Author: admin
ಆಳ್ವಾಸ್ನಲ್ಲಿ ಸಂಭ್ರಮದಿಂದ ನಡೆದ ೭೮ನೇ ಸ್ವಾತಂತ್ರ್ಯೋತ್ಸವ ನಿರ್ಭೀತ ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ
ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ ೭೮ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ’ ಎಂದ ಅವರು, ‘ವೈಯಕ್ತಿಕ ಸ್ವಾತಂತ್ರ್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ್ಯ ವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ’ ಎಂದು ಯುವ ಸಮುದಾಯವನ್ನು ಎಚ್ಚರಿಸಿದರು. ಯಾವುದೂ ಅಸಾಧ್ಯ ಎಂಬುದು ಇಲ್ಲ. ಪ್ರಕೃತಿ ಪೂರಕ ಸಂಸ್ಕೃತಿ ಬೆಳೆಯಬೇಕು. ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು. ಅದಕ್ಕೆ ಪ್ರತಿ ವ್ಯಕ್ತಿಯೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ದೇಶದಲ್ಲಿ ಅನೇಕ ಜಾತಿ-ಧರ್ಮಗಳಿವೆ. ಆದರೆ ವೈವಿಧ್ಯತೆಯ ನಡುವೆ ಐಕ್ಯತೆ ಹಾಗೂ ಸಾಮರಸ್ಯ ಇದೆ. ದೇಶದಲ್ಲಿನ ನದಿಗಳು ಸಮುದ್ರ ಸೇರಿದಂತೆ, ಇಲ್ಲಿ ಯಾರ ಪಾಲು ಎಷ್ಟು ಎಂದು ಕೇಳಬಾರದು. ದೇಶ ನಿರ್ಮಾಣಕ್ಕೆ ಸಮರ್ಪಣ ಭಾವ…
ರಾರಾಜಿಸಿದ ತಿರಂಗ ಬ್ರಹ್ಮಾವರ: ಆ. ೧೫ ಇಲ್ಲಿನ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಮತ್ತು ಜಿ ಎಮ್ ಗ್ಲೋಬಲ್ ಸ್ಕೂಲ್ ಜೊತೆಯಾಗಿ ೭೮ನೇ ಸ್ವಾತಂತ್ರೊತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದವು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ಮಾಜಿ ಸೈನಿಕ ಸುರೇಶ್ ಸಿ ರಾವ್ ಆಗಮಿಸಿದ್ದರು. ಅವರು ಮಾತನಾಡಿ ಅನೇಕ ಮಹಾನಾಯಕರ ಸತ್ಯಾಗ್ರಹ , ಚಳುವಳಿ, ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯ ವನ್ನು ಪಡೆದಿದ್ದೇವೆ. ಅವರ ತ್ಯಾಗ ಪರಿಶ್ರಮವನ್ನು ಸ್ಮರಿಸಬೇಕು. ನಾವು ಸಂವಿಧಾನದ ಅಡಿಯಲ್ಲಿ ಪಡೆದ ಹಕ್ಕುಗಳು, ಸ್ವತಂತ್ರ ಜೀವನ ಬೇರೆಯವರ ಸ್ವಾತಂತ್ರೊತ್ಸವದಕ್ಕೆ ಧಕ್ಕೆ ತರಬಾರದು. ಎಲ್ಲರೂ ಸಾಮರಸ್ಯದಿಂದ ಬದುಕಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಧ್ವಜಾರೋಹಣವನ್ನು ನೆರವೇರಿಸಿ ಎಲ್ಲರಿಗೂ ಶುಭಹಾರೈಸಿದರು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಉತ್ತಮ ಶಿಕ್ಷಣ, ಸಂಸ್ಕಾರದಿಂದ ಸದೃಢವಾದ ದೇಶವನ್ನು ಕಟ್ಟಲು ಸಾಧ್ಯ. ಇಂದಿನ ಯುವ ಸಮುದಾಯ ಸಾಧಕರಿಂದ ಸ್ಫೂರ್ತಿಯನ್ನು ಪಡೆದು ಉತ್ತಮ ದೇಶವನ್ನು ಕಟ್ಟಲು ಪ್ರಯತ್ನಿಸಬೇಕೆಂದರು. ಸಾವಿರಾರು ವಿದ್ಯಾರ್ಥಿಗಳ ಕರದಲ್ಲಿ ರಾರಾಜಿಸಿದ ತಿರಂಗ ರಾಷ್ಟ್ರಪ್ರೇಮದ…
ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು. ಪೌರಾಣಿಕ ಪ್ರಸಂಗಗಳಲ್ಲಿ ಪಾತ್ರದ ಸಾಂದರ್ಭಿಕತೆ, ಗಂಭೀರತೆಯನ್ನು ಅರಿತು ಕಲಾವಿದರು ಅಭಿನಯಿಸಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ರೈ ಹೇಳಿದರು. ಅವರು ಮೂಡಬಿದ್ರೆಯ ಸಂಪಿಗೆ ಶ್ರೀ ದುರ್ಗಾ ಜ್ಯೋತಿಷ್ಯಾಲಯದಲ್ಲಿ ಗಾಳಿಮನೆ ಅಮ್ನಾಯ ಯಕ್ಷ ಸಂಸ್ಕೃತಿ ಬಳಗದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ ಆಟ, ಕೂಟ, ನಾಟ್ಯ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು. ಯಕ್ಷಗಾನ ಪರಂಪರೆಯಲ್ಲಿ ವಿಶಿಷ್ಟವಾಗಿ ಮೂಡಿ ಬರುತ್ತಿದ್ದ ಆಟ ಕೂಟಗಳಲ್ಲಿ ಅದೆಷ್ಟೋ ಪ್ರಕಾರ ಯಕ್ಷಗಾನ ವಿದ್ವಾಂಸರು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ವಿದ್ಯೆ ಇಲ್ಲದ ಕಲಾವಿದರು ಪ್ರಬುದ್ಧತೆಯನ್ನು ತೋರಿಸಿದ್ದಾರೆ. ಅಂತಹ ಮಹಾನ್ ಪ್ರತಿಭೆಗಳು ಇಂದು ವಿರಳವಾಗುತ್ತಿವೆ. ಇಂದು ಯಕ್ಷಗಾನ ಕಾಲಮಿತಿಯೊಳಗೆ ಬಂಧಿಯಾಗಿ ಆಧುನಿಕತೆಯ ಸೋಗಿನಲ್ಲಿ ಪ್ರದರ್ಶನಗೊಳ್ಳುತ್ತಿರುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ಯಕ್ಷಗಾನ ರಂಗ ಪ್ರಭುದ್ದ ಕಲಾವಿದರಿಲ್ಲದೇ ಬಡವಾಗಬಾರದು. ಯಕ್ಷಗಾನ ಶಾಸ್ತ್ರೀಯವಾಗಿ ಮೂಡಿಬರಲು ನಾವೇನು ಮಾಡಬೇಕು ಎಂದು ಯಕ್ಷಗಾನ ಸಂಘಟಕರು, ಕಲಾವಿದರು, ಪ್ರೋತ್ಸಾಹಕರು, ಪ್ರೇಕ್ಷಕರು ಆತ್ಮ ವಿಮರ್ಶೆ ಮಾಡಿಕೊಳ್ಳುವ ಕಾಲ ಬಂದಿದೆ ಎಂದು…
ಬಂಟರ ಸಂಘ ಪಾಣಾಜೆ ವತಿಯಿಂದ ‘ಬಂಟೆರೆನ ಆಟಿಡೊಂಜಿ ದಿನ’ ಕಾರ್ಯಕ್ರಮ ಆಗಸ್ಟ್ 11ರಂದು ಸೂರಂಬೈಲು ತರವಾಡು ಮನೆಯಲ್ಲಿ ನಡೆಯಿತು. ಹಿರಿಯರಾದ ನಾರಾಯಣ ರೈ ಸೂರಂಬೈಲು, ವಿಠಲ ರೈ ಕಡಮ್ಮಾಜೆ, ಜಗನ್ಮೋಹನ ರೈ ಕೆದಂಬಾಡಿ, ಕಿಟ್ಟಣ್ಣ ಶೆಟ್ಟಿ ಕೋಟೆ, ಸೀತಾರಾಮ ರೈ ಪಡ್ಯಂಬೆಟ್ಟು ಹಾಗೂ ಜತ್ತಪ್ಪ ರೈ ಕೊಂಡೆಪ್ಪಾಡಿಯವರು ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆ ನೀಡಿದರು. ಆ ಬಳಿಕ ಮಕ್ಕಳಿಗೆ, ಮಹಿಳೆಯರಿಗೆ, ಮಹನೀಯರಿಗೆ ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸೂರಂಬೈಲು ತರವಾಡು ಟ್ರಸ್ಟ್ ಅಧ್ಯಕ್ಷ, ಹಿರಿಯರಾದ ಆನಂದ ರೈ ಸೂರಂಬೈಲು ಆಟಿದ ವಿಶೇಷದ ಬಗ್ಗೆ ಮಾತನಾಡಿದರು. ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಣಾಜಿ ಬಂಟರ ಸಂಘದ ಅಧ್ಯಕ್ಷ ಜಗನ್ಮೋಹನ ರೈ ಸೂರಂಬೈಲುರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಧ್ಯಕ್ಷ ಲಕ್ಷ್ಮಿನಾರಾಯಣ ರೈ ಕೆದಂಬಾಡಿ ಸ್ವಾಗತಿಸಿ, ಕೋಶಾಧಿಕಾರಿ ಸುಧಾಕರ ರೈ…
ನಮ್ಮಲ್ಲಿ ಅನೇಕ ಮಹಿಳೆಯರು ಶಾಲೆ ನಡೆಸುವ ಶಕ್ತಿವುಳ್ಳವರಿದ್ದಾರೆ. ಅವರಿಗೊಂದು ಶಾಲೆ ಮಾಡಿಕೊಡುವ ಪರಿಕಲ್ಪನೆ ನಮ್ಮ ಮುಂದಿದೆ. ಈಗಾಗಲೇ ಪುತ್ತೂರಿನಲ್ಲಿ ಐದೂವರೆ ಎಕ್ರೆ ಜಾಗವನ್ನು ಬಂಟ ಸಮಾಜಕ್ಕಾಗಿ ಗುರುತಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಮಹಿಳಾ, ಯುವ, ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಕೊಂಬೆಟ್ಟು ಎಂ. ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಗಸ್ಟ್ 10ರಂದು ನಡೆದ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಲ್ಪವೃಕ್ಷದ ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಬಳಿಕ ಸಂಘದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇವತ್ತು ಬಂಟ ಸಮಾಜದಿಂದ ಒಳ್ಳೆಯ ಕಾರ್ಯಕ್ರಮದ ಮೂಲಕ ಈ ಸಭಾಂಗಣ ತುಂಬುವ ಮೂಲಕ ಬಂಟರ ಶಕ್ತಿಯನ್ನು ತೋರಿಸುವ ಕೆಲಸ ಆಗಿದೆ.…
ಪುಣೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಜ್ ವತಿಯಿಂದ 2024 ರ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಅಹ್ಮದ್ ನಗರದ ಖ್ಯಾತ ಉದ್ಯಮಿ ಶಬರಿ ಇಂಡಸ್ಟ್ರಿಯಲ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ, ಅಹ್ಮದ್ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಕುಂಬಳೆ ಮುಂಡುಪಳ್ಲ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಂಸ್ಥಾಪಕರಾದ ಕೊಡುಗೈ ದಾನಿ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವಾಕರ್ತ, ಕಲಾ ಪೋಷಕರಾಗಿರುವ ಕೆ.ಕೆ ಶೆಟ್ಟಿಯವರನ್ನು ಇವರನ್ನು ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ರಘುರಾಮ್ ರೈ, ಮಾಜಿ ಅಧ್ಯಕ್ಷ ಶೇಖರ್ ಪೂಜಾರಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ, ಉಪ ಕೋಶಾಧಿಕಾರಿ ಬಾಲಕೃಷ್ಣ ಗೌಡ, ಸಲಹೆಗಾರರಾದ ಜಗದೀಶ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಜಗದೀಪ್ ಶೆಟ್ಟಿಯವರು ಉಪಸ್ಥಿತರಿದ್ದರು. ವರದಿ : ಹರೀಶ್ ಮೂಡಬಿದ್ರಿ ಪುಣೆ
ನಮ್ಮ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಿದ ಸಂದರ್ಭ ನಮ್ಮ ಕರಾವಳಿ ಕರ್ನಾಟಕವೂ ಮುಂಚೂಣಿಯ ಜವಾಬ್ದಾರಿಯನ್ನೇ ವಹಿಸಿತ್ತು. ಆಗ ಕರಾವಳಿಯ ಹೋರಾಟದ ನಿರ್ಣಾಯಕ ಹೊಣೆಯನ್ನು ಹೊತ್ತದ್ದು ಯಾವುದೇ ಫಲಾಪೇಕ್ಷೆ ಇಲ್ಲದ ಅವಿಭಜಿತ ಕಾರ್ಕಳ ತಾಲೂಕಿನ ಪಡುಕುಡೂರು ಬೀಡು ಧರ್ಮರಾಜ ಅಧಿಕಾರಿ (ಎಂ.ಡಿ.ಅಧಿಕಾರಿ) ಮಹಾನ್ ರಾಷ್ಟ್ರಪ್ರೇಮಿಯಾಗಿ ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದರು. 1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿ ನಡೆಯುತ್ತಿದ್ದರೆ, ಇತ್ತ ಇಡೀ ದೇಶದಲ್ಲಿ ಮಹಾತ್ಮ ಗಾಂಧೀಜಿ ಅವರ ಕರೆಯಂತೆ ಪ್ರತಿಭಟನಾ ಸಭೆಗಳು ನಡೆಯುತ್ತಿದ್ದವು. ಮಂಗಳೂರಿನ ಕೇಂದ್ರ ಮೈದಾನದಲ್ಲಿ 10 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಮುಗಿಲು ಮುಟ್ಟುವ “ವಂದೇ ಮಾತರಂ” ಮೊಳಗುತ್ತಿತ್ತು. ಬಿಸಿರಕ್ತದ 27 ರ ತರುಣ ದೇಶಕ್ಕಾಗಿ ಆವೇಶದಿಂದ ಭಾಷಣ ಮಾಡುತ್ತಿದ್ದರು. ಅಷ್ಟೊತ್ತರಲ್ಲಿ ಪೊಲೀಸರು ಲಾಟಿ ಬೀಸಿ ಮೈದಾನಕ್ಕೆ ನುಗ್ಗಿದರು. ಆ ಕ್ಷಣದಲ್ಲಿ ಹಲವರು ಕಾಲ್ಕಿತ್ತರೆ, ಹಲವರು ಎದೆಯೊಡ್ಡಿ ನಿಂತರು. ಆದರೇ ತರುಣ ಮಾತ್ರ ತನ್ನ ಅಬ್ಬರದ ಮಾತು ಮುಂದುವರಿಸಿದ್ದ. ವೇದಿಕೆ ಏರಿದ ಪೊಲೀಸರು ಆ ತರುಣನ…
ಪುಣೆ ತುಳುಕೂಟದ 25 ನೇ ವಾರ್ಷಿಕೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ ಗಣೇಶ್ ನಗರದ ಎರಾಂಡವನದ ಪುಣೆ ಕನ್ನಡ ಸಂಘದ ಶ್ರೀಮತಿ ಶಕುಂತಲಾ ಜಗನ್ನಾಥ್ ಶೆಟ್ಟಿ ಆಡಿಟೋರಿಯಂನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ತುಳುಕೂಟ ಪುಣೆ ಇದರ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಾಜ್ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಸದಾನಂದ ಕೆ. ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರು, ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ರಾಜೇಂದ್ರ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಸಾಮಾಜಿಕ ಸೇವೆಗೈದ ಗಣ್ಯರಾದ ಅಹ್ಮದ್ ನಗರದ ಉದ್ಯಮಿ ಶಬರಿ ಇಂಡಸ್ಟ್ರಿಯಲ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ನ ಆಡಳಿತ…
ಶ್ರೀ ಕ್ಷೇತ್ರ ಕಟೀಲಿನ ಗೋಪಾಲಕೃಷ್ಣ ಅಸ್ರಣ್ಣರ 24 ನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಬಂಟರ ಸಂಘ ಮುಂಬಯಿಯ ಬಂಟರ ಭವನದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಒಳಿತಿಗಾಗಿ ಶ್ರಮಿಸಿದ ಐಕಳ ಹರೀಶ್ ಶೆಟ್ಟಿಯವರನ್ನು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು. ಅಲ್ಲದೇ ಹಲವಾರು ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ಜರಗಿತು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದಾನಿಗಳಾದ ಡಾ| ಆರ್ ಕೆ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಪದ್ಮನಾಭ ಕಟೀಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಬಂಟರ ಸಂಘ ಕಟಪಾಡಿ ಮತ್ತು ಬಂಟರ ಮಹಿಳಾ ವೇದಿಕೆ ಜಂಟಿಯಾಗಿ ನಡೆಸಿದ ಆಟಿಡೊಂಜಿ ದಿನ ಕಾರ್ಯಕ್ರಮ ಆಗಸ್ಟ್ 11 ರಂದು ಆದಿತ್ಯವಾರ ಎಸ್. ವಿ. ಎಸ್ ಸಭಾಂಗಣದಲ್ಲಿ ನಡೆಯಿತು. ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿದ ವಿಶೇಷತೆಯ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಶ್ವಿನ್ ಬಲ್ಲಾಳ್ ಕಟಪಾಡಿ ಬೀಡು ಅವರು ಸಂಘದ ಅಭಿವೃದ್ಧಿಗೆ ತನ್ನ ವಿಶೇಷ ಕೊಡುಗೆಯನ್ನು ನೀಡುತ್ತೇನೆ ಎಂದು ತಿಳಿಸಿದರು. ಅತಿಥಿಗಳಾಗಿ ಬಂಟರ ಸಂಘ ಉಡುಪಿ ತಾಲೂಕು ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆ, ನಿರ್ದೇಶಕರಾದ ಇಂದಿರಾ ಸುಬ್ಬಯ್ಯ ಹೆಗ್ಡೆ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ವೀಣಾ ಶೆಟ್ಟಿ, ಇಂದು ಶೆಟ್ಟಿ, ಜಯ. ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಟಪಾಡಿ ಬಂಟರ ಸಂಘದ ಅಧ್ಯಕ್ಷರಾದ ದಯಾನಂದ ಆರ್ ಶೆಟ್ಟಿಯವರು ಎಲ್ಲರನ್ನೂ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ವರದಿಯನ್ನು ವಾಚಿಸಿದರು. ಮಹಿಳಾ ಕಾರ್ಯದರ್ಶಿ…














