Author: admin
ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ,), ಮೂಡುಬಿದಿರೆ ಸಹಯೋಗದಲ್ಲಿ ನಡೆದ 2023-24 ಸಾಲಿನ ಎಸ್ಸಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಸ್ಕೌಟ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳಿಗೆ ಸೇವಾ ಮನೋಭಾವ,…
ಆತ್ಮಶಕ್ತಿ, ಮನೋಬಲದಿಂದ ಮುನ್ನುಗ್ಗಿದರೆ, ಭವಿಷ್ಯದಲ್ಲಿ ಮಹತ್ತರ ಸಾಧನೆ ಸಾಧಿಸಬಹುದು. ವಿದ್ಯೆಯ ಜೊತೆಗೆ ಛಲ ಹಾಗೂ ಆತ್ಮಸ್ಥೈರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ (ಜೂನ್18) ರಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಮಾರ್ಗದರ್ಶನದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ,, ಮತ್ತು ದೀಪಾ ಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ದೀಪ ಜ್ಯೋತಿ…
2023 ರ ಆಗಸ್ಟ್ 11ರಂದು ಕರಾವಳಿಯಾದ್ಯಂತ ಬಿಡುಗಡೆಗೊಂಡು ಸಾರ್ವಜನಿಕರ ಶ್ಲಾಘನೆಗೆ ಒಳಗಾಗಿ ಉತ್ತಮ ಪ್ರದರ್ಶನ ನೀಡಿದ ಶಿವಧ್ವಜ್ ಶೆಟ್ಟಿ ನಿರ್ದೇಶನದ ಕಲಾತ್ಮಕ ‘ಕೊರಮ್ಮ’ ತುಳು ಚಲನಚಿತ್ರ ಉತ್ತಮ ಚಲನಚಿತ್ರ, ಉತ್ತಮ ನಟ ಹಾಗೂ ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಜೂನ್ 16 ರಂದು ಮುಲ್ಕಿ ಸುಂದರರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಗಣ್ಯರು, ತುಳು ಚಿತ್ರರಂಗದ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು, ಗಾಯಕರು, ತಾಂತ್ರಿಕ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ನೃತ್ಯ, ಮನೋರಂಜನೆ, ಸಂಗೀತ ಮುಂತಾದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ನಡೆದ ‘ಕೋಸ್ಟಲ್ ಫಿಲ್ಮ್ ಅವಾರ್ಡ್ -2024’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ಶಿವಧ್ವಜ್ ಶೆಟ್ಟಿ, ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ನಿರ್ಮಾಪಕರಾದ ಈಶ್ವರಿದಾಸ್ ಶೆಟ್ಟಿ ಮತ್ತು ಅಡ್ಯಾರ್ ಮಾಧವ ನಾಯಕ್ ಹಾಗೂ ಉತ್ತಮ ನಟ ಪ್ರಶಸ್ತಿಯನ್ನು ಮೋಹನ್ ಶೆಣೈ ಸ್ವೀಕರಿಸಿದರು. ಕೆನಡ, ಆಸ್ಟ್ರೇಲಿಯದಲ್ಲಿ ಪ್ರದರ್ಶನ ಕಂಡ ಚಿತ್ರ ಸದ್ಯದಲ್ಲೇ ಮುಂಬಯಿ ಹಾಗೂ ದುಬಾಯಿಯಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರದರ್ಶನ ಕಂಡಲ್ಲೆಲ್ಲಾ…
ಫಾರ್ಚ್ಯೂನ್ ಅಕಾಡೆಮಿ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಆಡಳಿತಕ್ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜು ಮಾಬುಕಳ ಇದರ ವಾರ್ಷಿಕೋತ್ಸವಕ್ಕೆ ಜೂನ್ 2 ರಂದು ನಿವೃತ್ತ ಪ್ರಾಂಶುಪಾಲ ಡಾ.ಬಿ ಜಗದೀಶ್ ಶೆಟ್ಟಿಯವರು ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವಿವೇಕಾನಂದರ ಆದರ್ಶ ತತ್ತ್ವ ಹಾಗೂ ಮೌಲ್ಯ ಅಳವಡಿಸಿಕೊಂಡು, ಸಮಾಜದಲ್ಲಿ ಪ್ರಾಮಾಣಿಕ ವ್ಯಕ್ತಿಯಾಗಿ ಬೆಳೆಯಬೇಕು ಎಂದರು. ಫಾರ್ಚ್ಯೂನ್ ಅಕಾಡೆಮಿಕ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ದೈವಿಕ್ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಛೇರ್ಮನ್ ತಾರಾನಾಥ್ ಶೆಟ್ಟಿ ಅವರು ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಚೇತನಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ, ವಿದ್ಯಾರ್ಥಿ ನಾಯಕರಾದ ಕೋಟೇಶ್, ಎಂ.ವಿ. ಹರಿಕೃಷ್ಣ ಪ್ರಾಂಶುಪಾಲೆ ಸ್ಮಿತಾ ಮೋಲ್, ಉಪನ್ಯಾಸಕರಾದ ಅನುರಾಧಾ, ಅಂಬಿಕಾ, ಪ್ರೀತಿಕಾ ಇದ್ದರು. ಉಪನ್ಯಾಸಕಿ ಅಮಿಷಾ ಸ್ವಾಗತಿಸಿ, ವೀಣಾ ನಿರೂಪಿಸಿದರು. ಉಪನ್ಯಾಸಕ ಸುಕುಮಾರ್ ಶೆಟ್ಟಿಗಾರ್ ವಂದಿಸಿದರು.
ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು -ಎಕ್ಕಾರು ಘಟಕದ ಆಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ತಿಳಿಸಿದರು. ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಜೂನ್ 15, ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇದರ ವತಿಯಿಂದ ನಡೆಯುವ ಎರಡನೇ ವರ್ಷದ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಿರೀಶ್ ಶೆಟ್ಟಿ ಅಧ್ಯಕ್ಷರು, ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ವಹಿಸಿದ್ದರು. ಯಕ್ಷ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣಕ್ಕೆ ಸಂಬಂಧಿಸಿ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಿಸಲಾಯಿತು.ವೇದಿಕೆಯಲ್ಲಿ ಸುದೀಪ್ ಅಮೀನ್, ಎಕ್ಕಾರು ಘಟಕದ ಸಂಚಾಲಕರಾದ…
ಪುತ್ತೂರು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೇಮನಾಥ ಶೆಟ್ಟಿಯವರು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಡಿಸೆಂಬರ್ 21 1964 ರಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು, ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆವಿಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ಣ ಶಿಕ್ಷಣವನ್ನು ಅಭ್ಯಸಿಸಿದರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಬಿಎ ಪದವಿ ಶಿಕ್ಷಣವನ್ನು ಪಡೆದರು. ಎನ್. ಎಸ್. ಯು. ಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ,…
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮತ್ತು ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಸ್ವರೂಪ ಎನ್ ಶೆಟ್ಟಿರವರನ್ನು ನೇಮಕ ಮಾಡಲಾಗಿದೆ.
ವಿದ್ಯಾದೇವಿ ಸರಸ್ವತಿಯನ್ನು ಆರಾಧಿಸುವಂತಹ ಸಂಸ್ಕಾರವನ್ನು ಅಳವಡಿಸುವ ದೇಗುಲ ಆಗಬೇಕು. ಅದು ಈ ಪಲ್ಲಿಪ್ಪಾಡಿಯಲ್ಲಿ ನಿರ್ಮಾಣವಾಗಲಿದೆ. ಆದರ್ಶವಾಗಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾದೇಗುಲದಿಂದ ಹೊರಬರಲಿ ಎಂದು ಮಂಗಳೂರು ರಾಮಕೃಷ್ಣ ಮಠದ ಅಧಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ರವರು ತಿಳಿಸಿದರು. ಅವರು ಆದಿತ್ಯವಾರ ನಡೆದ ಬಂಟ್ವಾಳ ತಾಲೂಕಿನ ಪಲ್ಲಿಪಾಡಿಯಲ್ಲಿ ಪೊಳಲಿಯಲ್ಲಿರುವ ಶ್ರೀ ರಾಮಕೃಷ್ಣ ತಪೋವನದ ಆಶ್ರಯದಲ್ಲಿ ೬ ಎಕರೆ ಜಮೀನಿನಲ್ಲಿ ರೂ. ೭೫ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗುರುಕುಲ ಮಾದರಿಯ ‘ರಾಮಕೃಷ್ಣ ವಿದ್ಯಾದೇಗುಲ’ಕ್ಕೆ ಶಿಲಾನ್ಯಾಸ ಮಾಡಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿ ಒಳ್ಳೆಯ ಜವಾಬ್ದಾರಿ ಅರಿತ, ಒಳೆಯ ವ್ಯಕ್ತಿತ್ವ ಹೊಂದಿರುವ, ಉತ್ತಮ ಗುರಿಯನ್ನು ಹೊಂದಿರುವ ಒಂದು ಆಶಾ ಮನೋಭಾವ ಹೊಂದಿರುವ ವ್ಯಕ್ತಿಗಳನ್ನು ನಿರ್ಮಾಣ ಮಾಡುವ ವಿದ್ಯಾಭ್ಯಾಸ ಇಂದಿನ ಮಕ್ಕಳಿಗೆ ಸಿಗಬೇಕು. ಅದು ಈ ವಿದ್ಯಾದೇಗುಲದಿಂದ ನೆರವೇರಲಿ ಎಂದು ಹಾರೈಸಿದರು. ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿ ಪಾರಂಪರಿಕ ಭಾಷೆಯಾದ ಸಂಸ್ಕೃತ, ರಾಷ್ಟ್ರಭಾಷೆಯಾದ ಹಿಂದಿ, ಮಾತೃಭಾಷೆಯಾದ ಕನ್ನಡ ಮತ್ತು…
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣದ ಪ್ರಾರಂಭವು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಜರಗಿತು. ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್, ಯಕ್ಷಗಾನ ಕಲಾವಿದ ಸರಪ್ಪಾಡಿ ಅಶೋಕ್ ಶೆಟ್ಟಿ, ಯಕ್ಷ ಗುರುಗಳಾದ ಓಂ ಪ್ರಕಾಶ್, ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ, ಕಮಲಾಕ್ಷ, ಶಿಕ್ಷಕ ದೇವದಾಸ್ ಮತ್ತಿತರರು ಉಪಸ್ಥಿತರಿದ್ದರು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ ಶ್ರೀಪತಿ ಭಟ್ ನೆರವೇರಿಸಿದರು. ಡಾ ಎಂ ಮೋಹನ ಆಳ್ವರ ಧರ್ಮಪತ್ನಿ ದಿ.ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು, ಇದರ ಉದ್ಘಾಟನೆಯನ್ನು ಲಲಿತ ರಾಮಣ್ಣ ಶೆಟ್ಟಿ ಮತ್ತು ಜಯಶ್ರೀ ಅಮರನಾಥ್ ಶೆಟ್ಟಿ ನೇರವೇರಿಸಿದರು. ‘ಜಗನ್ಮೋಹನ’ದ ವಿಶೇಷತೆಗಳು: ಅತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ನೂತನ ಕಾಲೇಜು ಕಟ್ಟಡ -‘ಜಗನ್ಮೋಹನ’ದಲ್ಲಿ 68 ತರಗತಿ ಕೊಠಡಿಗಳಿದ್ದು, 3 ಭೌತಶಾಸ್ತ್ರದ ಲ್ಯಾಬ್, 3 ರಸಾಯಶಾಸ್ತ್ರದ ಲ್ಯಾಬ್ ಹಾಗೂ 2 ಜೀವಶಾಸ್ತ್ರದ ಲ್ಯಾಬ್ ಹಾಗೂ ಒಂದು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ನ್ನು ಹೊಂದಿದೆ. ವಿಶಾಲವಾದ ಸ್ಟಡಿಹಾಲ್ನ್ನು ಹೊಂದಿರುವ ಈ ಕಟ್ಟಡ, ಪ್ರತಿಧ್ವನಿ ಮುಕ್ತ…