Author: admin
ಬೆಂಗಳೂರಿನ ಪ್ರತಿಷ್ಠಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಪಾತ್ರವಾಗಿದೆ. ಫೆಬ್ರವರಿ 13 ರಂದು ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ರವರಿಂದ ಸಂಸ್ಥೆಯ ಆಡಳಿತ ನಿರ್ದೇಶಕರಾದ ಎಸ್.ಎಸ್ ಹೆಗ್ಡೆಯವರು “ಸೆಕ್ಟರ್ ಎಕ್ಸಲೆನ್ಸ್ ಅವಾರ್ಡ್” ಪ್ರಶಸ್ತಿ ಸ್ವೀಕರಿಸಿದರು. ಕೊಡುಗೈ ದಾನಿ ಎಸ್.ಎಸ್ ಹೆಗ್ಡೆಯವರು ಉದ್ಯಮಿಯಾಗಿದ್ದುಕೊಂಡು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ಮಕ್ಕಳಿಗೆ ಚಿಕ್ಕಂದಿನಲ್ಲೇ ಸನ್ಮಾರ್ಗ ತೋರಿ, ನೈತಿಕತೆ ಬೆಳೆಸುವುದರಿಂದ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿಸಲು ಸಾಧ್ಯ. ಸರ್ವಾಂಗೀಣ ಶಿಕ್ಷಣ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಅವರು ಕೊಕ್ಕರ್ಣೆ ಶ್ರೀ ಅನಿತಾ ಎಜ್ಯುಕೇಶನಲ್ ಸೊಸೈಟಿಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಮತಿ ಕನಕ ಶಂಕರ ಶೆಟ್ಟಿ ಪ್ಲೇ ಸ್ಕೂಲ್ ಉದ್ಘಾಟಿಸಿ ಮಾತನಾಡಿದರು. ಸರಕಾರದ ಜತೆ ದಾನಿಗಳು ಕೈ ಜೋಡಿಸುವುದರಿಂದ ಊರಿನ ಅಭಿವೃದ್ಧಿಯಾಗುತ್ತದೆ ಎಂದರು. ಹುಬ್ಬಳ್ಳಿಯ ಶೆಟ್ಟೀಸ್ ಕನ್ಸ್ಟ್ರಕ್ಷನ್ ನ ನಿರ್ದೇಶಕಿ ಕನಕ ಶಂಕರ್ ಶೆಟ್ಟಿಯವರು ಶುಭಾರಂಭಗೊಳಿಸಿದರು. ಅನಿತಾ ಎಜ್ಯುಕೇಶನಲ್ ಸೊಸೈಟಿ ಅಧ್ಯಕ್ಷ ಸಿಎ ಎಸ್ ಬಿ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ಯಶ್ ಪಾಲ್ ಎ. ಸುವರ್ಣ, ದಾನಿ ಶೆಟ್ಟೀಸ್ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಪ್ರಸನ್ನ ಎಸ್. ಶೆಟ್ಟಿ ಹುಬ್ಬಳ್ಳಿ, ಕೆ. ಶಂಕರ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟೀ ವಿಜಯಕಲಾ ಪಿ. ಶೆಟ್ಟಿ, ಬಿಇಓ ಶಬಾನಾ ಅಂಜುಮ್, ಹುಬ್ಬಳ್ಳಿ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಸುಜಾತಾ…
ಬೆಂಗಳೂರಿನ ಪ್ರತಿಷ್ಠಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಶ್ರೀ ಎಸ್.ಎಸ್. ಹೆಗ್ಡೆಯವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ ಸ್ವಗೃಹದಲ್ಲಿ ಫೆಬ್ರವರಿ 24 ರಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿಯವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಯುತ ಎಸ್ ಎಸ್ ಹೆಗ್ಡೆಯವರು ನಮ್ಮ ಸಮಾಜದ ಬಹುದೊಡ್ಡ ಆಸ್ತಿ ಎಂದರು. ಈ ಸಂದರ್ಭ ಶ್ರೀಮತಿ ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿಧರ ಶೆಟ್ಟಿ…
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಶ್ರೀ ಮುಜಿಲ್ನಾಯ ದೈವಸ್ಥಾನ ಉಪ್ಪಿರ ಎಲಿಯನಡಗೋಡು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಕುತ್ಲೋಡಿ ಇವರು ಆಯ್ಕೆಯಾದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಹರೀಶ್ ಹಿಂಗಣಿ, ಸೀತಾರಾಮ ಶೆಟ್ಟಿ ಅಗರ ಕುಮೇರು, ಜನಾರ್ದನ ಬಂಗೇರ ಉಪ್ಪಿರ, ಸುಂದರ ಉಪ್ಪಿರ, ಅರುಣಾ ವಿಶ್ವನಾಥ ದೋಟ, ಮೀನಾಕ್ಷಿ ಉಮ್ಮೆಟ್ಟು, ಮಧುಸೂದನ್ ಕಲಾಯಿದಡ್ಡ ಇವರು ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ವೇದಿಕೆ, ಡೆಕಾಥ್ಲಾನ್ ಮತ್ತು ಏರೋಡೈನಾಮಿಕ್ಸ್ ಸಹಯೋಗದಲ್ಲಿ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಇಂಡಿಯನ್ ಕೋಸ್ಟ್ ಗಾರ್ಡ್ನ ಸಹಾಯಕ ಕಮಾಂಡೆಂಟ್ ಪ್ರಿಯಾ ಮಾತನಾಡಿ, ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪುರುಷನಷ್ಟೇ ಸಮರ್ಥರಾಗಿ ಎಲ್ಲಾ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಾಷ್ಟ್ರದ ಗಡಿಗಳನ್ನು ಕಾಪಾಡುವುದು ಅತ್ಯಂತ ಕಠಿಣ ಕೆಲಸವಾದರೂ, ಮಹಿಳೆಯರು ಈ ಸವಾಲಿನ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ಮಹಿಳಾ ಉದ್ಯೋಗಿಗಳಿಂದ ಪಥಸಂಚಲನದೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆಳ್ವಾಸ್ ಸೆಂಟ್ರಲ್ ಶಾಲೆಯ ಕ್ರೀಡಾ ಶಿಕ್ಷಕರಾದ ಆಶಾ, ಉಷಾ ಕುಮಾರಿ ಮತ್ತು ಚಿತ್ರಾವತಿ, ಆಳ್ವಾಸ್ ಪ್ರಾಥಮಿಕ ಶಾಲೆಯ ಕವಿತಾ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹರ್ಷಿತಾ…
ಲಾಲ್ಭಾಗ್ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ ಕಾರ್ಯಕ್ರಮವು ವಿದ್ಯಾರ್ಥಿನಿ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ ಮೆನ್ ಡಾ. ಎಂ ಮೋಹನ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. 80 ವರ್ಷಗಳ ಇತಿಹಾಸ ಇರುವ ಬಂಟರ ಮಾತೃ ಸಂಘದ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಿಂದ ಬಹಳಷ್ಟು ಮಂದಿ ಹೆಣ್ಮಕ್ಕಳಿಗೆ ಇಲ್ಲಿ ಪ್ರಯೋಜವಾಗಿದೆ. ಪ್ರತೀ ವರ್ಷ ಹಾಸ್ಟೇಲ್ ಡೇ ಆಚರಿಸುವ ಮೂಲಕ ವಿದ್ಯಾರ್ಥಿನಿ ನಿಲಯದಲ್ಲಿ ಇಲ್ಲಿದ್ದ ಮಹಿಳೆಯರು ಮತ್ತೆ ಒಟ್ಟು ಸೇರುವ ಅವಕಾಶ ದೊರೆತಿದೆ ಎಂದರು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಲ್ಲಿ ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹಾಗಾಗಿ ಇಲ್ಲಿಯ ಮಕ್ಕಳಲ್ಲಿ ಶಿಸ್ತು, ಸಮಯ ಪ್ರಜ್ಞೆಯನ್ನು ಕಾಣಲು ಸಾಧ್ಯವಿದೆ ಎಂದರು. ಅಮೃತಸಿರಿ ಸ್ಮರಣ ಸಂಚಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ|…
ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘ : ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ನವೀನ್ ಕುಮಾರ್ ಶೆಟ್ಟಿ
ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಡೆದ ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾಧ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ್ ಕುಮಾರ್ ಶೆಟ್ಟಿ ಶಾನ್ಕಟ್ಟು ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಸ್ವಾಭಿಮಾನಿ ಸಹಕಾರಿ ಸಂಘಟನೆ ಹೀಗೆ ತ್ರಿಕೋನ ಸ್ಪರ್ಧೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬೆಂಬಲಿತ ಆರು ಮಂದಿ ಸ್ವಾಭಿಮಾನಿ ಸಹಕಾರಿ ಬಳಗದಿಂದ ನಾಲ್ಕು ಮಂದಿ ಹಾಗೂ ಬಿಜೆಪಿ ಬೆಂಬಲಿತ ಮೂರು ಮಂದಿ ನಿರ್ದೇಶಕರಾಗಿ ಆಯ್ಕೆಗೊಂಡಿದ್ದರು.ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾದ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ ಕುಮಾರ ಶೆಟ್ಟಿ ಶಾನ್ಕಟ್ಟು ಅವರು ಆಯ್ಕೆಗೊಂಡರು. ನಿರ್ದೇಶಕರಾಗಿ ಎ. ಕಿರಣ್ ಹೆಗ್ಡೆ, ಮೋಹನ ವೈದ್ಯ, ಅರುಣ್ ಕುಮಾರ್ ಶೆಟ್ಟಿ, ಭಾರತಿ…
ಚೌ ಗ್ರಾಮಗಳ ಪ್ರಧಾನ ಕ್ಷೇತ್ರ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೇ 6ರಿಂದ 12ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ‘ಪರ್ವ ಸನ್ನಾಹ’ ಎಂಬ ಕಾರ್ಯಕ್ರಮ ಭಾನುವಾರ ಜರಗಿತು. ಈ ಸಂದರ್ಭದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ನಿಧಿ ಕುಂಭ ಸಂಚಯನಕ್ಕೆ ಮಂತ್ರಾಕ್ಷತೆಯನ್ನಿತ್ತು ಚಾಲನೆ ನೀಡಿದರು. ಬಳಿಕ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಎಡನೀರು ಸ್ವಾಮೀಜಿಯವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವದ ಲಾಂಛನವನ್ನು ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಬಿಡುಗಡೆಗೊಳಿಸಿದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ. ಎಸ್. ಸದಾಶಿವ ಭಟ್ ಹರಿನಿಲಯ, ಗೋಪಾಲ ಮಣಿಯಾಣಿಗುತ್ತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿದ್ದರು.ಮಾಜಿ ಮೊಕ್ತೇಸರಾದ ಸಂಜೀವ ರೈ ಕೆಂಗನಾಜೆ, ಸಚ್ಚಿದಾನಂದ ಖಂಡೇರಿ, ವಿಷ್ಣು ಪ್ರಕಾಶ್ ಪಿಲಿಂಗಲ್ಲು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಬಟ್ಟು ಶೆಟ್ಟಿ, ಎಣ್ಮಕಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಬಿ. ಎಸ್ ಗಾಂಭೀರ್…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್ ತಂಡವನ್ನು 35-31 ಅಂಕಗಳಿಂದ ಮಣಿಸಿ ಗೋಲ್ಡ್ ಮೆಡಲ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಆಳ್ವಾಸ್ ತಂಡವು ಸೂಪರ್ ಲೀಗ ಹಾಗೂ ಇತರ ಪಂದ್ಯಗಳಲ್ಲಿ ಆತಿಥೇಯ ಮೇರಿ ಗೋ ರೌಂಡ್ ಹಾಗೂ ಟಿಬಿಬಿಸಿ ತಿರುವತ್ತೂರು ತಂಡಗಳನ್ನು ಸೋಲಿಸಿತ್ತು. ಟೂರ್ನಿಯಲ್ಲಿ ರಾಷ್ಟ್ರದ 10 ಪ್ರಮುಖ ಆಹ್ವಾನಿತ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡದ ಲಕ್ಷ್ಮೀದೇವಿ ಟೂರ್ನಿಯ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪಸೆರ್ಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪಸೆರ್ಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ. ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪಸೆರ್ಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪಸೆರ್ಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪಸೆರ್ಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಹಾಗೂ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಸಂಯೋಜಕರಾದ ಸುಮಂತ್ ದಾಮ್ಲೆ ರವರು ಅಭಿನಂದಿಸಿ ಶ್ಲಾಘಿಸಿದ್ದಾರೆ.















