Author: admin

ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ| ಎ. ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಜರಗಿತು. ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಸುಕಣಿ, ಪದ ನಲಿಕೆ: ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು. ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು‌. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್…

Read More

ಮೇ 6ರಿಂದ 12ರವರೆಗೆ ನಡೆಯುವ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಗತ್ಯವಿರುವ ಮಡಲು ಹಾಗೂ ಪೊರಕೆ ತಯಾರಿಕೆ ಬ್ರಹ್ಮಕಲಶೋತ್ಸವ ಮಾತೃ ಸಮಿತಿ ನೇತೃತ್ವದಲ್ಲಿ ಭಾನುವಾರ ಚಾಲನೆ ನೀಡಲಾಗಿದೆ. ದೇವಳದ ಆಡಳಿತ ಮೊಕ್ತೇಸರ ತಾರನಾಥ ರೈ ಪಡ್ಡಂಬೈಲ್ ಗುತ್ತು ಚಾಲನೆ ನೀಡಿದರು. ಕಲ್ಲಗದ್ದೆ, ಚನಿಯಪ್ಪ ಪರಗುಡ್ಡೆ, ಮಾತೃ ಮಂಡಳಿ ಅಧ್ಯಕ್ಷೆ ರಾಜಶ್ರೀ ಟಿ. ರೈ ಪೆರ್ಲ, ಚೇತನಾ, ಯಶೋದ ಕಾನ, ನಿರ್ಮಲ ಶೇಷಪ್ಪ ಭಾಗವಹಿಸಿದ್ದರು.ನಾಲ್ಕು ಗ್ರಾಮಗಳ ಪ್ರಾದೇಶಿಕ ಸಮಿತಿಗಳ ಮಹಿಳಾ ಸದಸ್ಯೆಯರು ಮಡಲು ಹೆಣೆಯುವ, ಹಿಡಿಸೂಡಿ ತಯಾರಿಸುವ ಕೈಂಕರ್ಯದಲ್ಲಿ ತೊಡಗಿಕೊಂಡರು. ಪ್ರೇಮ ಕಲ್ಲಗದ್ದೆ, ಲೀಲಾವತಿ ಆಚಾರ್ಯ, ರೇಣುಕಾ ಕಲ್ಲಗದ್ದೆ, ಯಶೋಧ ಕಾನ, ಸಾವಿತ್ರಿ ಕುರೆಡ್ಕ, ಸರೋಜಿನಿ ಮುಗೇರು ಪ್ರಾತ್ಯಕ್ಷಿಕೆ ನೀಡಿದರು. ಮಕ್ಕಳು ಕೂಡ ಮಡಲು ಹೆಣೆಯುವ ಕಾಯಕದಲ್ಲಿ ಭಾಗಿಯಾದರು.ಬ್ರಹ್ಮಕಲಶೋತ್ಸಕ್ಕೆ ಸುಮಾರು 600 ಹೆಣೆದ ಮಡಲು ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಮಾತೃ ಸಂಘದ ನಾನಾ ಪ್ರಾದೇಶಿಕ ಸಮಿತಿಗಳ ನೇತೃತ್ವದಲ್ಲಿ ಅಲ್ಲಲ್ಲಿ ಮಡಲು ಹೆಣೆದು, ಹಿಡಿಸೂಡಿ ತಯಾರಿಸಿ ಕ್ಷೇತ್ರಕ್ಕೆ ತಂದೊಪ್ಪಿಸುವ ಯೋಜನೆ ಇರಿಸಲಾಗಿದೆ…

Read More

ನಮ್ಮ ಹೃದಯವು ನಮ್ಮ ದೇಹವನ್ನು ಚಾಲನೆಯಲ್ಲಿರುವ ಎಂಜಿನ್‌ನಂತಿದೆ. ಆದರೆ ನಾವು ಅದನ್ನು ಕಾಳಜಿ ವಹಿಸದಿದ್ದರೆ ಅದು ಒಡೆಯಲು ಪ್ರಾರಂಭಿಸಬಹುದು ಮತ್ತು ವೇಗವಾಗಿರುತ್ತದೆ. ಹೃದ್ರೋಗವು ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಮತ್ತು ವಯಸ್ಸು ಅಥವಾ ತಳಿಶಾಸ್ತ್ರದಂತಹ ಕೆಲವು ಅಪಾಯಕಾರಿ ಅಂಶಗಳನ್ನು ನೀವು ಬದಲಾಯಿಸಲು ಸಾಧ್ಯವಾಗದಿದ್ದರೂ, ನಮ್ಮ ಹೃದಯವನ್ನು ಬಲವಾಗಿ ಮತ್ತು ಆರೋಗ್ಯಕರವಾಗಿಡಲು ನಾವು ಮಾಡಬಹುದಾದ ಸಾಕಷ್ಟು ವಿಷಯಗಳಿವೆ. ನಮ್ಮ ಹೃದಯಕ್ಕೆ ನಾವು ಮಾಡಬಹುದಾದ ಕೆಟ್ಟ ಕೆಲಸಗಳಲ್ಲಿ ಧೂಮಪಾನವು ಒಂದು. ಪ್ರತಿ ಪಫ್ ನಮ್ಮ ರಕ್ತಪ್ರವಾಹವನ್ನು ವಿಷದಿಂದ ತುಂಬಿಸುತ್ತದೆ. ಅದು ನಮ್ಮ ಅಪಧಮನಿಗಳನ್ನು ಕಿರಿದಾಗಿಸುತ್ತದೆ, ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಆಮ್ಲಜನಕವನ್ನು ಪಂಪ್ ಮಾಡಲು ಹೃದಯವು ಹೆಚ್ಚಿನ ಸಮಯವನ್ನು ಕೆಲಸ ಮಾಡುತ್ತದೆ. ಒಳ್ಳೆಯ ಸುದ್ದಿ? ನಾವು ತ್ಯಜಿಸಿದ ಕ್ಷಣ, ನಮ್ಮ ಹೃದಯವು ಗುಣವಾಗಲು ಪ್ರಾರಂಭಿಸುತ್ತದೆ. ಒಂದು ದಿನದೊಳಗೆ ಹೃದ್ರೋಗದ ಅಪಾಯವು ಕಡಿಮೆಯಾಗಲು ಪ್ರಾರಂಭವಾಗುತ್ತದೆ ಮತ್ತು ಒಂದು ವರ್ಷದ ನಂತರ, ಧೂಮಪಾನಿಗಳಿಗೆ ಹೋಲಿಸಿದರೆ ಇದು ಈಗಾಗಲೇ ಅರ್ಧದಷ್ಟು ಕಡಿಮೆಯಾಗಿದೆ. ನಮ್ಮ ದೇಹವನ್ನು ಚಲಿಸುವಂತೆ ಮಾಡುವುದು ಮತ್ತೊಂದು ಪ್ರಮುಖ…

Read More

ಸಾಹಿತ್ಯ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ ಮೂಲೆ ಗುಂಪಾಗಿದ್ದ ಚುಟುಕು ಸಾಹಿತ್ಯ ಈಗ ಬಹಳಷ್ಟು ಪ್ರತೀತಿಯನ್ನು ಪಡೆಯುತ್ತಾ ಇದೆ. ಹಿಡಿಯಲ್ಲಿ ಇಡಿಯನ್ನು ತೋರಿಸುವ ಶಕ್ತಿ ಚುಟುಕಿಗಿರುವುದೇ ಇದಕ್ಕೆ ಕಾರಣವಾಗಿದೆ. ಸತ್ವ ತತ್ವಗಳನ್ನು ಒಳಗೊಂಡ ಧ್ವನಿ ಪೂರ್ಣವಾದ ಗಟ್ಟಿ ಚುಟುಕುಗಳಿಗೆ ಓದುಗರ ಮನದಲ್ಲಿ ಉಳಿಯುವ ತಾಕತ್ತು ಯಾವತ್ತಿಗೂ ಇರುತ್ತದೆ ಎಂದು ಕಾಸರಗೋಡು ಜಿಲ್ಲಾ ಏಳನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿದ್ದ ಶಿಕ್ಷಕ, ತುಳು, ಕನ್ನಡ ಕವಿ ಹರೀಶ ಸುಲಾಯ ಒಡ್ಡಂಬೆಟ್ಟು ಅಭಿಪ್ರಾಯ ಪಟ್ಟರು. ಕಾಸರಗೋಡು ಜಿಲ್ಲಾ ಏಳನೇ ಚುಟುಕು ಸಾಹಿತ್ಯ ಸಮ್ಮೇಳನ ಮತ್ತು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮವು ಮಾರ್ಚ್ 27 ಗುರುವಾರದಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಸಮ್ಮೇಳನ ಅಧ್ಯಕ್ಷರನ್ನು ಮೆರವಣಿಗೆಯಲ್ಲಿ ವೇದಿಕೆಗೆ ಕರೆ ತರುವ ಮೂಲಕ ಪ್ರಾರಂಭಗೊಂಡು ಸುಮಾರು 108 ಕವಿಗಳ ಚುಟುಕು ಕವಿಗೋಷ್ಠಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜೃಂಭಣೆಯಿಂದ ನಡೆಯಿತು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಂಚಾಲಕ ಡಾ| ಎಂಜಿಆರ್ ಅರಸ್…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಾಜಿ ಮೇಯರ್ ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಸುಧೀರ್ ಶೆಟ್ಟಿ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

Read More

ವಿದ್ಯಾಗಿರಿ: ‘ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಶನಿವಾರ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ದಿನಾಚರಣೆ ‘ಇನಾಮು – 2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯುವಜನತೆ ತಮ್ಮ ಇಚ್ಛಾಶಕ್ತಿಯ ಸಾಮರ್ಥ್ಯವನ್ನು ಅರಿತು, ತಮ್ಮ ಗುರಿಯನ್ನು ತಲುಪುವಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಹಳ ಎತ್ತರಕ್ಕೆ ಬೆಳೆದು, ಎಲ್ಲರಿಗೂ ಮಾದರಿಯಾಗಿ ದೇಶಕ್ಕೆ ಹೆಮ್ಮೆ ತರುವ ಕಾರ್ಯ ನೆರವೇರಲಿ ಎಂದು ಆಶಿಸಿದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಒಂದು ಭಾಗವಷ್ಟೇ. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇಂತಹ ವಿಫುಲ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಆಳ್ವಾಸ್ ಕಲ್ಪಿಸುತ್ತಿರುವುದು ಶ್ಲಾಘಿನೀಯ. ಹಳೆ ವಿದ್ಯಾರ್ಥಿಗಳ ಪುನರ್ಮಿಲನದಂತಹ ಕರ‍್ಯಕ್ರಮಗಳನ್ನು ಆಯೋಜಿಸಿ ಸಂಸ್ಥೆ ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಭಾಂದವ್ಯವನ್ನು ಬೆಸೆಯುವ ವೇದಿಕೆ ಕಲ್ಪಿಸಿಬೇಕು ಎಂದು ಸಲಹೆಯಿತ್ತರು.…

Read More

ವಿದ್ಯಾಗಿರಿ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಆತಿಥ್ಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ೨೪ನೇ ಅಂತರ ಕಾಲೇಜು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದರು. ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿಯನ್ನು ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯ ದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ೧೪೦ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು. ಶಶಿರಾಜ್ ರಾವ್ ಕಾವೂರು ರಚಿಸಿದ ಏಕಾದಶಾನನವನ್ನು ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದರು. ಮಗು ಮತ್ತು ಮರ ಕಿರು ಪ್ರಹಸನವನ್ನು ರಾಜೇಂದ್ರ ಪ್ರಸಾದ್ ಮಂಡ್ಯ ಹಾಗೂ ಪ್ರಶಾಂತ್ ಕೋಟ ನಿರ್ದೇಶಿಸಿದ್ದರು. ಸಾತ್ವಿಕ್ ನೆಲ್ಲಿತೀರ್ಥ ಮತ್ತು ಮಧುಸೂದನ(ನೀನಾಸಂ) ಕೊಡಗು ರಂಗವಿನ್ಯಾಸ ಮಾಡಿದ್ದರು. ಎರಡೂ ನಾಟಕಗಳಿಗೆ ಆಳ್ವಾಸ್ ಪಿ.ಯು.ವಿದ್ಯಾರ್ಥಿ, ಸುಳ್ಯ ರಂಗಮನೆಯ ಮನುಜ ನೇಹಿಗ ಸಂಗೀತ ನೀಡಿದ್ದರು. ವಿಜೇತ ತಂಡವನ್ನು ಸಂಸ್ಥೆಯ…

Read More

ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಎಪ್ರಿಲ್ 1 ರಿಂದ 10 ರವರೆಗೆ ಬೇಸಿಗೆ ಕ್ರೀಡಾ ಶಿಬಿರವನ್ನು ಆಯೋಜಿಸಲಾಗಿದೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಜ್ಯೋತಿ ಬೆಳಗಿಸಿ ಕ್ರೀಡಾ ಶಿಬಿರಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಮಕ್ಕಳಿಗೆ ಕ್ರೀಡಾ ಶಿಬಿರವು ಸ್ವತಂತ್ರವಾಗಿ ಬದುಕುವ ಕಲೆಯನ್ನು ತಿಳಿಸುತ್ತದೆ. ರಜಾದಿನಗಳನ್ನು ಅನವಶ್ಯಕವಾಗಿ ವ್ಯರ್ಥಮಾಡದೆ ಶಿಬಿರದಲ್ಲಿ ಭಾಗವಹಿಸಿ ನಿಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಪ್ರಾಮುಖ್ಯತೆಯನ್ನು ನೀಡಿದ್ದೀರಿ. ಇದು ನಿಮ್ಮ ಮುಂದಿನ ಯಶಸ್ಸಿಗೆ ನೆರವಾಗಲಿದೆ ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ನಾವು ಗೆಲುವಿನ ಚಿಂತನೆಯನ್ನು ಮಾಡುವುದರ ಬದಲು ಸೂಕ್ತವಾದ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದು ಪ್ರಯತ್ನಿಸಿದರೆ ಜಯವೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಕ್ರೀಡಾ ಶಿಬಿರವು ಎಲ್ಲರಲ್ಲೂ ಏಕತೆ, ಶಿಸ್ತು, ಜೀವನ ಮೌಲ್ಯಗಳನ್ನು ಬೆಳೆಸುತ್ತದೆ ಎಂದರು. ಹತ್ತು ದಿನಗಳ ಶಿಬಿರದಲ್ಲಿ ವಾಲಿಬಾಲ್, ಬಾಸ್ಕೆಟ್ ಬಾಲ್, ಫುಟ್‍ಬಾಲ್, ಹ್ಯಾಂಡ್‍ಬಾಲ್, ತ್ರೋಬಾಲ್ ತರಬೇತಿಯನ್ನು ನುರಿತ ಕೋಚ್‍ಗಳಿಂದ ನೀಡಲಾಗುವುದು. ಕಾರ್ಯಕ್ರಮದಲ್ಲಿ ತರಬೇತುದಾರರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಸಂಘಟನಾ ಚತುರ ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ತೆಲಂಗಾಣ ರಾಜ್ಯದ ಸಂಗಾರೆಡ್ಡಿಯ ಹಿರಿಯ ಹೋಟೆಲ್ ಉದ್ಯಮಿ ಸಂಜೀವ ಶೆಟ್ಟಿ ಹೊಟೇಲ್ ಗೀತಾಭವನ್ ನಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಗಿರೀಶ್, ಅಕ್ಷಯ್ ಶೆಟ್ಟಿ ಉಪಸ್ಥಿತರಿದ್ದರು.

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಅವರು, “ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತಿತರ ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ನಾಡಿದ್ದು ನಡೆಯಲಿರುವ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಒಂದು ಸಂಸ್ಥೆ ನಡೆಸುವುದು ಸುಲಭದ ಮಾತಲ್ಲ. ಇಷ್ಟು ಜನರನ್ನು ಸೇರಿಸಿಕೊಂಡು ಜೊತೆಗೆ ಕೊಂಡೊಯ್ಯುವುದು ಬಹಳ ಕಷ್ಟಕರವಾದುದು. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ“ ಎಂದು ಶುಭ ಹಾರೈಸಿದರು. ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತಾಡಿ,…

Read More