Author: admin

‘ನಮ್ಮ ಸಂಸ್ಕೃತಿ ಮತ್ತು ಜನಜೀವನದೊಂದಿಗೆ ಹಾಸು ಹೊಕ್ಕಾಗಿರುವುದು ಭಾರತೀಯ ಲಲಿತ ಕಲೆಗಳು. ಪ್ರಾಚೀನ ಕಾಲದಿಂದಲೂ ಅವುಗಳಿಗೆ ಆಸರೆಯಾಗಿರುವುದು ಇಲ್ಲಿನ ದೇಗುಲಗಳು. ವಿಶೇಷ ಪರ್ವಕಾಲಗಳಲ್ಲಿ ಸಂಗೀತ, ನೃತ್ಯ, ಯಕ್ಷಗಾನಗಳು ನಡೆಯದಿರುವ ದೈವ ಸಾನಿಧ್ಯಗಳೇ ನಮ್ಮಲ್ಲಿಲ್ಲ. ಅದರಲ್ಲೂ ಯಕ್ಷಗಾನ ತಾಳಮದ್ದಳೆ, ಪುರಾಣ ಪ್ರವಚನ ಮತ್ತು ಬಯಲಾಟಗಳು ಆರಂಭಗೊಂಡಿರುವುದು ಈ ದೇವಸ್ಥಾನಗಳಿಂದಲೇ’ ಎಂದು ಖ್ಯಾತ ಯಕ್ಷಗಾನ ಅರ್ಥಧಾರಿ ಮತ್ತು ಸಾಹಿತಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಹರೇಕಳ ಗ್ರಾಮದ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಯಕ್ಷಗಾನ ತಾಳಮದ್ದಳೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಶುಭಾಶಂಸನೆಗೈದರು. ಮುಂಬೈ ಉದ್ಯಮಿ ಜಗದೀಶ ಪೂಜಾರಿ ಇರಾ ಆಚೆಬೈಲು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ದಾಸ್ ರೈ ದೆಬ್ಬೇಲಿ ಗುತ್ತು ಅವರ ನೇತೃತ್ವದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಮಹಾಬಲ…

Read More

ಕಾರ್ಕಳ ಜ್ಞಾನಸುಧಾ : ನುಡಿನಮನ ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಇತ್ತೀಚೆಗೆ ಅಗಲಿದ ಉದ್ಯಮ ಸಂತ, ಮಾತೃ ಹೃದಯಿ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ಶ್ರೀ ರತನ್ ಟಾಟಾ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು. ರತನ್ ಟಾಟಾರ ಜೀವನ ಗಾಥೆಯನ್ನು ಖ್ಯಾತ ವಾಗ್ಮಿ ಶ್ರೀ ರಾಜೇಂದ್ರ ಭಟ್ ಕೆ. ಪ್ರಸ್ತುತಪಡಿಸಿ ನುಡಿ ನಮನ ಸಲ್ಲಿಸಿದರು. ಇದೇ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಸುಧಾಕರ್, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ಶ್ರೀ ದಿನೇಶ್ ಎಂ.ಕೊಡವೂರ್, ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ ಮತ್ತು ಶ್ರೀಮತಿ ಉಷಾ ರಾವ್ ಯು ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ. ಉಪಸ್ಥಿತರಿದ್ದರು.

Read More

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ಕಡಲ ತಡಿಯ ಭಾರ್ಗವ ರಾಮರ ಸುಂದರ ಹಸಿರು ನಾಡಿನ ಸುಣ್ಣಾರಿ ಎನ್ನುವ ಸುಂದರ ಊರಿನಲ್ಲಿ ಸ್ಥಾಪಿತಗೊಂಡಿರುವ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸಾಧಿಸಿರುವ ಅಗ್ರಗಣ್ಯ ಸಂಸ್ಥೆಯೇ ಎಕ್ಸಲೆಂಟ್ ವಿದ್ಯಾಸಂಸ್ಥೆಯಾಗಿದೆ. ಈ ಸಂಸ್ಥೆಗೆ ಪ್ರತಿ ವರ್ಷವು ವಿವಿಧ ರಾಜ್ಯದ ಹಾಗೂ ಜಿಲ್ಲೆಗಳ ನಾನಾ ಭಾಗದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಹೊಸ ಕ್ರಾಂತಿಯನ್ನು ಸೃಷ್ಠಿಸಿದೆ. ಪ್ರತಿ ವರ್ಷವು ಸಿಇಟಿ, ಜೆಇಇ, ನೀಟ್, ಸಿಎ, ಸಿಎಸ್ ಹಾಗೂ ಬೋರ್ಡ್‍ಗಳಲ್ಲಿ ಹಲವಾರು ರ್ಯಾಂಕ್‍ಗಳನ್ನು ಗಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಸಂಸ್ಥಗೆ ಹೆಮ್ಮೆಯ ವಿಚಾರವಾಗಿದೆ. ಹೀಗೆ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಂಸ್ಕ್ರತಿಕ ಕ್ರೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಠಿಮಾಡಲು…

Read More

ಮೂಡುಬಿದಿರೆ: ಮೈಸೂರಿನ ಜಿಎಸ್‍ಎಸ್‍ಎಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಿಳೆಯರ ಕಾಲೇಜು ವತಿಯಿಂದ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ. 12-09-2024 ಪತ್ರಿಕಾ ಪ್ರಕಟಣೆಯ ಕೃಪೆಗಾಗಿ ಪದವಿಪೂರ್ವ ಕಾಲೇಜುಗಳ ಮೂಡುಬಿದಿರೆ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಆಳ್ವಾಸ್‍ಗೆ ಅವಳಿ ಪ್ರಶಸ್ತಿ. ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ದಿನಾಂಕ 12-09-2023 ರಂದು ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ…

Read More

ಮೂಡುಬಿದಿರೆ: ಉಡುಪಿಯ ಎಂಜಿಎಂ ಸಂಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಉಜಿರೆಯ ಎಸ್‌ಡಿಎಂ ಕಾಲೇಜನ್ನು 25-17 ಅಂಕಗಳ ಅಂತರದೊಂದಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯಿತು. ಆಳ್ವಾಸ್‌ನ ದಿವ್ಯ ಉತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದರು.

Read More

ಮೂಡುಬಿದಿರೆ: ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ರಾಜೀವ ಗಾಂಧಿ ವಿಜ್ಞಾನ ವಿವಿಗಳ ಅಂತರ್ ವಲಯ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್‌ನ ನ್ಯಾಚುರೋಪಥಿ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ  ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು ಈ ವರ್ಷದಿಂದಲೇ ಅಂದರೆ, 2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದ್ದು, ಇದು ರಾಜೀವ್  ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿAದ ಸಂಯೋಜಿಸಲ್ಪಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಸಂಸ್ಥೆಯ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸುವ ಈ ಕೋರ್ಸ್ಗಾಗಿ ಈಗಾಗಲೇ ವಿಶೇಷ ಮುತುವರ್ಜಿವಹಿಸಿದ್ದು ಅನುಭವಿ ಶಿಕ್ಷಕರು, ವಿಶೇಷ ತರಗತಿ ಕೊಠಡಿಗಳು, ಆಧುನಿಕ ಪ್ರಯೋಗಾಲಯ, ನವೀನ ಗ್ರಂಥಾಲಯ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ವಿಶೇಷ ಸವಲತ್ತುಗಳುಳ್ಳ ವಸತಿ ನಿಲಯಗಳನ್ನು ರೂಪಿಸಲಾಗಿದೆ ಎಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಮ್ಮ ಜೀವನದಲ್ಲಿ ಔಷಧಿ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದ್ದು ಆರೋಗ್ಯ ರಕ್ಷಣೆ ಮತ್ತು…

Read More

ಸನಾತನ ಭಾರತೀಯ ಸಂಸ್ಕ್ರತಿ, ಹಿಂದುತ್ವದ ತತ್ವದ ಮೇಲೆ ಧಾರ್ಮಿಕ ಆಚರಣೆ ಆಚರಿಸುವುದು ಪ್ರತಿಯೋರ್ವನ ಕರ್ತವ್ಯವಾಗಿದೆ. ಶಿಕ್ಷಣದ ಜೊತೆಯಲ್ಲಿ ನಮ್ಮ ಸಂಸ್ಕ್ರತಿ ಕಲೆ, ನಡೆ ನುಡಿ, ಅಚಾರ ವಿಚಾರಗಳು ಕೂಡಾ ಕೂಡಿಕೊಂಡು ಜೀವನ ಸಾಗಿದರೆ ಉತ್ತಮ ಪ್ರಜೆಯಾಗಲು ಸಾದ್ಯ. ಈ ಸಂಸ್ಕಾರ ಎಂಬುದು ಮೊದಲಾಗಿ ಮನೆಯಲ್ಲಿ ತಾಯಿಯಿಂದ ಕಲಿತು ಬರುತ್ತೇವೆ. ಮಾತೃ ದೇವೋ ಭವ, ಪಿತೃ ದೇವೋ ಭವ, ಗುರು ದೇವೋ ಭವ, ಅತಿಥಿ ದೇವೋ ಭವ ಎಂಬಂತೆ ನಮಗೆ ತಾಯಿಯೇ ಮೊದಲ ಗುರು. ಬಹು ದೊಡ್ಡ ಸಂಘಟನೆ ಮಾಡುವಲ್ಲಿ ನಮ್ಮ ಬಂಟರ ಸಾಂಘಿಕ ಶಕ್ತಿಯಿಂದ ಸಾಧ್ಯವಾಗಿದೆ ಎಂಬುದನ್ನು ಅರಿತಿದ್ದೇವೆ. ಯಾವ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೂಡಾ ಪ್ರಾಮುಖ್ಯತೆಯನ್ನು ನೀಡುತ್ತೆವೆಯೋ ಅ ಸಂಸ್ಥೆ ಯಶಸ್ವಿಯಾಗಿ ನಡೆಯುತ್ತದೆ. ಪ್ರೀತಿ ವಾತ್ಸಲ್ಯದಿಂದ ಬದುಕುವ ಮೂಲಕ ಪರೋಪಕಾರ ಮನೋಭಾವ ನಮ್ಮದಾಗಲಿ. ಬರುವಾಗ ಶೂನ್ಯ ಹೋಗುವಾಗ ಶೂನ್ಯ. ಇದರ ಮದ್ಯೆ ಸ್ವಸಾಮರ್ಥ್ಯ ಸಾಧನೆಯಿಂದ ಸಮಾಜದಲ್ಲಿ ಗುರುತಿಸಿಕೊಂಡು ಮಾಡುವ ಸೇವಾ ಕಾರ್ಯದಿಂದ ಗೌರವವನ್ನು ಪಡೆಯಬಹುದು. ಬಂಟರ ಸಂಸ್ಕ್ರತಿಯನ್ನು ಮೇಲೈಸುವ ನಮ್ಮ ತುಳುನಾಡ…

Read More

ಎಲ್ಲರಿಗೂ ಶರನ್ನವರಾತ್ರಿ ಹಬ್ಬದ ಹಾರ್ದಿಕವಾದ ಶುಭಾಶಯಗಳು. ಈಗಾಗಲೇ ನಾವೆಲ್ಲರೂ ಭಕ್ತಿ ಶ್ರಧ್ದೆಯಿಂದ ಆಚರಿಸುವ ಮಹಾನ್ ಹಬ್ಬ ನವರಾತ್ರಿ ಫ್ರಾರಂಭವಾಗಿದೆ. ನಿರಂತರ ಹತ್ತು ದಿನಗಳ ಕಾಲ ಆಚರಿಸುವ ಧೀರ್ಘವಾದ ಈ ದಸರಾ ಹಬ್ಬವು ದೇಶದೆಲ್ಲೆಡೆ ವಿಶೇಷ ಕಳೆ ಕಟ್ಟಿದೆ. ಹಬ್ಬವೆಂಬುದು ಕೇವಲ ಭಗವಧಾರಾಧನೆಗೆ ಮಾತ್ರ ಸೀಮಿತವಾಗಿರದೆ, ಅದು ಹಲವಾರು ವೈಚಾರಿಕ, ವೈಜ್ಞಾನಿಕ, ಧಾರ್ಮಿಕ ನಂಬಿಕೆಗಳನ್ನು ಒಳಗೊಂಡಿದೆ ಎಂಬುದು ಸತ್ಯ. ಕಾಣದ ಭಗವಂತನ ಕಲ್ಪನೆಯೊಂದಿಗೆ ಸನಾತನವಾದ ಮೂಲ ನಂಬಿಕೆಯೊಂದಿಗೆ ಕಾಣುವ ವ್ಯಕ್ತಿಗಳ ಅಂದರೆ ಮನುಷ್ಯ ಮನುಷ್ಯನ ಸಂಬಂಧಗಳ ಕೊಂಡಿಯನ್ನು ಬೆಸೆಯುತ್ತವೆ ಈ ಹಬ್ಬಗಳು. ಇದು ಮುಖ್ಯವಾಗಿ ಆಗಬೇಕಾದುದು ಕೂಡಾ. ನಮ್ಮ ಇಂದಿನ ಮಕ್ಕಳಿಗೆ ಅನಿಸಬಹುದು ಏನು ಕರ್ಮ ದಿನವೂ ಹಬ್ಬ ಎಂದು!. ಅದಕ್ಕೆ ಕಾರಣ ನಾವೇ. ನಮ್ಮ ದಿನನಿತ್ಯದ ಬದುಕಲ್ಲಿ ಬರುವ ಹಬ್ಬ ಹುಣ್ಣಿಮೆಗಳು ಏನದರ ಅರ್ಥ? ಆ ಧರ್ಮದ ಮರ್ಮ ನಮಗೆ ಅಗತ್ಯವೇ ಇಲ್ಲ ಎಂಬಂತಾಗಿದೆ!. ಯಾಕೆ ಹೀಗೆ ಎಂದು ಕೇಳಿದರೆ, ಈಗಿನ ಹೆಚ್ಚಿನ ಎಲ್ಲರ ಮನೆಯಲ್ಲಿನ ಮಕ್ಕಳಿಗೆ ನಾವು ಕಳುಹಿಸುವ ಶಾಲೆ.…

Read More

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು ಒಟ್ಟು 10 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.

Read More