Author: admin
ವಿದ್ಯಾಗಿರಿ: ಆಯುರ್ವೇದ ವೈದ್ಯ ಪದ್ದತಿಯಲ್ಲಿ ಮಾನವ ದೇಹದ ನಿರ್ದಿಷ್ಟವಾದ ಅಂಗಗಳಿಗೆ ಚಿಕಿತ್ಸೆ ನೀಡುವುದರ ಮೂಲಕ ಪರಿಣಾಮಕಾರಿ ಫಲಿತಾಂಶ ಪಡೆಯಲು ಮರ್ಮ ಶಾಸ್ತ್ರ- ಶ್ರೇಷ್ಠ ವೈದ್ಯಕೀಯ ಪದ್ದತಿಯಾಗಿದೆ ಎಂದು ಡಿಐಎಸ್‍ಎಮ್‍ನ ನಿವೃತ್ತ ಮರ್ಮ ಚಿಕಿತ್ಸಕ ಡಾ.ಎನ್.ವಿ ಶ್ರೀವತ್ಸ ಹೇಳಿದರು. ಅವರು ಆಳ್ವಾಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಶಲ್ಯ ತಂತ್ರ ಮತ್ತು ಶರೀರ ರಚನಾ ವಿಭಾಗದ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಮರ್ಮ ಅಭ್ಯಾಸ-2024ರ ರಾಷ್ಟ್ರೀಯ ಮಟ್ಟದ ಕಾರ್ಯಗಾರ ವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಆಕ್ಯುಪಂಕ್ಚರ್, ಆಕ್ಯು ಪ್ರೇಶರ್ ಮೂಲ ಮರ್ಮ ಶಾಸ್ತ್ರ. ಆದರೆ ಇಂದು ಮರ್ಮ ಶಾಸ್ತ್ರವನ್ನು ಶಾಸ್ತ್ರೋಕ್ತವಾಗಿ ಕಲಿಯುವ ಹಾಗೂ ಕಲಿಸುವ ವರ್ಗ ಕ್ಷೀಣಿಸುತ್ತಿದೆ. ನಮ್ಮ ಕಾಲದ ಶಿಕ್ಷಕರು ಉದಾರ ಮನಸ್ಸಿನಿಂದ ಈ ವಿದ್ಯೆಯನ್ನು ನಮಗೆ ಕಲಿಸಿದರು. ಆದರೆ ಇಂದಿನ ಯುವಜನತೆ ಈ ಕ್ಷೇತ್ರದಿಂದ ದೂರ ಸರಿಯುತ್ತಿರುವುದು ದುಃಖಕರ ಎಂದರು. ರೋಗವನ್ನು ನಿರ್ಣಯಿಸಲು, ಚಿಕಿತ್ಸೆ ಪಡೆಯಲು, ಹಾಗೂ ರೋಗದ ಮುನ್ಸೂಚನೆ ಪಡೆಯಲು ಈ ವೈದ್ಯ ಪದ್ದತಿ ಸಹಕಾರಿಯಾಗಿದೆ. ಮರ್ಮಶಾಸ್ತ್ರದ…
ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇದರ ಆಡಳಿತ ಮಂಡಳಿ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ ನಿಯಮಿತ ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ ( ನಿ )2019 ಮೇ.20 ರಂದು ನಾಮ ನಿರ್ದೇಶನಗೊಂಡಿದ್ದ ವಿನಯ್ ಕುಮಾರ್ ಸೂರಿಂಜೆ ಅವರ ಸ್ಥಾನಕ್ಕೆ ಶಶಿಕುಮಾರ್ ರೈ ಬಾಲ್ಯೋಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.25/03/2024 ರಂದು ನಡೆದ ಬ್ಯಾಂಕಿನ ಆಡಳಿತ ಸಭೆಯ ನಿರ್ಣಯದಂತೆ ಈ ನೇಮಕ ಮಾಡಲಾಗಿದೆ ಎಂದು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ರವಿ ಶೆಟ್ಟಿಯವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದು, ಕಳೆದ ವರ್ಷ ಬಹಳ ವಿಜೃಂಭಣೆಯಿಂದ ನಡೆದ ಪುಣಚ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಮಿತಿಯ ಅಧ್ಯಕ್ಷರಾಗಿದ್ದರು. ಅಲ್ಲದೇ ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ ಮತ್ತು ಹಲವಾರು ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತುಳುಕೂಟ ಕತಾರ್ ನ ಪೋಷಕರಾಗಿ, ಮೂರು ಬಾರಿ ಅಧ್ಯಕ್ಷರಾಗಿ, ಈ ಹಿಂದೆ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ, ಬಂಟ್ಸ್ ಕತಾರಿನ ಸಂಸ್ಥಾಪಕ ಅಧ್ಯಕ್ಷರಾಗಿ, ಭಾರತೀಯ ರಾಯಭಾರಿ ಕಚೇರಿಯ ಅಧೀನದಲ್ಲಿರುವ ಐಸಿಬಿಎಫ್, ಐಸಿಪಿಸಿಯ ಸಲಹಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಕರ್ನಾಟಕ ಸಂಘ ಕತಾರಿನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಈ ಸಂದರ್ಭದಲ್ಲಿ ಡಾ. ರವಿ ಶೆಟ್ಟಿ ಮೂಡಂಬೈಲು ಅವರು ಅಧ್ಯಕ್ಷರಾಗಿರುವುದು ಬಂಟ ಸಮಾಜ ಬಾಂಧವರೆಲ್ಲರಿಗೂ ಖುಷಿ ತಂದಿದೆ.
ಮಾನವ ಸಂಘ ಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆ ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಲು ಸಂಘ, ಸಂಸ್ಥೆಗಳ ಪಾತ್ರ ಮಹತ್ವವಾಗಿದೆ ಎಂದು ಘಟಪ್ರಭಾ ಉದ್ಯಮಿ ಎಚ್. ಜಯಶೀಲ ಎನ್. ಶೆಟ್ಟಿ ಹೇಳಿದರು. ಉಪ್ಪುಂದ ಜೆಸಿಐ ಘಟಕದ 20 ವರ್ಷಗಳ ಹೆಜ್ಜೆ ಗುರುತು ವಿಂಶತಿ ಮಹೋತ್ಸವ ಸಂಭ್ರಮದ ಸಮಾರಂಭ ಉದ್ಘಾಟಿಸಿ ಮಾತನಾಡಿಸಿದರು. ಬದುಕಿನಲ್ಲಿ ಅವಕಾಶ ದೊರೆಯುವುದು ವಿರಳ. ಆದರೆ ದೊರೆತ ಅವಕಾಶ ಸಾರ್ಥಕ ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ಯುವಜನತೆ ಜವಾಬ್ದಾರಿ. ಸಮಾಜಮುಖಿ ಚಿಂತನೆಯೊಂದಿಗೆ ಹುಟ್ಟಿಕೊಂಡ ಜೇಸಿ ಸಂಸ್ಥೆ ವ್ಯಕ್ತಿತ್ವ ಬೆಳೆಸುವುದರ ಮೂಲಕ ಸಮಾಜದ ಪರಿವರ್ತನೆಗೆ ಸಹಕಾರಿಯಾಗಿದೆ ಈ ನೆಲೆಯಲ್ಲಿ ಜೇಸಿ ಸಂಸ್ಥೆ ಯುವ ಸಮುದಾಯದ ಸಂಘಟನಾ ಪ್ರಯತ್ನ ಶ್ಲಾಘನೀಯ ಎಂದರು. ಜೆಸಿಐ ಅಧ್ಯಕ್ಷ ಮಂಜುನಾಥ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಸೇವಾ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಹೊಳೆಕಡಿಮನೆ ವೆಂಕಟೇಶ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಹಿಂದಿನ 19 ಪೂರ್ವಾಧ್ಯಕ್ಷರ ಸೇವೆ ಗುರುತಿಸಿ ಗೌರವಿಸಲಾಯಿತು. ಜೆಸಿಐ ವಲಯಾಧ್ಯಕ್ಷ ಗಿರೀಶ…
ಮೂಡುಬಿದಿರೆ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿ ವಿ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಪವರ್ ಲಿಫ್ಟಿಂಗ್ಚಾಂ ಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ಸತತ 20ನೇ ಬಾರಿ ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 27 ಅಂಕವನ್ನು ಪಡೆದು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು 56 ಅಂಕದೊಂದಿಗೆ ತಂಡ ಪ್ರಶಸ್ತಿಯನ್ನು ಪಡೆಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.
ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ, ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿರುವ ‘ಇಂಡಿಯಾ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್’ ನ 2024-2025 ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕೆ ಮೇ 13ರಂದು ನಡೆದ ಚುನಾವಣೆಯಲ್ಲಿ ಮಿತ್ರಂಪಾಡಿ ಜಯರಾಮ್ ರೈಯವರು ಬಹುಮತಗಳೊಂದಿಗೆ ಜಯಶೀಲರಾಗಿದ್ದಾರೆ. ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ‘ಇಂಡಿಯಾ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್ (ಐಎಸ್ ಸಿ)’ ಕಳೆದ 57 ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡದಾಗಿರುವ ಸಂಘಟನೆಯಾಗಿದೆ. ಭಾರತೀಯ ವೈವಿಧ್ಯಮಯ ಕಲೆ ಸಂಸ್ಕೃತಿ, ಕಲಾ ಪ್ರಕಾರಗಳಿಗೆ ಇಲ್ಲಿ ವೇದಿಕೆಯನ್ನು ಕಲ್ಪಿಸಲಾಗುತ್ತಿದೆ. ಈಗಾಗಲೇ ನೂರಾರು ಕಲಾ ಪ್ರತಿಭೆಗಳು ಹೊರಹೊಮ್ಮಿದ್ದು, ವಿಶ್ವದ ವಿವಿಧ ಕಡೆಗಳಿಂದ ಪ್ರಖ್ಯಾತ ಕಲಾವಿದರು ಕಾರ್ಯಕ್ರಮ ನೀಡಿರುವ ಪವಿತ್ರ ವೇದಿಕೆ ಮತ್ತು ಎರಡು ಸಾವಿರ ಪ್ರೇಕ್ಷಕರು ಆಸೀನರಾಗುವ ಹವಾನಿಯಂತ್ರಿತ ಸಭಾಂಗಣ ಮತ್ತು ಮುನ್ನೂರು ಮಂದಿ ಆಸೀನರಾಗುವ ಎರಡು ಕಿರಿಯ ಸಭಾಂಗಣಗಳನ್ನು ಹೊಂದಿದೆ. ಈಜುಕೊಳ, ಜಿಮ್, ಒಳಾಂಗಣ ಕ್ರೀಡಾ ವ್ಯವಸ್ಥೆ, ಉಪಹಾರ ಮಂದಿರದ ವ್ಯವಸ್ಥೆ ಇದ್ದು ಎಂಟು…
‘ಆಳ್ವಾಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪ್ರದಾನ’ ‘ಶೈಕ್ಷಣಿಕದ ಜೊತೆಗೆ ಪಠ್ಯೇತರಕ್ಕೂ ಒತ್ತು ನೀಡಿ’
ಪ್ರಸ್ತುತ ಶೈಕ್ಷಣಿಕ ಹಂತದಲ್ಲಿ ಗ್ರಂಥಾಲಯವನ್ನು ಹೆಚ್ಚೆಚ್ಚು ಬಳಸಿಕೊಳ್ಳುವುದು ಅತ್ಯಗತ್ಯ ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ಸಜಿತ್ ಎಂ ಹೇಳಿದರು. ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಕಾಮರ್ಸ್ಸ ಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ಪ್ರಸ್ತಕ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಎಂದಿಗೂ ಆ ಪ್ರತಿಭೆಯನ್ನು ಕಡೆಗಣಿಸದೆ, ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷವನ್ನು ಕಾಣಿರಿ ಎಂದರು. ಜೀವನದಲ್ಲಿ ಎಂದಿಗೂ ಸ್ವಾರ್ಥಿಯಾಗದೇ ನೀವು ಬೆಳೆಯಿರಿ, ನಿಮ್ಮೊಂದಿಗೆ ಇರುವವರನ್ನು ಬೆಳೆಸಿ ಎಂದು ಎಲ್ಲಾ ಸಾಧಕರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಲೈಬ್ರರಿ ಅವಾರ್ಡ್, ಶೈಕ್ಷಣಿಕದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಸಾಂಸ್ಕøತಿಕ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಕಾಲೇಜು ವಾರ್ಷಿಕೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ , ಕಾಮರ್ಸ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಕುಂದರ್ಉ ಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವಿತುಲ್ ಜೈನ್…
ಮೂಡುಬಿದಿರೆ: ಭಾಷೆ ಎನ್ನುವುದು ಒಂದು ಶಕ್ತಿ, ಇದು ಹೆಚ್ಚಿನ ಜ್ಞಾನವನ್ನ ದೊರಕಿಸಿ ಕೊಡುತ್ತದೆ ಎಂದು ಸೇಂಟ್ ಸ್ಟೀಫನ್ಸ್ ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕ ಡಾ. ಎನ್ ಪಿ ಆಶ್ಲೇ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಪದವಿ ಮತ್ತು ಸ್ನಾತಕೋತ್ತರ ಇಂಗ್ಲೀಷ್ ವಿಭಾಗ ಆಯೋಜಿಸಿದ ಆಂಗ್ಲ ಭಾಷೆ ಮತ್ತು ಸಾಹಿತ್ಯದ ಶಿಸ್ತಿನ ಪ್ರಸ್ತುತತೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾಷೆ ಮತ್ತು ಸಾಹಿತ್ಯಕ್ಕೆ ಅವಿನಾಭಾವ ಸಂಬಂಧವಿದೆ. ಭಾಷೆ ಇದರೆ ಸಾಹಿತ್ಯವನ್ನು ಹುಟ್ಟುಹಾಕಲು ಸಾಧ್ಯ. ಸಾಹಿತ್ಯ ಬದಲಾದಂತೆ ಭಾಷೆ ಬದಲಾಗುತ್ತದೆ, ಭಾಷೆ ಬದಲಾದಂತೆ ಸಾಹಿತ್ಯವು ಬದಲಾಗುತ್ತದೆ ಎಂದರು. ಯಾವುದೇ ಕೆಲಸವನ್ನ ಮಾಡಬೇಕಾದರೆ ಭಾಷೆ ತುಂಬಾ ಮುಖ್ಯ . ಭಾಷೆಯ ಬಗ್ಗೆ ಸಂಪೂರ್ಣ ಜ್ಞಾನವನ್ನು ಹೊಂದಿದಾಗ ಮಾತ್ರ ಒಂದು ಪ್ರಬಲತೆ ಹೊಂದಲು ಸಾಧ್ಯ. ಇಂದಿನ ಜಗತ್ತಿನಲ್ಲಿ ಸೂಕ್ಷ್ಮತೆಯನ್ನು ಬೇಗ ಅರಿತುಕೊಳ್ಳಬೇಕು, ಆಧುನಿಕರಣದಲ್ಲಿ ಪ್ರತಿಯೊಂದು ಸೂಕ್ಷ್ಮತೆಗೆ ನಾವು ಒಳಗಾಗುತ್ತಿದ್ದೆವೆ ಎಂದು ಹೇಳಿದರು. ಪ್ರಸ್ತುತ ಕಾಲಮಾನದಲ್ಲಿ ಆಂಗ್ಲ ಭಾಷೆ ಎನ್ನುವುದು ಕೇವಲ ಪ್ರಬುದ್ಧ ಭಾಷೆ ಯಾಗಿ ಕಾಣುವುದಲ್ಲದೆ ದೈನಂದಿನ…
ಮೂಡುಬಿದಿರೆ: ಸಿಬಿಎಸ್‍ಸಿ ಈ ಬಾರಿಯ ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಸತತ ನಾಲ್ಕನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 17 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಶಾಲೆಯಿಂದ 95 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದವರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು ಮನ್ವಿತ್ ಎಸ್ ಪದ್ಮಶಾಲಿ, ಮೆಲ್ವಿನ್ ಜಾನ್ ಡಿ, ಪೂರ್ವಿಕ ಜಿ ರಾವ್ (98%), ನಿಧಿ ಜೆ ಶೆಟ್ಟಿ, ಹರ್ಷದಾ ಬಿ ಎಚ್ (97%), ಸಮೀಕ್ಷ ಎಂ, ನಿಧಿ ಬೆಡೆಕರ್, ಎಮ್‍ಎಸ್ ಪಲ್ಲವಿ, ಕ್ರಿಷ್ ಮಂಜುನಾಥ್ ಶೆಟ್ಟಿ, ಚೇತನ್‍ಎಸ್ ವಿ, ದರ್ಶನ್ ಹೆಚ್ ಜೆ (96%), ಶ್ರವಣ್ ಬೆಳಿರಾಯ, ಮಾನಸೀ ವೆಂಕಟೇಶ್ ದಂಬಾಲ್, ಅನುಶ್ರೀ ಹೆಚ್, ತರಂಗ್ ಸಿ, ಅದೀಶ ಸಿ, ಅಭಯ್‍ಕಿರಣ…
ಜಾಗತಿಕ ಬಂಟರ ಸಂಘದ ವತಿಯಿಂದ ಬಹು ನಿರೀಕ್ಷೆಯ ನೂತನ ತೆರೆದ ಸಭಾ ಭವನ ಮೂಲ್ಕಿ ರಾಷ್ಟೀಯ ಹೆದ್ದಾರಿ ಪಕ್ಕ ನಿರ್ಮಾಣವಾಗುತ್ತಿದ್ದು, ಒಂದು ಮಾದರಿ ಸಭಾಭವನವಾಗಿದೆ ಎಂದು ಜಾಗತಿಕ ಬಂಟರ ಸಂಘದ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಮೂಲ್ಕಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ತೆರೆದ ಸಭಾಭವನದ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಮದುವೆ, ಮೆಹಂದಿ, ಯಕ್ಷಗಾನ, ನಾಟಕ ಮತ್ತಿತರ ಯಾವುದೇ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಸಭಾಭವನ ನಿರ್ಮಾಣವಾಗುತ್ತಿದೆ. ಈಗಾಗಲೇ ಕಾರ್ಯಕ್ರಮದ ಮುಂಗಡ ಬುಕಿಂಗ್ ಕೂಡ ಬಂದಿದೆ. ಐಕಳ ಹರೀಶ್ ಶೆಟ್ಟಿ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಂಘ ಮತ್ತು ವಿಶೇಷ ಯೋಜನೆಗಳಿಂದ ಗಮನ ಸೆಳೆಯುತ್ತದೆ. ಶಿಕ್ಷಣ ಆರೋಗ್ಯ, ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡುತ್ತಿದ್ದು ಇದಕ್ಕಾಗಿ ಸಾಕಷ್ಟು ಹಣ ವ್ಯಯಿಸಲಾಗಿದೆ. ಹರೀಶ್ ಶೆಟ್ಟಿಯವರ ಕಾರ್ಯ ಶೈಲಿಯಿಂದ ಸಂಘ ದಿನದಿಂದ ದಿನಕ್ಕೆ ಉನ್ನತ ಮಟ್ಟಕ್ಕೆ ಏರುತ್ತಿದೆ ಎಂದರು. ಮೂಲ್ಕಿಯಲ್ಲಿ ನಿರ್ಮಾಣವಾಗುತ್ತಿರುವ ತೆರೆದ ಸಭಾಭವನ ಕಾಮಗಾರಿಯನ್ನು ಕನ್ಯಾನ ಸದಾಶಿವ ಶೆಟ್ಟಿ ಪರಿಶೀಲನೆ ನಡೆಸಿದರು. ಮುಂಬೈ ಬಂಟರ…