Author: admin
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮೂಡುಬಿದಿರೆಯ ಸಹಕಾರಿ ಸೇವಾ ಸಂಘ ಸಹಯೋಗದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾಮಂದಿರ ಬಳಿ ಫೆಬ್ರುವರಿ 10ರಂದು ಶನಿವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಸ್ಥೂಲಕಾಯ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಲಿದೆ. ತಜ್ಞ ವೈದ್ಯಕೀಯ ವೃತ್ತಿಪರರಿಂದ ಸಮಗ್ರ ಮೌಲ್ಯಮಾಪನ, ತಜ್ಞರೊಂದಿಗೆ ಸಮಾಲೋಚನೆ, ಸ್ಥೂಲಕಾಯ ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ತಿಳಿವಳಿಕೆ ಮತ್ತು ಪರಿಣಿತರೊಂದಿಗೆ ಸಂವಾದಾತ್ಮಕ ಪ್ರಶ್ನೋತ್ತರ ಶಿಬಿರ ಇದಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಮೂಡುಬಿದಿರೆಯ ಸಹಕಾರಿ ಸೇವಾ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು (ಮೊ. 9742473545) ಸಂಪರ್ಕಿಸಬಹುದು.
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂಹವನ ವಿಭಾಗದ Advertising and PR ಮುಕ್ತ ಆಯ್ಕೆಯ (ಓಪನ್ ಇಲೆಕ್ಟಿವ್) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯದ ಭಾಗವಾಗಿ ಕಸ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಹಮ್ಮಿಕೊಂಡಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕಿ ಸುಚಿತಾ ಎಂ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೂಡುಬಿದಿರೆಯ ಪುರಸಭೆಯ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಸ್ವರಾಜ್ಯ ಮೈದಾನದಲ್ಲಿ ಫೆಬ್ರವರಿ 09 ಸಂಜೆ 03:30ಕ್ಕೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುರಸಭೆಯ ಪರಿಸರ ಇಂಜಿನಿಯರ್ ಶಿಲ್ಪಾ ಎಸ್, ಹಿರಿಯ ಹೆಲ್ತ್ ಇನ್ಸ್ಪೆಕ್ಟರ್ ಶಶಿರೇಖಾ, ಕೌನ್ಸಿಲರ್‍ಗಳಾದ ರಾಜೇಶ್ ನಾಯ್ಕ್, ಶಕುಂತಲಾ ಹರೀಶ್ ದೇವಾಡಿಗ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಕುರಿಯನ್ ಭಾಗವಹಿಸಲಿದ್ದಾರೆ. ಬೀದಿ ನಾಟಕವನ್ನು ಆಳ್ವಾಸ್ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುಧೀಂದ್ರ ಶಾಂತಿ ನಿರ್ದೇಶಿಸಲಿದ್ದಾರೆ. ವಿದ್ಯಾರ್ಥಿಗಳ ತಂಡವು ನಗರದ ಮಾರ್ಕೆಟ್ ರೋಡ್…
ಕರ್ನಾಟಕ ರಾಜ್ಯದಲ್ಲಿ ಭೂ ಸುಧಾರಣೆ ಕಾನೂನಿನ ಅಡಿಯಲ್ಲಿ ‘ಉಳುವವನೇ ಭೂಮಿಯ ಒಡೆಯ’ ಕಾನೂನು ಜಾರಿಗೆ ಬಂದಾಗ ಅಪಾರ ಸಂಖ್ಯೆಯಲ್ಲಿ ತಮ್ಮ ತಮ್ಮ ಭೂಮಿಯನ್ನು ಕಳೆದುಕೊಂಡವರು ಬಂಟ ಸಮಾಜದವರು. ಇದು ವಸ್ತು ಸ್ಥಿತಿಯೂ ಹೌದು. ಆದರೆ, ನಂತರದ ದಿನಗಳಲ್ಲಿ ವಿಜಯಾ ಬ್ಯಾಂಕ್ ಮತ್ತು ಹೋಟೆಲು ಉದ್ಯಮದ ಮೂಲಕ ಬಂಟ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೇ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರವಾದ ಬದಲಾವಣೆಯನ್ನು ಕಂಡಿದೆ. ಇಂದು ಬಂಟರು ಬಹುದೊಡ್ಡ ಮಟ್ಟದಲ್ಲಿ ಎಲ್ಲಾ ಕ್ಷೇತ್ರದಲ್ಲಿ ದೇಶ ವಿದೇಶದ ನೆಲದಲ್ಲಿ ತಮ್ಮ ಕಠಿಣ ಪರಿಶ್ರಮದಿಂದ ಸಾಧನೆಯ, ಶಿಖರವನ್ನೇರಿ ಮೆರೆದವರಿದ್ದಾರೆ. ಬಂಟ ಸಮಾಜದ ಗುರುತರವಾದ ಸಾಧನೆಯನ್ನು ಕಂಡಾಗ ಅಭಿಮಾನವಾಗುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಜಯಕರ ಶೆಟ್ಟಿ ಎಂ. ತಿಳಿಸಿದರು. ದೇಶ ವಿದೇಶದಲ್ಲಿ ಅದೆಷ್ಟೋ ವಿಶ್ವವಿದ್ಯಾಲಯಗಳಿವೆ. ಆದರೆ, ನಮ್ಮ ದೇಶದ ವಿಶ್ವವಿದ್ಯಾಲಯಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಿವೆ ಎನ್ನುವಂತದ್ದು ನಮಗೆ ಹೆಮ್ಮೆ. ದೇಶದ ಪ್ರಗತಿಯ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಕೊಡುಗೆ ಅಪಾರ ಎನ್ನುತ್ತಾ, ವಿವಿಧ ವಿಶ್ವವಿದ್ಯಾಲಯಗಳ ಜೊತೆಗೆ ಬೆಂಗಳೂರು…
ವಿದ್ಯಾಗಿರಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಸಹಯೋಗದಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಯಕ್ಷರೂಪಕ ಸ್ಪರ್ಧೆಗಳಲ್ಲಿ ಮುಲ್ಲಕಾಡು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ (ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆ) ತಂಡ ಹಾಗೂ ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (ಪ್ರೊ.ಎಂ.ಎ.ಹೆಗಡೆ ವೇದಿಕೆ) ತಂಡಗಳು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡವು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ನಡೆದ ಯಕ್ಷರೂಪಕ ಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಯ ರಾಕೇಶ್ ರೈ ಅಡ್ಕ ನೇತೃತ್ವದ ತಂಡವು ದಶಾವತಾರ ಆಖ್ಯಾನಕ್ಕೆ ಪ್ರಥಮ ತಂಡ ಪ್ರಶಸ್ತಿ ಪಡೆಯಿತು. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ(ಗುರುಪುರ)ಯ ದೀವಿತ್ ಎಸ್. ಕೆ. ಪೆರಾಡಿ ನೇತೃತ್ವದ ತಂಡವು ಶ್ರೀ ರಾಮಾಯಣ ದರ್ಶನಂ ಆಖ್ಯಾನಕ್ಕೆ ದ್ವಿತೀಯ ಹಾಗೂ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ (ಹರೇಕಳ)ಯ ಅಶ್ವತ್ ಮಂಜನಾಡಿ ನೇತೃತ್ವದ ತಂಡವು ಕ್ಷೀರಾಬ್ಧಿ ಮಥನ ಆಖ್ಯಾನಕ್ಕೆ ತೃತೀಯ ತಂಡ ಪ್ರಶಸ್ತಿ…
ನಿರಂತರ ಅಭ್ಯಾಸ, ಪ್ರಾಮಾಣಿಕತೆ, ಆತ್ಮವಿಶ್ವಾಸದ ಜತೆಗೆ ಕೌಶಲಾಭಿವೃದ್ಧಿಯಿಂದ ಸುಭದ್ರ ಬದುಕು ಕಟ್ಟಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಕೌಶಲಾಭಿವೃದ್ಧಿ, ಉದ್ಯೋಗಾವಕಾಶ, ಉಚಿತ ಕಂಪ್ಯೂಟರ್ ತರಬೇತಿಯ ಸದಾವಕಾಶ ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಿರಿ ಎಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಕರೆ ನೀಡಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ ನ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಪ್ರಾಯೋಜಕತ್ವದಲ್ಲಿ ನಡೆದ 14ನೇ ಬ್ಯಾಚ್ ನ ಉಚಿತ ಕಂಪ್ಯೂಟರ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಪಡುಬಿದ್ರಿ ಬಂಟರ ಸಂಘ ಮತ್ತು ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಆತ್ಮಸ್ಥೈರ್ಯದೊಂದಿಗೆ ನಿಖರ ಗುರಿಯೊಂದಿಗೆ ಭವಿಷ್ಯವನ್ನು ಸುಭದ್ರಗೊಳಿಸಿರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ 13 ನೇ…
ವಿದ್ಯಾಗಿರಿ: ‘ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ನಾವು ನಮ್ಮನ್ನುಅಳವಡಿಸಿಕೊಳ್ಳಬೇಕು’ಎಂದುಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಗುರುರಾಜ ಎಚ್. ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ವತಿಯಿಂದ ಬುಧವಾರ ಡಾ.ವಿಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ 2020-2021 ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಂಪನ್ನಮ್ ಸಮಾರಂಭದಲ್ಲಿ ಅವರು ಮಾತನಾಡಿದರು. ಎನ್‍ಎಬಿಎಚ್, ಎನ್‍ಎಎಸಿ ನಂತಹ ಮಾನ್ಯತೆ ಪಡೆಯುವುದು ಬಹುಮುಖ್ಯ. ವೈದ್ಯಕೀಯ ಆಕಾಂಕ್ಷಿಗಳು ಅಂತಹ ಮಾನ್ಯತೆ ಪಡೆದ ಸಂಸ್ಥೆಯನ್ನು ಆಯ್ಕೆ ಮಾಡುತ್ತಾರೆ ಎಂದರು. ಇಂದು ಹೆಚ್ಚಿನ ರೋಗಿಗಳು ಗೂಗಲ್ ಮತ್ತು ಇತರ ಸಾಮಾಜಿಕ ಜಾಲತಣವನ್ನು ಬಳಸಿ ವೈದ್ಯರನ್ನು ಆಯ್ಕೆ ಮಾಡುತ್ತಾರೆ. ಆದ್ದರಿಂದ ನೀವು ಅಂತಹದರಲ್ಲಿ ಸಕ್ರಿಯರಾಗಿರಬೇಕು ಎಂದರು. ನಾವು ಮಾನಸಿಕ ಚಿಕಿತ್ಸಕರು, ಶ್ರವಣಶಾಸ್ತ್ರಜ್ಞರು, ಸ್ಪೀಚ್ ಚಿಕಿತ್ಸಕರು, ಮನೋವೈದ್ಯರಂತಹ ಸಮಕಾಲೀನ ಜನರೊಂದಿಗೆ ಸಂಪರ್ಕ ಹೊಂದಬೇಕು, ನಾವು ಸಾಮಾನ್ಯವಾಗಿ ಅಂತಹ ಚಿಕಿತ್ಸೆಯೊಂದಿಗೆ ವ್ಯವಹರಿಸುತ್ತೇವೆ. ನಾವು ಯಾವುದೇ ರೀತಿಯ ಚಿಕಿತ್ಸೆಯನ್ನು ಅಳವಡಿಸಿಕೊಂಡರೂ ಉತ್ತಮ ಫಲಿತಾಂಶ ನೀಡಲು ಅವರ ಸಹಭಾಗಿತ್ವದ ಅಗತ್ಯ ಇದೆ ಎಂದರು. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಷ್ಟಪಟ್ಟು ಕೆಲಸ…
ಪುಣೆ ಬಂಟ್ಸ್ ಅಸೋಸಿಯೇಷನ್ ನ ಹನ್ನೊಂದನೇ ವಾರ್ಷಿಕೊತ್ಸವ ಸಮಾರಂಭವು ಫೆಬ್ರವರಿ 3 ರಂದು ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನ ಬಂಟರ ಭವನ ಬಾಣೇರ್ ಇಲ್ಲಿ ಜರಗಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಹರೀಶ್ ಪೂಂಜಾರವರು, ನಮ್ಮ ಸಂಸ್ಕ್ರತಿ ಸಂಸ್ಕಾರವೇ ನಮ್ಮ ವೈಭವಕ್ಕೆ ಮೂಲ ಕಾರಣ. ಈ ಸಂಸ್ಕಾರದ ಮೂಲ ನಮ್ಮ ಪೂರ್ವಜರು ಹಿರಿಯರು ಹಾಕಿಕೊಂಡಿರುವ ಸಾಂಸಾರಿಕ, ಪ್ರಾಕೃತಿಕವಾದ ಆಚಾರ ವಿಚಾರಗಳ ಸಂಸ್ಕ್ರತಿಯಿಂದ ಬಂದಿದೆ. ನಮ್ಮವರು ಸಮಾಜವನ್ನು ಬೆಳೆಸಿದ ರೀತಿ ಕಲ್ಪನಾತೀತವಾದುದು. ಅದೇ ರೀತಿ ಇಂದಿನ ಯುವ ಜನತೆಗೆ ಶಕ್ತಿ ನೀಡಿ ಮುಂದೆ ತಂದು ಸಮಾಜ ಕಟ್ಟುವ ಕಾರ್ಯ ಆಗಬೇಕಾಗಿದೆ. ಯುವಕರ ಕಲ್ಪನೆಯಂತೆ ವಿಭಿನ್ನ ರೀತಿಯಲ್ಲಿ ಉದ್ಯಮ ಸೃಷ್ಟಿಯಾಗಿ ಉದ್ಯೋಗ ನೀಡುವ ಶಕ್ತಿ ಯುವಕರಲ್ಲಿ ಬರಲಿ. ಅದೇ ರೀತಿ ನಮ್ಮ ಶ್ರೀಮಂತ ಕಲೆ ಸಂಸ್ಕ್ರತಿಯನ್ನು ಉಳಿಸಿ ಬೆಳೆಸಿಕೊಂಡು ಬರುವ ನಾಯಕತ್ವ ಗುಣ ಕೂಡಾ ಯುವಕರಲ್ಲಿ ಮತ್ತು ಮಹಿಳೆಯರಲ್ಲಿ ಬರಲಿ. ಉತ್ತಮ ಕಾರ್ಯ ಮಾಡಿದರೆ ಸಮಾಜದಲ್ಲಿ ಗುರುತಿಸುತ್ತಾರೆ. ಇದೇ ದ್ಯೇಯ…
ವಿದ್ಯಾಗಿರಿ (ಮೂಡುಬಿದಿರೆ): ‘ಮಕ್ಕಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನೂ ನೀಡಬೇಕು’ ಎಂದು ಶಾಸಕ ಉಮಾನಾಥ್ ಎ. ಕೋಟ್ಯಾನ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ)ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರತಿಭಾವಂತ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಬೇಕು. ಈ ಸದುದ್ದೇಶದಿಂದ ಪಟ್ಲ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ನಮ್ಮ ಜೀವನಕ್ಕೆ ಬೇಕಾದ ಅಮೂಲ್ಯ ವಿಷಯಗಳನ್ನು ಅರಿತುಕೊಳ್ಳಲು ಯಕ್ಷಗಾನ ಒಳ್ಳೆಯ ಮಾಧ್ಯಮ ಎಂದರು. ನಮ್ಮ ಪೂರ್ವಜರು ಅನಕ್ಷರಸ್ಥರಾಗಿದ್ದರೂ, ರಾಮಾಯಣ ಹಾಗೂ ಮಹಾಭಾರತದ ಕಥೆಗಳನ್ನು ತಿಳಿದುಕೊಂಡು ಮಕ್ಕಳಿಗೆ ತಿಳಿಸುತ್ತಿದ್ದರು. ಏಕೆಂದರೆ ಅವರು ಯಕ್ಷಗಾನವನ್ನು ನೋಡಿ ಅದನ್ನು ಅನುಭವಿಸುತ್ತಿದ್ದರು ಎಂದು ವಿವರಿಸಿದರು. ಪೌರಾಣಿಕ ಕಥೆಗಳನ್ನು ಅರ್ಥ ಮಾಡಿಕೊಳ್ಳಲು ಯಕ್ಷಗಾನವು ಸಹಕಾರಿ. ಯಕ್ಷಧ್ರುವ ಪಟ್ಲ ಹಾಗೂ ಆಳ್ವಾಸ್…
ಜನ್ಮ ಭೂಮಿ ತುಳುನಾಡಿನ ಮಣ್ಣಿನ ಮಕ್ಕಳಾದ ತುಳುವರಾದ ತಾವೆಲ್ಲರೂ ಶಿವಾಜಿ ಮಹಾರಾಜರ ಪುಣ್ಯ ಮಣ್ಣು ಪುಣೆಯಲ್ಲಿ ನೆಲೆ ನಿಂತು ಉದ್ಯಮದ ಜೊತೆಯಲ್ಲಿ ತುಳು ಬಾಷೆ, ಕಲೆ ಸಂಸ್ಕ್ರತಿಯ ಬೆಳವಣಿಗೆಗೆ ನಿರಂತರ ಶ್ರಮಿಸುವ ನಿಮ್ಮ ಕಾರ್ಯ ಶ್ಲಾಘನೀಯ. ಪುಣೆಯಲ್ಲಿರುವ ತುಳುವರಿಗಾಗಿ ಏನಾದರು ಸೇವೆ ಮಾಡಬೇಕು, ನಮ್ಮಿಂದಾದ ಸಹಕಾರ ತುಳುವರಿಗೆ ಸಿಗಬೇಕು ಎಂದರಿತು ಸಂಘಟನೆಯನ್ನು ಕಟ್ಟಿ ಅದರ ಮುಖಾಂತರ ತುಳುವರಿಗೆ ಉಪಕಾರವಗುವಂಥಹ ಸ್ವಂತ ಕಟ್ಟಡವನ್ನು ಹೊಂದಬೇಕು ಎಂಬ ನಿಮ್ಮ ಹಂಬಲ ಆದಷ್ಟು ಬೇಗ ಈಡೇರಲಿ. ನನ್ನಿಂದಾದ ಅರ್ಥಿಕ ಸಹಾಯವನ್ನು ಘೋಷಿಸುತ್ತೇನೆ ಮತ್ತು ಯಾವ ಮಟ್ಟದಲ್ಲಿ ಸಹಾಯ ಸಿಗಬಹುದು ಎಂಬುದನ್ನು ಅರಿತು ಪ್ರಯತ್ನ ಮಾಡುತ್ತೇನೆ. ನನ್ನ ಕ್ಷೇತ್ರದಲ್ಲಿರುವ ಎಲ್ಲಾ ಜಾತಿ ಧರ್ಮ ಪಂಗಡವನ್ನು ಒಟ್ಟು ಸೇರಿಕೊಂಡು ತುಳುವರ ಸೇವಕನಾಗಿ ದುಡಿದವ ನಾನು. ದೊಡ್ಡ ಕ್ಷೇತ್ರವಾದ ಬೆಳ್ತಂಗಡಿಗೆ ಅನುದಾನ ತರುವಲ್ಲಿ ಕೈ ಮೀರಿ ಶ್ರಮಿಸಿ ದುಡಿದಿದ್ದೇನೆ. ಪುಣೆ ತುಳುಕೂಟಕ್ಕೆ ಬರುವ ಯೋಗಾನುಯೋಗ ಸಿಕ್ಕಿದೆ. ತುಂಬಾ ಸಂತೋಷವಾಯಿತು. ನಿಮ್ಮ ಯೋಜಿತ ಕಾರ್ಯ ಯೋಜನೆಗಳು ಆದಷ್ಟು ಬೇಗ ಪರಿಪೂರ್ಣವಾಗಿ ತುಳುವರಿಗೆ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಫೆಬ್ರವರಿ 11ರಂದು ಕುಂದಾಪುರ ರೂರಲ್ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ, ಕೋಟೇಶ್ವರ ಇಲ್ಲಿ ಭಾವೈಕ್ಯ ಬಂಟರ ಮಹಾಸಮಾಗಮ ಕಾರ್ಯಕ್ರಮ ನಡೆಯಲಿದೆ. ಇದು ಕುಂದಾಪುರ ಪರಿಸರದಲ್ಲಿ ನಡೆಯುತ್ತಿರುವ ಮೊದಲ ಬಂಟರ ಸಮಾವೇಶವಾಗಿದ್ದು, ವಿದೇಶಗಳನ್ನೂ ಒಳಗೊಂಡಂತೆ ಭಾರತದ ವಿವಿಧೆಡೆಗಳಲ್ಲಿ ನೆಲೆಸಿರುವ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಂಟ ಸಮುದಾಯ ಬಾಂಧವರು ಈ ಮಹಾಸಮಾವೇಶದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ. ಈ ಬಂಟರ ಮಹಾಸಮಾಗಮದ ಪ್ರಧಾನ ಸಂಚಾಲಕರಾಗಿ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಆಯ್ಕೆಯಾಗಿದ್ದು ಇವರು ಸಂಘದ ಉಪಾಧ್ಯಕ್ಷರಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ವಿದ್ಯಾರ್ಥಿವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ, ಸಂಘದ ವತಿಯಿಂದ ಪ್ರಕಟಿಸಲಾಗುತ್ತಿರುವ ಯುವ ಚೈತನ್ಯ ಸಂಚಿಕೆಯ ಸಂಪಾದಕರಾಗಿ ವಿವಿಧ ಅವಧಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬಂಟರ ಮಹಾಸಮಾಗಮದ ಅಂಗವಾಗಿ ಅಂದು ಬಂಟರ ಸಾಂಸ್ಕೃತಿಕ ಸಂಭ್ರಮ ಎಂಬ ರಾಷ್ಟ್ರ ಮಟ್ಟದ ವೈವಿಧ್ಯಮಯ ಸಮೂಹನೃತ್ಯ ಸ್ವರ್ಧೆ ನಡೆಯಲಿದೆ. ವಿದ್ಯಾದೀವಿಗೆ ಯೋಜನೆಯಡಿ ಕುಂದಾಪುರ ಮತ್ತು ಬೈಂದೂರು ತಾಲೂಕು ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ…