Author: admin
ಶ್ರೀ ಮಹಾವಿಷ್ಣುವಿಗೆ ಆಷಾಡ ಶುದ್ಧ ಶಯನ ಏಕಾದಶೀಯಂದು ‘ಯೋಗನಿದ್ರೆ’ ಕಾರ್ತಿಕ ಶುದ್ಧ ದ್ವಾದಶೀಯಂದು ಏಳುತ್ತಾನೆ. ಉತ್ಥಾನ ಎಂದರೆ ಏಳುವುದು ಎಂಬ ಅರ್ಥ. ಹಾಗಾಗಿ ಕಾರ್ತಿಕ ಮಾಸದ ಉತ್ಥಾನ ದ್ವಾದಶಿ ತುಳಸಿ ಪೂಜೆಗೆ ಎಲ್ಲಿಲ್ಲದ ಪ್ರಾಶಸ್ತ್ಯ. ನವೆಂಬರ್ 13 ರಂದು ತುಳಸಿ ಪೂಜೆಯ ಸಂಭ್ರಮ ನಡೆಯಲಿದ್ದು ಕಾತುರತೆ ಸೃಷ್ಟಿಸಿದೆ. ಕಾರ್ತಿಕ ಮಾಸದ 12ನೇಯ ದಿನ ಉತ್ಥಾನ ದ್ವಾದಶಿ ಬರುತ್ತದೆ. ಕಾರ್ತಿಕ ಮಾಸವಿಡಿ ಶ್ರೀ ಮಹಾವಿಷ್ಣು ‘ದಾಮೋದರ’ನಾಗಿ ತುಳಸಿ ಕಟ್ಟೆಯಲ್ಲಿ ಇರುವುದು ವಿಶೇಷ. ಕ್ಷೀರ ಸಮುದ್ರದಲ್ಲಿ ಜನಿಸಿದ ಕಾರಣ ತುಳಸೀಗೆ ಹಾಲಿನ ಅಭಿಷೇಕ ಮಾಡಿ ಪೂಜಿಸುವುದು ಬಹಳ ಶ್ರೇಷ್ಠ. ಈ ದಿನ ನೆಲ್ಲಿಗಿಡದ ಎಕ್ಕಲುಗಳನ್ನಿಟ್ಟು ಪೂಜಿಸುತ್ತಾರೆ. ನೆಲ್ಲಿಗಿಡ ಸಾಕ್ಷಾತ್ ಲಕ್ಷ್ಮೀ ಎಂಬ ನೆಲೆಯಲ್ಲಿ ಪೂಜೆ. ಪ್ರಾತಃ ಕಾಲದಲ್ಲಿ ಹಾಲಿನ ಅಭಿಷೇಕ, ಪಾರಾಯಣ, ಪೂಜೆ, ಉದ್ದಿನ ದೋಸೆ, ನೆಲ್ಲಿಕಾಯಿ ಚಟ್ನಿ ನೈವೇದ್ಯ ಮಾಡಿ, ವಿಶೇಷವಾಗಿ ಶ್ರೀ ವಿಷ್ಣು ಸಹಸ್ರನಾಮ ಪಠಿಸಿ, ಆರತಿ ಮಾಡಿ ಪ್ರಾರ್ಥಿಸುವುದು ನಡೆಯುತ್ತದೆ. ಸಂಜೆ ಸೂರ್ಯಾಸ್ತ ನಂತರ ತುಳಸಿಗೆ ದೀಪ ಬೆಳಗಿಸಿ ವಿಶೇಷ…
ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 14 ಚಿನ್ನ, 08 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 27 ಪದಕದೊಂದಿಗೆ ನಾಗಿಣಿ 800ಮೀ, 1500ಮೀನಲ್ಲಿ ನೂತನ ದಾಖಲೆ, ಜಾಸ್ಮಿನ ಹ್ಯಾಮರ್ ತ್ರೋನಲ್ಲಿ ಕ್ರೀಡಾಕೂಟದ ನೂತನ ಕೂಟ ದಾಖಲೆಯೊಂದಿಗೆ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ: ಬಾಲಕಿಯರ ವಿಭಾಗ: ನಾಗಿಣಿ – 10 ಅಂಕ ಫಲಿತಾಂಶ: ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಇಶಾನಿ ಅರುಣ್-ಚಕ್ರ ಎಸೆತ (ದ್ವಿತೀಯ), ಚಸ್ಮಿತಾ-ಚಕ್ರ…
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತುಮಕೂರು ಇದರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 07 ರಿಂದ 10 ರವೆರೆಗೆ ಮಹಾತ್ಮ ಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 7 ಚಿನ್ನ, 6 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 18 ಪದಕಗಳನ್ನು ಪಡೆದುಕೊಂಡಿತು. ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 16 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಶೋಭಿತ್ ದೇವಾಡಿಗ-ಚಕ್ರಎಸೆತ (ಪ್ರಥಮ), ನಿತಿನ್ ಎಲ್ ಜಿ-ಚಕ್ರಎಸೆತ (ದ್ವಿತೀಯ), ಅಬ್ದುಲ್ ರಜಕ್-ಹ್ಯಾಮರ್ ಎಸೆತ (ದ್ವಿತೀಯ), ಶಿವಾನಂದ ಪೂಜಾರಿ-800ಮೀ (ತೃತೀಯ),4×400ಮೀ ರಿಲೇ (ದ್ವಿತೀಯ), ತೇಜಲ್ ಕೆ ಆರ್-110ಮೀ ಹರ್ಡಲ್ಸ್ (ಪ್ರಥಮ), ದಯಾನಂದ-200ಮೀ (ತೃತೀಯ), 4×400ಮೀ ರಿಲೇ (ದ್ವಿತೀಯ), ಸುಮಂತ್ ಬಿ ಎಸ್-ತ್ರಿವಿಧ ಜಿಗಿತ (ದ್ವಿತೀಯ), ವಿನಾಯಕ್ -5ಕಿಮೀ ನಡಿಗೆ (ಪ್ರಥಮ), ನೊಯೆಲ್-ಉದ್ದ ಜಿಗಿತ (ತೃತೀಯ),ವಿನೋದ್- 4×400ಮೀ ರಿಲೇ (ಪ್ರಥಮ), ಪೃಥ್ವಿರಾಜ್-4×100ಮೀ ರಿಲೇ…
ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಪೂರ್ವಭಾವಿ ಸಭೆಯು ಪತ್ತುಮುಡಿ ಸೌಧದಲ್ಲಿ ನಡೆಯಿತು. ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿ ಮಾತನಾಡಿ, 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳ ಜನಮನ್ನಣೆ ಗಳಿಸಿದ್ದು, ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು. ಕಂಬಳಕ್ಕೆ ಮೆರುಗು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿ, ಕಂಬಳ ಈ ಮಣ್ಣಿನ ಅಸ್ಮಿತೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ, ನಗರದಲ್ಲಿ ನಡೆಯುವ ಕಂಬಳ ಜನಾಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ…
ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಹಿರಿಯಡ್ಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ ಮೂರು ದಶಕಗಳ ಕಾಲ ಸಲ್ಲಿಸಿದ್ದರು ಕುದಿ ವಸಂತ ಶೆಟ್ಟಿಯವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿಯವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಮಾಡಿದವರು. ಕುದಿ ವಸಂತ ಶೆಟ್ಟಿಯವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ದುಬಾಯಿ ಸರ್ವೋತ್ತಮ ಶೆಟ್ಟಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
“ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡ ಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿ ಅವರು ಸದಾ ನೆರವು ನೀಡಿದವರು. ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ. ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ-2024 ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ…
ಮೂಡುಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ ಸುಂದರ ನಾಯ್ಕ ವೇದಿಕೆಯಲ್ಲಿ ಭಾನುವಾರ ನಡೆದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ. ಶಿಕ್ಷಿತರಾಗುವ ಮೂಲಕ ಸಂಘಟಿತ ಹೋರಾಟ ಸಾಧ್ಯ. ಆ ಮೂಲಕ ನಮ್ಮ ನಿರ್ದಿಷ್ಟ ಬೇಡಿಕೆಗಳು ಇಡೇರುತ್ತವೆ. ಹೋರಾಟ ವ್ಯಕ್ತಿತ್ವ, ನೈತಿಕತೆ ಹಾಗೂ ಚರಿತ್ರೆಯನ್ನು ನಿರ್ಮಾಣ ಮಾಡಬಲ್ಲದು ಎಂದು ಅಂಬೇಡ್ಕರ್ ನಂಬಿದ್ದರು. ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬಾಬಾ ಸಾಹೇಬರು…
ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಚಾಂಪಿಯನ್ಶಿಪ್: ಆಳ್ವಾಸ್ ಕಾಲೇಜು ಸತತ ೪ನೇ ಬಾರಿ ಚಾಂಪಿಯನ್ಸ್
ವಿದ್ಯಾಗಿರಿ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಇವುಗಳ ಸಂಯುಕ್ರಾಶ್ರಯದಲ್ಲಿ ನಡೆದ ಅಂತರ್ಕಾ ಲೇಜು ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜಿನ ಮಹಿಳೆಯರ ತಂಡ ಸತತ ೪ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು.ಆಳ್ವಾಸ್ ಕಾಲೇಜು ತಂಡವು ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜು ತಂಡವು ಅಜ್ಜರಕಾಡಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡವು. ಫೈನಲ್ಸ್ನಲ್ಲಿ ಆಳ್ವಾಸ್ ತಂಡವು ಎಸ್.ಡಿ.ಎಂ ಕಾಲೇಜು ತಂಡವನ್ನು ೩೯-೧೪ ಅಂತರದಲ್ಲಿ ಸೋಲಿಸಿ ವೆರಿ ರೆವೆರೆಂಡ್ಮೆ ಸೆಂಜರ್ ಎ ಪತ್ರಾವೋ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು ಪಡೆದುಕೊಂಡಿತು. ಆಳ್ವಾಸ್ತಂ ಡದ ಸುಶ್ಮಿತಾ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರೆ, ಧನಲಕ್ಷ್ಮಿ ಉತ್ತಮ ದಾಳಿಗಾರ್ತಿ, ಮತ್ತು ಎಸ್.ಡಿ.ಎಂ ತಂಡದ ಸುಮಯ್ಯ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಬ್ರಹ್ಮಾವರದ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ 20ನೇ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ಜರಗಿತು. ಉಡುಪಿ ಜಿಲ್ಲೆಯ ಪ್ರೊಬೇಷನರಿ ಡಿವೈಎಸ್ಪಿ ಗೀತಾ ಪಾಟೀಲ್ ಕ್ರೀಡಾ ಜ್ಯೋತಿಯನ್ನು ಬೆಳಗಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡೆಯು ಮಕ್ಕಳಲ್ಲಿ ಉತ್ತಮ ಮೌಲ್ಯವನ್ನು ಬೆಳೆಸಿ ಅತ್ಯುತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ನೆರವಾಗುತ್ತದೆ. ಸೋತವರು ಯಾವುದೇ ಕಾರಣಕ್ಕೂ ಪ್ರಯತ್ನವನ್ನು ಬಿಡದೆ ಮುನ್ನಡೆಯಬೇಕೆಂದರು. ಸಮಾರೋಪ ಸಮಾರಂಭದಲ್ಲಿ ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸ್ನ ಕೋಚ್ ಶಾಲಿನಿ ರಾಜೇಶ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ ಕ್ರೀಡಾಕೂಟ ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿ ಬಹು ನಿರೀಕ್ಷೆಯ ಸಂತೋಷದ ದಿನವಾಗಿದೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ಕೊಡಬೇಕು. ಆರೋಗ್ಯಯುತ ಆಹಾರದ ಸೇವನೆ, ನಿರಂತರ ದೈಹಿಕ ಚಟುವಟಿಕೆಗೆ ಒತ್ತನ್ನು ನೀಡಿ ಮೊಬೈಲ್ ಬಳಕೆಯಿಂದ ದೂರವಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಸಾಧಕರನ್ನು ನಮ್ಮ ಆದರ್ಶ ವ್ಯಕ್ತಿಯನ್ನಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ…
ಮೂಲ್ಕಿ ಬಂಟರ ಸಂಘದ ಕಟ್ಟಡ ನವೀಕರಣದ ಕಾಮಗಾರಿಯು ನವೆಂಬರ್ 8 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಧರ್ಮದರ್ಶಿಗಳೂ, ಹಿರಿಯರೂ ಆದ ಮನೋಹರ ಶೆಟ್ಟಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಅವರ ದಿವ್ಯ ಹಸ್ತದಿಂದ ಕಟ್ಟಡಕ್ಕೆ ಚಾಲನೆ ನೀಡಲಾಯಿತು. ಮುಂಬರುವ ವರ್ಷ ಬಂಟರ ಸಂಘಕ್ಕೆ ಶತಮಾನದ ವರ್ಷ. ನಮ್ಮ ಹಿರಿಯರು ಹಾಕಿ ಕೊಟ್ಟ ಈ ಸಂಘಟನೆಯನ್ನು ಕಿರಿಯರಾದ ನಾವು ಉತ್ತಮವಾದ ರೀತಿಯಲ್ಲಿ ಮುಂದುವರೆಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನಕ್ಕೆ ಅನುಸಾರವಾಗಿ ಮುಂದುವರಿಯಬೇಕು. ಇದಕ್ಕೆ ದೇವರ ಅನುಗ್ರಹವೂ ಇರುತ್ತದೆ. ನಾವೆಲ್ಲಾ ಒಂದಾಗಿ ಸಂಘಟನೆಯನ್ನು ಬಲಪಡಿಸೋಣ. ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಗತಿಪಥದಲ್ಲಿ ಸಾಗಿ ಲೋಕಾರ್ಪಣೆಯಾಗಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭವನ್ನು ಹಾರೈಸಿದರು. ಮುಂದಿನ ದಿನಗಳಲ್ಲಿ ಬಪ್ಪನಾಡು ದುರ್ಗಾಪರಮೇಶ್ವರಿಯ ಅನುಗ್ರಹದಿಂದ ಶೀಘ್ರವೇ ಕಟ್ಟಡ ಲೋಕಾರ್ಪಣೆಯಾಗಿ ಸಮಾಜಕ್ಕೆ ಸ್ಪಂದಿಸಲಿ ಎಂದು ಮನೋಹರ ಶೆಟ್ಟಿ ಅವರು ಶುಭ ಹಾರೈಸಿದರು. ಬಂಟರ…