Author: admin

ಮೂಡುಬಿದಿರೆ: ಮಹಾರಾಷ್ರ್ಟದ ಪರ್ಭಾನಿನಲ್ಲಿ ಮಾರ್ಚ್ 10 ರಂದು ನಡೆದ ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ 2024 ರಲ್ಲಿ ಮಂಗಳೂರು ವಿವಿಯು ಮಹಿಳೆ ಮತ್ತು ಪುರುಷ ಎರಡು ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಬಾಕ್ಸ್: ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಪುರುಷ ಮತ್ತು ಮಹಿಳೆಯರ 12 ಜನರ ತಂಡದಲ್ಲಿ 10 ಜನ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಮಂಗಳೂರು ವಿವಿಯು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಲು ಈ ಹತ್ತು ಜನ ಕ್ರೀಡಾಪಟುಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ವೈಯಕ್ತಿಕ ನೆಲೆಯಲ್ಲಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಸ್ಥಾನ ಪಡೆದ ಎಂಟು ಜನ ವಿದ್ಯಾರ್ಥಿಗಳು ಆಳ್ವಾಸ್ ನ ವಿದ್ಯಾರ್ಥಿಗಳಾಗಿದ್ದಾರೆ. ಅಖಿಲ ಭಾರತ ಅಂತರ್ ವಿವಿ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ ನಲ್ಲಿ ಮಂಗಳೂರು ವಿವಿಯು 51 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟ ಪಡೆದರೆ 61 ಅಂಕಗಳೊಂದಿಗೆ ರಾಜಸ್ಥಾನ ವಿವಿಯು…

Read More

ಜಯಪ್ರಕಾಶ್ ಹೆಗ್ಡೆಯವರು ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ರಾಜ್ಯ ಸರ್ಕಾರದಿಂದ ಒಂದೂವರೆ ಕೋಟಿ ರೂಪಾಯಿ ಅನುದಾನ ಮಂಜೂರಾಗುವಂತೆ ಪತ್ರ ಬರೆದಿದ್ದು ಸಿದ್ದರಾಮಯ್ಯ ಸರ್ಕಾರ ಒಂದೂವರೆ ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದೆ. ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನಲ್ಲಿ ನಡೆದ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಸಂದರ್ಭದಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ಹಣ ಬಿಡುಗಡೆ ಮಾಡಿಸಿಕೊಡುವಂತೆ ಕೆ.ಜಯಪ್ರಕಾಶ್ ಹೆಗ್ಡೆಯವರಲ್ಲಿ ವಿನಂತಿಸಿಕೊಳ್ಳಲಾಗಿತ್ತು. ಅದನ್ನು ತಮ್ಮ ಪತ್ರದಲ್ಲಿ ಪ್ರಸ್ಥಾಪಿಸಿ ಮುಖ್ಯಮಂತ್ರಿಗಳಿಗೆ ಹೆಗ್ಡೆಯವರು ಪತ್ರವನ್ನು ಬರೆದಿದ್ದು ಸರ್ಕಾರ ಅದಕ್ಕಾಗಿ ಹಣವನ್ನೂ ಮಂಜೂರು ಮಾಡಿದೆ. ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸ್ಥಾಪನೆಯಾಗಲೂ ಕೂಡ ಜಯಪ್ರಕಾಶ್ ಹೆಗ್ಡೆಯವರೇ ಕಾರಣರಾಗಿದ್ದರು ಎನ್ನುವುದನ್ನು ಇಲ್ಲಿ ಸ್ಮರಿಸಲೇಬೇಕಿದೆ. -ವಸಂತ್ ಗಿಳಿಯಾರ್

Read More

ಇದೇ ಬರುವ ಮಾರ್ಚ್ 10 2024 ರಂದು ಭಾನುವಾರ ಪ್ರೊ.ರಾಮಕೃಷ್ಣ ಆಡಿಟೋರಿಯಂ ಚಿಂಚ್ವಾಡ ಪುಣೆ ಇಲ್ಲಿ ಅಪರಾಹ್ನ 3 ಗಂಟೆಗೆ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಅವರ ಅಧ್ಯಕ್ಷತೆಯಲ್ಲಿ ಬಂಟರ ಸಂಘ ಪಿಂಪ್ರಿ ಚಿಂಚ್ವಾಡ ಇದರ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅದ್ದೂರಿಯಿಂದ ಜರಗಲಿದೆ. ಅಂದಿನ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹೇರಂಬ ಇಂಡಸ್ಟ್ರೀಸ್ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ದಾದ್ರಾ ಹವೇಲಿ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ರಜನಿ ಗೋವಿಂದ ಶೆಟ್ಟಿ ಇವರುಗಳು ಉಪಸ್ಥಿತರಿರುವರು. ಸಂಘದ ಪ್ರತಿಭಾವಂತ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು ಪುಣೆ ಪರಿಸರದ ನಗರಗಳ ಬಂಟ ಬಾಂಧವರು ಸಕುಟುಂಬ ಪರಿವಾರ ಸಹಿತ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ, ಪದಾಧಿಕಾರಿಗಳು, ಮಹಿಳಾ ವಿಭಾಗದ ಹಾಗೂ ಯುವ ವಿಭಾಗದ ಉಪಸಮಿತಿ ಪದಾಧಿಕಾರಿಗಳು,…

Read More

ಇಲ್ಲಿ ನೆಲೆಸಿರುವ ಕರ್ನಾಟಕದ ಸದಸ್ಯರು ಹಾಗೂ ಅವರ ಪರಿವಾರದವರಿಗಾಗಿ ವಿಹಾರ ಕೂಟವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ವಿಹಾರ ಕೂಟದಲ್ಲಿ ನೂರಾರು ಸದಸ್ಯರು ಆಸಕ್ತಿಯಿಂದ ತಮ್ಮ ಪರಿವಾರ ಸಮೇತ ಭಾಗಿಯಾಗಿ ಬೆಳಗ್ಗಿನಿಂದ ಸಂಜೆಯವರೆಗೂ ಸಂಭ್ರಮಿಸಿದರು. ಸರ್ವೋತ್ತಮ ಶೆಟ್ಟಿ ಅವರ ಸಾರಥ್ಯದಲ್ಲಿ ಅಬುಧಾಬಿ ಕರ್ನಾಟಕ ಸಂಘದ ಪದಾಧಿಕಾರಿಗಳೆಲ್ಲಾ ಒಂದಾಗಿ ಸುಮಾರು ಐದು ವರುಷಗಳ ಅನಂತರ ಈ ವಿಹಾರ ಕೂಟವನ್ನು ಏರ್ಪಡಿಸಿದ್ದರು. ಬಸ್ ಪ್ರಯಾಣದ ಮೂಲಕ ಅಲ್ ಐನ್ ಪರಿಸರದಲ್ಲಿರುವ ಹಿಲ್ ಪಾರ್ಕ್ ನಲ್ಲಿ ಎಲ್ಲರೂ ಒಂದಾಗಿ ಒಂದೇ ಪರಿವಾರವೆಂಬಂತೆ ನಲಿದು ಸಂಭ್ರಮಿಸಿದರು. ರುಚಿಕರವಾದ ತಿಂಡಿ- ತಿನಿಸುಗಳು, ಊಟ ಮಾತ್ರವಲ್ಲದೇ ಜಾನಪದ ನೃತ್ಯ, ರಸ ಪ್ರಶ್ನೆ, ಮನೋರಂಜನಾತ್ಮಕವಾದ ಆಟೋಟ ಸ್ವರ್ಧೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಿದ್ದು ಎಲ್ಲರೂ ಈ ಚಟುವಟಿಕೆಗಳಲ್ಲಿ ಭಾಗಿಯಾಗಿ ಬೆಳಗ್ಗಿನಿಂದ ಸಂಜೆಯವರೆಗೂ ಸಂತೋಷದಿಂದ ಕಾಲ ಕಳೆದರು. ಚಳಿಗಾಲದಲ್ಲಿ ತುಂತುರು ಮಳೆ ಕೂಡ ಬರುತಿದ್ದರೂ ಸದಸ್ಯರ ಉತ್ಸಾಹಕ್ಕೇನೂ ಕೊರತೆಯಿರಲಿಲ್ಲ. ತಮ್ಮ ತಾಯ್ನಾಡಿನಿಂದ ಸಾವಿರಾರು ಮೈಲು ದೂರವಿದ್ದರೂ ಒಂದೇ ಕುಟುಂಬದಂತೆ ಬೆರೆತು ಒಂದಷ್ಟು ಸಮಯ ಸಂತೋಷವಾಗಿ ಕಾಲ ಕಳೆಯಲು…

Read More

ಶ್ರೀ ದುರ್ಗಾಂಬಿಕಾ ಅಮ್ಮನವರ ದೇಗುಲದಲ್ಲಿ ನಡೆಯಲಿರುವ 63 ನೇ ವರ್ಷದ ಏಕಾಹ ಭಜನೋತ್ಸವ ಸಮಿತಿ ಅಧ್ಯಕ್ಷರಾಗಿ ಕಿಶನ್ ಕುಮಾರ್ ರೈ ಪೆರಿಯಡ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್. ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಕೇಶ್ ಪೆಲತ್ತೋಡಿ ಹಾಗೂ ಕೋಶಾಧಿಕಾರಿಯಾಗಿ ಸೀತಾರಾಮ ಗೌಡ ಎ. ಆಯ್ಕೆಯಾದರು. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಜರಗಿದ ಆಯ್ಕೆ ಸಭೆಯಲ್ಲಿ ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಸುಂದರ ಗೌಡ ಮಂಡೆಕರ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಭಜನಾ ಮಂಡಳಿ ಅಧ್ಯಕ್ಷ ಸೋಮಪ್ಪ ನಾಯ್ಕ್, ಶ್ರೀ ಶ್ರೀಕಂಠ ಸ್ವಾಮಿ, ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ್ ಮೇಲಿನ ಮನೆ, ಉಪನ್ಯಾಸಕ ವಿಶ್ವನಾಥ ರೈ ಪೆರ್ಲ, ಪ್ರಮುಖರಾದ ಪ್ರಕಾಶ್ ಎನ್.ಕೆ., ಅಶೋಕ್ ಕುಮಾರ್ ಪಿ, ಸೀತಾರಾಮ ಗೌಡ ಎ., ಸುಂದರ ಗೌಡ ಎ., ಶ್ರೀ ಕೃಷ್ಣ…

Read More

ಭಾರತ ಸರಕಾರ ಸ್ವಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಹೈವೇ ಇಂಜಿನೀಯರ್, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ ಹರ್ಷಕುಮಾರ್ ರೈ ಮಾಡಾವು ನೇಮಕಗೊಂಡಿರುತ್ತಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆರ್ಕಿಟೆಕ್ಟ್ ಮತ್ತು ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಬ್ರೈಟ್ ಇಂಡಿಯಾ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದಾರೆ. ಇಂಡಿಯನ್ ರೋಡ್ ಕಾಂಗ್ರೆಸ್ 1934 ಇಸವಿಯಲ್ಲಿ ಸ್ಥಾಪನೆಗೊಂಡಿದ್ದು ನವದೆಹಲಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿದೆ. ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಹೊಸ ಹೊಸ ವಿನ್ಯಾಸ ಮತ್ತು ತಂತ್ರಜ್ಞಾನ ಅನುಷ್ಠಾನಗೊಳಿಸುವುದು ಹಾಗೂ ರಸ್ತೆಯ ಬಗ್ಗೆ ಸಂಶೋಧನೆ ನಡೆಸಿ, ತಾಂತ್ರಿಕ ಬದಲಾವಣೆ ತರುವಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಲಹೆ ಸೂಚನೆ ನೀಡುವ ಜವಾಬ್ದಾರಿ ನಿರ್ವಹಿಸುತ್ತಿದೆ.

Read More

ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಶೃದ್ಧಾ ಕೇಂದ್ರಗಳಲ್ಲಿ ಅರಳಿ, ರುದ್ರಾಕ್ಷಿ, ಪಾರಿಜಾತ, ಬಿಲ್ವಪತ್ರೆ, ಶಮಿ ಮುಂತಾದ ದೇವವೃಕ್ಷಗಳ ಗಿಡಗಳ ನೆಡುವ ಅಭಿಯಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು. ಶ್ರೀ ಕ್ಷೇತ್ರದ ಉದ್ಯಾನವನದಲ್ಲಿ ರುದ್ರಾಕ್ಷಿ ಗಿಡವನ್ನ ನೆಟ್ಟು ಮಾತನಾಡಿದ ಹೆಗ್ಗಡೆಯವರು ಭಾರತ ದೇಶ ಬೆಟ್ಟ, ಗುಡ್ಡ, ಗಿಡ, ಮರ ಹೀಗೆ ಪ್ರತಿಯೊಂದರಲ್ಲಿಯೂ ಮುಖ್ಯವಾಗಿ ಪ್ರಕೃತಿಯಲ್ಲೇ ದೇವರನ್ನು, ದೈವತ್ವವನ್ನು ಕಂಡು ಆರಾಧಿಸಿದ ಪರಂಪರೆ ಇರುವ ದೇಶ, ಈ ನಿಟ್ಟಿನಲ್ಲಿ ಪ್ರತೀ ಶ್ರದ್ಧಾ ಕೇಂದ್ರಗಳಲ್ಲಿಯೂ ದೇವವೃಕ್ಷಗಳ ಗಿಡಗಳನ್ನ ನೆಡುವ ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಯೋಚನೆ ಶ್ಲಾಘನಾರ್ಹ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಶೆಟ್ಟಿ ಗಿಳಿಯಾರು, ಹೆಗ್ಗಡೆಯವರ ಆಪ್ತಕಾರ್ಯದರ್ಶೀ ಎ.ವಿ. ಶೆಟ್ಟಿ, ಧನಕೀರ್ತಿ ಅರಿಗ, ಸಂದೀಪ್ ರೈ ಧರ್ಮಸ್ಥಳ, ಟೀಮ್ ಅಭಿಮತದ ಸಂಯೋಜಕರಾದ ರಾಘವೇಂದ್ರ ರಾಜ್ ಸಾಸ್ಥಾನ, ಜೀವನ್ ಶೆಟ್ಟಿ ಅಯೋಧ್ಯಾ, ಶರತ್ ಶೆಟ್ಟಿ ವಡ್ಡರ್ಸೆ, ನಿಖಿಲ್ ನಾಯಕ್ ತೆಕ್ಕಟ್ಟೆ, ಸಂದೀಪ್ ದೇವ್…

Read More

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.1೦ರಂದು ಬೆಳಗ್ಗೆ 9.3೦ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರು ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ, ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್. ಇವರುಗಳು ಪ್ರೆಸ್‌ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ. ನಟ, ನಿರ್ದೇಶಕ ನಟ ದೇವದಾಸ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ. ವೈ.ಭರತ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪ್ರೆಸ್‌ಕ್ಲಬ್ ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ…

Read More

ವಿದ್ಯಾಗಿರಿ (ಮೂಡುಬಿದಿರೆ): ಅಡುಗೆ ಮನೆಯಿಂದ ಯುದ್ಧಭೂಮಿವರೆಗೆ ಸಾಮಥ್ರ್ಯ ಪ್ರದರ್ಶಿಸಲು ಮಹಿಳೆ ಶಕ್ತಳು. ಆಕೆ ತನ್ನ ಸಾಮಥ್ರ್ಯವನ್ನು ಸಮರ್ಥ ಹಾಗೂ ಸಮಾಜಮುಖಿಯಾಗಿ ಬಳಸಿಕೊಳ್ಳಬೇಕು ಎಂದು ಬೆಂಗಳೂರು ಅದಮ್ಯ ಚೇತನ ಫೌಂಡೇಷನ್ ಸ್ಥಾಪಕಾಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ -2024 ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಕಾಲೇಜಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ)ದಲ್ಲಿ ಗುರುವಾರ ಹಮ್ಮಿಕೊಂಡ ‘ಆಳ್ವಾಸ್ ಮಹಿಳಾ ವೇದಿಕೆಯ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಮತ್ತು ವೈವಿಧ್ಯಮಯ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಬ್ಬ ವ್ಯಕ್ತಿ ದಿನಕ್ಕೆ ಸುಮಾರು 700 ಕೆ.ಜಿ. ಆಮ್ಲಜನಕ ಬಳಸಿದರೆ, ಒಂದು ಮರ 100 ಕೆಜಿ ಉತ್ಪಾದಿಸುತ್ತದೆ. ಹೀಗಾಗಿ ಒಬ್ಬ ವ್ಯಕ್ತಿ ಬದುಕಲು ಏಳು ಮರಗಳ ಅವಶ್ಯಕತೆ ಇದೆ. ಆದರೆ, ಬೆಂಗಳೂರಿನಲ್ಲಿ 14 ಲಕ್ಷ ಮರಗಳಿದ್ದು, ಕೋಟಿಗೂ ಅಧಿಕ ಜನಸಂಖ್ಯೆ ಇದೆ. ಇದರ ತೀವ್ರತೆ ಅರಿತು ಸಸಿ ನೆಡುವ ಕಾರ್ಯಕ್ರಮವನ್ನು ಅದಮ್ಯ ಫೌಂಡೇಶನ್ ಹಾಕಿಕೊಂಡಿದೆ ಎಂದರು. …

Read More

ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಸಿನಿಮಾ ಕುರಿತು ಮಾಹಿತಿ ನೀಡಿದ ಚೇತನ್ ರೈ ಮಾಣಿ ಅವರು, “ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ.‌ ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿಎನ್ ಆರ್ ಬ್ಯಾನರ್ ನಲ್ಲಿ ನಿರ್ಮಿಸಿದ “ಆರಾಟ” ಕನ್ನಡ ಚಲನಚಿತ್ರಕ್ಕೆ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಬಂಡವಾಳ ಹೂಡಿದ್ದಾರೆ ಎಂದು ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಅವರು, ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದ್ದು ಕರಾವಳಿಯ ಜನಜೀವನಕ್ಕೆ ತೀರಾ ಹತ್ತಿರವಾಗಿದೆ. ಹಾಡುಗಳು ಚೆನ್ನಾಗಿದ್ದು ಸುಂದರವಾದ ಲೊಕೇಶನ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಜನರಿಗೆ ಸಂಪೂರ್ಣ ಮನೋರಂಜನೆ ನೀಡಲು…

Read More