಜನಾರ್ದನ ಬಂಗೇರ ಉಪ್ಪಿರ, ಸುಂದರ ಉಪ್ಪಿರ, ಅರುಣಾ ವಿಶ್ವನಾಥ ದೋಟ, ಮೀನಾಕ್ಷಿ ಉಮ್ಮೆಟ್ಟು, ಮಧುಸೂದನ್ ಕಲಾಯಿದಡ್ಡ ಇವರು ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ವೇದಿಕೆ, ಡೆಕಾಥ್ಲಾನ್ ಮತ್ತು ಏರೋಡೈನಾಮಿಕ್ಸ್ ಸಹಯೋಗದಲ್ಲಿ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಇಂಡಿಯನ್ ಕೋಸ್ಟ್ ಗಾರ್ಡ್ನ ಸಹಾಯಕ ಕಮಾಂಡೆಂಟ್ ಪ್ರಿಯಾ ಮಾತನಾಡಿ, ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪುರುಷನಷ್ಟೇ ಸಮರ್ಥರಾಗಿ ಎಲ್ಲಾ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಾಷ್ಟ್ರದ ಗಡಿಗಳನ್ನು ಕಾಪಾಡುವುದು ಅತ್ಯಂತ ಕಠಿಣ ಕೆಲಸವಾದರೂ, ಮಹಿಳೆಯರು ಈ ಸವಾಲಿನ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ಮಹಿಳಾ ಉದ್ಯೋಗಿಗಳಿಂದ ಪಥಸಂಚಲನದೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆಳ್ವಾಸ್ ಸೆಂಟ್ರಲ್ ಶಾಲೆಯ ಕ್ರೀಡಾ ಶಿಕ್ಷಕರಾದ ಆಶಾ, ಉಷಾ ಕುಮಾರಿ ಮತ್ತು ಚಿತ್ರಾವತಿ, ಆಳ್ವಾಸ್ ಪ್ರಾಥಮಿಕ ಶಾಲೆಯ ಕವಿತಾ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹರ್ಷಿತಾ…
ಲಾಲ್‌ಭಾಗ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ ಕಾರ್ಯಕ್ರಮವು ವಿದ್ಯಾರ್ಥಿನಿ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ ಮೆನ್ ಡಾ. ಎಂ ಮೋಹನ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. 80 ವರ್ಷಗಳ ಇತಿಹಾಸ ಇರುವ ಬಂಟರ ಮಾತೃ ಸಂಘದ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಿಂದ ಬಹಳಷ್ಟು ಮಂದಿ ಹೆಣ್ಮಕ್ಕಳಿಗೆ ಇಲ್ಲಿ ಪ್ರಯೋಜವಾಗಿದೆ. ಪ್ರತೀ ವರ್ಷ ಹಾಸ್ಟೇಲ್ ಡೇ ಆಚರಿಸುವ ಮೂಲಕ ವಿದ್ಯಾರ್ಥಿನಿ ನಿಲಯದಲ್ಲಿ ಇಲ್ಲಿದ್ದ ಮಹಿಳೆಯರು ಮತ್ತೆ ಒಟ್ಟು ಸೇರುವ ಅವಕಾಶ ದೊರೆತಿದೆ ಎಂದರು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಲ್ಲಿ ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹಾಗಾಗಿ ಇಲ್ಲಿಯ ಮಕ್ಕಳಲ್ಲಿ ಶಿಸ್ತು, ಸಮಯ ಪ್ರಜ್ಞೆಯನ್ನು ಕಾಣಲು ಸಾಧ್ಯವಿದೆ ಎಂದರು. ಅಮೃತಸಿರಿ ಸ್ಮರಣ ಸಂಚಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ|…
ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘ : ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ನವೀನ್ ಕುಮಾರ್ ಶೆಟ್ಟಿ
ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಡೆದ ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾಧ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ್ ಕುಮಾರ್ ಶೆಟ್ಟಿ ಶಾನ್ಕಟ್ಟು ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಸ್ವಾಭಿಮಾನಿ ಸಹಕಾರಿ ಸಂಘಟನೆ ಹೀಗೆ ತ್ರಿಕೋನ ಸ್ಪರ್ಧೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬೆಂಬಲಿತ ಆರು ಮಂದಿ ಸ್ವಾಭಿಮಾನಿ ಸಹಕಾರಿ ಬಳಗದಿಂದ ನಾಲ್ಕು ಮಂದಿ ಹಾಗೂ ಬಿಜೆಪಿ ಬೆಂಬಲಿತ ಮೂರು ಮಂದಿ ನಿರ್ದೇಶಕರಾಗಿ ಆಯ್ಕೆಗೊಂಡಿದ್ದರು.ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾದ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ ಕುಮಾರ ಶೆಟ್ಟಿ ಶಾನ್ಕಟ್ಟು ಅವರು ಆಯ್ಕೆಗೊಂಡರು. ನಿರ್ದೇಶಕರಾಗಿ ಎ. ಕಿರಣ್ ಹೆಗ್ಡೆ, ಮೋಹನ ವೈದ್ಯ, ಅರುಣ್ ಕುಮಾರ್ ಶೆಟ್ಟಿ, ಭಾರತಿ…














