Author: admin
ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ಅಭಿನಂದನೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಬೈಂದೂರು ಯಡ್ತರೆ ಬಿ. ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರಿಗೆ ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಅಂಪಾರು ಡಾ. ನಿತ್ಯಾನಂದ ಶೆಟ್ಟಿ, ಬೈಂದೂರು ಬಂಟರ ಯಾನೆ ನಾಡವರ ಸಂಘದ ಗೌರವಾಧ್ಯಕ್ಷ ಚುಚ್ಚಿ ನಾರಾಯಣ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಕೆ. ವಿಠ್ಠಲ ಶೆಟ್ಟಿ, ನಾಕಟ್ಟೆ ಜಗನ್ನಾಥ ಶೆಟ್ಟಿ, ಸಂಘದ…
ಕಂಬಳ ಕ್ಷೇತ್ರದ ತಾರಾ ಓಟಗಾರ ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಅವರು ಮತ್ತೆ ಮಂಗಳೂರು ಕಂಬಳದಲ್ಲಿ ತಮ್ಮ ಪಾರಪತ್ಯ ಮೆರೆದಿದ್ದಾರೆ. ಮಂಗಳೂರು ಕಂಬಳದಲ್ಲಿ ಸತತ ಆರನೇ ಬಾರಿ ಫೈನಲ್ ಪ್ರವೇಶ ಮಾಡಿದ ನಿಶಾಂತ್ ಶೆಟ್ಟಿ ಸಾಧನೆ ಮೆರೆದರು. ಈ ಬಾರಿ ನಿಶಾಂತ್ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಪ್ರಥಮ ಸ್ಥಾನ ಬಾಚಿಕೊಂಡರು.ಇದು ಆರನೇ ವರ್ಷದ ಮಂಗಳೂರು ರಾಮ – ಲಕ್ಷ್ಮಣ ಕಂಬಳ ಕೂಟವಾಗಿದ್ದು, ಆರು ವರ್ಷವೂ ನಿಶಾಂತ್ ಶೆಟ್ಟಿ ಅವರು ಪದಕ ಗೆದ್ದಿರುವುದು ಹೆಚ್ಚುಗಾರಿಕೆ. ಬಂಗ್ರಕೂಳೂರಿನಲ್ಲಿ ನಡೆಯುವ ಕೂಟದಲ್ಲಿ ಅವರು ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19…
ಮುಂಬಯಿ ಕರ್ನಾಟಕ ಸಂಘ ಮುಂಬಯಿ ; 86 ಮತ್ತು 87ನೇ ವಾರ್ಷಿಕ ಮಹಾಸಭೆ ಸಾಂಸ್ಕೃತಿಕ ಸಮುಚ್ಚಯದಿಂದ ಸಂಘದ ಗತವೈಭವ ಮರುಕಳಿಸಲಿದೆ : ಎಂ.ಎಂ.ಕೋರಿ
ಮುಂಬಯಿ (ಆರ್ ಬಿ ಐ), ಜು.30: ಮುಂಬಯಿ ಕರ್ನಾಟಕ ಸಂಘ, ಮುಂಬಯಿ ಇದರ 86 ಮತ್ತು 87ನೇ ವಾರ್ಷಿಕ ಮಹಾಸಭೆಯು ಇಂದಿಲ್ಲಿ ಶನಿವಾರ ಸಂಜೆ ಮಾಟುಂಗಾ ಪೂರ್ವದಲ್ಲಿನ ಮೈಸೂರು ಅಸೋಸಿಯೇಶನ್ನ ಕಿರು ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಮನೋಹರ್ ಎಂ ಕೋರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. 1933ರಲ್ಲಿ ಸ್ಥಾಪಿತ ಹೊರನಾಡ ಕನ್ನಡಿಗರ ಪ್ರಾತಿನಿಧಿಕ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ 89ರ ಸೇವಾವಧಿಯ ಹಿರಿಯ ಸಂಸ್ಥೆ sಸದ್ಯ 7 ಸಂಘ ಸಂಸ್ಥೆಗಳ ಸದಸ್ಯತ್ವವುಳ್ಳ, 45 ಮಹಾ ಪೋಷಕರು , 37 ಪೋಷಕರು, 3401 ಅಜೀವ ಸದಸ್ಯರು ಹೊಂದಿರುವ ಹೊರನಾಡ ಕನ್ನಡಿಗರ ಹಿರಿಯ ಸಂಸ್ಥೆಯಾಗಿದೆ. ಮಹಾರಾಷ್ಟ್ರದ ಬಹುಭಾಷಿಕ ನೆಲದಲ್ಲಿ ಕನ್ನಡಿಗರು, ಕನ್ನಡ-ಮರಾಠಿ ಭಾಷಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೌಹಾರ್ದತೆಯನ್ನು ಕಾಪಾಡಿಕೊಂಡು ಬಂದಿರುವ ಹಿರಿಯ ಮತ್ತು ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದು ಮನೋಹರ್ ಎಂ.ಕೋರಿ ಅಧ್ಯಕ್ಷೀಯ ಭಾಷಣವನ್ನುದ್ದೇಶಿಸಿ ತಿಳಿಸಿದರು. ಕೊರೋನಾ ಪಿಡುಗುವಿನಿಂದಾಗಿ ಸಂಘದ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕೆಲಸ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು. ಆದರೂ ನಿರ್ಮಾಣ ಕೆಲಸ…
ಬ್ಯಾಂಕಿಂಗ್ ಉದ್ಯಮದ ಉಗಮ ಸ್ಥಾನ, ತೊಟ್ಟಿಲು, ತವರೂರು ಎಂದೇ ಖ್ಯಾತಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾಂಕಿಂಗ್ ದಿಗ್ಗಜರುಗಳಲ್ಲಿ ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಅವಿಸ್ಮರಣೀಯ. ಒಬ್ಬ ವ್ಯಕ್ತಿ ಸಮಾಜಕ್ಕೆ ಸಲ್ಲಿಸಿದ ಮಹತ್ವದ ಸೇವೆಯನ್ನು ಮುಂದಿನ ಜನಾಂಗ ನೆನಪಿನಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿಯೂ ಇದೊಂದು ಪ್ರಬುದ್ಧ ಸಿದ್ಧಾಂತವೆಂದರೂ ತಪ್ಪಾಗಲಾರದು. ಸಮಸ್ತ ಬಂಟ ಸಮಾಜ ಅವರನ್ನು ಸ್ಮರಿಸುವುದು ನಿಜಕ್ಕೂ ಔಚಿತ್ಯಪೂರ್ಣ. 1962 ರಿಂದ 1979ರವರೆಗೆ ವಿಜಯ ಬ್ಯಾಂಕ್ನ ಅಧ್ಯಕ್ಷರಾಗಿ ಅನೇಕ ಸಾಧನೆಗಳನ್ನು ಮಾಡಿ ಬ್ಯಾಂಕ್ಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮಹಾನ್ ಚೇತನ. ಇಂದು ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ದೊಂದಿಗೆ ವಿಲೀನವಾದರೂ ಸುಂದರಾಮ ಶೆಟ್ಟಿ ಹೆಸರು ಬ್ಯಾಂಕ್ನೊಂದಿಗೆ ಅಚ್ಚಳಿಯದೇ ಉಳಿದಿದೆ. ರಾಜಮರ್ಜಿಯ ಸಮೃದ್ಧ ಮನೆತನದಲ್ಲಿ ಹುಟ್ಟಿದರೂ ಕೆಳವರ್ಗದ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಹೃದಯ ಸುಂದರರಾಮ ಶೆಟ್ಟಿ ಅವರಿಗಿತ್ತು. ಅವರಿಗೆ ಬ್ಯಾಂಕ್ನ ಲಾಭವನ್ನು ಹೆಚ್ಚಿಸುವುದೊಂದೇ ಉದ್ಯಮದ ಉದ್ದೇಶವಾಗಿರಲಿಲ್ಲ. ಉದ್ಯಮವು ಸಮಾಜದ ಅನೇಕರಿಗೆ ಉದ್ಯೋಗಾವಕಾಶಗಳನ್ನು ನೀಡುವುದರೊಂದಿಗೆ ಸಾಮಾಜಿಕ ಹಿತಕ್ಕಾಗಿ, ಲೋಕ ಕಲ್ಯಾಣಕ್ಕಾಗಿ ಸ್ಥಾಪಿಸಲ್ಪಡಬೇಕು…
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಅಕ್ಟೋಬರ್ 6 ರಿಂದ 8 ರ ವರೆಗೆ ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ನಡೆಯುವ ಸೀರೆ, ಆಭರಣಗಳ ಮಾರಾಟ ಮೇಳವನ್ನು ಶ್ರೀಮತಿ ನಿರ್ಮಿತ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಸುರತ್ಕಲ್ ಪರಿಸರದವರಿಗೆ ಇದೊಂದು ಅಪೂರ್ವ ಅವಕಾಶ. ನವನವೀನ ಮಾದರಿಯ ಸೀರೆ, ಸಿದ್ದ ಉಡುಪುಗಳನ್ನು ಖರೀದಿಸುವ ಅವಕಾಶ ಒದಗಿದೆ. ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದು ನಿರ್ಮಿತ ಸತೀಶ್ ಶೆಟ್ಟಿ ತಿಳಿಸಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಎ ಶೆಟ್ಟಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ಉಡುಪಿ- ಉದ್ಯಾವರದ ಜಯಲಕ್ಷ್ಮೀ ಸಿಲ್ಕ್ಸ್ ಇವರ ಸೀರೆ ಮತ್ತು ಸಿದ್ದ ಉಡುಪುಗಳನ್ನು ಮಹಿಳಾ ವೇದಿಕೆಯ ಆಶ್ರಯದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಮಾರಾಟ ಮೇಳ ನಡೆದಿದೆ. ಇವರ ಸೀರೆ, ಸಿದ್ದುಉಡುಪುಗಳಿಗೆ ಎಲ್ಲೆಡೆ ಬಹುಬೇಡಿಕೆ ಇದೆ. ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಅಕ್ಟೋಬರ್ 6 ರಿಂದ 8 ರ ವರೆಗೆ ಮಾರಾಟ ಮೇಳದ ವ್ಯವಸ್ಥೆಯನ್ನು…
“ಬಂಟರ ಯಾನೆ ನಾಡವರ ಮಾತೃ ಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಬಂಟರು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ಈ ಮೂಲಕ ಎಲ್ಲಾ ಜಾತಿ ಧರ್ಮಗಳ ಜನರ ಮಧ್ಯೆ ಪ್ರೀತಿ, ಸೋದರತೆ ಬೆಳೆದು ಸ್ವಸ್ಥ ಸಾಮರಸ್ಯದ ಸಮಾಜ ನಿರ್ಮಾಣವಾಗಲಿ. ನಾನು ಸ್ಪೀಕರ್ ಆದ ಬಳಿಕ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶ ಕೊಟ್ಟು ಸರಕಾರವನ್ನು ಸೂಕ್ತ ರೀತಿಯಲ್ಲಿ ನಡೆಯಲು ನನ್ನಿಂದಾದ ಸಹಕಾರ ನೀಡುತ್ತಿದ್ದೇನೆ. ಆದರೆ ಇದೇ ಕಾರಣಕ್ಕೆ ಸ್ಪೀಕರ್ ಸರಿಯಿಲ್ಲ ಎನ್ನುವವರೂ ಇದ್ದಾರೆ. ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತದೆ. ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈ ಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ” ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಿವಿಮಾತು ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ…
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಸಂಘದ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ ಅವರು, “ಆಟಿ ತಿಂಗಳು ತುಳುವರಲ್ಲಿ ಅತ್ಯಂತ ಭಿನ್ನವಾದುದು. ನಮ್ಮ ಪೂರ್ವಜರು ಆಟಿ ತಿಂಗಳನ್ನು ಕಷ್ಟದಿಂದ ಕಳೆಯುತ್ತಿದ್ದರು. ಇಂದಿನ ಕಾಲದಲ್ಲೂ ಯುವಜನತೆ ಆಟಿ ತಿಂಗಳ ಆಚರಣೆ, ಸಂಪ್ರದಾಯವನ್ನು ಮರೆಯದೆ ಇರುವುದು ಶ್ಲಾಘನೀಯ” ಎಂದರು. ಬಳಿಕ ಮಾತಾಡಿದ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್ ಅವರು, “ಆಟಿ ತಿಂಗಳ ಕಷ್ಟ, ವಿಶೇಷವಾದ ತಿಂಡಿ ತಿನಿಸು, ನಮ್ಮ ಹಿರಿಯರ ನೆನಪು ಎಲ್ಲವೂ ಸದಾ ನೆನಪಲ್ಲಿ ಉಳಿಯುವಂತದ್ದು. ಅದನ್ನು ಇಂದು ಮಾತ್ರವಲ್ಲ ಮುಂದಿನ ಪೀಳಿಗೆಯ ಮಕ್ಕಳೂ ಕೂಡಾ ತಿಳಿಯುವಂತಾಗಬೇಕು. ಆಟಿ ತಿಂಗಳ ತುಳುನಾಡಿನ ಆಚರಣೆಗಳು ಮುಂದಿನ ತಲೆಮಾರಿಗೂ ಹೀಗೆಯೇ ಉಳಿಯಬೇಕು” ಎಂದರು. ಪುತ್ತೂರು ಕ್ಷೇತ್ರದ…
ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ, ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು. ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯಬಹುದು. ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ – ಸೌದಿ ಘಟಕದ ಅಧ್ಯಕ್ಷ ವಿ…
ಬಾಳ ತೊತ್ತಾಡಿ ಶ್ರೀ ನಾಗ ಬ್ರಹ್ಮ ಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಗಳು ಸಂಪೂರ್ಣಗೊಂಡಿದ್ದು ಮೇ 2 ರಿಂದ ಮೇ 7 ರ ತನಕ ಶ್ರೀ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರ ಮತ್ತು ಪರಿವಾರ ದೇವರ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶಾಭೀಷೇಕ ಕಾರ್ಯಕ್ರಮಗಳು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿವೆ. ಮೇ 2 ರಂದು ತೋರಣ, ಉಗ್ರಾಣ ಮುಹೂರ್ತ, ಕುಣಿತ ಭಜನೆ, ಮೇ.4 ರಂದು ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠೆ, ಮೇ. 5 ರಂದು ನಾಗದರ್ಶನ,ಮೇ.7 ರಂದು ಬ್ರಹ್ಮ ಕಲಶಾಭಿಷೇಕ ಹಾಗೂ ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ನಡೆಯಲಿದೆ.
ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ಇಲ್ಲಿಯ ಪ್ರಧಾನ ಕಛೇರಿಯ ಆವರಣದಲ್ಲಿ ನೂತನ ಗೋದಾಮು ಹಾಗೂ ಬಹು ಸೇವಾ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು 21.02.2022 ರಂದು ಜರಗಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕುತ್ಯಾರು ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಜರಗಿತು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಸಮಾಜ ಸೇವಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, DCC ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಜೇಶ್ ರಾವ್, ಸಹಕಾರ ಸಂಘಗಳ ಸಹಾಯಕ ನಿಭಂದಕರಾದ ಶ್ರೀ ಅರುಣ್ ಕುಮಾರ್, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ರಾಮರಾಯ ಪಾಟ್ಕರ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲತಾ ಎಸ್ ಆಚಾರ್ಯ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿನಿ ಶೆಟ್ಟಿಯವರು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮವನ್ನು ವೇದ ಮೂರ್ತಿ ಶ್ರೀನಿವಾಸ ಭಟ್ ಶಿರ್ವ ಅವರು ನೆರವೇರಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀಮತಿ ವಾರಿಜ ಪೂಜಾರ್ತಿಯವರು ಸ್ವಾಗತಿಸಿದರು ಹಾಗೂ ಮುಖ್ಯ…