Author: admin
ಆಜ್ರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೂಡಿಗೆ- ಕೊಡ್ಲಾಡಿಯಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ಸ್ಥಾಪಕರಾದ ಜಡ್ಕಲ್ ನಾಗರಾಜ ಶೆಟ್ಟಿಯವರು ಉದ್ಘಾಟಿಸಿದರು. ಆಜ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಅಡಿಗ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಸಂತೋಷ್ ಕುಮಾರ್, ಶಾಸಕರ ಪ್ರತಿನಿಧಿಯಾಗಿ ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಅವರು ಉಪಸ್ಥಿತರಿದ್ದರು. ಕೊಡ್ಲಾಡಿ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಪ್ರದೇಶವಾದ ಕೊಡ್ಲಾಡಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸಲು ಕಂಪ್ಯೂಟರ್ ಮತ್ತು ಪೀಠೋಪಕರಣಗಳು, ಗ್ರಂಥಾಲಯದ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಗಿದೆ.…
ದೇಶದ ವಿವಿಧ ಔಷಧ ತಯಾರಕ ಕಂಪೆನಿಗಳಿಂದ ಉತ್ಪಾದಿಸಲ್ಪಡುತ್ತಿರುವ ಸುಮಾರು 52 ಔಷಧಗಳ ಗುಣಮಟ್ಟ ಕಳಪೆಯಾಗಿದೆ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ವರದಿ ನೀಡಿದೆ. ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ ಈ ಕಂಪೆನಿಗಳ ಔಷಧ ತಯಾರಿಕ ಘಟಕಗಳಲ್ಲಿ ಉತ್ಪಾದಿಸಲಾಗುತ್ತಿರುವ ಈ ಔಷಧಗಳು ನಿಗದಿತ ಗುಣಮಟ್ಟ ಹೊಂದಿಲ್ಲದಿರುವುದು ಸಂಸ್ಥೆ ನಡೆಸಿದ ಈ ಔಷಧಗಳ ಮಾದರಿಯ ಪರೀಕ್ಷೆ ವೇಳೆ ದೃಢಪಟ್ಟಿದೆ. ದೇಶದಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಪದೇ ಪದೆ ವಿವಿಧ ಔಷಧಗಳ ಗುಣಮಟ್ಟ, ಅವುಗಳಲ್ಲಿ ಬಳಸಲಾಗುವ ರಾಸಾಯನಿಕಗಳ ಬಗೆಗೆ ಔಷಧ ನಿಯಂತ್ರಣ ಸಂಸ್ಥೆ ಆದಿಯಾಗಿ ವಿವಿಧ ಔಷಧ ತಜ್ಞರು ಅನುಮಾನ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಇದರ ಹೊರತಾಗಿಯೂ ಇಂತಹ ಕಳಪೆ ಗುಣಮಟ್ಟದ, ಅಸುರಕ್ಷಿತ ಔಷಧಗಳನ್ನು ಕಂಪೆನಿಗಳು ಉತ್ಪಾದಿಸುತ್ತಲೇ ಬಂದಿವೆ. ಅವು ಮಾರುಕಟ್ಟೆಗೆ ಬಿಡುಗಡೆಯಾಗಿ ಜನರ ಕೈಸೇರುತ್ತಲೇ ಇವೆ. ಔಷಧಗಳು ಮಾರುಕಟ್ಟೆಗೆ ಬಿಡುಗಡೆಯಾಗುವ ಮುನ್ನ ಹಲವಾರು ಮಾನದಂಡಗಳನ್ನು ಪೂರೈಸಬೇಕಾಗಿರುತ್ತದೆ. ಇದರ ಹೊರತಾಗಿಯೂ ಇಂತಹ ಕಳಪೆ ಗುಣಮಟ್ಟದ ಔಷಧಗಳು ಸರಾಗವಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತವೆ ಎಂದಾದಲ್ಲಿ…
ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುಣೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುಧಾಕರ್ ಶೆಟ್ಟಿಯವರ ನೇತೃತ್ವದಲ್ಲಿ ಜುಲೈ 14ರಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 12 ಗಂಟೆಯವರೆಗೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ ನಡೆಯಲಿದೆ. ಇದಕ್ಕೆ ಡಾ. ಮೋಹನ್ ಆಳ್ವರ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದ್ರಿ ಇವರ ಸಹಕಾರವಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ ಹಾಗೂ ಕಲಾವಿದರ ತುರ್ತು ಆರೋಗ್ಯ ಚಿಕಿತ್ಸಾ ವೆಚ್ಚಕ್ಕೆ ಸುಮಾರು 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ವಿತರಿಸಲಾಯಿತು. ಎಂಪಾಯರ್ ಮಾಲ್ ನಲ್ಲಿರುವ ಸಿಎ ಸುದೇಶ್ ಕುಮಾರ್ ರೈ ಇವರ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಒಟ್ಟು 15 ಮಂದಿ ಕಲಾವಿದರಿಗೆ, ಬಡಗುತಿಟ್ಟು 9 ಮಂದಿ ಕಲಾವಿದರು, ತೆಂಕುತಿಟ್ಟಿನ 5 ಮಂದಿ ಕಲಾವಿದರು ಹಾಗೂ ಓರ್ವ ದೈವಾರಾಧನ ಕಲಾವಿದನಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳಾದ ಸಿಎ ಸುದೇಶ್ ಕುಮಾರ್ ರೈ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕದ್ರಿ ನವನೀತ ಶೆಟ್ಟಿ, ಪ್ರದೀಪ ಆಳ್ವ ಕದ್ರಿ, ರವಿ ಶೆಟ್ಟಿ ಅಶೋಕನಗರ, ಬಾಳ ಜಗನ್ನಾಥ ಶೆಟ್ಟಿ, ಡಾ. ಪ್ರಖ್ಯಾತ್ ಶೆಟ್ಟಿ, ಸಿಎ ವೃಂದಾ ಕೊನ್ನಾರ್ ಉಪಸ್ಥಿತರಿದ್ದರು.
ವಿದ್ಯಾಗಿರಿ: ಪರಿಸರ ಮಾಲಿನ್ಯಕ್ಕೆ ನಾವೇ ಕಾರಣೀಕರ್ತರು, ಇದರ ಪರಿಣಾಮವನ್ನು ನಾವೇ ಎದುರಿಸಬೇಕು ಎಂದು ಆಳ್ವಾಸ್ಕಾ ಲೇಜಿನ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಚಾರ ಸಂಕಿರಣ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ (ಬಿಎಡ್)ವತಿಯಿಂದ ನಡೆದ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ನಾವು ತಿನ್ನುವ ಆಹಾರವೂ ಕಲುಷಿತಗೊಂಡಿದೆ. ಇದರಿಂದಾಗಿ ಅನಾರೋಗ್ಯದ ಸಮಸ್ಯೆಯೂ ಹೆಚ್ಚಿದೆ ಎಂದರು. ಭಾರತದಲ್ಲಿ ಕಾಡಿನ ವ್ಯಾಪ್ತಿ ಕಡಿಮೆಯಾಗಿದೆ. ನಮ್ಮ ದೇಶದ ಸಮತೋಲನಕ್ಕೆ ಕನಿಷ್ಠ ಶೇಕಡ 20ರಷ್ಟು ಕಾಡಿನ ಅವಶ್ಯಕತೆ ಇದೆ. ಆದರೆ ಪ್ರಸ್ತುತವಾಗಿ ಕೇವಲ ಶೇ.8 ರಿಂದ 9 ಮಾತ್ರ ಕಾಡಿನ ಪ್ರಮಾಣವಿರುವುದು ಅಪಾಯದ ಸಂಕೇತ ಎಂದರು. ಪರಿಸರ ದಿನವಾದರೂ ಒಬ್ಬ ವ್ಯಕ್ತಿ ಒಂದು ಗಿಡವನ್ನು ಬೆಳೆಸುವುದರಿಂದ ಪರಿಸರಕ್ಕೆ ಆತ ನೀಡುವ ಕೊಡುಗೆ ಅಪಾರವಾಗಿರುತ್ತದೆ. ನೀರನ್ನು ಪೆಟ್ರೋಲ್ ಬಂಕ್ ಮಾದರಿಯಲ್ಲಿ ಪಡೆಯುವ ಸಮಯ ದೂರ ಇಲ್ಲ.. ಇನ್ನಾದರೂ ಜನತೆ ಎಚ್ಚರರಾಗಿ ನೀರನ್ನು ಮಿತವಾಗಿ ಬಳಸ ಬೇಕು ಎಂದರು. ಆಳ್ವಾಸ್ ಕಾಲೇಜಿನ…
ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಸಾಧಿಸಲು ಪ್ರಾಚೀನ ಮಾರ್ಗವಾಗಿದೆ. ವ್ಯಕ್ತಿಗೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆತ್ಮ ಸ್ಥೈರ್ಯ ಮತ್ತು ಸಕಾರಾತ್ಮಕ ಭಾವನೆ ಬರುವಂತೆ ಮಾಡುತ್ತದೆ ಹಾಗೂ ಶಿಸ್ತು ಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಬಂಟರ ಸಂಘ ಮುಂಬಯಿಯ ಮೀರಾ- ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹೇಳಿದರು. ಅವರು ಜೂನ್ 21 ರ ಶುಕ್ರವಾರದಂದು ಮೀರಾರೋಡ್ ಹೋಟೆಲ್ ಬಾಲಾಜಿ ಇಂಟರ್ ನ್ಯಾಷನಲ್ ಸಭಾಗೃಹದಲ್ಲಿ ಜರಗಿದ ಮೀರಾ- ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ್ತಾ, ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಇದು ಸಾವಿರಾರು ವರ್ಷಗಳ ಹಿಂದೆ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ. ಹಾಗಾಗಿ ಯೋಗವು ಒಂದು…
ಯೋಗ ಆಧ್ಯಾತ್ಮಿಕ ಚಿಕಿತ್ಸೆಯಾಗಿ ಮನುಷ್ಯನ ವಿಕಾಸದ ಪ್ರಕ್ರಿಯೆಗೆ ಪ್ರಾಯೋಗಿಕ ವಿಧಾನವಾಗಿದೆ. ಮನಸ್ಸನ್ನು ಸಮತೋಲನಗೊಳಿಸಲು ಯೋಗ ಸಹಕಾರಿ. ವ್ಯಕ್ತಿಯ ಶಕ್ತಿಯನ್ನು ಸಂತುಲಿತ ರೀತಿಯಲ್ಲಿ ಸುಧಾರಿಸಲು ಮತ್ತು ಸದೃಢಗೊಳಿಸುವಲ್ಲಿ ರಾಮಬಾಣವಾಗಿ ಯೋಗ ಇಂದು ದೇಶ ಮತ್ತು ವಿದೇಶದಲ್ಲಿ ಪ್ರಚಲಿತವಾಗಿದೆ. ಪ್ರಧಾನಿ ಮೋದಿಯವರ ಸಂಕಲ್ಪದಂತೆ ಭಾರತದಲ್ಲಿ ಯೋಗ ದಿನಾಚರಣೆಯ ಪರ್ವ ಪ್ರಾರಂಭವಾಗಿ ಇಂದು ಪ್ರಪಂಚದ ಮೂಲೆ ಮೂಲೆಯಲ್ಲೂ ಯೋಗಕ್ಕೆ ಮನುಷ್ಯನನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುವ ಶಕ್ತಿ ಇದೆ. ಪ್ರತೀ ದಿನ ಯೋಗಾಸನ ಮಾಡಿದಾಗ ನಾವು ಆರೋಗ್ಯವಂತರಾಗಿರಬಹುದು. ಮಹಿಳೆಯರು ತಮ್ಮ ಮನೆ ಕೆಲಸದ ನಡುವೆ ಯೋಗಾಭ್ಯಾಸ ಮಾಡಬೇಕು. ಇದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಸಾಧ್ಯವಾಗುತ್ತದೆ. ಯೋಗವು ದೈಹಿಕ ಸಾಮರ್ಥ್ಯವನ್ನು ಮಾತ್ರವಲ್ಲದೇ ಮಾನಸಿಕ ಶಾಂತಿ ನೀಡುವುದರೊಂದಿಗೆ ನಮ್ಮ ಮಾನಸಿಕ ಒತ್ತಡ ಕಡಿಮೆಗೊಳಿಸುತ್ತದೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ತಿಳಿಸಿದರು. ಜೂಯಿನಗರದ ಬಂಟ್ಸ್ ಸೆಂಟರ್ ನಲ್ಲಿ ಜೂನ್ 21ರಂದು ಅಪರಾಹ್ನ ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಹಿಳಾ ವಿಭಾಗದ ವತಿಯಿಂದ ನಡೆದ…
ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಜೂನ್ 25 ರಂದು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮ ವಿಕಾಸ ಸಂಯೋಜಕರು, ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿಗಳಾದ ಶ್ರೀ ಸುಜಿತ್ ಕುಮಾರ್ ಇವರು ಮಾತನಾಡಿ, “ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ. ಈ ಕಲೆಯನ್ನು ಮತ್ತು ಸಂಸ್ಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಹಾಗೂ ವಿಶ್ವಗುರು ಭಾರತ ನಿರ್ಮಾಣದಲ್ಲಿ ಯಕ್ಷಗಾನದ ಕಲೆಯ ಪಾತ್ರವು ಮುಖ್ಯವಾಗಬೇಕೆಂದು” ತಿಳಿಸಿದರು. ಇನ್ನೋರ್ವ ಅತಿಥಿಯಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಇವರ ಮಾತುಗಳಲ್ಲಿ “ಯಕ್ಷಗಾನವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಯಕ್ಷಗಾನದ ಜೊತೆ ಸಮಾಜಕ್ಕೆ ನಮ್ಮಿಂದಾಗುವ ಸೇವೆ ಮಾಡಬೇಕು” ಎಂದು ಶುಭ ಹಾರೈಸಿದರು. ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ…
ಗೋಳಿಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೇಶಿರೂರುವಿನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ಸ್ಥಾಪಕರಾದ ಜಡ್ಕಲ್ ನಾಗರಾಜ ಶೆಟ್ಟಿಯವರು ಉದ್ಘಾಟಿಸಿದರು. ಬೈಂದೂರು ಶಾಸಕರ ಪ್ರತಿನಿಧಿಯಾಗಿ ಉದ್ಯಮಿ ಸುರೇಶ್ ಶೆಟ್ಟಿಯವರು ಭಾಗವಹಿಸಿದರು. ಗೋಳಿಹೊಳೆ ಪಂಚಾಯತ್ ಅಧ್ಯಕ್ಷರಾದ ವಸಂತ್ ಹೆಗ್ಡೆ, ಪ್ರಮುಖರಾದ ಸತೀಶ್ ಶೆಟ್ಟಿ, ನಾರಾಯಣ ಶೆಟ್ಟಿ, ರಾಘವೇಂದ್ರ ಗಾಣಿಗ, ರತ್ನಾಕರ್ ಶೆಟ್ಟಿ, ಎಂ.ಆರ್. ಶೆಟ್ಟಿ, ಸಂಜೀವ ಶೆಟ್ಟಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ, ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಉಪಸ್ಥಿತರಿದ್ದರು. ಅರೇಶಿರೂರು ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಉದ್ಘಾಟನಾ ಭಾಷಣದಲ್ಲಿ ಗ್ರಾಮೀಣ ಪ್ರದೇಶವಾದ ಆರೇಶಿರೂರು ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸಲು 5 ಕಂಪ್ಯೂಟರ್ ಮತ್ತು ಪೀಠೋಪಕರಣಗಳು, ಗ್ರಂಥಾಲಯದ ವ್ಯವಸ್ಥೆ, ಕ್ರೀಡಾ…
ಮೂಡುಬಿದಿರೆ: ಅನುಪಯುಕ್ತ ಪ್ಲಾಸ್ಟಿಕ್ಗಳನ್ನು ಬಳಸಿ ಗುಣಮಟ್ಟದ ಇಟ್ಟಿಗೆ (ಬ್ರಿಕ್ಸ್) ಹಾಗೂ ಪರಸ್ಪರ ಬೆಸೆಯುವ (ಇಂಟರ್ಲಾಕಿಂಗ್) ಪ್ರಿಕಾಸ್ಟ್ ಪೇವರ್ಸ್ ಅನ್ನು ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ (ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್) ವಿಭಾಗವು ಅಭಿವೃದ್ಧಿ ಪಡಿಸಿದ್ದು, ಮೈಸೂರಿನ ಜಾಗೃತ್ ಟೆಕ್ ಕಂಪೆನಿ ಜೊತೆ ವಾಣಿಜ್ಯ ಉತ್ಪನ್ನದ ಪೇಟೆಂಟ್ (ಪೇಟೆಂಟ್ ಸಂಖ್ಯೆ: 542790) ಪಡೆದಿದೆ. ಈ ಆವಿಷ್ಕಾರವು ಪರಿಸರ ಸಂರಕ್ಷಣೆ ಹಾಗೂ ನಿರ್ಮಾಣ ಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಿದೆ. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಿದ್ದೇಶ್ ಜಿ.ಕೆ. ಮಾರ್ಗದರ್ಶನ ಹಾಗೂ ಡಾ. ಗುರುಪ್ರಸಾದ್ ನೇತೃತ್ವದಲ್ಲಿ ಮಣಿಪಾಲ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರ್ಜುನ್ ಸುನಿಲ್ ರಾವ್ ಅವರ ಸಹಕಾರದೊಂದಿಗೆ ಮೈಸೂರು ಮೂಲದ ಪರಿಸರ ಸ್ನೇಹಿ ಸಂಶೋಧನಾ ಕಂಪನಿ ‘ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್’ ಜೊತೆಗೂಡಿ ಸಂಶೋಧನೆ ನಡೆಸಲಾಗಿತ್ತು. ಬ್ರಿಕ್ಸ್ ಗುಣಲಕ್ಷಣ, ಗುಣಮಟ್ಟ, ಸ್ಥಿರತೆ ಕುರಿತು ಬೆಂಗಳೂರಿನ ಬೆಯೂರೊ ವೆರಿಟಾಸ್ ಬ್ರಿಕ್ಸ್ ಪ್ರಯೋಗಾಲಯ ಹಾಗೂ…