Author: admin

ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಮತ್ತು…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ” ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್, ವಿಕೆ ಸಮೂಹ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಕರುಣಾಕರ ಎಂ.ಶೆಟ್ಟಿ ಮಧ್ಯಗುತ್ತು ಅವರು ಬಿತ್ತನೆಯಾದ ಗದ್ದೆಯ ಭತ್ತದ ಪೈರುಗಳಿಗೆ ಯಾರ ದೃಷ್ಟಿಯೂ ಬೀಳದಿರಲಿ. ಕಳೆರೋಗ ಬಾರದಿರಲಿ ಎಂದು ಗದ್ದೆಗೆ ಕಾಪು ಇಟ್ಟು ಪಾಡ್ದನದ ಜೊತೆಗೆ ನೇಜಿಯನ್ನು ಹಾರಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ನಾವು ಸಣ್ಣವರಿದ್ದಾಗ ಆಟಿ ತಿಂಗಳಲ್ಲಿ ಹಲಸಿನ ಬೀಜ, ನೈಸರ್ಗಿಕವಾಗಿ ಸಿಗುವ ಸೊಪ್ಪು ತರಕಾರಿ ತಿಂದು ಜೀವನ ಸಾಗಿಸುತ್ತಿದ್ದೆವು. ಆಗ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ನಾವು ಇದನ್ನು ಮರೆಯಬಾರದು. ಆಟಿ ದಿನದ ಪರಿಕಲ್ಪನೆ ಜೀವನ ಪದ್ಧತಿ ಅಂದಿನ ದಿನಕ್ಕೆ ವಾತಾವರಣಕ್ಕೆ ಅನುಗುಣವಾಗಿ ಅಳವಡಿಸಿಕೊಂಡಿದ್ದರು. ಅರೋಗ್ಯಪೂರ್ಣ ಜೀವನಕ್ಕೆ ಮಳೆಗಾಲದ ಆಟಿ ಜೀವನ ಪೂರಕವಾಗಿತ್ತು. ನಮ್ಮ ಮುಂದಿನ ಪೀಳಿಗೆಗೆ ತುಳುವರ ಸಂಸ್ಕೃತಿ…

Read More

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ವತಿಯಿಂದ ಗುರು ಪೂರ್ಣಿಮೆಯ ಆಚರಣೆಯು ಒಡಿಯೂರು ಸಂಸ್ಥಾನದ ಗುರುದೇವಾನಂದ ಸ್ವಾಮೀಜಿಯವರ ಶುಭ ಆಶೀರ್ವಾದದೊಂದಿಗೆ ಜುಲೈ 21 ರ ಆದಿತ್ಯವಾರದಂದು ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ – ವೀಣಾ ಪಿ. ಶೆಟ್ಟಿ ದಂಪತಿ ಪ್ರಾಯೋಜಕತ್ವದಲ್ಲಿ ಪುಣೆಯ ಔಂದ್ ನಲ್ಲಿಯ ರೋಹನ್ ನಿಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಗುರು ಪೂರ್ಣಿಮೆಯ ಅಂಗವಾಗಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಬಳಗದ ಸದಸ್ಯರ, ಭಜನಾ ಮಂಡಳಿಯಿಂದ ಭಜನೆ ನಡೆಯಿತು. ನಂತರ ಗುರುಪೂಜೆ ಮಹಾಮಂಗಳಾರತಿ ನೆರವೇರಿತು. ಪ್ರಭಾಕರ್ ಶೆಟ್ಟಿ ದಂಪತಿ, ಪೃಥ್ವೀಶ್ ಶೆಟ್ಟಿ, ಸ್ನೇಹಲ್ ಶೆಟ್ಟಿ ದಂಪತಿ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮೀ ಪಿ. ಶೆಟ್ಟಿ ದಂಪತಿ, ಬಳಗದ ಸದಸ್ಯರು, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಪುಣೆ…

Read More

ಶ್ರದ್ಧೆಯಿಂದ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ದುಡಿದಾಗ ಜನರ ಗೌರವ ಸಿಗುವುದಲ್ಲದೇ ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಹೊಸಬೆಟ್ಟು ನುಡಿದರು. ಅವರು ಜೆಸಿಐ ಸುರತ್ಕಲ್ ವತಿಯಿಂದ ಗೋವಿಂದದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಜೆಸಿಐ ಸ್ಥಾಪನಾ ದಿನಾಚರಣೆ ಮತ್ತು ವಿದ್ಯಾರ್ಥಿ ವೇತನ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾಯಕತ್ವದ ತರಬೇತಿಯನ್ನು ಪ್ರಸ್ತುತ ಕಾಲಘಟ್ಟದಲ್ಲಿ ಜನತೆಗೆ ತಿಳಿಸುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಜೆಸಿಐ ಸುರತ್ಕಲ್ ಮಹತ್ವದ ಹೆಜ್ಜೆ ಇರಿಸಿದೆ ಎಂದರು. ವೇದಿಕೆಯಲ್ಲಿ ಜೆಸಿಐ ಭಾರತದ ವಲಯಾಧ್ಯಕ್ಷ ಗಿರೀಶ್ ಎಸ್ ಪಿ, ಜೆಸಿಐ ಭಾರತದ 1983 ರ ರಾಜ್ಯ ಉಪಾಧ್ಯಕ್ಷ ದಿನಕರ ಗೌಡ, ಜೆಸಿ ಅಲ್ಯೂಮಿನಿಯಂ ಕ್ಲಬ್ ಅಧ್ಯಕ್ಷ ಲೋಕೇಶ್ ರೈ, ವಲಯ ಉಪಾಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟಪೂರ್ವ ಅಧ್ಯಕ್ಷ ಜಯರಾಜ್ ಆಚಾರ್ಯ, ಕಾರ್ಯದರ್ಶಿ ಸವಿತಾ ಶೆಟ್ಟಿ, ಸೌಮ್ಯ ಅರ್ ಶೆಟ್ಟಿ, ದಯೇಶ್ ಬಿ ಶೆಟ್ಟಿ, ರಾಹುಲ್…

Read More

ತಾಲೂಕು ಯುವ ಬಂಟರ ಸಂಘದ ವತಿಯಿಂದ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮತ್ತು ಅವಕಾಶಗಳಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಪ್ರೋತ್ಸಾಹಧನ ವಿತರಣೆ ಸಮಾರಂಭ ಆಗಸ್ಟ್ 18 ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಭವನದಲ್ಲಿ ನಡೆಯಲಿದೆ. 2024 ರ ಮಾರ್ಚ್ ತಿಂಗಳಲ್ಲಿ ನಡೆದ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 95 ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸರೆ ಯೋಜನೆಯಡಿ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ನವಚೇತನ ಯೋಜನೆಯಡಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಟ್ಟು 25 ಲಕ್ಷ ರೂ. ಮೊತ್ತದ ಪ್ರೋತ್ಸಾಹಧನ ವಿತರಣೆ ನಡೆಯಲಿದ್ದು ಮಣಿಪಾಲ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಚ್.ಎಸ್ ಬಲ್ಲಾಳ್ ಉದ್ಘಾಟಿಸಲಿದ್ದಾರೆ. 2024 -26 ನೇ ಅವಧಿಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಸಂಸ್ಮರಣ ಪ್ರಶಸ್ತಿಗಳ ಪ್ರದಾನ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಬಿ.ಉದಯ್ ಕುಮಾರ್…

Read More

ಮೂಡುಬಿದಿರೆ: ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕರ‍್ಯವು ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಭಾರತದ ಸ್ವಾತಂತ್ರ‍್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು ನಮಗೆ ಸ್ವಾಭಾವಿಕ ಸಂಗತಿ ಎಂದೆನಿಸಬಾರದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಬಲಿದಾನವನ್ನು ಸ್ಮರಿಸಬೇಕು. ಸೈನಿಕರ ನಿಸ್ವಾರ್ಥ ಸೇವೆ ಮತ್ತು ನಿಷ್ಠೆ ಸದಾ ಸ್ಮರಣೀಯ ಎಂದರು. ಕೆಂಗುರಸೆ ಎಂಬ ಯೋಧ ಘಾತಕ್ ಪ್ಲಟೂನ್ ಸೇರಿ ಹುತಾತ್ಮನಾದ ಮೇಲೆ ನಾಗಲ್ಯಾಂಡ್‌ನಲ್ಲಿ ಸೈನ್ಯದ ಬಗ್ಗೆ ಇದ್ದ ನಕಾರಾತ್ಮಕತೆ ಹೋಗಿ ಹೆಚ್ಚು ಹೆಚ್ಚು ಯುವಕರು ಸೇನೆ ಸೇರುವಂತಾದ ಪ್ರಸಂಗವನ್ನು ವಿವರಿಸಿದರು. ನಮ್ಮ ದೇಶದ ಮೇಲೆ ಎಷ್ಟೇ ದಾಳಿಗಳಾದರೂ ನಮ್ಮ…

Read More

‘ದೇಶದ ಎಲ್ಲಾ ರಾಜ್ಯಗಳ, ಎಲ್ಲಾ ಭಾಷೆಗಳ ಜನರನ್ನು ಒಗ್ಗೂಡಿಸಿ, ರಾಷ್ಟ್ರೀಯ ಏಕತೆ ಹಾಗೂ ಹಿಂದುತ್ವದ ಪುನರುತ್ಥಾನದ ಸಂಕಲ್ಪದಲ್ಲಿ ಹುಟ್ಟಿಕೊಂಡ ಸಂಸ್ಥೆ ಭಾರತ- ಭಾರತಿ. ಈ ಸಂಸ್ಥೆಯ 60 ನೇ ಶಾಖೆಯಾಗಿ ಮಂಗಳೂರು ಶಾಖೆ ಅಸ್ತಿತ್ವಕ್ಕೆ ಬಂದಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಏಕಾತ್ಮಕತೆಯೇ ಎಲ್ಲರ ಧ್ಯೇಯವಾಗಿರಲಿ’ ಎಂದು ಭಾರತ – ಭಾರತಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ವಿನಯ್ ಪತ್ರಾಳೆ ಕರೆ ನೀಡಿದ್ದಾರೆ. ಭಾರತ ಭಾರತಿ ಮಂಗಳೂರು ಶಾಖೆಯಲ್ಲಿ ಜರಗಿದ ಸಂಘಟನೆಯ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಭಾರತ – ಭಾರತಿ ರಾಷ್ಟ್ರ ಮಟ್ಟದಲ್ಲಿ ಸಂಸ್ಕ್ರತಿ ಸಂಬಂಧಗಳನ್ನು ಬೆಸೆಯುವ ಸಂಸ್ಥೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ನಮ್ಮದು. ಮಂಗಳೂರಿನಲ್ಲಿ ವಾಸಿಸುತ್ತಿರುವ ವಿವಿಧ ರಾಜ್ಯದ, ವಿವಿಧ ಭಾಷೆಯ ಜನರು ಆದಷ್ಟು ಈ ಸಂಸ್ಥೆಯ ಸದಸ್ಯರಾಗಬೇಕು. ಪಾಶ್ಚಾತ್ಯ ಸಂಸ್ಕೃತಿಯಲ್ಲಿ ನಲುಗಿ ಹೋಗುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರೂ ಈ ವೇದಿಕೆಯಡಿ ಒಟ್ಟಾಗಬೇಕಾದ ಅಗತ್ಯತೆಯಿದೆ. ಆ ಮೂಲಕ ನಾವು ತಾಯಿ ಭಾರತಿಯ ಸೇವೆಯನ್ನು ಮಾಡೋಣ’ ಎಂದವರು…

Read More

ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು, ಸನ್ಮಾನಿತರ ನಿವಾಸಕ್ಕೆ ಜುಲೈ 25 ರಂದು ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು ಭೇಟಿ ನೀಡಿ, ಗೌರವಪೂರ್ವಕವಾಗಿ ಸಮಾರಂಭದ ಆಮಂತ್ರಣ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಮುಖ್ಯ ಅತಿಥಿ ‘ಸಹಕಾರ ರತ್ನ’ ಸವಣೂರು ಕೆ ಸೀತಾರಾಮ ರೈ, ಸಿರಿ ಕಡಮಜಲು ಕೃಷಿ ಪ್ರಶಸ್ತಿ ಪುರಸ್ಕೃತ ಅರಿಯಡ್ಕ ಕೃಷ್ಣ ರೈ, ರೈಸ್ ಬೌಲ್ ಪುಣ್ಚಪ್ಪಾಡಿ, ಹಿರಿಯ ಉದ್ಯಮಿ ಅರಿಯಡ್ಕ ಚಿಕ್ಕಪ್ಪ ನಾಕ್, ಪುತ್ತೂರು ಬಂಟಸಿರಿ ಪ್ರಶಸ್ತಿ ಪುರಸ್ಕೃತರಾದ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಸಾಧಕ ಸಹಕಾರಿ ರಶ್ಮಿ ಪ್ರಶಸ್ತಿ ಪುರಸ್ಕೃತ ಎನ್.ಜಗನ್ನಾಥ ರೈ ಮಾದೋಡಿ, ಬೂಡಿಯಾರ್ ವೈದ್ಯಕೀಯ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕೃತ ಸಂತೋಷ್ ಕುಮಾರ್ ರೈ ನಳೀಲು, ದೇಶ ಸೇವಾ ಅಗರಿ ಪ್ರಶಸ್ತಿ…

Read More

ಬಂಟರ ಸಂಘ ಜೆಪ್ಪು ಇವರ ಆಶ್ರಯದಲ್ಲಿ ಜುಲೈ 28 ರಂದು ಭಾನುವಾರ ಸಂಜೆ ಘಂಟೆ 3.30 ರಿಂದ ಎಮ್ಮಕೆರೆ ರಮಾಲಕ್ಷ್ಮೀ ನಾರಾಯಣ ಕನ್ವೆನ್ಷನ್ ಹಾಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಆಹ್ವಾನಿತ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಗೌರವ ಅಭಿನಂದನಾ ಕಾರ್ಯಕ್ರಮ ವಸಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆಷಾಢ ಮಹತ್ವದ ಕುರಿತಂತೆ ಸುರತ್ಕಲ್ ಗೋವಿಂದದಾಸ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅಕ್ಷತಾ ನವೀನ್ ಶೆಟ್ಟಿ ಸಾಂದರ್ಭಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜೈರಾಜ್ ಬಿ ರೈ, ಪುಣೆ ಅಹ್ಮದ್ ನಗರದ ಉದ್ಯಮಿ, 2024 ರ ಸಾಲಿನ ಆರ್ಯಭಟ…

Read More

ಈ ಸಾರಿಯ ಮಳೆಗಾಲವಂತೂ ಅಪಾಯ ಮತ್ತು ಆತಂಕ ಎಂಬ ಮಹಾ ಮುನ್ಸೂಚನೆ ಕೊಟ್ಟಿದೆ. ದಿನ ನಿತ್ಯವೂ ನಾನಾ ಕಾರಣಗಳಿಂದ ಸಾವು ನೋವು ಅವಘಡಗಳು ಘಟಿಸುತ್ತಲೇ ಇದೆ. ಮುಖ್ಯವಾಗಿ ಅನಿಸುವುದು ನಗರ ಪ್ರದೇಶದ ಕೆಲ ಅವಾಂತರಗಳನ್ನು ಕಂಡಾಗ. ಈ ಮೊದಲು “ಊರ ಮೇಲೆ ಊರು ಬಿದ್ರೂ ಶ್ಯಾನುಭೋಗರ _ ಹೋಯ್ತು” ಎಂದು ರಸ್ತೆ, ಸೇತುವೆ, ತೋಡು ಬದಿ ಕಟ್ಟುವುದು, ತಡೆಗೋಡೆ ಎಂಬ ಕಾಮಗಾರಿಗಳಲ್ಲಿ “ಯಾರ್ದೋ ದುಡ್ಡು ಎಲ್ಲಮ್ಮನ ಜಾತ್ರೆ” ಎಂದು ನಡೆದದ್ದೇ ನಡೆದದ್ದು. ಅದರ ಪರಿಣಾಮ ಈಗ ಸಾರ್ವಜನಿಕರು ಎದುರಿಸುವಂತಾಗಿದೆ. ಅಲ್ಲ ಈ ಸಲದ ಮಳೆಗೆ ಎಷ್ಟೊಂದು ಅವಾಂತರಗಳು ನಡೆದದ್ದು ಮಾರಾಯ್ರೆ!?. ಛೆ ಛೆ ಕೆಲವೊಂದು ಮಳೆಯಿಂದಾಗಿ ಆದರೆ ಇನ್ನು ಕೆಲವು ಮಳೆಯೊಳಗೆ ಎನ್ನಬಹುದು. ಮುಖ್ಯವಾಗಿ ಎಲ್ಲರ ಗಮನ ಸೆಳೆದ ಅವಘಡ ಎಂದರೆ ಅಂಬಲಪಾಡಿಯ ಶ್ರೀಮತಿ ಅಶ್ವಿನಿ ಮತ್ತು ಶ್ರೀಯುತ ರಮಾನಂದ ಶೆಟ್ಟಿ ದಂಪತಿಗಳ ಮನೆಯಲ್ಲಿ ನಡೆದ ಬೆಂಕಿ ಅವಘಢ. ಇದು ಊರಿನಲ್ಲಿ ಮಾತ್ರವಲ್ಲದೇ ಪರವೂರು, ಪರ ದೇಶದಲ್ಲೇ ಸುದ್ದಿ ಮಾಡಿದ್ದು. ಮಾತ್ರವಲ್ಲದೇ…

Read More