Author: admin

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ತೀರ್ಥಹಳ್ಳಿ ಮೂಲದ ಯಶಸ್ವಿ ಉದ್ಯಮಿಗಳು, ನೀಮಸ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಶ್ರೀಧರ ಶೆಟ್ಟಿ ಅವರನ್ನು ಅಯ್ಕೆ ಮಾಡಲಾಗಿದೆ. ಶ್ರೀಧರ್ ಶೆಟ್ಟಿ ಎನ್.ಕೆ.ಡಿ.ಪಿ.ಎಂ.ಎ ಯ ಗೌರವ ಕಾರ್ಯದರ್ಶಿಯಾಗಿ ಈಗಾಗಲೇ ಸೇವೆ ಸಲ್ಲಿಸಿದ್ದು, ಈಗ ಔಷಧ ಉದ್ಯಮದ ಅತ್ಯಂತ ಗೌರವಾನ್ವಿತ ಸ್ಥಾನಕ್ಕೆ ಆಯ್ಕೆಗೊಂಡಿರುವುದು ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಗೌರವ ಕಾರ್ಯದರ್ಶಿಗಳಾಗಿ ಆಯ್ಕೆ ಆಗಿರುವ ಶ್ರೀಧರ ಶೆಟ್ಟಿಯವರಿಗೆ ತೀರ್ಥಹಳ್ಳಿ ಬಂಟರ ಸಂಘದ ಗೌರವಾಧ್ಯಕ್ಷರಾದ ಅಡ್ಡಮನೆ ಪ್ರಭಾಕರ್ ಶೆಟ್ಟಿ, ಅಧ್ಯಕ್ಷರಾದ ಪ್ರಭಾಕರ್ ಹೆಗ್ಡೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಸಹ ಕಾರ್ಯದರ್ಶಿ ಕುಡುಮಲ್ಲಿಗೆ ಭಾಸ್ಕರ ಶೆಟ್ಟಿ, ಬೆಟ್ಟಮಕ್ಕಿ ಅಶೋಕ ಶೆಟ್ಟಿ, ಬಂಟರ ಮಹಿಳಾ ವಿಭಾಗದ ಪದಾಧಿಕಾರಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಸಮಾಜದಲ್ಲಿ ಉಳ್ಳವರು, ಮಧ್ಯಮ ವರ್ಗದವರು ಮತ್ತು ಅದಕ್ಕಿಂತ ಆರ್ಥಿಕವಾಗಿ ಹಿಂದುಳಿದವರು ಇದ್ದೇ ಇರುತ್ತಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಹೀಗೆ ಬಹು ಬಗೆಯಲ್ಲಿ ಸಮುದಾಯದ ಸಮಗ್ರ ಪ್ರಗತಿಗಾಗಿ ಉಳ್ಳವರಿಂದ ಬೇಡಿ ಇಲ್ಲದವರಿಗೆ ನೀಡಿ ಅವರ ಅವಶ್ಯಕತೆಗಳನ್ನು ಪೂರೈಸಬೇಕು. ಬಂಟರಲ್ಲೂ ಈ ರೀತಿಯ ಸ್ಥಿತಿಗತಿಗಳ ಮಂದಿ ಇರುವುದು ಸಹಜ. ಅದನ್ನೆಲ್ಲಾ ನಿವಾರಿಸಿ ತಕ್ಕಮಟ್ಟಿಗೆ ಎಲ್ಲರ ಕ್ಷೇಮ ಚಿಂತನೆ ಮಾಡಲು ಪ್ರಯತ್ನಿಸೋಣ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಕರೆ ನೀಡಿದರು. ಮೂಡಬಿದ್ರಿ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನ ಕೃಷಿ ಸಿರಿ ವೇದಿಕೆಯಲ್ಲಿ ಆಗಸ್ಟ್ 3 ರಂದು ಮೂಡಬಿದ್ರಿ ಬಂಟರ ಸಂಘದ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮೂರನೇ ವರ್ಷದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ಸನ್ಮಾನ, ಸಹಾಯಧನ ವಿತರಣೆ, ಅಡುಗೆ ಸ್ಪರ್ಧೆ, ಸಾಂಸ್ಕೃತಿಕ ಕಲಾಪಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಉಪಸ್ಥಿತರಿದ್ದು ಮಾತನಾಡಿದ ಶ್ರೀಯುತರು ಎಲ್ಲಾ ಸಮಾಜದವರನ್ನು ಪ್ರೀತಿಸುತ್ತಾ 35 ವರ್ಷಗಳಿಂದಲೂ ಬಂಟರ ಸಂಘದ ಜೊತೆ ಓಡಾಡಿಕೊಂಡು ಬರುತ್ತಿರುವ ತಾನು…

Read More

ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಹಾಲ್ ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 27ರಂದು ಯಶಸ್ವಿಯಾಗಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿ ಬೆಳ್ಳೆ ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭವನ್ನು ಹಾರೈಸಿದರು. ಮುಖ್ಯ ಅತಿಥಿಗಳಾದ ಮೂಳೂರು ಸುನಂದ ವೆಲ್ನೆಸ್ ಸೆಂಟರ್ ನ ಡಾ. ನಿರಂಜನ್ ಎಸ್. ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥಾಪಕ ರಾಜೇಂದ್ರ ವಿ. ಶೆಟ್ಟಿ, ವಾಗ್ಮಿ ಜಾನಪದ ಚಿಂತಕ ಶ್ರೀಕಾಂತ್ ಶೆಟ್ಟಿ ಆಟಿಡೊಂಜಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಚಲನಚಿತ್ರ ನಟ ಶೋಧನ್ ಉಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ಅಲೆವೂರು ಶ್ರೀಧರ್ ಶೆಟ್ಟಿ, ಹೇಮಂತ್ ಶೆಟ್ಟಿ, ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಬೆಳ್ಳೆ…

Read More

ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ವೇದಿಕೆಯನ್ನು ದನಗಳನ್ನು ಕಟ್ಟಲಾಗಿರುವ ಸಾಂಪ್ರದಾಯಿಕ ಹಟ್ಟಿಯ ಸ್ವರೂಪದಲ್ಲಿ ನಿರ್ಮಿಸಲಾಗಿತ್ತು. ಭತ್ತದ ಪೈರು ಹೊಡೆಯುವ ಪಡಿ ಮಂಚಕ್ಕೆ ಪೊಲಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು, ಬಂಟ ಸಮುದಾಯದ ಯುವಕರು ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಬಂಟರ ಸಂಘ ಇಂತಹ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿರುವುದು ಖುಷಿಯ ವಿಚಾರ. ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಮುಖ್ಯ ಅತಿಥಿಯಾಗಿದ್ದ ದ.ಕ ಜಿಲ್ಲಾ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು ಮಾತನಾಡಿ, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದೇ ಸಂತಸದ ವಿಷಯ. ಆಟಿ ತಿಂಗಳ ಬಗ್ಗೆ ಹೆಚ್ಚೇನೂ ಹೇಳಬೇಕಿಲ್ಲ. ಇಲ್ಲಿ ನಿರ್ಮಾಣವಾದ ಸುಂದರ ವೇದಿಕೆ ಕಾರ್ಯಕ್ರಮದ ಸೊಬಗನ್ನು…

Read More

15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ ಆಗಸ್ಟ್ 2 ರಂದು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಉದ್ಯೋಗ ಮೇಳದಲ್ಲಿ 2873 ಉದ್ಯೋಗಾಕಾಂಕ್ಷಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಯಿತು. ಭಾಗವಹಿಸಿದ ಒಟ್ಟು 288 ಕಂಪನಿಗಳ ಪೈಕಿ 260 ಕಂಪೆನಿಗಳು 3734 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಒಟ್ಟು 14,245 ಅಭ್ಯರ್ಥಿಗಳು 2 ದಿನದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು. ದುಬೈ ಮೂಲದ ಫಾರ್ಚುನ್ ಸಂಸ್ಥೆಯು 5 ಅಭ್ಯರ್ಥಿಗಳನ್ನು 5 ರಿಂದ 8 ಲಕ್ಷ ವಾರ್ಷಿಕ ವೇತನದ ಹುದ್ದೆಗೆ ಆಯ್ಕೆ ಮಾಡಿದ್ದು, 25 ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದಾರೆ. ನಾರಾಯಣ ಹೃದಯಾಲಯವು 43 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಮತ್ತು ಅಂತಿಮ ಸುತ್ತಿನ ಸಂದರ್ಶನಕ್ಕೆ 28 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಝೀ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಅಂತಿಮ ಸುತ್ತಿಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಸೌದಿ ಅರೇಬಿಯಾ ಮೂಲದ ಎಕ್ಪರ್ಟೈಸ್ ಕಂಪೆನಿಯು 37 ಜನರನ್ನು ನೇಮಿಸಿಕೊಂಡಿದೆ. ಮುಂಬೈ ಮೂಲದ…

Read More

ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವು ಜುಲೈ 27 ರಂದು ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನದಲ್ಲಿ ನೆರವೇರಿತು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಲಯನ್ ಎನ್.ಎಮ್ ಹೆಗ್ಡೆ ಎಮ್.ಜೆ.ಎಫ್ ಇವರು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಅತ್ಯುತ್ತಮ ರೀತಿಯಲ್ಲಿ ನೆರವೇರಿಸಿ, ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ‌ ಅಧ್ಯಕ್ಷರಾದ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿಯವರು ಅಧ್ಯಕ್ಷೀಯ ಭಾಷಣ ಮಾಡಿದರು. ಲಯನ್ಸ್ ಜಿಲ್ಲಾ ಚೀಫ್ ಡಿಸ್ಟ್ರಿಕ್ಟ್ ಎಡ್ಮಿನಿಸ್ಟ್ರೇಟರ್ ಲಯನ್ ಯಡಾಡಿ ಅರುಣ್ ಕುಮಾರ್ ಹೆಗ್ಡೆ, ರೀಜನ್ ಚೇರ್ ಪರ್ಸನ್ ಲಯನ್ ರಜತ್ ಹೆಗ್ಡೆ, ಝೋನ್ ಚೇರ್ ಪರ್ಸನ್ ಲಯನ್ ಸಂತೋಷ್ ಶೆಟ್ಟಿ, ರೀಜನ್‌ ಸೆಕ್ರೆಟರಿ ಲಯನ್ ಏಕನಾಥ್ ಬೋಳಾರ್ ಶುಭ ಶಂಸನೆಗೈದರು. ಮಾಜಿ ಜಿಲ್ಲಾ ಗವರ್ನರ್ ಲಯನ್ ಮಹಮ್ಮದ್ ಹನೀಫ್, ಕ್ಲಬ್ ನ ನೂತನ ಕೋಶಾಧಿಕಾರಿ ಲಯನ್ ನಿತೀಶ್ ಆಚಾರ್ ಮಧುವನ ಮತ್ತು ನಿಕಟಪೂರ್ವ ಕಾರ್ಯದರ್ಶಿ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದರು.…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಸ್ಥೆಯ ಅಧ್ಯಕ್ಷರ ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮದಿ0ದ ಆಚರಿಸಲಾಯಿತು. ಶಾಲಾ ಸಂಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗಿ, ಕೇಕ್ ಕತ್ತರಿಸಿ ಮಾತನಾಡಿ ನಾನು ತುಂಬಾ ಅದೃಷ್ಟವoತ. ಇಷ್ಟೊಂದು ಪ್ರೀತಿ, ಗೌರವ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ. ನಾನು ಪ್ರತಿನಿತ್ಯ ನನ್ನ ತಂದೆ- ತಾಯಿಯರನ್ನು ಸ್ಮರಿಸಿ ದಿನಚರಿಯನ್ನು ಪ್ರಾರಂಭಿಸುತ್ತೇನೆ. ನೀವೆಲ್ಲರೂ ನಿಮ್ಮ ಪೋಷಕರನ್ನು ಪ್ರೀತಿಸಿ, ಗೌರವಿಸಿ, ನಿಮ್ಮ ಕೆಲಸಗಳನ್ನು ಇಷ್ಟಪಟ್ಟು ಮಾಡಿ. ಮುಂದಿನ ದಿನಗಳಲ್ಲಿ ನಿಮ್ಮ ಜೀವನದ ಯಶೋಗಾಥೆಯನ್ನು ನಮ್ಮ ಜೊತೆ ಹಂಚಿಕೊಳ್ಳಿ ಎoದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಮಾತನಾಡಿ ತಾವು ಕಟ್ಟಡಗಳನ್ನು ನಿರ್ಮಾಣ ಮಾಡುವುದರ ಮೂಲಕ ವೃತ್ತಿ ಜೀವನವನ್ನು ಪ್ರಾರಂಭಿಸಿ ಇಂದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ಕಟ್ಟುತ್ತಿದ್ದೀರಿ. ನಿಮ್ಮ ಈ ಕಾರ್ಯ ವೈಖರಿ ನಮಗೆಲ್ಲರಿಗೂ ಸ್ಫೂರ್ತಿ ಎಂದರು. ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಸಿಬ್ಬಂದಿವರ್ಗ ಗ್ರೀಟಿಂಗ್ಸ್, ಹೂವಿನ ಗುಚ್ಛವನ್ನು ನೀಡಿ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ…

Read More

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು ಹಾಗೂ ಚಿಣ್ಣರ ಅಂಗಳ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಆಗಸ್ಟ್ 10 ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು, 01 ವರ್ಷದಿಂದ 03 ವರ್ಷದೊಳಗಿನ ಮಕ್ಕಳು ಹಾಗೂ 03 ವರ್ಷದಿಂದ 06 ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆ ಆಯೋಜನೆಗೊಂಡಿದೆ. ಪ್ರಥಮ ಬಹುಮಾನವಾಗಿ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ. 1000 ದೊರೆಯಲಿದೆ. ಅಲ್ಲದೇ ಭಾಗವಹಿಸುವ ಎಲ್ಲಾ ಮುದ್ದು ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಗುವುದು. ಎರಡೂ ವಿಭಾಗಗಳಿಗೂ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ. ಸ್ಪರ್ಧೆಗೆ ಹಾಜರಾಗುವ ಸಂದರ್ಭದಲ್ಲಿ ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಒಂದು ಭಾವಚಿತ್ರ ಕಡ್ಡಾಯವಾಗಿ ತರತಕ್ಕದ್ದು, ಹೆಸರನ್ನು ಈ ಕೆಳಗಿನ ಸಂಖ್ಯೆಗೆ ಆಗಸ್ಟ್ 07 ರ ಒಳಗಡೆ ಕರೆಯ ಮೂಲಕ ನೋಂದಾಯಿಸಲು ಪ್ರಕಟಣೆ ತಿಳಿಸಿದೆ. ಹೆಚ್ಚಿನ…

Read More

ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ ೩೦ನೇ ವಾರ್ಷಿಕ ಸಂಭ್ರಮದ ಪ್ರಯುಕ್ತ ಬಂಟರ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ಹಲವಾರು ಬಂಟರ ಸಂಘಗಳ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಮೂಡಬಿದಿರೆ ಬಂಟರ ಸಂಘವು ಅಮೋಘ ಪ್ರದರ್ಶನವನ್ನು ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿ 75,000 ರೂಪಾಯಿಯನ್ನು ತನ್ನದಾಗಿಸಿಕೊಂಡಿತು. ಗುರುಪುರ ಬಂಟರ ಮಾತೃ ಸಂಘವು ಪ್ರಥಮ ಪ್ರಶಸ್ತಿಯನ್ನು, ಬ್ರಹ್ಮಾವರ ಬಂಟರ ಸಂಘವು ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಕಾರ್ಯಕ್ರಮದ ಪ್ರಶಸ್ತಿ ವಿತರಣೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬೈಂದೂರು ಬಂಟರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ, ಜಾಗತಿಕ ಬಂಟರ ಸಂಘದ ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ ಮತ್ತು ಬೈಂದೂರು ಬಂಟರ ಸಂಘದ ಪದಾಧಿಕಾರಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು.

Read More