Author: admin
ವಿದ್ಯಾಗಿರಿ (ಮೂಡುಬಿದಿರೆ): ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ `ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು. ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು ಎಂದರು. ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17 ವರ್ಷವಾಗಿದೆ. ಆದರೆ, 76ನೇ…
‘ಯಕ್ಷಗಾನ ಕ್ಷೇತ್ರದಲ್ಲಿ ಸವ್ಯಸಾಚಿ ಎಂದು ಗುರುತಿಸಲ್ಪಟ್ಟ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಭಾಗವತರಾಗಿ, ಪ್ರಸಂಗಕರ್ತರಾಗಿ, ಹಿಮ್ಮೇಳ ಮುಮ್ಮೇಳಗಳ ಸಮರ್ಥ ಕಲಾವಿದರಾಗಿ ಮೆರೆದವರು. ಅವರು ಯಕ್ಷರಂಗದಲ್ಲಿ ಸರ್ವ ಸಾಧ್ಯತೆಗಳನ್ನು ಕಂಡರಸಿದ ಶೋಧಕರು. ಮನೆಯನ್ನೇ ಗುರುಕುಲವನ್ನಾಗಿಸಿ ನೂರಾರು ಶಿಷ್ಯರ ಮೂಲಕ ತಮ್ಮ ಯೋಚನೆಗಳನ್ನೆಲ್ಲಾ ಸಾಕಾರಗೊಳಿಸಿದ ದೊಡ್ಡ ಸಾಹಸಿ’ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ, ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆದ 12ನೇ ವರ್ಷದ ನುಡಿ ಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಅಂಗವಾಗಿ ಜರಗಿದ ‘ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾ ಕಾರ್ಯಕ್ರಮ’ದಲ್ಲಿ ಅವರು ಸಂಸ್ಮರಣ ಭಾಷಣ ಮಾಡಿ ಪೂಂಜರ ಸಾಧನೆಗಳನ್ನು ಸ್ಮರಿಸಿದರು. ‘ಸುಮಾರು 32 ಕನ್ನಡ ತುಳು ಪ್ರಸಂಗಗಳನ್ನು ಬರೆದ ಪೂಂಜರು ರಾಮಾಯಣದ ಉತ್ತರ ಕಾಂಡವನ್ನಾಧರಿಸಿ ರಚಿಸಿದ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
‘ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಮತ್ತು ನಾಟಕಗಳು ಜನ ಜೀವನದಲ್ಲಿ ಹಾಸುಹೊಕ್ಕಾಗಿವೆ. ಇವೆರಡೂ ನಮ್ಮ ಸಂಸ್ಕೃತಿಯ ಉಸಿರು. ಮಠ ಮಂದಿರ ಮತ್ತು ಸಂಘ ಸಂಸ್ಥೆಗಳು ಅವುಗಳಿಗೆ ಇನ್ನಷ್ಟೂ ಪೋಷಣೆ ನೀಡುವ ಅಗತ್ಯವಿದೆ’ ಎಂದು ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹೇಳಿದರು. ಯಕ್ಷಾಂಗಣ ಮಂಗಳೂರು ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ 12ನೇ ವರ್ಷದ ನುಡಿ ಹಬ್ಬದಲ್ಲಿ ನ.16ರಂದು ಕೀರ್ತಿ ಶೇಷ ಅರ್ಥಧಾರಿಗಳಾದ ದಿವಂಗತ ಎ.ಕೆ ನಾರಾಯಣ ಶೆಟ್ಟಿ ಫರಂಗಿಪೇಟೆ ಮತ್ತು ಎ.ಕೆ ಮಹಾಬಲ ಶೆಟ್ಟಿ ಅವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡಿ ಅವರು ಆಶೀರ್ವಚನ ನೀಡಿದರು. ‘ಯಕ್ಷಗಾನ ಆಟ ಕೂಟಗಳಲ್ಲಿ ಮೆರೆದ ಹಿಂದಿನ ಕಲಾವಿದರು ಬದುಕಿರುವಾಗ ಮಾಡಿದ ಸಾಧನೆಗಳನ್ನು ನೆನಪಿಟ್ಟು, ಮುಂದಿನ ತಲೆಮಾರಿಗೆ ತಿಳಿಯಪಡಿಸುವುದು ಹಿರಿಯರ ಜವಾಬ್ದಾರಿ. ಯಕ್ಷಾಂಗಣದಂತಹ ಸಂಸ್ಥೆಗಳು ಅದಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಶ್ರೇಷ್ಠ…
ವಿದ್ಯಾಗಿರಿ (ಮೂಡುಬಿದಿರೆ): ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ನಿವೃತ್ತ ಸಹ ಪ್ರಾಧ್ಯಾಪಕ ಜಯವಂತ ಜಾಧವ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು. ನಳದಲ್ಲಿ ಮನೆ ಮನೆಗೆ ನೀರು ಬರುವಂತೆ, ದೃಶ್ಯ- ಶ್ರವ್ಯ ಮಾಧ್ಯಮ ಬರಲಿದೆ ಎಂದು ಕೆಲವು ದಶಕಗಳ ಹಿಂದೆ ತಜ್ಞರು ಭವಿಷ್ಯ ನುಡಿದಿದ್ದರು. ಆದರೆ, ಇಂದು ಸಂವಹನದ ಜೊತೆ ದೃಶ್ಯ-ಶ್ರವ್ಯ ಮಾಧ್ಯಮದ ರೂಪಕದಂತಿರುವ ‘ಮೊಬೈಲ್’ ನಮ್ಮ ಅಂಗೈಯನ್ನು ಆವರಿಸಿದೆ. ಅದರಿಂದ ಅಗಲುವಿಕೆ ಅಸಾಧ್ಯ ಅನಿಸಿದೆ ಎಂದು ಮಾರ್ಮಿಕವಾಗಿ ವಿವರಿಸಿದರು. ಡಿಜಿಟಲೈಸೇಷನ್ ಮತ್ತು ಮಿನಿಯೇಚರೈಸೇಶನ್ ಎಂಬ ಜಾಗತಿಕ ಪ್ರಕ್ರಿಯೆಯು ಇಂದು ಮೊಬೈಲ್ನಲ್ಲಿ ದೊಡ್ಡ ಗ್ರಂಥಾಲಯವನ್ನು, ಜಗತ್ತಿನ ಸಂಪರ್ಕವನ್ನು ನಿಮ್ಮದಾಗಿಸಿದೆ. ಮಾತಿನ ಭಾಷೆಗಿಂತ ವಿಭಿನ್ನವಾಗಿ ಸಿನಿಮಾ ಭಾಷೆ ಸಂವಹನ ಮಾಡುತ್ತಿದೆ ಎಂದರು. ಸಿನಿಮಾದ…
ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟವು ನವೆಂಬರ್ 22 ರಂದು ಬಹರೈನ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಡಾ| ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಕೆ ಪ್ರಕಾಶ್ ಶೆಟ್ಟಿಯವರು, ಬಂಟ ಸಮಾಜ ನನ್ನನ್ನು ಬೆಳಿಸಿದೆ. ಸಮಾಜದ ಮೇಲೆ ನನಗೆ ಋಣ ಇದ್ದು, ಅದನ್ನು ತೀರಿಸುವ ಕೆಲಸವನ್ನು ಜನಸೇವೆಯ ಮುಖಾಂತರ ಮಾಡುತ್ತಿದ್ದೇನೆ ಎಂದರು. ಈ ಸಂದರ್ಭದಲ್ಲಿ ಬಹರೈನ್ ಬಂಟರ ಸಂಘದ ಅಧ್ಯಕ್ಷರಾದ ನಿತಿನ್ ಶೆಟ್ಟಿ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಛೇರ್ಮನ್ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ, ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ, ಅಂತಾರಾಷ್ಟ್ರೀಯ ಕರಾಟೆ ಪಟು ವಸಂತ್ ಶೆಟ್ಟಿ ಹಾಗೂ ಬಹರೈನ್ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.
‘ಯಕ್ಷಗಾನದಲ್ಲಿ ನಮ್ಮ ಜೀವನ ಮೌಲ್ಯದ ಪಾಠವಿದೆ. ಆದ್ದರಿಂದ ಎಳೆಯ ಜನಾಂಗ ಅದರತ್ತ ಹೆಚ್ಚು ಆಸಕ್ತರಾಗುವ ಅಗತ್ಯವಿದೆ. ಕಲಿಯುವ ಮಕ್ಕಳನ್ನು ಶಾಲಾ ಹಂತದಲ್ಲೇ ಯಕ್ಷಗಾನದಲ್ಲಿ ತೊಡಗಿಸಲು ಪೋಷಕರು ಮುಂದಾಗಬೇಕು’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರು ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ 12ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2024’ ಅಂಗವಾಗಿ 4ನೇ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಕೌಶಲ್ಯ ಕನ್ಸ್ಟ್ರಕ್ಷನ್ಸ್ ನ ಜಿ.ಸುಂದರ ಆಚಾರ್ಯ ಬೆಳುವಾಯಿ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಯಕ್ಷಗಾನದ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಅವರ ಸಂಸ್ಮರಣೆ ಜರಗಿತು. ಸಂಸ್ಮರಣಾ ಭಾಷಣ…
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಮಾಸಿಕ ಸಭೆಯು ನವೆಂಬರ್ 21 ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾ ಪ್ರಸಾದ್ ರೈಯವರು ಮಾತನಾಡಿ, ಸದಸ್ಯರ ಪ್ರಯೋಜನಕ್ಕಾಗಿ ವ್ಯಾಜ್ಯಗಳನ್ನು, ಬಂಟರ ವೈವಾಹಿಕ ಮನಸ್ತಾಪಗಳನ್ನು ಸೌಹಾರ್ದಯುತವಾಗಿ ಮುಗಿಸುವ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಸಮಿತಿಯನ್ನು ತಾಲೂಕು ಸಮಿತಿಯಡಿಯಲ್ಲಿ ರಚನೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ಸಂಘಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ 1500 ಮಂದಿಗೆ ಬೇಕಾದ ಅಡುಗೆ ತಯಾರಿಕಾ ಪಾತ್ರೆಗಳು, ಹೆಚ್ಚುವರಿ ಸಿಸಿ ಕ್ಯಾಮರಾ, ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದೆಂದು ತೀರ್ಮಾನಿಸಲಾಯಿತು. ಸಂಘಕ್ಕೆ ಬರುವ ರಸ್ತೆಯನ್ನು ಸಾರ್ವಜನಿಕರ ಅನುಕೂಲವಾಗಿ ಅಗಲೀಕರಣಗೊಳಿಸುವುದು ಅಥವಾ ಏಕಮುಖ ರಸ್ತೆಯಾಗಿ ಪರಿವರ್ತಿಸುವರೇ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸುವುದು ಎಂದು ಚರ್ಚಿಸಲಾಯಿತು. ಸಂಘದ ದೀನದಲ್ಲಿರುವ ಸ್ಥಿರಾಸ್ತಿಯನ್ನು ಸರ್ವೆ ನಡೆಸಿ, ಒತ್ತುವರಿ ಕಂಡು ಬಂದಲ್ಲಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಜರಗಿಸುವುದು. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ತಂಡವು ಕುಂದಾಪುರದ ಭಂಡಾಕರ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್ಶಿಪ್ನಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ದ್ವಿತೀಯ ತಂಡ ಪ್ರಶಸ್ತಿ ಎಸ್.ಡಿ.ಎಮ್ ಬಿ ಬಿ ಎಮ್ ಮಂಗಳೂರು, ತೃತೀಯ ತಂಡ ಪ್ರಶಸ್ತಿ ಸೆಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ಪಡೆಯಿತು. 15ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ಕಾ ಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಈ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.