Author: admin
“ಅಭಿಮತ” ವಾಹಿನಿಯ ಮುಖ್ಯಸ್ಥೆಯಾಗಿರುವ ಡಾ| ಮಮತಾ ಪಿ.ಶೆಟ್ಟಿಯವರಿಗೆ 2025 ರ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವವು ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದೊರೆತಿದೆ. ತಮ್ಮ ವೃತ್ತಿ ಜೀವನದ ಪ್ರಯಾಣವನ್ನು ಸುದ್ದಿ ವಾಚಕಿಯಾಗಿ, ಕಾರ್ಯಕ್ರಮ ನಿರೂಪಕಿಯಾಗಿ ಆರಂಭಿಸಿದ ಅವರು ಬಳಿಕ ಕಾರ್ಯಕ್ರಮ ನಿರ್ಮಾಪಕರಾಗಿ ಈಗ ಸ್ವಂತ ವಾಹಿನಿ “ಅಭಿಮತ” ದ ಮುಖ್ಯಸ್ಥೆಯಾಗಿ ಮುನ್ನಡೆಸುತ್ತಿದ್ದಾರೆ. ನಿರಂತರ ಕಲಿಕೆಯಿಂದ ಆಧುನಿಕ ಇಲೆಕ್ಟ್ರಾನಿಕ್ ಮಾಧ್ಯಮದ ತಾಂತ್ರಿಕ ಸಂಗತಿಗಳು ಮತ್ತು ಅವುಗಳ ನಿರ್ವಹಣೆಯನ್ನು ಕೈವಶ ಮಾಡಿಕೊಂಡಿರುವ ಅವರು ಸದಾ ಅನ್ವೇಷಣೆ, ನಾವಿನ್ಯತೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ತಮ್ಮ ಸಂಸ್ಥೆಯಲ್ಲಿ ಮಹಿಳೆಯರಿಗೆ ಆದ್ಯತೆಯಲ್ಲಿ ಉದ್ಯೋಗ ನೀಡಿದ್ದಾರೆ. ತುಳು ಸಂಸ್ಕೃತಿಯ, ಪರಂಪರೆಯ ಕುರಿತಾದ ಆಳವಾದ ಜ್ಞಾನ, ಕೆಲವು ನಂಬಿಕೆಗಳ ಕುರಿತಾಗಿ ಅವರು ನವೀನ ರೀತಿಯಲ್ಲಿ ಯೋಚಿಸುವಂತೆ ಮಾಡಿದೆ. ಮಂಚಿ ಸಾಲೆತ್ತೂರಿನಂತಹ ಗ್ರಾಮೀಣ ಪ್ರದೇಶದಿಂದ ಬಂದ ಡಾ| ಮಮತಾ ಪಿ ಶೆಟ್ಟಿಯವರು ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಳುವಾಗಿದ್ದವರು. ಕಾಲೇಜು ಚಾಂಪಿಯನ್, ರಾಜ್ಯ ಮಟ್ಟದಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದವರು. ಸ್ಕೌಟ್ಸ್ ಗೈಡ್ಸ್ ಕ್ಷೇತ್ರದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ…
ಉಡುಪಿ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಮಿತಿಯವರು ನವೆಂಬರ್ 01 ರ ಶನಿವಾರ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ| ನಿತ್ಯಾನಂದ ಶೆಟ್ಟಿ ಅಂಪಾರುರವರನ್ನು 2025ರ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಪತ್ರವನ್ನು ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳಕರ್ ಹಾಗೂ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾಗಿರುವ ಶ್ರೀಮತಿ ಸ್ವರೂಪಾ. ಟಿ ಕೆ ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ವಹಿಸಿದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರ್ಮೆ…
ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಒಂದಾಗಿ ಕಲಿಯುವ ಈ ನೆಲದಲ್ಲಿ ಭಾಷೆ ಒಗ್ಗೂಡಿಸಲಿ, ಮನಸ್ಸು ಬೆಳಗಲಿ – ವಿವೇಕ್ ಆಳ್ವ
ಕರ್ನಾಟಕದ ಏಕೀಕರಣ ಸುದೀರ್ಘ ಕಾಲದ ಹೋರಾಟದ ಫಲವಾಗಿದ್ದು, ಈ ಹೋರಾಟವನ್ನು ಅರಿತುಕೊಳ್ಳುವುದರಿಂದ ಕನ್ನಡದ ಇತಿಹಾಸ ಪ್ರಜ್ಞೆ ಮತ್ತು ರಾಜ್ಯೋತ್ಸವದ ಮಹತ್ವ ಅರಿಯಲು ಸಾಧ್ಯ ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರದಂದು ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಲ್ಲ. ಅದು ನಮ್ಮ ಗುರುತು, ಆತ್ಮಗೌರವ ಮತ್ತು ಒಗ್ಗಟ್ಟಿನ ಸಂಕೇತ. ಇಲ್ಲಿನ ಜನರ ಸಂಸ್ಕೃತಿ, ಭಾಷೆ, ಕಲೆ ಮತ್ತು ಧರ್ಮಗಳ ವೈವಿಧ್ಯತೆಯಿಂದಾಗಿ, ಕರ್ನಾಟಕವನ್ನು ಬಹುಸಂಸ್ಕೃತಿಯ ಆಡುಂಬೊಲವನ್ನಾಗಿಸಿದೆ. ನಮ್ಮ ನಾಡಗೀತೆಯಲ್ಲಿ ಕವಿ ಕುವೆಂಪು ಅವರು ಕರ್ನಾಟಕವನ್ನು ಭಾರತದ ಮಗಳಾಗಿ ಚಿತ್ರಿಸಿದ್ದಾರೆ. ಭಾರತದ ಅಖಂಡತೆಗೆ ಕರ್ನಾಟಕ ಪೂರಕವಾಗಿದೆ. ಭಾಷೆ ಉಳಿಯಬೇಕಾದದ್ದು ಹೃದಯದಲ್ಲಿ. ನಮ್ಮ ಭಾಷೆಯ ಮೇಲೆ ಅಭಿಮಾನ ಇರಬೇಕು, ಆದರೆ ಅಂಧಾಭಿಮಾನ ಇರಕೂಡದು. ಕನ್ನಡದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಯವರು ಕೊಂಕಣಿ ಮಾತೃಭಾಷೆಯವರಾದರೂ ಕನ್ನಡದಲ್ಲಿ ಅನೇಕ ಅಮೂಲ್ಯ ಕೃತಿಗಳನ್ನು ರಚಿಸಿ,…
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಜಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು, ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯ ವಿಮುಕ್ತಿ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನೆ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಿಜಾರಿನ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ನಾನೇ ಸ್ವತಃ ಮದ್ಯ ವ್ಯಸನದ ವಿರುದ್ಧ ಸದಾ ಹೋರಾಡುತ್ತ ಬಂದವನು. ಸುಖದಲ್ಲಾಗಲಿ ದುಃಖದಲ್ಲಾಗಲಿ ನಾನು ಎಂದಿಗೂ ಮದ್ಯವನ್ನು ಸ್ಪರ್ಶಿಸಿದವನಲ್ಲ. ಮದ್ಯಪಾನ ಮಾಡಿದವನ ಮನಸ್ಸು ಅವನ ಸ್ವಾಧೀನದಲ್ಲಿರುವುದಿಲ್ಲ. ನಮ್ಮ ರಾಜ್ಯದಲ್ಲಿ 11,700 ಕ್ಕೂ ಹೆಚ್ಚು ಮದ್ಯದಂಗಡಿಗಳು ಇರುವುದೇ ಒಂದು ವಿಷಾದಕರ ಸ್ಥಿತಿ. ನಮ್ಮನ್ನು ಆಳುವ ಸರ್ಕಾರಗಳು ಮಧ್ಯಪಾನ ಅಥವಾ…
“ಉಗಮ-೨೦೨೫” ಡಾ. ಬಿ. ಬಿ ಹೆಗ್ಡೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ‘ಅಂತರ್ ಕಾಲೇಜು ಪೆಸ್ಟ್-೨೦೨೫’ ಉಡುಪಿ ಜಿಲ್ಲಾ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ೧೬ ಕಾಲೇಜುಗಳಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ತಂಡವು ಉಡುಪಿ ಜಿಲ್ಲೆಗೆ ಪ್ರಥಮ ಚಾಂಪಿಯನ್‌ಶಿಫ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಥಮ ೦೩, ದ್ವಿತೀಯ ೦೨, ಹಾಗೂ ತೃತೀಯ ೦೧ ಪ್ರಶಸ್ತಿಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಚಾಂಪಿಯನ್‌ಶಿಫ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು ಎಂ. ಮಹೇಶ್ ಹೆಗ್ಡೆ, ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.
ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಒಟ್ಟು 800 ವರ್ಷಗಳ ಇತಿಹಾಸವಿದೆ. ಸಂಪ್ರದಾಯ ಬಿಡದೆ ಆಧುನಿಕತೆಯೊಂದಿಗೆ ಅರಸು ಕಂಬಳ ನಡೆಸಲಾಗುತ್ತಿದೆ. ಮೂಲ್ಕಿ ಅರಸು ಕಂಬಳದ ಬಗ್ಗೆ ಪುಸ್ತಕ ಹೊರ ತಂದಿರುವುದು ಶ್ಲಾಘನೀಯ ಎಂದು ಮೂಲ್ಕಿ ಸೀಮೆ ಅರಸ ಎಂ ದುಗ್ಗಣ್ಣ ಸಾವಂತರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ ಮೂಲ್ಕಿ ಸೀಮೆ ಅರಸು ಕಂಬಳ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಕಾಲದಲ್ಲಿ ಅರಮನೆ, ಬೀಡು ಇದ್ದ ಎಲ್ಲಾ ಕಡೆ ಕಂಬಳ ನಡೆಯುತ್ತಿತ್ತು. 1971ರಲ್ಲಿ ಭೂಸುಧಾರಣೆ ಕಾಯ್ದೆ ಜಾರಿಗೊಳ್ಳುವವರೆಗೆ ಈ ಕಂಬಳಗಳು ನಡೆಯುತ್ತಿದ್ದವು. ಪ್ರಸ್ತುತ ಅಳದಂಗಡಿ, ಮುಲ್ಕಿ ಅರಮನೆಯಲ್ಲಿ ಕಂಬಳ ನಡೆಯುತ್ತಿದೆ ಎಂದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಕಾರ್ನಾಡು ಶ್ರೀ ಹರಿಹರ ದೇವಸ್ಥಾನದ ಮೊಕ್ತೇಸರ ಎಂ ಎಚ್ ಅರವಿಂದ ಪೂಂಜ, ಅರಸು ಕಂಬಳ ಹಿಂದೆ ನಡೆಯುತ್ತಿದ್ದಂತೆ ವಿಜೃಂಭಣೆಯಿಂದ ನಡೆಯಬೇಕು. ದಿನಾಂಕ ಸಹಿತ ಈ ಬಗ್ಗೆ ಯಾವುದೇ ಗೊಂದಲ ಇರಬಾರದು ಎಂದರು. ಪುಸ್ತಕದ…
ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸ್ ಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕಾರ‍್ಯ ನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಇದು ಕರಾವಳಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ…
ಎಕ್ಸಲೆಂಟ್ ಕುಂದಾಪುರ: ಅಂತರ್ ಕಾಲೇಜು ಮಟ್ಟದ ಮ್ಯಾನೇಜ್‍ಮೆಂಟ್ ಪೆಸ್ಟ್ನಲ್ಲಿ ಸಮಗ್ರ ರನ್ನರ್‍ಅಫ್ ಪ್ರಶಸ್ತಿ.
“ಆರುಣ್ಯ-2025” ಶ್ರೀ ಶಾರದಾ ಕಾಲೇಜು, ಬಸ್ರೂರು ಇವರ ಆಶ್ರಯದಲ್ಲಿ ನಡೆದ ‘ಮ್ಯಾನೇಜ್‍ಮೆಂಟ್ ಪೆಸ್ಟ್-2025’ ಉಡುಪಿ ಜಿಲ್ಲಾ ಅಂತರ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ರನ್ನರ್ ಅಫ್ ಪ್ರಶಸ್ತಿಯನ್ನು ನಮ್ಮ ಹೆಮ್ಮೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. ಶ್ರೀ ಶಾರದಾ ಕಾಲೇಜು ಬಸ್ರೂರು ನಡೆದ ಪ್ರತಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ನಾಲ್ಕು ಚಿನ್ನದ ಪದಕ ಹಾಗೂ ನಾಲ್ಕು ರಜತದ ಪದಕಗಳೊಂದಿಗೆ ಒಟ್ಟಾರೆ ಎಂಟು ಪದಕಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ರನ್ನರ್‍ಅಫ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ರೀತಿ ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.
ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 31-10-2025ರಂದು ನಡೆದ ತಾಲೂಕು ಮಟ್ಟದ 14ರ ವಯೋಮಿತಿಯೊಳಗಿನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಮ್ಮ ಎಕ್ಸಲೆಂಟ್ ಪ್ರೌಢಶಾಲೆಯ 9ನೇ ತರಗತಿಯ ಸಂಹಿತ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈ ಅತ್ಯುತ್ತಮ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಹಾಗೂ ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸುತ್ತಾ, ಮುಂದಿನ ಎಲ್ಲಾ ಹಂತದಲ್ಲೂ ವಿಜಯ ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
ಮುಂಬೈಯ ಪಯ್ಯಡೆ ಸ್ಪೋರ್ಟ್ಸ್ ಕ್ಲಬ್ ನ ಸ್ಥಾಪಕ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಮಾಜಿ ಜೊತೆ ಕಾರ್ಯದರ್ಶಿ, ಹೋಟೆಲ್ ಉದ್ಯಮಿ, ಸಮಾಜ ಸೇವಕ ಡಾ| ಪಿ.ವಿ ಶೆಟ್ಟಿಯವರಿಗೆ ಅರ್ಹವಾಗಿ 2025 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.















