Author: admin

ಭಾರತೀಯ ಪಶು ವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶು ವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು…

Read More

ವಿಟ್ಲ ಲಯನ್ಸ್ ಕ್ಲಬ್ ನ 2024 – 25 ರ ಸಾಲಿನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ ಎರ್ಮೆನಿಲೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ರೈ ವಿಟ್ಲ ಇವರು ಆಯ್ಕೆಯಾಗಿದ್ದಾರೆ. ಜೂನ್ 15 ರಂದು ಸಂಜೆ ವಿಟ್ಲ ಲಯನ್ಸ್ ಸೇವಾ ಭವನ ಸಿಂಹಗಿರಿ ಒಕ್ಕೆತ್ತೂರು ಇಲ್ಲಿ ಪದಗ್ರಹಣ ನಡೆಯಲಿದ್ದು, ಪದಗ್ರಹಣವನ್ನು 317 D ಇದರ ಜಿಲ್ಲೆಯ ಉಪ ರಾಜ್ಯಪಾಲರಾದ ಕುಡುಪಿ ಅರವಿಂದ ಶೆಣೈ ಅವರು ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿದ್ಯಾಗಿರಿ: ‘ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷ್ಯತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ’ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಮಂಗಳವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಸಂಪ್ರದಾಯ ದಿನ- 2024′ ವನ್ನು ಉದ್ಘಾಟಿಸಿ ಅವರು ಮಾತನಾಡಿದರು ತಮ್ಮ ಕಂಚಿನ ಕಂಠದಲ್ಲಿ ‘ವಿದ್ಯಾ ಬುದ್ಧಿ ಕಲಿಸಿದ ಗುರುವೇ ಕೊಡು ನಮಗೆ ಮತಿಯ..’ ಸಾಲುಗಳನ್ನು ಹಾಡುತ್ತಲೇ ತಮ್ಮ ಮಾತಿಗೆ ಚಾಲನೆ ನೀಡಿದ ಅವರು, ‘ಆಳ್ವಾಸ್‍ನಲ್ಲೇ ಒಂದು ನಾಡು, ಒಂದು ದೇಶ ಇದೆ. ದೇಶದ ಬೇರೆಡೆ ಇಲ್ಲದ ಗುರುಕುಲ ಆಳ್ವಾಸ್’ ಎಂದು ಬಣ್ಣಿಸಿದರು. ಆಳ್ವಾಸ್ ವಿದ್ಯಾರ್ಥಿ ಶಿಲ್ಪಗಳನ್ನು ಕೆತ್ತುವ ತಾಣವಾಗಿದೆ. ಇಲ್ಲಿ ಆಳ್ವರು ಮನುಷ್ಯತ್ವ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇದು ಊರು ಚಿಕ್ಕದಾದರು ದೊಡ್ಡ ಮನಸ್ಸಿನ ಪ್ರಪಂಚ. ಸಾಹಿತ್ಯ, ಕಲೆ, ಕ್ರೀಡೆ, ಶಿಕ್ಷಣಗಳಿಗೆ ಪ್ರೋತ್ಸಹಿಸುವ ಆಳ್ವರು ಹಿರೋಗಿಂತ ದೊಡ್ಡ ಹೀರೋ ಎಂದರು.…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ಮುಂಬಯಿಯ ವಿ.ಕೆ. ಗ್ರೂಪ್ ಆಫ್ ಕಂಪೆನಿಯ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಬೃಹತ್ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀ ನಿವಾಸ್ ಪೂಜಾರಿ ಅವರಿಗೆ ಸನ್ಮಾನ ಸಮಾರಂಭವು ಜೂನ್ 17 ರಂದು ಬೆಳಗ್ಗೆ 10 ರಿಂದ ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಒಕ್ಕೂಟದ ಮಹಾದಾನಿ ಮತ್ತು ಹೇರಂಬಾ ಇಂಡಸ್ಟ್ರೀಸ್ ಲಿ. ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಸಿಎಂಡಿ ತೋನ್ಸೆ ಆನಂದ್ ಎಂ.ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ, ಬಂಟರ ಸಂಘ ಮುಂಬಯಿ ಅಧ್ಯಕ್ಷ…

Read More

ಪುಣೆಯ ಬೇಬಿ ಕ್ಲಿನಿಕ್ ನ ಖ್ಯಾತ ಮಕ್ಕಳ ತಜ್ಞ ಮೂಡುಬಿದಿರೆ ಮೂಲದ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಸುಧಾಕರ ಶೆಟ್ಟಿ ಅವರಿಗೆ ಮುಂಬಯಿಯ ಕುರ್ಲಾ ಬಂಟರ ಭವನದ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಭಾನುವಾರ ನಡೆದ “ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ” ಕಾರ್ಯಕ್ರಮದಲ್ಲಿ “ಹೊರನಾಡ ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸಂಘ ಅಂಧೇರಿ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಸುಧಾಕರ ಶೆಟ್ಟಿ ಅವರ ಮೂರು ದಶಕಗಳ ವೈದ್ಯಕೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು. ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಹೇರಂಬ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಸೂರಜ್ ಶೆಟ್ಟಿ, ಕೃಷ್ಣ ಶೆಟ್ಟಿ ಮತ್ತಿತರ ಪ್ರಮುಖರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.

Read More

ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದೊಂದಿಗೆ ಪಡುಬಿದ್ರಿಯ ವಿಶೇಷ ಆರ್ಥಿಕ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪೆನಿಯ ಮೂಲಕ 2023-24 ನೇ ಸಾಲಿನ ಸಿ.ಎಸ್.ಆರ್ ನಿಧಿಯಿಂದ ಅನುಷ್ಠಾನಿಸಲಾದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ದಿನಾಂಕ 08-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು. ಶಾಸಕರು ಮಾತನಾಡಿ ಆಸ್ಪೆನ್ ಇನ್ಫ್ರಾ ಕಂಪೆನಿಯು ಸಂಸ್ಥೆಗೆ ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ ಅವರು ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದರು. ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವೈ. ಶಶಿಧರ್ ಶೆಟ್ಟಿ, ಪಡುಬಿದ್ರಿ ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಮಣಿಪಾಲ ಭಾರತೀಯ…

Read More

ರೋಟರಿ ಜಿಲ್ಲೆ 3181 ವತಿಯಿಂದ ಹಮ್ಮಿಕೊಂಡ 2023-2024 ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಮೈಸೂರಿನಲ್ಲಿ ನಡೆದಿದ್ದು, ರೋಟರಿಯ ಅತ್ಯುನ್ನತ ಗೌರವ UNSUNG HERO ಪ್ರಶಸ್ತಿಯು ಡಾ. ಹರ್ಷ ಕುಮಾರ ರೈ ಮಾಡಾವು ಇವರಿಗೆ ಲಭಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವಾದ ಅಧ್ಯಕ್ಷರಾಗಿ, ವಲಯ ಸೇನಾನಿಯಾಗಿ, ರಸ್ತೆ ಸುರಕ್ಷತೆ ಮತ್ತು ಜಾಗ್ರತಿ ಜಿಲ್ಲಾ ಛೇರ್ಮನ್ ಆಗಿ ರೋಟರಿಯಲ್ಲಿ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪ್ರಸ್ತುತ ವರ್ಷದಲ್ಲಿ ರೋಟರಿ ಜಿಲ್ಲೆಗೆ ಒಳಪಟ್ಟ ದ.ಕ, ಕೊಡಗು,ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಸ್ತೆ ಸುರಕ್ಷತೆ ಮತ್ತು ಜಾಗ್ರತಿಗೆ ಸಂಬಂಧ ಪಟ್ಟ ಹಲವು ವಿನೂತನ ಕಾರ್ಯಕ್ರಮಗಳನ್ನು ಸಂಘಟಿಸಿ ರೋಟರಿ ಜಿಲ್ಲೆ ಮಾತ್ರವಲ್ಲದೇ ರೋಟರಿ ಇಂಡಿಯಾದಲ್ಲೇ ಹೊಸ ದಾಖಲೆ ಮಾಡಿದ್ದರು. ಇವರು 2024-2025 ರ ಸಾಲಿಗೆ ರೋಟರಿ ಅಸಿಸ್ಟೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಎಚ್. ಆರ್ ಕೇಶವ್, ಪೂರ್ವ ಗವರ್ನರ್ ಪ್ರಕಾಶ್ ಕಾರಂತ್ ಮತ್ತು ಚಿತ್ರ ನಟಿ ಪ್ರಿಯಾಂಕ ಸೇರಿದಂತೆ ರೋಟರಿ ನಾಯಕರು ಉಪಸ್ಥಿತರಿದ್ದರು.

Read More

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಛೇರ್ಮನ್ ಆಗಿ ಸಮಾಜ ಸೇವಕ, ವಿ.ಕೆ.ಸಮೂಹ ಸಂಸ್ಥೆಗಳ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾದರು. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು. ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಸಂಘದ ವತಿಯಿಂದ ಕರುಣಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು. ಬಳಿಕ ಮಾತನಾಡಿದ ಕರುಣಾಕರ ಶೆಟ್ಟಿ ಅವರು ದೊಡ್ಡ ಜವಾಬ್ದಾರಿಯನ್ನು ನೀಡಿದ್ದೀರಿ. ಇದಕ್ಕೆ ಪ್ರತಿಯೊಬ್ಬ ಸದಸ್ಯರ ಸಹಕಾರ ಬೇಕು. ಸುರತ್ಕಲ್ ನಲ್ಲಿ ಭವ್ಯವಾದ ಹವಾನಿಯಂತ್ರಿತ ಕಟ್ಟಡವನ್ನು ನಿರ್ಮಿಸೋಣ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜಿ ಅಧ್ಯಕ್ಷರಾದ ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ…

Read More

ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಂಟರ ಸಂಘದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮುಂಬಯಿ ವಿ.ಕೆ. ಸಮೂಹ ಸಂಸ್ಥೆಗಳ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಸುರತ್ಕಲ್ ಬಂಟರ ಸಂಘವನ್ನು ಹಿರಿಯರು ಉತ್ಸಾಹದಿಂದ ಕಟ್ಟಿದ್ದಾರೆ. ಇದನ್ನು ಉಳಿಸಿ ಬೆಳೆಸಲು ಇಂದಿನ ಯುವ ಜನತೆ ಮುಂದಾಗಬೇಕು. ಸಮಾಜಮುಖಿ ಚಿಂತನೆಯ ಜೊತೆ ಸಂಘ ಮುನ್ನಡೆದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯ. ಮಕ್ಕಳು ನಮ್ಮ ಮಣ್ಣಿನ ಸಂಸ್ಕೃತಿಯನ್ನು ಮರೆಯದೆ ಚೆನ್ನಾಗಿ ಓದಿ ಸಾಧನೆ ಮಾಡಬೇಕು. ತಮ್ಮ ಮುಂದಿನ ಜೀವನದ ಬಗ್ಗೆ ಈಗಲೇ ಗಂಭೀರವಾಗಿ ಚಿಂತಿಸಬೇಕು” ಎಂದರು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ಹಣ ಎಲ್ಲರಲ್ಲೂ ಇರುತ್ತದೆ. ಆದರೆ ಅದನ್ನು ಯೋಗ್ಯರಿಗೆ ದಾನ ಮಾಡಲು ಋಣಾನುಬಂಧ ಬೇಕು. ಸುರತ್ಕಲ್ ಬಂಟರ ಸಂಘದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್‍ಲಿಸ್ಟ್‍ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 14780 ಅಭ್ಯರ್ಥಿಗಳು ಭಾಗವಹಿಸಿದರು.ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ಆಳ್ವಾಸ್ ಪ್ರಗತಿಯಲ್ಲಿ ವಿಶೇಷ ಅವಕಾಶ ಬೆಂಗಳೂರಿನ ಸರಕಾರಿ ಎಸ್‍ಕೆಎಸ್‍ಜೆ ಟೆಕ್ನಾಲಜಿ ಇನ್ಸ್ಟಿಟ್ಯೂಟ್ ಇಂಜಿನಿಯರಿಂಗ್ ಕಾಲೇಜಿನ 43 ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇರೆಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ಉಚಿತ ವಾಹನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿ, ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಇಲ್ಲಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಇಜಿ ಇಂಡಿಯಾ, ಇಸಿಯಾ ಸಾಫ್ಟ್ ಹಾಗೂ ಫ್ಲಿಪ್…

Read More