Author: admin
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಿದ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ನಾಮಕರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಲಾದ ಕಟ್ಟಡವನ್ನು ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ತಜ್ಞರು, ಪ್ರೇರಣಾತ್ಮಕ ಉಪನ್ಯಾಸಕರಾದ ಡಾ. ಗುರುರಾಜ್ ಖರ್ಜಗಿಯವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ| ಹೆಚ್.ಎಸ್. ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಶಾಲಾ ಶಿಕ್ಷಣ ಮತ್ತು ಪ್ರೌಢಶಾಲಾ ಇಲಾಖೆ ಉಪ ನಿರ್ದೇಶಕರಾದ ಕೆ. ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ…
ಉಡುಪಿಯ ಪ್ರಖ್ಯಾತ ಸಂಸ್ಥೆ ಸಾಯಿರಾಧ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮನೋಹರ ಎಸ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಅನುರಾಧ ಎಂ. ಶೆಟ್ಟಿಯವರು “ಕಾಪುವಿನ ಅಮ್ಮನ ಮಕ್ಕಳು” ತಂಡಕ್ಕೆ ಸೇರ್ಪಡೆಯಾಗಿದ್ದು, ಡಿಸೆಂಬರ್ 10 ರಂದು ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಬರೆದು ಮಾತೃಶ್ರೀ ರಾಧಾ ಸುಂದರ್ ಶೆಟ್ಟಿ ‘ರಾಧಾಛಾಯಾ’ ಉಳಿಯಾರಗೋಳಿ ಕಾಪು ಇವರ ಸ್ಮರಣಾರ್ಥ 40 ಶಿಲಾಸೇವೆಯೊಂದಿಗೆ ಅಮ್ಮನಿಗೆ ಸಮರ್ಪಿಸಿದರು.ಈ ಸಂಧರ್ಭ ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರಮೇಶ್ ಶೆಟ್ಟಿ ಕಾಪು ಕಲ್ಯ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಶ್ರೀಮತಿ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕರುಗಳಾದ ಶ್ರೀಮತಿ ಶೋಭಾ ರಮೇಶ್ ಶೆಟ್ಟಿ ಮತ್ತು ಶ್ರೀಮತಿ ಕವಿತಾ ಶೆಟ್ಟಿ ಉಪಸ್ಥಿತರಿದ್ದರು.
ಗೋವಾ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಜತ ಮಹೋತ್ಸವದ ಕಾರ್ಯಕ್ರಮ 2025 ರ ಜನವರಿ 19 ರಂದು ಭಾನುವಾರ ಮಡ್ಗಾಂವ್ ಟೇಲ್ ಲಕ್ಷ್ಮಿ ಎಂಪೈರ್ ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ಅವರ ನೇತೃತ್ವದಲ್ಲಿ ನವೆಂಬರ್ 30 ರ ಶನಿವಾರ ಸಂಜೆ ಹೋಟೆಲ್ ಸಾಗರ್ ವಿವ್ ಕನ್ಸೋಲಿನ್ ಪಣಜಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು.ಸಭೆಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿ ಶೆಟ್ಟಿ ಬೊಮ್ಮರ ಬೆಟ್ಟು, ಉಪಾಧ್ಯಕ್ಷ ವಿಜಯೇಂದ್ರ ಶೆಟ್ಟಿ ಪರ್ಕಳ, ಪ್ರಧಾನ ಕಾರ್ಯದರ್ಶಿ ಸುನೀಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ಹರ್ಷ ಶೆಟ್ಟಿ ಕಾವಡಿ, ಕರುಣಾಕರ ಶೆಟ್ಟಿ ಪೆರ್ಡೂರು ಹಾಗೂ ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾಗಿರಿ: ಪಂಡಿತ್ ಎಂ.ವೆAಕಟೇಶ್ ಕುಮಾರ್ ಅವರ ಭಕ್ತಿ ಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು, ಗುಜರಾತ್ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ. ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು. ದೇಶದ ಪಶ್ಚಿಮ ತೀರದ ಗುಜರಾತ್ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗಾರ್ಭ. ಗುಜರಾತ್ನ ರಂಗ್ ಮಲಹರ್ ತಂಡ ಸದಸ್ಯರು ಸಾಂಪ್ರದಾಯಿಕ ವಸ್ತ್ರ ತೊಟ್ಟು ಹೆಜ್ಜೆ ಹಾಕಿದಾಗ, ಅಪ್ಸರೆಯರು ಧರೆಗಿಳಿದು ನರ್ತಿಸಿದ ಚಿತ್ರಣ ರೂಪುಗೊಂಡಿತು.’ರಂಗ್ ಧಾರಿ ಚೂಡೆ .. ಹಾಡಿಗೆ ಹೆಣ್ಣುಮಕ್ಕಳು ಹೆಜ್ಜೆ ಹಾಕುತ್ತಾ ಗುಜರಾತಿನ ಸಾಂಸ್ಕೃತಿಕ ಸಿಂಚನ ಉಣಬಡಿಸಿದರು. ಕೆಂಪು, ಗುಲಾಬಿ, ಹಳದಿ, ಕಿತ್ತಳೆ ಸೇರಿದಂತೆ ಪ್ರಖರ ಬಣ್ಣಗಳ ಚಾನ್ಯ, ಚೋಲಿ ಅಥವಾ ಘಾಗ್ರ ಚೋಲಿ, ಬಾಂದನಿ, ಅಭ್ಲಾ (ಕನ್ನಡಿ) ಸಹಿತ ದಪ್ಪನೆಯ ಗುಜರಾತಿ ಅಂಚನ್ನು ಹೊಂದಿದ ದುಪ್ಪಟ್ಟ ತೊಟ್ಟ ಕನ್ಯೆಯರು ಚಂದ್ರನ ಬೆಳಕಿಗೆ ಹೊಳೆವ ನೆಕ್ಲೆಸ್, ಬಳೆ,…
ವಿದ್ಯಾಗಿರಿ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧರ್ಯ. ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಗಾನ ಸುಧೆ ಹರಿಸಿದರು. ಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ ಕಲಿಸಿದರು. ಆಲಿಸುವ ಮನಸ್ಸು ತಂಪಾಗಿರಬೇಕು ಎಂದು ನೆನಪಿಸಿದರು. ಶ್ರೀ ರಾಗದ ಮೂಲಕ ಮುಸ್ಸಂಜೆಯ ಹೊತ್ತಲ್ಲಿ ಬದ್ಧತೆ ಹಾಗೂ ಭಕ್ತಿಯನ್ನು ಮೂಡಿಸಿದರು. ಬಳಿಕ, ‘ಕಮಲೇ… ಕಮಲಾಲಯೇ ಕಮಲ ಭವಾದಿ ಸುರ ವಂದಿತ ಪದೇ… ತ್ರಿಗುಣಾಭಿಮಾನಿಯೇ’ ಎಂದು ಲಕ್ಷ್ಮೀ ಸ್ತುತಿ ಭಜಿಸಿದರು. ಪ್ರದೀಪ ಮತ್ತು ಮಿಶ್ರ ರಾಗದಲ್ಲಿ ಭಜಿಸಿದರು. ‘ಬಂದದ್ದು ಸರ್ಥಕ ಆತು. ನಾ ಹೆಂಗಾರ ಹಾಡ್ಲಿ… ಹಾಡ್ಲಿಕ್ಕಾ ಹುರಪು…
ವಿದ್ಯಾಗಿರಿ (ಮೂಡುಬಿದಿರೆ): `ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ವಿ ರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು. ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು ಎಂದು ಕಿವಿಮಾತು…
ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಅಹನಾ ಎಂ.ಕೆ., ಕಾರ್ತಿಕ್ ಆರ್. ಮಳಲಿ ಮತ್ತು ಅಭಿನವ್ ಎಂ.ಎಸ್. ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಗಳಿಸಿದ್ದಾರೆ.ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಶಿಸ್ತು, ಬದ್ಧತೆ ಸಂಸ್ಥೆಗೆ ಹೆಮ್ಮೆ ತಂದಿದೆ. ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳು ವಿವಿಧ ಶೈಕ್ಷಣಿಕ ಮತ್ತು ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ನಿರಂತರವಾಗಿ ಅಸಾಧಾರಣ ಫಲಿತಾಂಶಗಳನ್ನು ನೀಡುತ್ತಿದೆ. ಸಮಗ್ರ ಕಲಿಕೆ ಮತ್ತು ವೈಯಕ್ತಿಕ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ . ವಿದ್ಯಾರ್ಥಿಗಳ ಅದ್ಭುತ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್ಡಿ ಅಭಿನಂದಿಸಿದ್ದಾರೆ.
ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವ ಆಚರಣೆ ಪ್ರಯುಕ್ತ 2025 ರ ಜನವರಿ 5 ರಂದು ನಡೆಯಲಿರುವ ಕೆ.ಎಚ್.ಎಸ್ ಟ್ರೋಫಿ ಅಂತರಾಷ್ಟ್ರೀಯ ಬಂಟರ ಕ್ರೀಡಾ ಕೂಟದ ತಯಾರಿ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ದೇಶ ವಿದೇಶದಲ್ಲಿರುವ ಬಂಟರಿಗಾಗಿ ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಥ್ರೋಬಾಲ್ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲಾಗಿದೆ. ಪುರುಷರಿಗಾಗಿ ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ ಸ್ಪರ್ಧೆಗಳು ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾ ಕೂಟವು ಪುಣೆಯ ಬಾಲೆವಾಡಿಯ ಶ್ರೀ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಕ್ರೀಡಾಕೂಟದ ಸುತ್ತೋಲೆಯನ್ನು ನೀಡಲಾಗಿದೆ. ಸಂಘದ ಸುವರ್ಣ ಮಹೋತ್ಸವಕ್ಕೆ ಪೂರಕವಾಗಿ ನಡೆಯಲಿರುವ ಈ ಕ್ರೀಡಾಕೂಟವು ಅದ್ದೂರಿಯಾಗಿ ಆಯೋಜಿಸುವ ಬಗ್ಗೆ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕುಶಲ್ ಹೆಗ್ಡೆ, ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಕಾರ್ಯಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಸುವರ್ಣ ಮಹೋತ್ಸವ ಸಮಿತಿಯ ಕ್ರೀಡಾ ಕಾರ್ಯಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ್ ಶೆಟ್ಟಿ,…
ಗೋವಾ ಬಂಟರ ಸಂಘದ ವತಿಯಿಂದ 2025 ರ ಜನವರಿ 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು. ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ನಿಕಟ ಪೂರ್ವ ಅಧ್ಯಕ್ಷ ಶಶಿಧರ ನಾಯ್ಕ್, ಸಂಘದ ಮಾಜಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ಶಶಿಧರ ರೈ, ಮಾಜಿ ಕಾರ್ಯದರ್ಶಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ, ಮುಂಬಯಿ ಬಂಟರ ಸಂಘದ ಸಹಯೋಗದಲ್ಲಿ ಡಿಸೆಂಬರ್ 7ರಂದು ಜಾಗತಿಕ ಮಟ್ಟದ ವಿಶ್ವ ಬಂಟರ ಸಮಾಗಮವು ದಡ್ಡಂಗಡಿ ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಿತು. ಸಾಮಾಜಿಕ ಕ್ಷೇತ್ರದಲ್ಲಿ ಸವಣೂರು ಕೆ. ಸೀತರಾಮ ರೈ ಸಹಿತ ಬೇರೆ ಬೇರೆ ಕ್ಷೇತ್ರದಲ್ಲಿ ಸುಮಾರು 13 ಮಂದಿ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.