Author: admin

ವಿದ್ಯಾಗಿರಿ: ನಾಯಕನೆಂದರೆ ಜವಾಬ್ದಾರಿ, ಅಹಂ ತೊರೆದು ವಿಧೇಯತೆಯಿಂದ ಕಾರ್ಯ ನಿರ್ವಹಿಸುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಇಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣ (ಕೃಷಿ ಸಿರಿ ವೇದಿಕೆ) ದಲ್ಲಿ ಶನಿವಾರ ನಡೆದ ಪುತ್ತಿಗೆಯ ವಿವೇಕಾನಂದ ನಗರ ಆಳ್ವಾಸ್ ಕೇಂದ್ರೀಯ ಶಾಲೆಯ ‘ಸ್ವಾಗತ ದಿನ ಮತ್ತು ಇನ್ವೆಸ್ಟಿಚರ್ ಕಾರ್ಯಕ್ರಮ’ ದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬನಲ್ಲೂ ತಾನು ನಾಯಕನಾಗಬೇಕೆಂಬ ಹಂಬಲ ಇರಬೇಕು. ನಾಯಕನಾಗಲು ನಾನು ಅರ್ಹನಲ್ಲ ಎಂಬ ಹಿಂಜರಿಕೆ ಇರಬಾರದು. ಪ್ರತಿ ವಿದ್ಯಾರ್ಥಿಗಳು ಇಲ್ಲಿ ನಾಯಕರೇ. ನಾಯಕನಾದವನು ಅಹಂ ತೊರೆದು ತನಗಿರುವ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹಿತವಚನ ಹೇಳಿದರು. ಶಾಲೆಯು ನಮ್ಮ ಪ್ರಗತಿಗೆ ಮಹತ್ವದ ಸಮಯವನ್ನು ಒದಗಿಸುತ್ತದೆ. ಸರಿ ಹಾಗೂ ತಪ್ಪು ಈ ಎರಡೂ ವಿಷಯಗಳಲ್ಲೂ ವಿದ್ಯೆಯನ್ನು ಪಡೆಯುತ್ತೇವೆ. ಆದರೆ ತಪ್ಪೆಂದು ತಿಳಿದ ತಪ್ಪು ದಾರಿಗೆ ಸಾಗುವುದು ಸೂಕ್ತವಲ್ಲ ಎಂದರು. ಹಲವಾರು ಕಾರ್ಯಕ್ರಮಗಳು ವಿಭಿನ್ನ ವಿಚಾರಗಳನ್ನು ತಿಳಿಸುತ್ತದೆ. ಈ ಮೂಲಕ ಕಣ್ಣ ಮುಂದೆ…

Read More

ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭ ಹಾರೈಸಿದರು. ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ ರೈ ಕಳಸ, ಜಗನ್ ಪವಾರ್ ಬೇಕಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ, ಸಂತೋಷ್ ಶೆಟ್ಟಿ ಕುಂಬ್ಳೆ, ಶ್ರೀಕಾಂತ್ ಶೆಟ್ಟಿ, ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ಉಪ್ಪಳ, ಪುಷ್ಪರಾಜ್ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾಪ್ರಸಾದ್, ದಿನೇಶ್ ಶೆಟ್ಟಿ ಮಲಾರಬೀಡು, ರಾಮ್ ಪ್ರಸಾದ್, ಭಾಸ್ಕರ ಚಂದ್ರ ಶೆಟ್ಟಿ, ಕಿರಣ್ ಶೆಟ್ಟಿ, ಪ್ರೇಮ್ ಶೆಟ್ಟಿ ಸುರತ್ಕಲ್,…

Read More

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಸಂಘದ ಸದಸ್ಯರ ಮಕ್ಕಳಿಗೆ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2023-24 ನೇ ಸಾಲಿನಲ್ಲಿ ಪಿಯುಸಿ ಉತ್ತೀರ್ಣರಾಗಿ, 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಎಐಎಂಎಸ್, ಬಿಎಂಸಿ, ಎಂಎಂಸಿ, ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು ಐಐಟಿ, ಎನ್ಐಟಿಕೆ, ನ್ಯಾಶನಲ್ ಲಾ ಕಾಲೇಜು ಐಐಎಂ ನಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ ಸೈಟ್ (http://ramakrishnacredit.com/) ನಲ್ಲಿ ಲಭ್ಯವಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಸಂಘದ…

Read More

ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮತ್ತು ನವೀನ್ ಶೆಟ್ಟಿ ಇನ್ನಾ ಬಾಳಿಕೆಯವರ ಮುಂದಾಳತ್ವದಲ್ಲಿ ಕಾರ್ಯ ರೂಪದಲ್ಲಿರುವ ತ್ರಿರಂಗ ಸಂಗಮ ಮುಂಬಯಿಯ ಆಶ್ರಯದಲ್ಲಿ ಇದೇ ಜೂನ್ 23 ರ ಆದಿತ್ಯವಾರದಂದು ಬೆಳಿಗ್ಗೆ ‘ಧರ್ಮದೈವ’ ತುಳು ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನಗೊಳ್ಳಲಿದೆ. ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ್ ಶೆಟ್ಟಿ ಬಹಳಷ್ಟು ಶ್ರದ್ಧೆ- ಭಕ್ತಿಯಿಂದ ‘ಧರ್ಮದೈವ’ ಎಂಬ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಹಾಗೆಯೇ ಅವರ ಆಪ್ತಮಿತ್ರ ಆದರ್ಶ್ ಫಿಲಂ ಇನ್ಸ್ಟಿಟ್ಯೂಟ್ ನ ಪದವೀಧರ ನಿತಿನ್ ರೈ ಕುಕ್ಕುವಳ್ಳಿ ತನ್ನದೇ ಕಥೆಯಿಂದ ಕೂಡಿದ ಈ ಧರ್ಮದೈವ ಚಿತ್ರದ ಪೂರ್ಣ ನಿರ್ದೇಶಕರಾಗಿ ಚಿತ್ರಕ್ಕೆ ಜೀವ ಕಲೆಯನ್ನು ತುಂಬಿದ್ದಾರೆ. ಚಿತ್ರ ಕಥೆ, ಸಂಭಾಷಣೆಯನ್ನು ಹಮೀದ್ ಪುತ್ತೂರು ಕೂರ್ನಡ್ಕ ಅಚ್ಚ ತುಳು ಭಾಷೆಗೆ ರೂಪಾಂತರಿಸಿದ್ದಾರೆ. ಅರುಣ್ ರೈ ಕೆದಂಬಾಡಿ ಉತ್ತಮ ಛಾಯಾಗ್ರಹಣದ ಮೂಲಕ ‘ಧರ್ಮದೈವ’ ದ ಮಹಿಮೆ ಪ್ರೇಕ್ಷಕರನ್ನು ಆಕರ್ಷಿಸುವ ರೂಪದಲ್ಲಿ ತನ್ನ ಪ್ರತಿಭೆ ಮತ್ತು ಕೈ ಚಳಕದಿಂದ ಚೆನ್ನಾಗಿ ಮೂಡಿ ಬರುವಂತೆ ಮಾಡಿದ್ದಾರೆ. ಚಿತ್ರದಲ್ಲಿ ದೈವದ ಮಹಿಮೆ,…

Read More

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ- ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪೆÇ್ರೀಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಭಾಗದ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಪ್ರಯುಕ್ತ ಪೆÇೀಸ್ಟರ್ ತಯಾರಿಕೆ, ವಿಡೀಯೋ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಯೋಗ ವಿಭಾಗದ ಡೀನ್ ಡಾ.ಅರ್ಚನಾ ಇದ್ದರು. ವಿಭಾಗದ ವಿದ್ಯಾರ್ಥಿಗಳು ನೆರೆಹೊರೆಯ ಶಾಲಾ – ಕಾಲೇಜುಗಳಲ್ಲಿ ಕಳೆದ 10 ದಿನಗಳು ಯೋಗ ತರಬೇತಿಯನ್ನು ಉಚಿತವಾಗಿ ನಡೆಸಿಕೊಟ್ಟರು. ಪುರಭವನ: ಆಳ್ವಾಸ್ ಶಿಕ್ಷಣ ಸಂಸ್ಥೆಯ 50 ವಿದ್ಯಾರ್ಥಿಗಳು ಜಿಲ್ಲಾ ಆಯುಧ ವಿಭಾಗವು ಮಂಗಳೂರಿನ…

Read More

ಬ್ರಹ್ಮಾವರ, ಜೂನ್ 21: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಸಂದೇಶದೊಂದಿಗೆ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪತಂಜಲಿಯ ಯೋಗ ಶಿಕ್ಷಕಿ ಶಿಲ್ಪಾ ಕೆ. ವಿ ಯವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯೋಗದಿಂದ ಎಲ್ಲಾ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಯೋಗವು ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸಿ ಜೀವನದಲ್ಲಿ ಯಶಸ್ಸನ್ನು ಪಡೆಯಲು ನೆರವಾಗುತ್ತದೆ ಎಂದರು.  ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಭಾರತದ ಯೋಗ ಪರಂಪರೆಗೆ ವಿಶ್ವವೇ ಗೌರವಿಸುತ್ತಿದೆ. ಸ್ವಸ್ಥ ಮನಸ್ಸು ಜೀವನಕ್ಕಾಗಿ ಯೋಗ ಮಾಡೋಣವೆಂದು ಸಂದೇಶ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ಇಂದು ವಿಶ್ವವೇ ಈ ದಿನವನ್ನು ಆಚರಿಸುತ್ತಿದೆ. ಇದು ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯವೂ ಮಕ್ಕಳೆಲ್ಲರೂ ಯೋಗವನ್ನು ಮಾಡಬೇಕು. ಉತ್ತಮ ಅರೋಗ್ಯಕ್ಕೆ, ನೆಮ್ಮದಿಗೆ ಯೋಗ ಅನಿವಾರ್ಯವೆಂದರು. ಸಂಸ್ಥೆಯ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅತಿಥಿಗಳ…

Read More

ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮತ್ತು ಆಯೋಜನೆಯಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಹಾಗೂ ವಿಶ್ವ ಯೋಗ ದಿನ ನಿಮಿತ್ತ ಯೋಗ ಗುರುಗಳ ಯೋಗ್ಯ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಜೂನ್ 21 ರಂದು ಶುಕ್ರವಾರ ಬೆಳಿಗ್ಗೆ ಪನ್ವೇಲ್ ನ ಜ್ಞಾನಮಯಿ ಮಾಧ್ಯಮಿಕ ವಿದ್ಯಾಲಯದಲ್ಲಿ ಜರಗಲಿದೆ. ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್ ಇವರ ಮುಂದಾಳತ್ವದಲ್ಲಿ ಜರಗಲಿರುವ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ ನೆರವೇರಲಿರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪನ್ವೇಲ್ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಮಾಜಿ ಸಭಾಪತಿ, ನಗರ ಸೇವಕ ಸಂತೋಷ್ ಜಿ. ಶೆಟ್ಟಿಯವರು ಹಾಗೂ ಗೌರವ ಅತಿಥಿಯಾಗಿ ಪನ್ವೇಲ್ ನ ಮಾಜಿ ನಗರ ಸೇವಕಿ ಅನಿತಾ ಎಸ್. ಶೆಟ್ಟಿಯವರು ಉಪಸ್ಥಿತರಿರುವರು. ಈ ಕಾರ್ಯಕ್ರಮದ ನಿಮಿತ್ತ ಸಮಾಜ…

Read More

ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, ಟ್ರೈಲರ್ ಹಾಗೂ 2 ಹಾಡುಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಲಾಗಿದ್ದು ಈಗಾಗಲೇ ಜನಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದರು. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ.‌ ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿ.ಎನ್.ಆರ್ ಬ್ಯಾನರ್ ನ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್…

Read More

ಬದಲಾದ ಕಾಲ ಘಟ್ಟದಲ್ಲಿ ಬದಲಾವಣೆಗೆ ಹೊಂದಿಕೊಳ್ಳದೆ ಹೋದರೆ ವ್ಯಕ್ತಿ ಅಪ್ರಸ್ತುತನಾಗುತ್ತಾನೆ. ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತಾಂತ್ರಿಕ ಜ್ಞಾನ ಪಡೆದುಕೊಂಡು ಕ್ಷಮತೆಯನ್ನು ಹೊಂದುವುದು ಯಶಸ್ಸಿಗೆ ಅತ್ಯಗತ್ಯವಾಗಿದೆ ಎಂದು ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿಯ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15 ನೇ ಬ್ಯಾಚ್ ನ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16 ನೇ ಬ್ಯಾಚ್ ನ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು. ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ…

Read More

ಪುತ್ತೂರು ತಾಲೂಕು ಬಂಟರ ಸಂಘದ ಮಹಾಸಭೆಯು ಜೂನ್ 22 ರಂದು ಬೆಳಿಗ್ಗೆ 10.30 ರಿಂದ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದೆ. ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More