Author: admin

ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿಯಾಗಿದೆ, ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೂ ಎನ್.ಎಸ್.ಎಸ್. ನಲ್ಲಿ ತೊಡಗಿಸಿಕೊಂಡ ಸ್ವ ಅನುಭವದಿಂದ ಈ ಅರಿವಾಗಿದೆ ಎಂದು ಎನ್.ಎಂ.ಎ.ಎಂ. ಇಂಜಿನಿಯರಿಂಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಅವರು ಹೇಳಿದ್ದಾರೆ. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲಂಬಾಡಿ ಪದವು ಇಲ್ಲಿ ನಡೆದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ಟ್ರ ಸ್ಟ್‍ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಹತ್ತು ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸಿದ ಎನ್.ಎಸ್.ಎಸ್. ಶಿಬಿರಾಧಿಕಾರಿ ರವಿ ಜಿ. ಅವರನ್ನು ಸನ್ಮಾನಿಸಿ, ಪ್ರಸ್ತುತ ಶಿಬಿರಕ್ಕೆ ಸಹಕರಿಸಿದ ಸರ್ವರನ್ನು ಪ್ರಶಂಶಿಸಿದರು. ಉಡುಪಿ ಜಿಲ್ಲಾ ಎನ್.ಎಸ್.ಎಸ್. ನೋಡಲ್…

Read More

ಮೂಡುಬಿದಿರೆ:  ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ15ನೇ ಭಾನುವಾರದವರೆಗೆ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ಆರು ದಿನಗಳ ರೈತರ ಸಂತೆ ಮತ್ತು ಕೃಷಿಮೇಳವು ಪ್ಯಾಲೇಸ್‌ಗ್ರೌಂಡ್‌ನಲ್ಲಿ ನಡೆಯಲಿದೆ. ಹಾಗೆಯೇ ಆಹಾರೋತ್ಸವ-ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳವನ್ನು ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿಸಿರಿ ವೇದಿಕೆ) ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮಹಾಮೇಳದಲ್ಲಿ ಭಾಗವಹಿಸಿ ಮಳಿಗೆ ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರೋತ್ಸವ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಖಾದ್ಯಗಳು, ಫಾಸ್ಟ್ಫುಡ್ ಹಾಗೂ ವೈವಿಧ್ಯಮಯ ಪಾನೀಯಗಳಿಗೆ ಸಂಬಂಧಿಸಿದ ಸಿದ್ಧ ಮತ್ತು ಸ್ಥಳದಲ್ಲೇ ತಯಾರಿಸಿ ನೀಡುವ ಆಹಾರ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೃಷಿಗೆ ಸಂಬಂಧಿಸಿದ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಲ್ಲಿ ಹಣ್ಣು, ತರಕಾರಿ, ಹೂವು ಬೀಜಗಳ ಮಾರಾಟ, ನರ್ಸರಿಗಳು, ಸಾವಯವ-ರಾಸಾಯನಿಕ ಗೊಬ್ಬರಗಳು, ನೀರು-ನೆಲಗಳಲ್ಲಿ ಬೆಳೆಯುವ ವೈವಿಧ್ಯಮಯ ಹೂಗಿಡಗಳು, ಕೃಷಿ ಉಪಕರಣ ಯಂತ್ರಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿಯ ಪ್ರಮುಖ ಆಕರ್ಷಣೆ ಎಂದರೆ “ರೈತರ ಸಂತೆ”. ಈ ರೈತರ ಸಂತೆಯಲ್ಲಿ ಭಾಗವಹಿಸಲು ಇಚ್ಚಿಸುವ…

Read More

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಮಂದಾರ್ತಿ ಸೇವಾ ಸಹಕಾರಿ ಸಂಘ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದ ಅಂಗವಾಗಿ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವ ಕಾರ್ಯಕ್ರಮ ನವೆಂಬರ್ 14 ರಂದು ಪೂರ್ವಾಹ್ನ 10:30ಕ್ಕೆ ಮಂದಾರ್ತಿ ಶ್ರೀ ದುರ್ಗಾ ಸಹಕಾರ ಸೌಧದ ಶ್ರೀ ಚಾಮುಂಡೇಶ್ವರಿ ಸಭಾಂಗಣದಲ್ಲಿ ಜರಗಲಿದೆ. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿ ಕೆ. ಆರ್. ಲಾವಣ್ಯ, ಸಹಾಯಕ ನಿಬಂಧಕಿ ಸುಕನ್ಯಾ ಉಪಸ್ಥಿತರಿರುವರು. ಉಡುಪಿ ಎಂ.ಜಿ.ಎಂ ಕಾಲೇಜಿನ ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಪ್ರೊ.…

Read More

ಭಾಷೆ ಒಂದು ನಾಡಿನ ಸಂಸ್ಕೃತಿಯ ಜೀವಾಳ. ಕನ್ನಡ ಭಾಷೆ ಸಂಸ್ಕೃತಿ ಉಳಿಯ ಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ಕರ್ನಾಟಕ ಇದರ ವತಿಯಿಂದ ಕಲ್ಲಡ್ಕದ ಶ್ರೀ ರಾಮ ಶಾಲೆಯಲ್ಲಿ ನಡೆದ ಕನ್ನಡ ಶಾಲೆಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಾಷ್ಟ್ರೀಯ ಭಾವನೆಗಳು ಜಾಗೃತಗೊಳ್ಳಬೇಕಾದರೆ ಮಾತೃಭಾಷೆಯ ಶಿಕ್ಷಣ ಅಗತ್ಯ ಎಂದರು. ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಸಂಪರ್ಕ ಪ್ರಮುಖ್ ಡಾ. ವಿ. ರಂಗನಾಥ ಅವರು ಭಾರತೀಯ ಭಾಷೆಗಳ ನಡುವೆ ಇರಬೇಕಾದುದು ಸಾಮರಸ್ಯವೇ ವಿನಃ ಸಂಘರ್ಷವಲ್ಲ ಎಂದರು. ಕನ್ನಡ ಶಾಲೆ ಸವಾಲು ಮತ್ತು ಸಮಾಧಾನ ವಿಷಯದ ಬಗ್ಗೆ ನಡೆದ ವಿಚಾರಗೋಷ್ಠಿ ಶಿಕ್ಷಣ ತಜ್ಞ ರಾಜಾರಾಮ ಹೊಳೆಹೊನ್ನೂರು ವಿಷಯ ಮಂಡಿಸಿದರು. ಶ್ರದ್ಧೆ ಇದ್ದಾಗ ಏಕಾಗ್ರತೆ, ಗ್ರಹಿಕೆ, ಹೇಳುವ ಸಾಮರ್ಥ್ಯ, ಕ್ರಿಯಾಶೀಲತೆಯಿಂದ ಉತ್ತಮ ಫಲಿತಾಂಶ ದೊರಕುತ್ತದೆ. ವಿಷಯಗಳನ್ನು ಮಾತೃ ಭಾಷೆಯಲ್ಲಿ ಕಲಿಸುವುವುದರಿಂದ…

Read More

ಶ್ರೀ ಮಹಾವಿಷ್ಣುವಿಗೆ ಆಷಾಡ ಶುದ್ಧ ಶಯನ ಏಕಾದಶೀಯಂದು ‘ಯೋಗನಿದ್ರೆ’ ಕಾರ್ತಿಕ ಶುದ್ಧ ದ್ವಾದಶೀಯಂದು ಏಳುತ್ತಾನೆ. ಉತ್ಥಾನ ಎಂದರೆ ಏಳುವುದು ಎಂಬ ಅರ್ಥ. ಹಾಗಾಗಿ ಕಾರ್ತಿಕ ಮಾಸದ ಉತ್ಥಾನ ದ್ವಾದಶಿ ತುಳಸಿ ಪೂಜೆಗೆ ಎಲ್ಲಿಲ್ಲದ ಪ್ರಾಶಸ್ತ್ಯ. ನವೆಂಬರ್ 13 ರಂದು ತುಳಸಿ ಪೂಜೆಯ ಸಂಭ್ರಮ ನಡೆಯಲಿದ್ದು ಕಾತುರತೆ ಸೃಷ್ಟಿಸಿದೆ. ಕಾರ್ತಿಕ ಮಾಸದ 12ನೇಯ ದಿನ ಉತ್ಥಾನ ದ್ವಾದಶಿ ಬರುತ್ತದೆ. ಕಾರ್ತಿಕ ಮಾಸವಿಡಿ ಶ್ರೀ ಮಹಾವಿಷ್ಣು ‘ದಾಮೋದರ’ನಾಗಿ ತುಳಸಿ ಕಟ್ಟೆಯಲ್ಲಿ ಇರುವುದು ವಿಶೇಷ. ಕ್ಷೀರ ಸಮುದ್ರದಲ್ಲಿ ಜನಿಸಿದ ಕಾರಣ ತುಳಸೀಗೆ ಹಾಲಿನ ಅಭಿಷೇಕ ಮಾಡಿ ಪೂಜಿಸುವುದು ಬಹಳ ಶ್ರೇಷ್ಠ. ಈ ದಿನ ನೆಲ್ಲಿಗಿಡದ ಎಕ್ಕಲುಗಳನ್ನಿಟ್ಟು ಪೂಜಿಸುತ್ತಾರೆ. ನೆಲ್ಲಿಗಿಡ ಸಾಕ್ಷಾತ್ ಲಕ್ಷ್ಮೀ ಎಂಬ ನೆಲೆಯಲ್ಲಿ ಪೂಜೆ. ಪ್ರಾತಃ ಕಾಲದಲ್ಲಿ ಹಾಲಿನ ಅಭಿಷೇಕ, ಪಾರಾಯಣ, ಪೂಜೆ, ಉದ್ದಿನ ದೋಸೆ, ನೆಲ್ಲಿಕಾಯಿ ಚಟ್ನಿ ನೈವೇದ್ಯ ಮಾಡಿ, ವಿಶೇಷವಾಗಿ ಶ್ರೀ ವಿಷ್ಣು ಸಹಸ್ರನಾಮ ಪಠಿಸಿ, ಆರತಿ ಮಾಡಿ ಪ್ರಾರ್ಥಿಸುವುದು ನಡೆಯುತ್ತದೆ. ಸಂಜೆ ಸೂರ್ಯಾಸ್ತ ನಂತರ ತುಳಸಿಗೆ ದೀಪ ಬೆಳಗಿಸಿ ವಿಶೇಷ…

Read More

ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್  ಶಾಲೆಯ ಕ್ರೀಡಾಪಟುಗಳು ಒಟ್ಟು 14 ಚಿನ್ನ, 08 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 27 ಪದಕದೊಂದಿಗೆ ನಾಗಿಣಿ 800ಮೀ, 1500ಮೀನಲ್ಲಿ ನೂತನ ದಾಖಲೆ, ಜಾಸ್ಮಿನ ಹ್ಯಾಮರ್ ತ್ರೋನಲ್ಲಿ ಕ್ರೀಡಾಕೂಟದ ನೂತನ ಕೂಟ ದಾಖಲೆಯೊಂದಿಗೆ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ: ಬಾಲಕಿಯರ ವಿಭಾಗ: ನಾಗಿಣಿ – 10 ಅಂಕ ಫಲಿತಾಂಶ: ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಇಶಾನಿ ಅರುಣ್-ಚಕ್ರ ಎಸೆತ (ದ್ವಿತೀಯ), ಚಸ್ಮಿತಾ-ಚಕ್ರ…

Read More

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತುಮಕೂರು ಇದರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 07 ರಿಂದ 10 ರವೆರೆಗೆ ಮಹಾತ್ಮ ಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 7 ಚಿನ್ನ, 6 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 18 ಪದಕಗಳನ್ನು ಪಡೆದುಕೊಂಡಿತು. ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 16 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಶೋಭಿತ್ ದೇವಾಡಿಗ-ಚಕ್ರಎಸೆತ (ಪ್ರಥಮ), ನಿತಿನ್ ಎಲ್ ಜಿ-ಚಕ್ರಎಸೆತ (ದ್ವಿತೀಯ), ಅಬ್ದುಲ್ ರಜಕ್-ಹ್ಯಾಮರ್ ಎಸೆತ (ದ್ವಿತೀಯ), ಶಿವಾನಂದ ಪೂಜಾರಿ-800ಮೀ (ತೃತೀಯ),4×400ಮೀ ರಿಲೇ (ದ್ವಿತೀಯ), ತೇಜಲ್ ಕೆ ಆರ್-110ಮೀ ಹರ್ಡಲ್ಸ್ (ಪ್ರಥಮ), ದಯಾನಂದ-200ಮೀ (ತೃತೀಯ), 4×400ಮೀ ರಿಲೇ (ದ್ವಿತೀಯ), ಸುಮಂತ್ ಬಿ ಎಸ್-ತ್ರಿವಿಧ ಜಿಗಿತ (ದ್ವಿತೀಯ), ವಿನಾಯಕ್ -5ಕಿಮೀ ನಡಿಗೆ (ಪ್ರಥಮ), ನೊಯೆಲ್-ಉದ್ದ ಜಿಗಿತ (ತೃತೀಯ),ವಿನೋದ್- 4×400ಮೀ  ರಿಲೇ (ಪ್ರಥಮ), ಪೃಥ್ವಿರಾಜ್-4×100ಮೀ ರಿಲೇ…

Read More

ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಪೂರ್ವಭಾವಿ ಸಭೆಯು ಪತ್ತುಮುಡಿ ಸೌಧದಲ್ಲಿ ನಡೆಯಿತು. ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿ ಮಾತನಾಡಿ, 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳ ಜನಮನ್ನಣೆ ಗಳಿಸಿದ್ದು, ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು. ಕಂಬಳಕ್ಕೆ ಮೆರುಗು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿ, ಕಂಬಳ ಈ ಮಣ್ಣಿನ ಅಸ್ಮಿತೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ, ನಗರದಲ್ಲಿ ನಡೆಯುವ ಕಂಬಳ ಜನಾಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ…

Read More

ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಹಿರಿಯಡ್ಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ ಮೂರು ದಶಕಗಳ ಕಾಲ ಸಲ್ಲಿಸಿದ್ದರು ಕುದಿ ವಸಂತ ಶೆಟ್ಟಿಯವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿಯವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಮಾಡಿದವರು. ಕುದಿ ವಸಂತ ಶೆಟ್ಟಿಯವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ದುಬಾಯಿ ಸರ್ವೋತ್ತಮ ಶೆಟ್ಟಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

“ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡ ಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿ ಅವರು ಸದಾ ನೆರವು ನೀಡಿದವರು. ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ. ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ-2024 ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ…

Read More