Author: admin
‘ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಮತ್ತು ನಾಟಕಗಳು ಜನ ಜೀವನದಲ್ಲಿ ಹಾಸುಹೊಕ್ಕಾಗಿವೆ. ಇವೆರಡೂ ನಮ್ಮ ಸಂಸ್ಕೃತಿಯ ಉಸಿರು. ಮಠ ಮಂದಿರ ಮತ್ತು ಸಂಘ ಸಂಸ್ಥೆಗಳು ಅವುಗಳಿಗೆ ಇನ್ನಷ್ಟೂ ಪೋಷಣೆ ನೀಡುವ ಅಗತ್ಯವಿದೆ’ ಎಂದು ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹೇಳಿದರು. ಯಕ್ಷಾಂಗಣ ಮಂಗಳೂರು ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ 12ನೇ ವರ್ಷದ ನುಡಿ ಹಬ್ಬದಲ್ಲಿ ನ.16ರಂದು ಕೀರ್ತಿ ಶೇಷ ಅರ್ಥಧಾರಿಗಳಾದ ದಿವಂಗತ ಎ.ಕೆ ನಾರಾಯಣ ಶೆಟ್ಟಿ ಫರಂಗಿಪೇಟೆ ಮತ್ತು ಎ.ಕೆ ಮಹಾಬಲ ಶೆಟ್ಟಿ ಅವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡಿ ಅವರು ಆಶೀರ್ವಚನ ನೀಡಿದರು. ‘ಯಕ್ಷಗಾನ ಆಟ ಕೂಟಗಳಲ್ಲಿ ಮೆರೆದ ಹಿಂದಿನ ಕಲಾವಿದರು ಬದುಕಿರುವಾಗ ಮಾಡಿದ ಸಾಧನೆಗಳನ್ನು ನೆನಪಿಟ್ಟು, ಮುಂದಿನ ತಲೆಮಾರಿಗೆ ತಿಳಿಯಪಡಿಸುವುದು ಹಿರಿಯರ ಜವಾಬ್ದಾರಿ. ಯಕ್ಷಾಂಗಣದಂತಹ ಸಂಸ್ಥೆಗಳು ಅದಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಶ್ರೇಷ್ಠ…
ವಿದ್ಯಾಗಿರಿ (ಮೂಡುಬಿದಿರೆ): ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ನಿವೃತ್ತ ಸಹ ಪ್ರಾಧ್ಯಾಪಕ ಜಯವಂತ ಜಾಧವ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು. ನಳದಲ್ಲಿ ಮನೆ ಮನೆಗೆ ನೀರು ಬರುವಂತೆ, ದೃಶ್ಯ- ಶ್ರವ್ಯ ಮಾಧ್ಯಮ ಬರಲಿದೆ ಎಂದು ಕೆಲವು ದಶಕಗಳ ಹಿಂದೆ ತಜ್ಞರು ಭವಿಷ್ಯ ನುಡಿದಿದ್ದರು. ಆದರೆ, ಇಂದು ಸಂವಹನದ ಜೊತೆ ದೃಶ್ಯ-ಶ್ರವ್ಯ ಮಾಧ್ಯಮದ ರೂಪಕದಂತಿರುವ ‘ಮೊಬೈಲ್’ ನಮ್ಮ ಅಂಗೈಯನ್ನು ಆವರಿಸಿದೆ. ಅದರಿಂದ ಅಗಲುವಿಕೆ ಅಸಾಧ್ಯ ಅನಿಸಿದೆ ಎಂದು ಮಾರ್ಮಿಕವಾಗಿ ವಿವರಿಸಿದರು. ಡಿಜಿಟಲೈಸೇಷನ್ ಮತ್ತು ಮಿನಿಯೇಚರೈಸೇಶನ್ ಎಂಬ ಜಾಗತಿಕ ಪ್ರಕ್ರಿಯೆಯು ಇಂದು ಮೊಬೈಲ್ನಲ್ಲಿ ದೊಡ್ಡ ಗ್ರಂಥಾಲಯವನ್ನು, ಜಗತ್ತಿನ ಸಂಪರ್ಕವನ್ನು ನಿಮ್ಮದಾಗಿಸಿದೆ. ಮಾತಿನ ಭಾಷೆಗಿಂತ ವಿಭಿನ್ನವಾಗಿ ಸಿನಿಮಾ ಭಾಷೆ ಸಂವಹನ ಮಾಡುತ್ತಿದೆ ಎಂದರು. ಸಿನಿಮಾದ…
ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟವು ನವೆಂಬರ್ 22 ರಂದು ಬಹರೈನ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಡಾ| ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಕೆ ಪ್ರಕಾಶ್ ಶೆಟ್ಟಿಯವರು, ಬಂಟ ಸಮಾಜ ನನ್ನನ್ನು ಬೆಳಿಸಿದೆ. ಸಮಾಜದ ಮೇಲೆ ನನಗೆ ಋಣ ಇದ್ದು, ಅದನ್ನು ತೀರಿಸುವ ಕೆಲಸವನ್ನು ಜನಸೇವೆಯ ಮುಖಾಂತರ ಮಾಡುತ್ತಿದ್ದೇನೆ ಎಂದರು. ಈ ಸಂದರ್ಭದಲ್ಲಿ ಬಹರೈನ್ ಬಂಟರ ಸಂಘದ ಅಧ್ಯಕ್ಷರಾದ ನಿತಿನ್ ಶೆಟ್ಟಿ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಛೇರ್ಮನ್ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ, ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ, ಅಂತಾರಾಷ್ಟ್ರೀಯ ಕರಾಟೆ ಪಟು ವಸಂತ್ ಶೆಟ್ಟಿ ಹಾಗೂ ಬಹರೈನ್ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.
‘ಯಕ್ಷಗಾನದಲ್ಲಿ ನಮ್ಮ ಜೀವನ ಮೌಲ್ಯದ ಪಾಠವಿದೆ. ಆದ್ದರಿಂದ ಎಳೆಯ ಜನಾಂಗ ಅದರತ್ತ ಹೆಚ್ಚು ಆಸಕ್ತರಾಗುವ ಅಗತ್ಯವಿದೆ. ಕಲಿಯುವ ಮಕ್ಕಳನ್ನು ಶಾಲಾ ಹಂತದಲ್ಲೇ ಯಕ್ಷಗಾನದಲ್ಲಿ ತೊಡಗಿಸಲು ಪೋಷಕರು ಮುಂದಾಗಬೇಕು’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರು ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ 12ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2024’ ಅಂಗವಾಗಿ 4ನೇ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಕೌಶಲ್ಯ ಕನ್ಸ್ಟ್ರಕ್ಷನ್ಸ್ ನ ಜಿ.ಸುಂದರ ಆಚಾರ್ಯ ಬೆಳುವಾಯಿ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಯಕ್ಷಗಾನದ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಅವರ ಸಂಸ್ಮರಣೆ ಜರಗಿತು. ಸಂಸ್ಮರಣಾ ಭಾಷಣ…
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಮಾಸಿಕ ಸಭೆಯು ನವೆಂಬರ್ 21 ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾ ಪ್ರಸಾದ್ ರೈಯವರು ಮಾತನಾಡಿ, ಸದಸ್ಯರ ಪ್ರಯೋಜನಕ್ಕಾಗಿ ವ್ಯಾಜ್ಯಗಳನ್ನು, ಬಂಟರ ವೈವಾಹಿಕ ಮನಸ್ತಾಪಗಳನ್ನು ಸೌಹಾರ್ದಯುತವಾಗಿ ಮುಗಿಸುವ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಸಮಿತಿಯನ್ನು ತಾಲೂಕು ಸಮಿತಿಯಡಿಯಲ್ಲಿ ರಚನೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ಸಂಘಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ 1500 ಮಂದಿಗೆ ಬೇಕಾದ ಅಡುಗೆ ತಯಾರಿಕಾ ಪಾತ್ರೆಗಳು, ಹೆಚ್ಚುವರಿ ಸಿಸಿ ಕ್ಯಾಮರಾ, ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದೆಂದು ತೀರ್ಮಾನಿಸಲಾಯಿತು. ಸಂಘಕ್ಕೆ ಬರುವ ರಸ್ತೆಯನ್ನು ಸಾರ್ವಜನಿಕರ ಅನುಕೂಲವಾಗಿ ಅಗಲೀಕರಣಗೊಳಿಸುವುದು ಅಥವಾ ಏಕಮುಖ ರಸ್ತೆಯಾಗಿ ಪರಿವರ್ತಿಸುವರೇ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸುವುದು ಎಂದು ಚರ್ಚಿಸಲಾಯಿತು. ಸಂಘದ ದೀನದಲ್ಲಿರುವ ಸ್ಥಿರಾಸ್ತಿಯನ್ನು ಸರ್ವೆ ನಡೆಸಿ, ಒತ್ತುವರಿ ಕಂಡು ಬಂದಲ್ಲಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಜರಗಿಸುವುದು. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ತಂಡವು ಕುಂದಾಪುರದ ಭಂಡಾಕರ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್ಶಿಪ್ನಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ದ್ವಿತೀಯ ತಂಡ ಪ್ರಶಸ್ತಿ ಎಸ್.ಡಿ.ಎಮ್ ಬಿ ಬಿ ಎಮ್ ಮಂಗಳೂರು, ತೃತೀಯ ತಂಡ ಪ್ರಶಸ್ತಿ ಸೆಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ಪಡೆಯಿತು. 15ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ಕಾ ಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಈ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷ್ಮಿಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮೀಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ ಹಿರೇಮಠ್ (61 ಕೆಜಿ ವಿಭಾಗ), ಪವನ್ ಎಸ್ದೊ ಡ್ರಲ್ (102 ಕೆಜಿ ವಿಭಾಗ) ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸಪಕಲೆ ಸುನಿಲ್ ಅಶೋಕ್ (109ಕೆಜಿ ವಿಭಾಗ) ಬೆಳ್ಳಿ ಹಾಗೂ ಮಹಾನಭಾವ ಹರ್ಷಲ್ (61ಕೆಜಿ ವಿಭಾಗ) ಕಂಚಿನ ಪದಕ ಪಡೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿಸೆಂಬರ್ 7 ರಂದು ಮುಂಬಯಿಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ದುರ್ಗಾಪರಮೇಶ್ವರಿ ದೇವರಲ್ಲಿ ಪ್ರಾರ್ಥಿಸಿದರು. ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ ಸಂಕಲಕರಿಯ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ, ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ ಮುಂಡ್ಕೂರು, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೇಖ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಮಕ್ಕಳಿಗೆ ಯೋಗ್ಯ ಕಾಲದಲ್ಲಿ ಸೂಕ್ತ ಶಿಕ್ಷಣ ದೊರೆಯಬೇಕಾದರೆ ಅವರಿಗೆ ಅನುಕೂಲವಾಗುವ ಸಮೀಪ ಸೌಲಭ್ಯ ಇರುವ ಶಿಕ್ಷಣ ಸಂಸ್ಥೆಗಳ ಅಗತ್ಯವಿರುತ್ತದೆ. ಇಂಥಹ ಕೊರತೆಗಳನ್ನು ಮನಗಂಡ ಜಯಸೂರ್ಯ ರೈ ಅವರು ಇಂದಿನ ದಿನಮಾನಕ್ಕೆ ಅಗತ್ಯವಾದ ಆಂಗ್ಲ ಮಾಧ್ಯಮ ಶಾಲೆಯನ್ನು ಸ್ಥಾಪಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಕೊಡಿಸುವಲ್ಲಿ ಬಹು ಪ್ರಶಂಸನೀಯ ಕಾರ್ಯವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಾದೋಡಿ ಕರಿಯಪ್ಪ ರೈ ಮತ್ತು ಲಕ್ಷ್ಮಿ ಕೆ. ರೈ ದಂಪತಿಗೆ ಪುತ್ರರಾಗಿ ಜನಿಸಿದ ಜಯಸೂರ್ಯ ರೈ ಅವರು ಕಾಣಿಯೂರು ಬೆಳಂದೂರು ಹಾಗೂ ಬಾಳಿಲ ವಿದ್ಯಾಬೋಧಿನಿ ಶಿಕ್ಷಣ ಸಂಸ್ಥೆಯ ಮೂಲಕ ಪೂರೈಸಿ ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಮುಗಿಸಿದರು. ಕೃಷಿ ಹಾಗೂ ಬೇಸಾಯ ಕಾರ್ಯದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಪರಿಸರದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ವಿದ್ಯುತ್ ಪೂರೈಕೆ ವ್ಯವಸ್ಥೆ, ರೈಲ್ವೆ ನಿಲ್ದಾಣ, ಬಸ್ಸು ತಂಗುದಾಣ, ರಸ್ತೆ ನಿರ್ಮಾಣ ಇತ್ಯಾದಿ ಸಾಮಾಜಿಕ ಕಾರ್ಯಗಳಲ್ಲಿ ಒಲವು ತೋರಿಸಿ ಓರ್ವ…















