Author: admin

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಘನ ಅಧ್ಯಕ್ಷತೆಯಲ್ಲಿ ಡಿಸೆಂಬರ್ 7 ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುಜರಾತಿನ ಸೂರತ್ ನ ಜೀವನ್ ಭಾರತಿ ಸಭಾಂಗಣ ನಾನ್ಪುರ ಇಲ್ಲಿ ನವೆಂಬರ್ 24ರಂದು ಒಕ್ಕೂಟದ ಮಹಾ ನಿರ್ದೇಶಕ, ಬರೋಡಾದ ಶಶಿಧರ ಶೆಟ್ಟಿ ಮತ್ತು ನಿರ್ದೇಶಕ ಅಂಕಲೇಶ್ವರದ ರವಿನಾಥ್ ಶೆಟ್ಟಿ, ಸ್ವಾಗತ ಸಮಿತಿಯ ಸಂಚಾಲಕ ರತ್ನಾಕರ್ ಶೆಟ್ಟಿ ಮುಂಡ್ಕೂರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೂರತ್ ನ ಶಿವರಾಮ ಶೆಟ್ಟಿ, ಅಂಕಲೇಶ್ವರದ ಅಜಿತ್ ಶೆಟ್ಟಿ, ಕರ್ನಾಟಕ ಸಂಘ ಸೂರತ್ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮತ್ತು ಭಾರತ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ, ಗುಜರಾತ್ ಬಂಟರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಹೋಟೆಲ್ ಉದ್ಯಮಿಗಳು, ಸಮಾಜ ಸೇವಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಕಾಶ್ಚಂದ್ರ ಶೆಟ್ಟಿ ಅವರು 2023- 24 ನೇ ಸಾಲಿನಲ್ಲಿ 1.06 ಲಕ್ಷ ಲೀಟರ್ ಹಾಲು ಪೂರೈಸಿದ್ದಾರೆ. ಮೇಕೋಡು ಸಂಘದ ಅಧ್ಯಕ್ಷರಾಗಿ 2022 ರಲ್ಲಿ ನೂತನ ಕಟ್ಟಡ, ಶೀತಲೀಕರಣ ಘಟಕ ಸ್ಥಾಪಿಸಿದ್ದರು. ಖಂಬದ ಕೋಣೆ ರೈತರ ಸೇ.ಸ ಸಂಘದ ಅಧ್ಯಕ್ಷರಾಗಿದ್ದು, ಇತ್ತೀಚೆಗಷ್ಟೇ ರಾಜ್ಯಮಟ್ಟದ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.

Read More

ದೇಶ ವಿದೇಶಗಳಲ್ಲಿ ಹೆಸರು ಗಳಿಸಿದ “ಧರ್ಮದೈವ” ಸಿನಿಮಾ ತಂಡದಿಂದ, ಇನ್ನೊಂದು ಬಹುನಿರೀಕ್ಷೆಯ ಕನ್ನಡ ತುಳು ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಡಾ.ಎಂ. ಮೋಹನ ಆಳ್ವ ಮೂಡುಬಿದಿರೆ ಅರ್ಪಿಸುವ, ಕೃಷ್ಣವಾಣಿ ಪಿಕ್ಚರ್ಸ್ ನವರ ಬಹು ನಿರೀಕ್ಷೆಯ ಕನ್ನಡ ತುಳು ಸಿನಿಮಾ ಧರ್ಮಚಾವಡಿ ಬಹುತೇಕ ತನ್ನ ಚಿತ್ರೀಕರಣವನ್ನು ಮುಗಿಸಿದ್ದು, ಇತ್ತೀಚೆಗೆ ನಡುಬೈಲು ಗುತ್ತು ಮನೆಯಲ್ಲಿ ಖ್ಯಾತ ಚಿತ್ರ ನಿರ್ಮಾಪಕ ನಿರ್ದೇಶಕ ಶಿವದೂತ ಗುಳಿಗೆ ಖ್ಯಾತಿಯ ವಿಜಯ ಕುಮಾರ್ ಕೊಡಿಯಾಲ್ ಬೈಲ್ ದೀಪ ಬೆಳಗಿಸಿ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಗತಿ ಸ್ಟಡಿ ಸೆಂಟರ್ ಸಂಚಾಲಕ ಗೋಕುಲ್ ನಾಥ್ ಪಿವಿ, ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಸಭೆಯ ಮಾಜಿ ಅಧ್ಯಕ್ಷ ಮಹಮ್ಮದಾಲಿ ಸಂಪ್ಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಕಥೆ ಬರೆದು ನಿರ್ದೇಶಿಸಿರುವ “ಧರ್ಮ ಚಾವಡಿ” ಕನ್ನಡ ತುಳು ಸಿನಿಮಾದ ನಿರ್ಮಾಪಕರು ನಡುಬೈಲು ಜಗದೀಶ್ ಅಮೀನ್, ಸಹ ನಿರ್ಮಾಣ ಸರಿತಾ…

Read More

ಮೂಡುಬಿದಿರೆ:  ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುಳು ಭಾಷೆಯು  ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯಂತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.   ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ.  ತುಳು ಭಾಷಿಕರು ತುಳು  ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು. ‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

Read More

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರವು ನವೆಂಬರ್ 24 ರಂದು ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ ಅನಸ್ತೇಷಿಯ ಸೀನಿಯರ್ ರೆಸಿಡೆಂಟ್ ಕೆ ಎಸ್ ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್ ಸೀನಿಯರ್ ರೆಸಿಡೆಂಟ್ ಡಿಪಾರ್ಟ್ಮೆಂಟ್ ಆಫ್ ಪ್ಯಾಥೋಲಜಿ ಕೆ ಎಸ್ ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು, ಯುವ ವಿಭಾಗದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಭಾ ವಿ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Read More

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು “ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ. ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಅಸಕ್ತಿಯುಳ್ಳ ಮಕ್ಕಳಿಗೆ ಹಿಮಾಲಯ ಪರ್ವತ ಏರಿದ ತೇನ್ ಸಿಂಗ್ ಮಾದರಿಯಾಗಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕ್ರೀಡಾ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಬೇಕು. ಡಾ| ರಮೇಶ್ ಶೆಟ್ಟಿಯವರ ಸಮರ್ಥವಾದ ನೇತೃತ್ವದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಸಂಸ್ಥೆ ಮುಂದಿನ ದಿನಗಳಲ್ಲಿ…

Read More

ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಈ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.

Read More

ವಿದ್ಯಾಗಿರಿ (ಮೂಡುಬಿದಿರೆ): ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ `ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು. ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು ಎಂದರು. ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17 ವರ್ಷವಾಗಿದೆ. ಆದರೆ, 76ನೇ…

Read More

‘ಯಕ್ಷಗಾನ ಕ್ಷೇತ್ರದಲ್ಲಿ ಸವ್ಯಸಾಚಿ ಎಂದು ಗುರುತಿಸಲ್ಪಟ್ಟ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಭಾಗವತರಾಗಿ, ಪ್ರಸಂಗಕರ್ತರಾಗಿ, ಹಿಮ್ಮೇಳ ಮುಮ್ಮೇಳಗಳ ಸಮರ್ಥ ಕಲಾವಿದರಾಗಿ ಮೆರೆದವರು. ಅವರು ಯಕ್ಷರಂಗದಲ್ಲಿ ಸರ್ವ ಸಾಧ್ಯತೆಗಳನ್ನು ಕಂಡರಸಿದ ಶೋಧಕರು. ಮನೆಯನ್ನೇ ಗುರುಕುಲವನ್ನಾಗಿಸಿ ನೂರಾರು ಶಿಷ್ಯರ ಮೂಲಕ ತಮ್ಮ ಯೋಚನೆಗಳನ್ನೆಲ್ಲಾ ಸಾಕಾರಗೊಳಿಸಿದ ದೊಡ್ಡ ಸಾಹಸಿ’ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ, ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆದ 12ನೇ ವರ್ಷದ ನುಡಿ ಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಅಂಗವಾಗಿ ಜರಗಿದ ‘ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾ ಕಾರ್ಯಕ್ರಮ’ದಲ್ಲಿ ಅವರು ಸಂಸ್ಮರಣ ಭಾಷಣ ಮಾಡಿ ಪೂಂಜರ ಸಾಧನೆಗಳನ್ನು ಸ್ಮರಿಸಿದರು. ‘ಸುಮಾರು 32 ಕನ್ನಡ ತುಳು ಪ್ರಸಂಗಗಳನ್ನು ಬರೆದ ಪೂಂಜರು ರಾಮಾಯಣದ ಉತ್ತರ ಕಾಂಡವನ್ನಾಧರಿಸಿ ರಚಿಸಿದ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More