Author: admin
ದ್ವೀಪದ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ “ಬಂಟ್ಸ್ ಬಹರೈನ್” ಸಂಘಟನೆ ಇದೀಗ ಯಶಸ್ವಿಯಾಗಿ ಎರಡು ದಶಕಗಳನ್ನು ಪೂರ್ಣಗೊಳಿಸಿದ್ದು ಇದೀಗ ಸಂಘಟನೆಯ ಇಪ್ಪತ್ತನೇ ವಾರ್ಷಿಕೋತ್ಸವಕ್ಕೆ ಕ್ಷಣಗಣನೆ ಪ್ರಾಂಭವಾಗಿದೆ. ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಾ ದ್ವೀಪದ ಬಂಟ ಬಾಂಧವರನ್ನು ತನ್ನ ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು ಸಂಘಟನೆಯ ಪ್ರಸಕ್ತ ಅಧ್ಯಕ್ಷರಾಗಿ ಸೌಕೂರು ಅರುಣ್ ಶೆಟ್ಟಿಯವರು ಕಾರ್ಯನಿರ್ವಹಿಸುತ್ತಿದ್ದು ಇವರ ಸಾರಥ್ಯದಲ್ಲಿ ಇದೆ ನವೆಂಬರ್ ತಿಂಗಳ 10ನೇ ತಾರೀಖಿನ ಶುಕ್ರವಾರದಂದು ಬೆಳಗ್ಗೆ 10:30ಕ್ಕೆ ಇಲ್ಲಿನ ಪಂಚತಾರಾ ಹೋಟೆಲ್ ”ಕ್ರೌನ್ ಪ್ಲಾಜಾ” ದ ಸಭಾಂಗಣದಲ್ಲಿ ಇಪ್ಪತ್ತನೆಯ ವಾರ್ಷಿಕೋತ್ಸವವನ್ನು ಅದ್ದೊರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕರೂ, ಕಾಪು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ನಾಡಿನ ಖ್ಯಾತ ಮೂಳೆ ತಜ್ಞ ಹಾಗೂ ಮುಂಬಯಿಯ ದೀಪಕ್ ಹಾಸ್ಪಿಟಲ್ ನ ಆಡಳಿತ ನಿರ್ದೇಶಕರಾಗಿರುವ ಡಾಕ್ಟರ್ ಭಾಸ್ಕರ್ ಶೆಟ್ಟಿಯವರು ವಿಶೇಷವಾಗಿ ದ್ವೀಪಕ್ಕೆ ಆಗಮಿಸಿ…
ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ 2 ನೇ ದಿನವಾದ ಮಂಗಳವಾರ ನಡೆದ ಹೈಸ್ಕೂಲ್ ವಿಭಾಗದ ಪಂದ್ಯಾಟದಲ್ಲಿ ಟಿ.ಎ ಪೈ ಪ್ರೌಢಶಾಲೆ ಉಡುಪಿ ಜಯ ಸಾಧಿಸಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ.ಎ ಉಡುಪಿ ಅಧ್ಯಕ್ಷ ಗೌತಮ್ ಶೆಟ್ಟಿ “ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗದೇ ಗೆದ್ದಾಗ ಹಿಗ್ಗದೆ, ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ” ಎಂದರು. ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು. ಉಪಾಂತ್ಯ ಪಂದ್ಯದಲ್ಲಿ ಗ್ರೀನ್ ಪಾರ್ಕ್ ಹಿರಿಯಡ್ಕ – ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು ಹಾಗೂ ಟಿ.ಎ.ಪೈ – ಸೈಲಸ್ ಉಡುಪಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ವೈದಿಕ್ ಶೆಟ್ಟಿ ಸಮಯೋಚಿತ ಆಟ – ಟಿ.ಎ ಪೈ ತಂಡ ಚಾಂಪಿಯನ್ ಫೈನಲ್ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಗ್ರೀನ್ ಪಾರ್ಕ್ ಹೈಸ್ಕೂಲ್ ಹಿರಿಯಡ್ಕ ಪವನ್ 34 ರನ್ ನೆರವಿನಿಂದ…
ಮುಂಬಯಿಯ ಚಿಣ್ಣರಬಿಂಬ ಸಂಸ್ಥೆಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಸಂಸ್ಥೆಯ ರೂವಾರಿ, ಮುಂಬಯಿಯ ಮಾಜಿ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಿದರು. ವಾಣಿಜ್ಯ ನಗರಿ ಮುಂಬಯಿಯಲ್ಲಿ ಕನ್ನಡ – ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಚಿಣ್ಣರ ಬಿಂಬ ತಂಡದ ಸದಸ್ಯರು ಶ್ರಮ ವಹಿಸುತ್ತಿದ್ದಾರೆ. ಸಾಮಾಜಿಕವಾಗಿ, ಸಾಂಸ್ಕೃತಿವಾಗಿ ಅನೇಕ ಮೈಲುಗಲ್ಲುಗಳನ್ನು ದಾಟಿ ಮುಂದುವರೆಯುತ್ತಿರುವ ಈ ಸಂಸ್ಥೆ ನಮ್ಮ ಮೌಲ್ಯಧಾರಿತ ಹಳೆಯ ಸಂಪ್ರದಾಯ, ಆಚಾರ ವಿಚಾರಗಳನ್ನು ಮಕ್ಕಳಿಗೆ ಮನದಟ್ಟು ಮಾಡುವ ವಿಷಯದಲ್ಲಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ವೃತ್ತಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗಲೇ ಪ್ರವೃತ್ತಿಯಲ್ಲಿ ಕಲಾಪೋಷಕರಾಗಿ ಗುರುತಿಸಿಕೊಂಡಿರುವ ಪ್ರಕಾಶ್ ಭಂಡಾರಿ ಅವರ ಪತ್ನಿ ರೇಣುಕಾ ಭಂಡಾರಿ, ಪುತ್ರಿಯರಾದ ಪೂಜಾ ಭಂಡಾರಿ, ನೇಹ ಭಂಡಾರಿ ಚಿಣ್ಣರ ಬಿಂಬದಲ್ಲಿ ಸಕ್ರಿಯರಾಗಿದ್ದಾರೆ. ವಿಜಯ್ ಕುಮಾರ್ ಶೆಟ್ಟಿ, ಸುರೇಂದ್ರ ಕುಮಾರ್ ಹೆಗ್ಡೆ, ಭಾಸ್ಕರ್ ಶೆಟ್ಟಿ, ವಿನೋಧಿನಿ ಹೆಗ್ಡೆ, ಸತೀಶ್ ಸಾಲಿಯಾನ್ ಮತ್ತಿತರರ ಸಂಪೂರ್ಣ ಸಹಕಾರ ಚಿಣ್ಣರ ಬಿಂಬಕ್ಕಿದೆ.
ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಾಧ್ಯಮ ಕ್ಷೇತ್ರದ ಸಂಸ್ಥೆ ಸ್ಪೇಸ್ ಮೀಡಿಯಾ ಬೆಂಗಳೂರಿನ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ಪ್ರಶಸ್ತಿ -2023 ಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನಿಸಿದರು. ಸ್ಪೀಕರ್ ಯು.ಟಿ. ಖಾದರ್, ಎಸ್ ಡಿ ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಡಾ. ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಈ ಹಿಂದೆ ಕಿಶೋರ್ ಆಳ್ವ ಅವರು ಪ್ರತಿಷ್ಠಿತ ಬೆಂಗಳೂರು ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ನ( ಬಿಸಿಐಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾಭಿವೃದ್ಧಿಗೆ ಶ್ರಮಿಸಿದ್ದರು. ಪ್ರತಿಷ್ಟಿತ ಕೊಜೆಂಟ್ರಿಕ್ಸ್ ಚೈನಾ ಲೈಟ್ ಆಂಡ್ ಪವರ್, ಯುನೋಕಾಲ್ ಎಂಬ ಪ್ರತಿಷ್ಠಿತ ಸಂಸ್ಥೆಗಳಿಗೆ ಹಿರಿಯ ಸಲಹೆಗಾರರಾಗಿ ಕೈಗಾರಿಕಾಭಿವೃದ್ಧಿಗೆ ಕಿಶೋರ್ ಆಳ್ವ ಅವರು ಕೈಜೋಡಿಸಿದ್ದಾರೆ. ತಮ್ಮ ವಿದ್ಯಾರ್ಥಿ ದೆಸೆಯಲ್ಲೂ ಸಹ ಕಿಶೋರ್ ಆಳ್ವ…
‘ನಂಬಿಕೆ ಇರಲಿ, ಮೌಢ್ಯಕ್ಕೆ ಬಲಿಯಾಗಬೇಡಿ’ ವಿದ್ಯಾಗಿರಿ: ಬದುಕಿನಲ್ಲಿ ನಂಬಿಕೆ ಇರಬೇಕು. ಆದರೆ, ಮೂಢನಂಬಿಕೆಗೆ ಬಲಿಯಾಗದಂತಹ ವೈಜ್ಞಾನಿಕ ಹಾಗೂ ವೈಚಾರಿಕ ಎಚ್ಚರಿಕೆ ಅವಶ್ಯ’ಎಂದು ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ‘ಮಾನಸಿಕ ಆರೋಗ್ಯ’ ಕುರಿತು ಮಾತನಾಡಿದರು. ಬದುಕಿಗೆ ನಂಬಿಕೆ ಬೇಕಾಗುತ್ತದೆ. ಆದರೆ, ಅದೇ ನಂಬಿಕೆಯನ್ನು ವ್ಯಾವಹಾರಿಕವಾಗಿ ಬಳಸುವ, ದುರುಪಯೋಗ ಪಡಿಸುವ ಮೂಢನಂಬಿಕೆಗಳಿಗೆ ಬಲಿಯಾಗಬೇಡಿ. ಎಲ್ಲವನ್ನೂ ತಾರ್ಕಿಕವಾಗಿ ಯೋಚಿಸಿ ಎಂದರು. ದೇವರು ಯಾವತ್ತೂ ಲಂಚ ಕೇಳುವುದಿಲ್ಲ. ಕೆಡುಕನ್ನು ಬೋಧಿಸುವುದಿಲ್ಲ. ವೈಭೋಗ ಬಯಸುವುದಿಲ್ಲ. ದೇವರ ಹೆಸರಲ್ಲಿ ಮೋಸ ಮಾಡುವವರ ಬಗ್ಗೆ ಸದಾ ಎಚ್ಚರಿಕೆ ಇರಲಿ ಎಂದರು. ಬದುಕಿನಲ್ಲಿ ಆತ್ಮವಿಶ್ವಾಸ ಇರಬೇಕು. ಕೀಳರಿಮೆಯನ್ನು ದೂರ ಮಾಡಬೇಕು. ಒತ್ತಡ ಮುಕ್ತ ಬದುಕು ಜೀವಿಸಲು ಉತ್ತಮ ಜೀವನಶೈಲಿ ಹೊಂದಬೇಕು ಎಂದು ಅವರು ಸಲಹೆ ನೀಡಿದರು. ವಾಸ್ತವಿಕವನ್ನು ಒಪ್ಪಿಕೊಳ್ಳಬೇಕು. ಭವಿಷ್ಯದ ಬಗ್ಗೆ ಭರವಸೆ ಬೇಕು. ಯಾರದೇ ಜೊತೆ ಹೋಲಿಕೆಯ ಅಥವಾ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್‍ಗೆ …29ನೇ ವರ್ಷವಾಗಿದ್ದು ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು ‘ಆಳ್ವಾಸ್ ವಿರಾಸತ್ 2023’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. ‘ಆಳ್ವಾಸ್ ವಿರಾಸತ್ 2023’ ಕ್ಕೆ ದಿನಾಂಕ ನಿಗದಿಯಾಗಿದ್ದು ಡಿಸೆಂಬರ್ 14ರಂದು ಪ್ರಾರಂಭವಾಗಿ 17ರಂದು ಮುಕ್ತಾಯಗೊಳ್ಳಲಿದೆ. ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ. ಪ್ರತಿದಿನ ಮುಸ್ಸಂಜೆ 6.00 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳುತ್ತವೆ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ವಿ ರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಇದು ಬೃಹತ್ ವೇದಿಕೆಯಿದಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂಥಾ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಡಿಸೆಂಬರ್ 14,…
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ನವಂಬರ್ 11 ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಿ.ಇ, ಯಕ್ಷಮಿತ್ರರು ಸಂಸ್ಥೆಯ ಅಧ್ಯಕ್ಷ ಜಗದೀಪ್ ಶೆಟ್ಟಿ, ಪೆರ್ಮುದೆ ದಿವ್ಯರೂಪ ಕನ್ ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಯಾದವ ಕೋಟ್ಯಾನ್, ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಶಕುಂತಳಾ ರಮಾನಂದ ಭಟ್, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಪುಂಡಲೀಕ ಹೊಸಬೆಟ್ಟು, ಸಹನಾ ರಾಜೇಶ್ ರೈ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜಿ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಬಾಳ ಜಗನ್ನಾಥ ಶೆಟ್ಟಿ, ಕೇಸರಿ ಪೂಂಜ, ಯಕ್ಷಸಿರಿ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಅವರನ್ನು ಗೌರವಿಸಲಾಗುವುದು.…
ತುಳುನಾಡಿನ ಕಾರ್ಕಳ ಸೀಮೆಯ ಒಂದು ಹಳ್ಳಿಯಲ್ಲಿ ಕಲ್ಲು ಕುಟಿಗ ಜನಾಂಗದ ಶಿಲ್ಪಿಗಳ ತುಂಬು ಸಂಸಾರವೊಂದಿತ್ತು. ಮನೆಯ ಯಜಮಾನ ಶಂಬು ಕಲ್ಕುಡ ಅಪ್ರತಿಮ ಶಿಲ್ಪಿಯಾಗಿದ್ದನು. ಶ್ರವಣ ಬೆಳಗೋಳದಲ್ಲಿ ಸುಂದರವಾದ ಬಾಹುಬಲಿ ಮೂರ್ತಿಗೆ ಜನ್ಮ ನೀಡಿದ ಶಂಬು ಕಲ್ಕುಡ ಅಲ್ಲಿಯ ಅರಸರ ಚದುರಂಗದ ಆಟದಿಂದ ಹೊರ ಬರಲಾರದೆ ಕೀರ್ತಿಶೇಷನಾಗುತ್ತಾನೆ. ಮುಂದೆ ಇಂತಹ ಮೂರ್ತಿ ಇನ್ನೆಲ್ಲಿಯೂ ತಲೆ ಎತ್ತಬಾರದು ಅನ್ನುವ ಅಸೂಯ ಭಾವನೆ ಶಂಬು ಕಲ್ಕುಡನ ಸಾವಿನಲ್ಲಿ ಅಂತ್ಯಗೊಂಡಿತ್ತು. ತಾನು ಕೆತ್ತಿದ ಮೂರ್ತಿಯಿಂದಲೇ ತನಗೆ ಮರಣವಾಯಿತು ಇನ್ನೆಂದಿಗೂ ನಮ್ಮ ಮಕ್ಕಳನ್ನು ಹಣ ಅಥವಾ ಕೀರ್ತಿಯ ಆಸೆಗೆ ಮಕ್ಕಳನ್ನು ಅರಸರ ಬಳಿಗೆ ಮೂರ್ತಿ ಕೆತ್ತಲು ಕಳುಹಿಸದಂತೆ ಸಾಯುವ ಕಾಲಕ್ಕೆ ತನ್ನ ಹೆಂಡತಿಯಾದ ಈರಮ್ಮಳಿಗೆ ಚಾರನ ಕೈಯಲ್ಲಿ ಹೇಳಿ ಕಳುಹಿಸಿದ್ದ. ತುಂಬು ಸಂಸಾರ. ಬಡತನ ಮನೆಯಲ್ಲಿ ಸೆರಗು ಹಾಕಿ ಮಲಗಿಕೊಂಡಿತ್ತು. ಮನೆಯ ಆಧಾರ ಸ್ತಂಬ ಕಳಚಿ ಬಿದ್ದಾಗ ಒಪ್ಪತ್ತಿನ ಊಟಕ್ಕೂ ತಾತ್ವರ ಉಂಟಾಗುತ್ತದೆ. ಆರನೆ ಮಗ ಬೀರನಿಗೆ ಅಪ್ಪ ಶಂಬು ಕಲ್ಕುಡ ತನ್ನೆಲ್ಲಾ ಶಿಲ್ಪಿ ವಿದ್ಯೆಯನ್ನು ಧಾರೆಯೆರೆದು ತನ್ನ…
ಕನ್ನಡವನ್ನು ಹೆಚ್ಚು ಬಳಕೆ ಮಾಡುವ ಮೂಲಕ ಅದರ ಬೆಳವಣಿಗೆಗೆ ಪಣ ತೊಡಬೇಕಾಗಿದೆ ಎಂದು ಹಿರಿಯ ಸಾಹಿತಿ ಡಾ. ಇಂದಿರಾ ಹೆಗ್ಡೆ ಹೇಳಿದರು. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ರಾಜ್ಯೋತ್ಸವ ಸಂದೇಶ ನೀಡಿ, ಭಾಷಾ ವಾತ್ಸಲ್ಯವನ್ನು ರೂಢಿಸಿಕೊಳ್ಳುವುದು ಅಗತ್ಯ ಎಂದರು. ಇದೇ ಸಂದರ್ಭ ಹಿರಿಯ ನಾಟ್ಯಗುರು, ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಚಾರ್ಯ ಉಳ್ಳಾಲ ಮೋಹನ್ ಕುಮಾರ್ ಅವರಿಗೆ ರಾಜ್ಯೋತ್ಸವ ಗೌರವ ಪ್ರಧಾನ ಮಾಡಿ ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಶಾರದಾ ವಿದ್ಯಾಲಯದ ಮುಖ್ಯಸ್ಥ ಪ್ರೊ ಎಂ.ಬಿ ಪುರಾಣಿಕ್, ಕರಾವಳಿ ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳ್ಯಾರ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಡಾ. ಅಣ್ಣಯ್ಯ ಕುಲಾಲ್, ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಮಾನ್ವಿ, ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಗೌರವಾಧ್ಯಕ್ಷ ಅಬ್ದುಲ್ಲಾ…
ಆರೋಗ್ಯ ಚೆನ್ನಾಗಿದ್ದರೆ ಎಲ್ಲವೂ ಇದ್ದಂತೆ. ಹಣ ಆಸ್ತಿ ಸಂಪಾದನೆಕ್ಕಿಂತ ಆರೋಗ್ಯವಂತರಾಗಿ ಬದುಕುವುದೇ ದೊಡ್ಡ ಸಂಪತ್ತು. ಅದಕ್ಕಿಂತ ಮಿಗಿಲಾದದು ಇನ್ನೊಂದಿಲ್ಲ ಎಂದು ಶತಾಯುಶಿ ಹುತ್ರುರ್ಕೆ ಪುಟ್ಟಣ್ಣ ಶೆಟ್ಟಿ ಹೇಳಿದರು. ಅವರು ನವೆಂಬರ್ 5 ರಂದು ಹೆಬ್ರಿ ಅಜೆಕಾರು ವಲಯ ಬಂಟರ ಸಂಘದ ನೇತೃತ್ವದಲ್ಲಿ ಹಿರಿಯ ಬಂಟರ ಬಾಂಧವ್ಯ ಕಾರ್ಯಕ್ರಮದ ಅಡಿಯಲ್ಲಿ ಹೆಬ್ರಿ ಹುತ್ತುರ್ಕೆ ಅವರ ನಿವಾಸದಲ್ಲಿ ಬಂಟರ ಸಂಘದ ವತಿಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಹಿರಿಯರನ್ನು ಪ್ರೀತಿಯಿಂದ ಗೌರವಿಸಿ : ನಮ್ಮಮನೆಯಲ್ಲಿರುವ ತಂದೆ, ತಾಯಿ, ಅಜ್ಜ, ಅಜ್ಜಿಯಂದಿರನ್ನು ಪ್ರೀತಿಯಿಂದ ಮಾತನಾಡಿಸುವುದರ ಜತೆ ಗೌರವಿಸಿ. ಅದಕ್ಕಿಂತ ದೊಡ್ಡ ಕೊಡುಗೆ ಇನ್ನೊಂದಿಲ್ಲ. ತಮ್ಮಮಕ್ಕಳು ಮೊಮ್ಮಕ್ಕಳಿಂದ ಹಿರಿಯರು ಅಪೇಕ್ಷೆ ಪಡುವುದು ಇಷ್ಟೇ. ಈ ನಿಟ್ಟಿನಲ್ಲಿ ಹೆಬ್ರಿ ಬಂಟರ ಸಂಘದಿಂದ ಪ್ರತಿ ತಿಂಗಳ ಮೊದಲ ಭಾನುವಾರ ಸಂಘದ ವ್ಯಾಪ್ತಿಯ ಹಿರಿಯ ಬಂಟರ ಮನೆಗೆ ತೆರಳಿ ಅವರೊಂದಿಗೆ ಪ್ರೀತಿಯಿಂದ ಮಾತನಾಡಿಸಿ ಗೌರವಿಸುವ ಹಿರಿಯ ಬಂಟರ ಬಾಂದವ್ಯ ಕಾರ್ಯಕ್ರಮ ಇದಾಗಿದೆ ಎಂದು ಹೆಬ್ರಿ ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಸೀತಾನದಿ…