Author: admin

ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಹೊಸ ಆಲೋಚನೆಗಳನ್ನು ಬೆಳೆಸುವ ಅವಿಭಾಜ್ಯ ಅಂಗ ಕ್ರೀಡೆ ಎಂದು ಇಡ್ಯಾ ಸುರತ್ಕಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಐ ರಮಾನಂದ್ ಭಟ್ ನುಡಿದರು. ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಸುರತ್ಕಲ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ -4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್ ಗಣೇಶ್ ರಾವ್ ಮಾತನಾಡಿ, ಜಾತಿ ಮತ ಪಕ್ಷ ಮರೆತು ಈ ಕ್ರೀಡೆಯಲ್ಲಿ ಹಿರಿಯರೆಲ್ಲರೂ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕ್ರೀಡೆಯ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದೆಯೂ ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು.ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಾಜಿ ಶಾಸಕ ಬಿ.ಎ ಮೊಯಿದಿನ್ ಬಾವ, ಜ್ಯೋತಿಷ್ಯರಾದ ನಾಗೇಂದ್ರ ಭಾರದ್ವಾಜ್, ಮಂಗಳೂರು…

Read More

ಸಾಧಕರ ಬದುಕಿನಲ್ಲಿ ಏಳು ಬೀಳುಗಳು ಸಹಜ. ಅವರ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ. ಹಾಗೆಯೇ ಅಂಥವರ ಬದುಕು ಬವಣೆಗಳಿಂದ ನಾಳಿನ ಜನಾಂಗ ಸಾಕಷ್ಟು ಪಾಠವನ್ನೂ ಕಲಿತಂತಾಗುವುದು ಎಂದು ಮಾಜಿ ಸಚಿವ ಕೃಷ್ಣ.ಜೆ ಪಾಲೆಮಾರ್ ಹೇಳಿದರು. ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಎಪ್ರಿಲ್ 4 ರಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಹರಿದಾಸ ‘ದೇವಕಿ ತನಯ’ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಅದುವೇ ಸ್ಫೂರ್ತಿಯಾಗುವುದು ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ| ಹರಿಕೃಷ್ಣ ಪುನರೂರು ಮಾತನಾಡಿ ‘ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ…

Read More

ಶ್ರೀ ಬೊಬ್ಬರ್ಯ ಕ್ಷೇತ್ರ, ಬೊಲ್ಯಾಲ (ಬೆಳ್ಕೆಳೆ) ತೆಂಕನಿಡಿಯೂರು ಉಡುಪಿ ಇಲ್ಲಿನ ನವೀಕೃತ ದೈವಸ್ಥಾನ ಸಮರ್ಪಣೆ, ಬ್ರಹ್ಮ ಕುಂಭಾಭಿಷೇಕದ ಕಾರ್ಯಕ್ರಮಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹುಬ್ಬಳ್ಳಿ ಧಾರವಾಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಮಾಜಿ ಅಧ್ಯಕ್ಷ ಮಹೇಶ್ ಶೆಟ್ಟಿ ಮತ್ತು ಭೋಜರಾಜ ಶೆಟ್ಟಿ ಕೋಟೇಶ್ವರರವರು ತಂತ್ರಿಗಳ ಮೂಲಕ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಗೌರವಿಸಿದರು. ಡಾ. ಎ.ವಿ ಬಾಳಿಗಾ ಆಸ್ಪತ್ರೆಯ ಶ್ರೀಮತಿ ಸೌಜನ್ಯ ಶೆಟ್ಟಿ ದಂಪತಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮೂಡುಬಿದಿರೆ: ‘ಕ್ರೀಡೆಯಲ್ಲಿ ಸಕ್ರಿಯರಾಗುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ನಗರದ ಸ್ವರಾಜ್ ಮೈದಾನದಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ‘ಕ್ರೀಡಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಸಂಘಟಿಸುವ ಕಾರ್ಯಕ್ರಮ ಶಿಸ್ತು ಮತ್ತು ಅನನ್ಯತೆಗೆ ಸಾಕ್ಷಿಯಾಗಿರುತ್ತದೆ ಎಂದರು. ಇದು ಜೀವನದಲ್ಲಿ ನಾನು ಕಂಡ ಅನನ್ಯ ಕಾರ್ಯಕ್ರಮ ಎಂದು ಶ್ಲಾಘಿಸಿದರು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಷ್ಠಾನದ ಎಂಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು, ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಅವರಿಗೆ ಹಸ್ತಾಂತರಿಸಿ, ಕ್ರೀಡಾ ಜ್ಯೋತಿ ಬೆಳಗಲಾಯಿತು.ವಿದ್ಯಾರ್ಥಿನಿ ವೀಕ್ಷಿತಾ ರಾಮಕೃಷ್ಣ ಗೌಡ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.…

Read More

ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್ ತಂಡವನ್ನು 35-23, 35-29 ನೇರ ಸೆಟ್‌ನಲ್ಲಿ ಸೋಲಿಸಿ 18ನೇ ಬಾರಿಗೆ ಲೀಗ್ ಹಂತಕ್ಕೆ ಆಯ್ಕೆಯಾಗಿತ್ತು. ಲೀಗ್ ಹಂತದಲ್ಲಿ ತಮಿಳುನಾಡಿನ ಮಧುರೈಯ ಕಾಮರಾಜ್ ವಿವಿ ತಂಡವನ್ನು 35-15, 35-26 ಅಂತರಗಳಿ0ದ, ಮಹಾತ್ಮಾ ಗಾಂಧಿ ವಿವಿಯನ್ನು 35-18, 35-14 ನೇರ ಅಂತರಗಳಿ0ದ ಸೋಲಿಸಿ ಫೈನಲ್ ಪ್ರವೇಶಿಸಿತು. ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ಅಣ್ಣಾ ವಿವಿಯೊಂದಿಗಿನ ರೋಚಕ ಪಂದ್ಯಾಟದಲ್ಲಿ ರನ್ನರ್ ಅಪ್ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಯಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕನ್ನಡ ಸಂಘ ಸಾಂತಾಕ್ರೂಜ್ ತನ್ನ 67 ನೇ ವಾರ್ಷಿಕೋತ್ಸವವು ಮಾರ್ಚ್ 29 ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿನ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಸುಜಾತ ಆರ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭವನ್ನು ಬಾಬಾ’ಸ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ, ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಲ್ಲವರ ಅಸೋಸಿಯೇಷನ್ ಮುಂಬೈ ಅಧ್ಯಕ್ಷ ಹರೀಶ್ ಜಿ. ಅಮೀನ್, ಬಂಟರ ಸಂಘ ಮುಂಬಯಿಯ ಪೊವಾಯಿ ಎಜುಕೇಶನ್ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಜವಾಬ್ ಅಧ್ಯಕ್ಷ ರಾಜೇಶ್ ಬಿ. ಶೆಟ್ಟಿ, ಪ್ರಸಿದ್ಧ ಜ್ಯೋತಿಷಿ, ವಾಸ್ತುತಜ್ಞ ಅಶೋಕ್ ಪುರೋಹಿತ್ ಗೌರವ ಅತಿಥಿಗಳಾಗಿ ಆಗಮಿಸಿದ್ದು, ಸಂಘವು ವಾರ್ಷಿಕವಾಗಿ ಕೊಡ ಮಾಡುವ ಸಾಧಕ ಸನ್ಮಾನಗಳನ್ನು ಪ್ರಧಾನಿಸಿ ಸಂಘವು ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಕೊಡ ಮಾಡುವ ಶೈಕ್ಷಣಿಕ ಆರ್ಥಿಕ ನೆರವು, ಆರೋಗ್ಯ ನಿಧಿ ವಿತರಿಸಿ ವಿದ್ಯಾರ್ಥಿಗಳ ದತ್ತು ಸ್ವೀಕಾರಗೈದರು.ಇದೇ ಸಂದರ್ಭದಲ್ಲಿ ಸಂಘದ ಮಹಾದಾನಿ, ಚೀನಾದ…

Read More

ದೆಹಲಿಯಲ್ಲಿ ರಾಜ್ಯ ಸರಕಾರ ನಿರ್ಮಿಸಿರುವ ಕರ್ನಾಟಕ ಭವನ ಕಾವೇರಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಈ ಹಿಂದೆ ಇದು ಮೈಸೂರು ಭವನವಾಗಿತ್ತು. ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ. ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರಕಾರದ ಬಳಿ ಹಲವು ಕೆಲಸ ಕಾರ್ಯಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗುತ್ತದೆ. ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ ಎರಡರ ಪುನರ್ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ತಿಳಿಸಿದರು. ಕೊರೋನಾ ಸೇರಿ ಹಲವು ಸಂಕಷ್ಟಗಳಿಂದಾಗಿ ಕಟ್ಟಡ ಕಾಮಗಾರಿಗೆ ವಿಳಂಬವಾಯಿತು. ಈಗ ಭವ್ಯ ಕಟ್ಟಡ ನಿರ್ಮಾಣಗೊಂಡಿದೆ. ಕರ್ನಾಟಕ ಭವನ ಬೆಳೆದು ಬಂದ ಇತಿಹಾಸ ಕುರಿತು ಬೋರ್ಡ್ ಹಾಕಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಖರ್ಗೆಯವರ ಸಲಹೆಯಂತೆ ಶಾಸಕರು ತಂಗಲು ಇನ್ನಷ್ಟು ಅನುಕೂಲಗಳನ್ನು ಮಾಡಿಕೊಡುತ್ತೇವೆ…

Read More

ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ, ಭಾಸ್ಕರ ಶೇರಿಗಾರ್‌ ಮತ್ತು ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಮನವಿ ಸ್ವೀಕರಿಸಿದ ಖಾದರ್ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದರು.

Read More

ಇವತ್ತು ಗುರ್ಮೆ ಸುರೇಶಣ್ಣನ ಜನ್ಮದಿನ. ಸುರೇಶಣ್ಣ ಮತ್ತು ಹಸುವಿಗೂ, ಹಸುಗೂಸಿಗೂ ದೊಡ್ಡದೇನು ವ್ಯತ್ಯಾಸವಿಲ್ಲ. ಅವರ ಹೃದಯ ನಿಷ್ಕಲ್ಮಶ. ಯಾವಾಗಾದರೊಮ್ಮೆ ಕರೆ ಮಾಡುವ ಸುರೇಶಣ್ಣ ತಡ ರಾತ್ರಿಯ ತನಕವೂ ಲಹರಿಗೆ ಬಿದ್ದು ಮಾತಾಡುತ್ತಾರೆ. ಅದು ಅವರ ಅಂತರಂಗ ಅರಳಿಕೊಳ್ಳುವ ಕಾಲವೆನೋ! ಯಾವ ಜನ್ಮದ ಬಂಧುವೋ ಎನ್ನುವಂತೆ ನಾವು ಹರಟುತ್ತೇವೆ. ಏನಿದೆ ಅಷ್ಟು ಮಾತಾಡಲು ವಿಷಯ? ಆದರೂ ಮಾತಾಡಿರುತ್ತೇವೆ. ಅವರ ಆರೋಗ್ಯ, ಸಮಾಜದ ಅನಾರೋಗ್ಯ, ಹತ್ತಿರವಿದ್ದೂ ದೂರ ನಿಲ್ಲುವವರು, ದೂರವಿದ್ದೂ ಹತ್ತಿರವಿರುವವರು, ಏನೂ ಇಲ್ಲದೆ ದೂರುವವರು ಹೀಗೆ ನನ್ನ ಮತ್ತು ಸುರೇಶಣ್ಣನ ಮಾತಿನ ನಡುವೆ ಎಲ್ಲರೂ ಬಂದು ಹೋಗುತ್ತಾರೆ. ನನ್ನ ಜೀವನದಲ್ಲಿ ನೋಡಿದ ಕೆಲವೇ ಕೆಲವು ನಿಷ್ಕಲ್ಮಶ ಹೃದಯದವರಲ್ಲಿ ಗುರ್ಮೆ ಸುರೇಶಣ್ಣನೂ ಒಬ್ಬರು. ಸುರೇಶಣ್ಣ ಕಾಪು ಕ್ಷೇತ್ರದ “ಪುಣ್ಯಪುರುಷ” ಎನ್ನುವುದು ನನ್ನ ಅಭಿಪ್ರಾಯ. ಮೊನ್ನೆ ಕಾಪು ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನೋಡಿದಾಗ ನನಗೆ ಹಾಗನ್ನಿಸಿತು. ಅವರ ಮುಂದಿನ ಹೆಜ್ಜೆ ಪೇರ್ಡೂರು ಅನಂತ ಪದ್ಮನಾಭ ದೇವಸ್ಥಾನದ ಕಡೆಗಿದೆ! ಸುರೇಶಣ್ಣ ಏನಾದರೊಂದು ಮಾಡಬೇಕು ಎಂದು ಹೆಜ್ಜೆ…

Read More

ದೀಕ್ಷಿತ್ ರೈಯವರು ಬ್ಯಾಚುಲರ್ ಆಫ್ ವಿಷುಯಲ್ ಆರ್ಟ್ಸ್ ನ 2024 ನೇ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರ‌್ಯಾಂಕ್ ನೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಆಧೀನಕ್ಕೊಳಪಟ್ಟ ಮಹಾಲಸಾ ವಿಷುಯಲ್ ಆರ್ಟ್ಸ್ ಪದವಿಯನ್ನು ಪೂರೈಸಿ ಪ್ರಸ್ತುತ ಬೆಂಗಳೂರು ಯೂನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ವಿಷುಯಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಓದುತ್ತಿರುವ ಇವರು ಎಡಮಂಗಲ ಗ್ರಾಮದ ಪೊಯ್ಯತ್ತೂರು ವಿಶ್ವನಾಥ ರೈ ಮತ್ತು ಶೀಲಾವತಿ ರೈ ದಂಪತಿಯ ಪುತ್ರರಾಗಿದ್ದಾರೆ.

Read More