Author: admin

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ನೀಡುವುದರ ಮೂಲಕ ಯುವ ಜನತೆಯ ಬಾಳಿನ ಬೆಳಕಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 7ನೇ ವರ್ಷದ ಶಾರದೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಸ್ವಸ್ತಿ ಪುಣ್ಯಾಹವಚನ ಮತ್ತು ಗಣಪತಿ ಹೋಮದ ಮೂಲಕ ಮೊದಲ್ಗೊಂಡು ನಂತರದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಯಲ್ಲಿರುವ ಸಂಸ್ಥೆಯ ವಿದ್ಯಾರ್ಥಿಗಳು ಭಜನೆ ಹಾಗೂ ಶಾರದಾ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು. ಮಧ್ಯಾಹ್ನ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಹಾಗೂ ಆಗಮಿಸಿದ್ದ ಅತಿಥಿಗಳ ಸಮ್ಮುಖದಲ್ಲಿ ಸಹಭೋಜನ ನಡೆಯಿತು ಹಾಗೂ ರಾತ್ರಿ ದುರ್ಗಾ ನಮಸ್ಕಾರ ಪೂಜೆ ನೆರವೇರಿತು. ಪೂಜಾ ಕಾರ್ಯಗಳಿಗೆ ಆಗಮಿಸಿದ ಎಲ್ಲರನ್ನೂ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈರವರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ, ಜೆಸಿಐ ಪುತ್ತೂರು ಇದರ ಅಧ್ಯಕ್ಷ ಮೋಹನ್ ಕೆ, ಜೆಸಿಐ ಪುತ್ತೂರು ಕಾರ್ಯದರ್ಶಿ ಆಶಾ ಮೋಹನ್, ಮುಖಂಡರಾದ ಹೇಮನಾಥ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬಯಿಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮದ ಬಗ್ಗೆ ವಿಶೇಷ ಸಭೆಯು ಅಕ್ಟೋಬರ್ 15 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕೀರ್ಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಐಕಳ ಹರೀಶ್ ಶೆಟ್ಟಿಯವರು ಮಾತನಾಡುತ್ತಾ, ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವ ಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು 75 ಸಾವಿರಕ್ಕೂ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬಯಿಯಲ್ಲಿ 3 ವರ್ಷಗಳ ಹಿಂದೆ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ಮುಂಬಯಿ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿಸೆಂಬರ್ 7ರಂದು ಕುರ್ಲಾ ಬಂಟರ ಭವನದಲ್ಲಿ “ವಿಶ್ವ ಬಂಟರ ಸಮಾಗಮ” ಜಾಗತಿಕ ಮಟ್ಟದ ಕಾರ್ಯಕ್ರಮ ಬೆಳಿಗ್ಗೆಯಿಂದ ಸಂಜೆವರೆಗೆ…

Read More

ವಿದ್ಯಾಗಿರಿ: ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು ಎಂದು ಮಂಗಳೂರಿನ ಎಂಆರ್‌ಪಿಎಲ್- ಒಎನ್‌ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್ ನೊರಾನ್ಹಾ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಕುವೆಂಪು ಸಭಾಂಗಣ ಮಂಗಳವಾರ ನಡೆದ ‘ಸ್ಫಟಿಕ’ ವೇದಿಕೆಯ 2024-25ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮೊಳಗಿನ ಬ್ರಹ್ಮಾಂಡವನ್ನು ಅವಲೋಕಿಸುವ ರೀತಿಯಲ್ಲಿ ನಮ್ಮ ಮೌಲ್ಯಯುತ ಜೀವನ ನಿರ್ಧರಿತವಾಗಬೇಕು. ಸಾಮಾನ್ಯರಾಗಿ ಉಳಿಯುವವರು ಋಣಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ, ಅಸಾಮಾನ್ಯರು ಧನಾತ್ಮಕ ವಿಚಾರಗಳನ್ನು ಅನುಸರಿಸುತ್ತಾರೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜ ಕಾರ್ಯವು ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಹಲವಾರು ವಿಷಯಗಳನ್ನು ಸದುಪಯೋಗಗೊಳಿಸಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನ ಬಗ್ಗೆ ಯೋಚಿಸುವ ವೃತ್ತಿಯೇ ಸಮಾಜ ಕಾರ್ಯ. ನಾವು…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಾಲ್ಕು ದಿನಗಳ (ಅಕ್ಟೋಬರ್ 17 ರಿಂದ 20) ಕಾಲ ಕೆರೆ ಸಮ್ಮೇಳನ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರನೇ ಬಾರಿಗೆ ದೈವಾರ್ಷಿಕ ಕೆರೆ ಸಮ್ಮೇಳನವನ್ನು ಆಯೋಜಿಸುತ್ತಿದ್ದು, 2016 ಹಾಗೂ 2018ರಲ್ಲಿ ಹಮ್ಮಿಕೊಂಡು ಯಶಸ್ವಿಗೊಳಿಸಿತ್ತು. ಪರಿಸರ, ನೀರು, ಜೀವ ವೈವಿಧ್ಯತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ವೈಜ್ಞಾನಿಕ ಅನ್ವೇಷಣೆಗಳ ಸಹಬಳಕೆಯ ಕುರಿತು ಚರ್ಚಿಸಲಾಗುತ್ತದೆ. ಉದ್ಘಾಟನಾ ಕರ‍್ಯಕ್ರಮದಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಪರಿಸರವಾದಿ ಅನಂತ ಹೆಗಡೆ ಅಶೀಸರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ವಿಜ್ಞಾನಿ ಡಾ ಟಿ ವಿ ರಾಮಚಂದ್ರ ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 700 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು, ಪರಿಸರ ಹೋರಾಟಗಾರರು, ಹಾಗೂ ಸರಕಾರಿ ಅಧಿಕಾರಿಗಳು ಪ್ರತಿನಿಧಿಸಲಿದ್ದಾರೆ.…

Read More

ಬಂಟರ ಸಂಘ ಮೂಲ್ಕಿ ವತಿಯಿಂದ 2023-24 ನೇ ಸಾಲಿನ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಮೂಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅಕ್ಟೋಬರ್ 13 ರಂದು ಬೆಳಿಗ್ಗೆ ಮೂಲ್ಕಿ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರಧಾನವನ್ನು ವಿಕೆ ಗ್ರೂಪ್ ಆಫ್ ಕಂಪನಿ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯ ಗುತ್ತುರವರಿಗೆ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿರವರು ಪ್ರಧಾನ ಮಾಡಿ ಮಾತನಾಡಿ ನಶಿಸಿ ಹೋಗುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಕಾರ್ಯ ಸಂಘ ಸಂಸ್ಥೆಗಳಿಂದ ಆಗಬೇಕು. ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಸ್ತ ಅಭಿನಂದನೀಯ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಂದಿಕೂರು ಎಜುಕೇಶನ್ ಟ್ರಸ್ಟ್ ನ ಅನಿಲ್ ಶೆಟ್ಟಿ…

Read More

‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು ಕಾರ್ಯ ಬದ್ಧತೆಯಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಇರಲಿ. ಗೊಂದಲ ಬೇಡ’ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್, ಕೋಲ್ಕತ್ತಾದಲ್ಲಿನ ಯೂನಿಯನ್ ಬ್ಯಾಂಕ್ ಇಂಡಿಯಾದ ಸಹಾಯಕ ಮಹಾಪ್ರಬಂಧಕ ಸತೀಶ್ ರೈ ಹೇಳಿದರು. ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ದ ‘ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯ ಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ದಾರಿಯಲ್ಲಿ ವಿನಿಯೋಗಿಸಿಕೊಳ್ಳಬೇಕು. ಹಲವಾರು ನುರಿತ…

Read More

ಇಂದು ಡಿಜಿಟಲ್ ಸಾಕ್ಷರತೆಯಿಲ್ಲದೆ ದೈನಂದಿನ ಜೀವನ ನಡೆಯುವುದು ಕಷ್ಟ. ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಜ್ಞಾನವಿಲ್ಲದೆ ಉದ್ಯೋಗ ವ್ಯವಹಾರ ಅಸಾಧ್ಯ ಎಂದು ಉಡುಪಿ ಸ್ವದೇಶ್ ಗ್ರೂಪ್ ಆಫ್ ಹೋಟೆಲ್ಸ್ ನ ಚೇರ್ಮನ್ ಮ್ಯಾನೇಜಿಂಗ್ ಡೈರೆಕ್ಟರ್ ನಾಗೇಶ್ ಹೆಗ್ಡೆ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಸಂಘದ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 17ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಕಾರ್ಯಕ್ರಮದಲ್ಲಿ ಈವರೆಗೆ 360 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ. ಕೌಶಲ್ಯ ಮತ್ತು ಉದ್ಯೋಗ ತರಬೇತಿ ಶಿಬಿರದ ಮೂಲಕ 2200 ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎರಡು ಬೃಹತ್ ಉದ್ಯೋಗ ಮೇಳದ ಮೂಲಕ 1300 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ ಎಂದರು.…

Read More

ಮೂಡುಬಿದಿರೆ: ‘ಆಳ್ವಾಸ್ ಫಾರ್ಮಸಿಯು 1982ರಲ್ಲಿ ಆರಂಭಗೊಂಡಿದ್ದು, ಆಯುರ್ವೇದ ಔಷಧಿ ಮತ್ತು ಇತರ ಆಯುಷ್ ಉತ್ಪನ್ನಗಳನ್ನು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಉತ್ಪಾದಕರಾಗಿ ಅಭಿವೃದ್ಧಿಗೊಂಡಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಮಿಜಾರಿನ ಆಳ್ವಾ ಫಾರ್ಮಸಿಯಲ್ಲಿ ಸೋಮವಾರ ನಡೆದ ವಿವಿಧ ಔಷಧೀಯ ಉತ್ಪನ್ನಗಳ ‘ಫ್ಯಾಕ್ಟರಿ ಔಟ್‌ಲೆಟ್, ವೆಬ್‌ಸೈಟ್ ಬಿಡುಗಡೆ ಮತ್ತು ಟಿವಿಸಿ ಬಿಡುಗಡೆ’ ಸಮಾರಂಭದಲ್ಲಿ ಅವರು ಮಾತನಾಡಿದರು. ಹೇಗೆ ನಮ್ಮ ನೆರಳು ನಮ್ಮನ್ನು ಹಿಂಬಾಲಿಸುತ್ತದೆಯೋ, ಹಾಗೆಯೇ ನಾವು ನಂಬಿರುವ ಮೌಲ್ಯಗಳು ನಮ್ಮನ್ನು ರಾಜ ಮಾರ್ಗದಲ್ಲಿ ಕ್ರಮಿಸುವಂತೆ ಮಾಡುತ್ತವೆ.  ಆದರೆ ಇಂದಿನ ಸ್ಪರ್ಧಾತ್ಮಕ ಜಾಹೀರಾತಿನ ಯುಗದಲ್ಲಿ ವಸ್ತುಗಳ ಮಾರುಕಟ್ಟೆ ವಿಧಾನವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಉತ್ಪನ್ನವೊಂದು ತನ್ನ ಅಂತಸತ್ವದ ಜೊತೆ ಜಾಹೀರಾತುಗೊಂಡಾಗ ಜನರನ್ನು ತಲುಪುತ್ತದೆ. ಜಾಹೀರಾತು ಪ್ರಾಮಾಣಿಕರಾಗಿರಬೇಕು. ಜನರಲ್ಲಿ ವಿಶ್ವಾಸರ್ಹತೆಯನ್ನು ಮೂಡಿಸಬೇಕು ಎಂದರು. ಆಳ್ವಾಸ್ ಫಾರ್ಮಸಿಯ ನೂತನ ಉತ್ಪನ್ನ ಸುಕೇಶ್ ಪೋಷಕ ತೈಲವು ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪೂರಕವಾಗಿದೆ. ಇನ್ನಿತರ ಔಷಧೀಯ ಉತ್ಪನ್ನಗಳನ್ನು ಉತ್ತಮ ರೀತಿಯಲ್ಲಿ ಮಾರುಕಟ್ಟೆ ಮಾಡಿ,…

Read More

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನವದುರ್ಗ ಲೇಖನ ಯಜ್ಞ ಸಮಿತಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಶುಕ್ರವಾರ ಸಂಜೆ ಅಡ್ಯಾ‌ರ್ ಗಾರ್ಡನ್‌ ನಲ್ಲಿ ಜರುಗಿತು. ಕಮಲ ಪ್ರಭಾಕರ್ ಭಟ್, ಅಶ್ವಿನಿ ಮುಹಿಲನ್, ಸುನಂದಾ ಪುರಾಣಿಕ್, ಮಮತಾ ಸುನೀಲ್ ಆಚಾರ್, ವೃಂದ ವೇದವ್ಯಾಸ ಕಾಮತ್, ನಿರ್ಮಿತ ಸತೀಶ್ ಪಟ್ಲ, ಶ್ರೀದುರ್ಗ ಹರೀಶ್ ಪೂಂಜಾ, ಮಮತಾ ಗಟ್ಟಿ, ಮಲ್ಲಿಕಾ ಪ್ರಸಾದ್ ಶೆಟ್ಟಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಕಾಪು ಮಾರಿಗುಡಿ ಕ್ಷೇತ್ರದ ಕುಮಾರ ತಂತ್ರಿಗಳು, “ಹೆತ್ತು ಹೊತ್ತ ತಾಯಿಗೆ ಸನಾತನ ಸಂಸ್ಕೃತಿ ಬಹಳಷ್ಟು ಗೌರವವನ್ನು ನೀಡಿದೆ. ಆದೇ ರೀತಿ ಇಡೀ ಲೋಕದ ತಾಯಿಯಾದ ಕಾಪುವಿನ ಮಾರಿಯಮ್ಮ ನಮ್ಮ ಸಂಕಷ್ಟಗಳನ್ನು ಕಳೆಯುತ್ತಾಳೆ ಎಂಬ ನಂಬಿಕೆ ನಮ್ಮಲ್ಲಿದೆ. ಅಮ್ಮನ ಕ್ಷೇತ್ರದ ಜೀರ್ಣೋದ್ಧಾರ ಸಂದರ್ಭದಲ್ಲಿ ಈ ಲೇಖನ ಯಜ್ಞವನ್ನು ಹಮ್ಮಿಕೊಳ್ಳಲಾಗಿದೆ. ಸಾವಿರಾರು ವರ್ಷಗಳ ಹಿಂದೆ ಕಾಪುವಿನ ಮಾರಿಯಮ್ಮ ಪ್ರತಿಷ್ಠಾಪನೆಗೊಂಡಿದ್ದು…

Read More

ವಿದ್ಯಾಗಿರಿ: ಶಿಬಿರಾರ್ಥಿಗಳು ರಾಷ್ಟೀಯ ಸೇವಾ ಯೋಜನೆಯ ಧ್ಯೇಯವನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ರೆಂಜಾಳ ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹಾವೀರ ಹೆಗ್ಡೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರೆಂಜಾಳದ ಸಂಯುಕ್ತ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ” ನಮ್ಮ ಭಾರತಕ್ಕಾಗಿ ನಮ್ಮ ಯುವಜನತೆ ” ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕ ಸೇವೆಯ ಮೂಲಕ ವ್ಯಕ್ತಿತ್ವವನ್ನು ವೃದ್ಧಿಗೊಳಿಸುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡ ರಾಷ್ಟೀಯ ಸೇವೆ ಯೋಜನೆಯು ವಿದ್ಯಾರ್ಥಿಗಳನ್ನು ಲೋಕ ಸೇವೆಯ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ರಾಷ್ಟ್ರಪ್ರೇಮ ಮತ್ತು ಸೇವಾಭಾವನೆಗಳನ್ನು ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸಿ, ಮತ್ತಷ್ಟು ಪ್ರೇರಣೆ ನೀಡಬೇಕು ಎಂದು ಆಶಿಸಿದರು. ಒಂದು ವಾರದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಂಪನ್ಮೂಲ ವ್ಯಕ್ತಿಗಳ ಹಿತವಚನಗಳನ್ನು ಆಲಿಸುವ ಮನೋಭಾವದ ಜೊತೆಗೆ, ಸ್ಥಳೀಯರ ಜೊತೆ ಉತ್ತಮ ರೀತಿಯಲ್ಲಿ ವರ್ತಿಸುವ ಮನೋಭಾವ…

Read More