Author: admin
ಇಂದು ಅಪ್ಪ ಅಮ್ಮ ಆಗಿರುವ ಎಲ್ಲರಿಗೂ ಅರ್ಪಣೆ ಈ ಬರಹ. ಸುಮಾರು ಹತ್ತಿಪ್ಪತ್ತು ವರ್ಷಗಳ ಹಿಂದೆ ತಂದೆ ತಾಯಿಯಾದ ಹೆಚ್ಚಿನ ಎಲ್ಲರ ಬಾಲ್ಯವೂ ಹೆಚ್ಚಾಗಿ ಹಳ್ಳಿಯೋ ಅಥವಾ ನಂತರ ಬಂದ ಪಟ್ಟಣದ ಬದುಕೋ ಅಂತೂ ಕಷ್ಟ ಪಡದ ಬದುಕಾಗಿರಲಿಲ್ಲ. ಸುಖದ ಸುಪ್ಪತ್ತಿಗೆಯಲ್ಲಿ ಹುಟ್ಟಿದಾಗ ಬೆಳ್ಳಿ ತಟ್ಟೆ ಬಂಗಾರದ ಚಮಚ ಬಾಯಿಗಿಟ್ಟು ಹುಟ್ಟಿದವರು ಬಾರೀ ಕಡಿಮೆ. ಹೆಚ್ಚಿನ ಅನುಪಾನದ ಬದುಕೂ ಆಗಿರಲಿಲ್ಲ. ಆದರೆ ಅದು ಅನುಭವದ ಬದುಕಾಗಿತ್ತು. ಇದು ಮಾತ್ರ ಅಕ್ಷರ ಸಹ ಸತ್ಯ. ತಂದೆಯ ಸಣ್ಣ ಸಂಪಾದನೆಯಲ್ಲೇ ಬದುಕು ಕಟ್ಟಿಕೊಂಡ ಸಂಸಾರಗಳೇ ಹೆಚ್ಚು. ಹಾಗಾಗಿ ಶಾಲೆ ಕಾಲೇಜುಗಳ ದಿನಗಳಲ್ಲಿ ಬೆಳಗ್ಗೆ ಮನೆಯಲ್ಲೇ ಮಾಡಿದ ದೋಸೆ, ಇಡ್ಲಿ, ಸಜ್ಜಿಗೆ, ಪುಂಡಿ, ಗಟ್ಟಿಗಳಂತಹ ಸಾಂಪ್ರದಾಯಿಕ ತಿಂಡಿಗಳು ಆಮೇಲೆ ಊಟಕ್ಕೆ ಮನೆಯಿಂದಲೇ ಲಂಚ್ ಬಾಕ್ಸ್, ಅಪರೂಪಕ್ಕೆ ಕ್ಯಾಂಟೀನ್ ಊಟ ತಿಂಡಿ ಅದು ಬಿಟ್ಟರೆ ಹೊರಗಡೆ ಹೋಟೆಲ್ ಊಟವಂತು ಇಲ್ಲವೇ ಇಲ್ಲ. ಇನ್ನು ಅವರ ಬರ್ತ್ ಡೇಗೆ ಹೊಸ ಬಟ್ಟೆ ಆಗಲೇಬೇಕು ಎಂಬ ಯಾವ ಕಾನೂನು ಇಲ್ಲ,…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು. ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಇವರ ಉಪಸ್ಥಿಸಿಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ವೆಂಕಟೇಶ್ ಪಟಗಾರ ಇವರನ್ನು ಗೌರವಿಸಲಾಯಿತು. ಮುಲ್ಲಕಾಡು ಶಾಲಾ ಮುಖ್ಯ ಶಿಕ್ಷಕ ಜಿ ಉಸ್ಮಾನ್ ಸ್ವಾಗತಿಸಿದರು. ಕೇಂದ್ರ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಪ್ರಸ್ತಾವನೆಗೈದರು. ಕಾರ್ಪೋರೇಟರ್ ಗಾಯತ್ರಿ ಎ ರಾವ್, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಮಲ್ಲಪ್ಪ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಘಟಕದ ಕೋಶಾಧಿಕಾರಿ ಸಿಎ ಸುಧೇಶ್ ರೈ, ಪಟ್ಲ ಫೌಂಡೇಶನ್ ಮಂಗಳೂರು…
ಡಾ| ಅಗರಿ ನವೀನ್ ಭಂಡಾರಿಯವರಿಂದ ಬಿಳೇಕಹಳ್ಳಿ ಶ್ರೀ ಅಯ್ಯಪ್ಪ ದೇವಾಲಯದ ಶಿವಗುಡಿ ನಿರ್ಮಾಣಕ್ಕೆ 10 ಲಕ್ಷ ರೂ ದೇಣಿಗೆ.
ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉತ್ತರ ವಲಯದ ಮಾಜಿ ನಿರ್ದೇಶಕ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಪುತ್ತೂರು ಮೂಲದ ಡಾ| ಅಗರಿ ನವೀನ್ ಭಂಡಾರಿಯವರು ಬಿಳೇಕಹಳ್ಳಿಯಲ್ಲಿರುವ ಶ್ರೀ ಆಯ್ಯಪ್ಪ ದೇವಾಲಯದ ಶಿವನ ಗುಡಿ ಸ್ಥಾಪನೆಗೆ 10 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಡಾ| ಅಗರಿ ನವೀನ್ ಭಂಡಾರಿಯವರ ಪುತ್ರಿ ಅನುಷ್ಕಾ ಶೆಟ್ಟಿ, ಸಹೋದರ 2024 ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ ಕರ್ನಲ್ ಜಗಜೀವನ್ ಭಂಡಾರಿ ಉಪಸ್ಥಿತರಿದ್ದರು. ಡಾ| ಅಗರಿ ನವೀನ್ ಭಂಡಾರಿಯವರು ಈಗಾಗಲೇ ಬೆಂಗಳೂರು ನಗರದ ಬಿಳೇಕಹಳ್ಳಿಯಲ್ಲಿ ಸುಸಜ್ಜಿತವಾದ ಮೂಲ್ಕಿ ಸುಂದರರಾಮ್ ಶೆಟ್ಟಿ ಬಡಾವಣೆ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಇದು ಬೆಂಗಳೂರಿನಲ್ಲೇ ಮಾದರಿ ಬಡಾವಣೆಯಾಗಿ ಬೆಳೆದಿದೆ. ಇದರ ಬೆಳವಣಿಗೆ, ಅಭಿವೃದ್ಧಿ ಹಿಂದೆ ಡಾ| ಅಗರಿ ನವೀನ್ ಭಂಡಾರಿ ಮತ್ತವರ ತಂಡದ ಸದಸ್ಯರ ಪರಿಶ್ರಮವಿದೆ. ಇಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಿಸಲು ಮತ್ತು ಇದರ ಅಭಿವೃದ್ಧಿಗೆ ಇವರ ಕೊಡುಗೆ ಹಿರಿದಾದದು. ಆಧುನಿಕ ಜೀವನ ಶೈಲಿಯ…
ಅನಾದಿ ಕಾಲದಿಂದ ಸಾಧು ಸಂತರು ಯೋಗವನ್ನು ನಡೆಸಿಕೊಂಡು ಬರುತ್ತಿದ್ದು, 2014 ರಲ್ಲಿ ನರೇಂದ್ರ ಮೋದಿಜಿಯವರು ದೇಶದ ಪ್ರಧಾನಿಯಾದಾಗ ಯೋಗವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಪ್ರಾರಂಭಿಸಿದರು. ಪ್ರತಿನಿತ್ಯ ಯೋಗವನ್ನು ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಯಾವ ರೀತಿಯಾದ ಪರಿಣಾಮವನ್ನು ಬಿರುತ್ತದೆ ಎಂಬ ವಿಷಯವನ್ನು ಮನಗಂಡು ವಿಶ್ವ ಆರೋಗ್ಯ ಸಂಸ್ಥೆಯು ಜೂನ್ 21 ನ್ನು ವಿಶ್ವ ಯೋಗ ದಿನಾಚರಣೆಯನ್ನಾಗಿ ಘೋಷಿಸಿ ಇಂದು ವಿಶ್ವದ ಹೆಚ್ಚಿನ ದೇಶಗಳು ಅತ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದೆ. ಈ ಮೂಲಕ ಭವ್ಯ ಭಾರತದ ಸಂಸ್ಕೃತಿ, ಆಚಾರ, ವಿಚಾರಗಳು ಯೋಗದ ಮೂಲಕ ವಿಶ್ವದೆಲ್ಲೆಡೆ ಪರಿಚಯವಾಗುತ್ತಿರುವುದು ನಮಗೆಲ್ಲರಿಗೂ ಹೆಮ್ಮೆ ಹಾಗೂ ಅಭಿಮಾನ. ಜಾಗತಿಕ ಮಟ್ಟದ ಸಂಭ್ರಮದಲ್ಲಿ ನಾವೆಲ್ಲರೂ ಅತ್ಯಂತ ಸಡಗರದಿಂದ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಯೋಗವು ಕೇವಲ ಯೋಗ ದಿನಾಚರಣೆಗೆ ಸೀಮಿತವಾಗಿರದೆ ನಿರಂತರವಾಗಿ ನಡೆಸಿಕೊಂಡು ಬಂದಲ್ಲಿ ನಮ್ಮ ಆರೋಗ್ಯಕ್ಕೆ ಉತ್ತಮ ಎಂದು ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ಡಾ| ಆರ್ ಕೆ ಶೆಟ್ಟಿಯವರು ನುಡಿದರು. ಬಂಟರ ಸಂಘ ಮುಂಬಯಿಯ ವಸಾಯಿ ದಹಾಣು ಪ್ರಾದೇಶಿಕ…
ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಬುಧಾಬಿಯ ಖ್ಯಾತ ಉದ್ಯಮಿ, ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆಯಾಗಿರುವ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್ ನ ಅಧ್ಯಕ್ಷರಾದ ಪುತ್ತೂರು ಮೂಲದ ಮಿತ್ರಂಪಾಡಿ ಜಯರಾಮ ರೈಯವರಿಗೆ ಜೂನ್ 23 ರಂದು ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ನೀಡಿ ಗೌರವಿಸಿತು. ವಿದೇಶಿ ಗಣ್ಯರು ಸೇರಿದಂತೆ 60 ಮಂದಿ ಸಾಧಕರಿಗೆ 2024 ರ ಸಾಲಿನ 49ನೇಯ ವಾರ್ಷಿಕ ‘ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಡಾ.ಹೆಚ್.ಬಿ.ಪ್ರಭಾಕರ ಶಾಸ್ತ್ರಿಯವರು ನೆರವೇರಿಸಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ| ಮಹೇಶ್ ಜೋಶಿಯವರು, ಖ್ಯಾತ ಚಲನಚಿತ್ರ ನಿರ್ದೇಶಕರಾದ ಡಾ.ಎಸ್.ನಾರಾಯಣ್ ರವರು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಆರ್ಯಭಟ ಸಂಸ್ಥೆಯ ಸಂಸ್ಥಾಪಕರಾದ ಡಾ.ಹೆಚ್.ಎಲ್.ಎನ್.ರಾವ್ ರವರು ವಹಿಸಿದ್ದರು. ಕಾನೂನು ಮತ್ತು ನ್ಯಾಯಾಂಗ ವಿಭಾಗದಿಂದ ಸಿ.ಕೆ. ವೀರೇಶ್‌ಕುಮಾರ್, ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ…
ಸ್ವರ್ಗದ ಎಂ.ಕೆ ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯದಲ್ಲಿ ವಾಚನಾ ಸಪ್ತಾಹದ ಅಂಗವಾಗಿ ಪುಸ್ತಕ ಪರಿಚಯ ಕಾರ್ಯಕ್ರಮ ನಡೆಯಿತು. ಎಣ್ಮಕಜೆ ಗ್ರಾಪಂ ಸದಸ್ಯ, ತಾಲೂಕು ಲೈಬ್ರೆರಿ ಕೌನ್ಸಿಲ್ ಸದಸ್ಯ ರಾಮಚಂದ್ರ ಎಂ. ಕಾರ್ಯಕ್ರಮ ಉದ್ಘಾಟಿಸಿದರು. ಗ್ರಂಥಾಲಯದ ಅಧ್ಯಕ್ಷ ರವಿರಾಜ್ ಎಸ್. ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಾಜಶ್ರೀ ಟಿ. ರೈ ಪೆರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕವಿ ರಿತೇಶ್ ಕಿರಣ್ ರಾಜಶ್ರೀ ಅವರ ತುಳು ಕಾದಂಬರಿ ಮುಸ್ರಾಲೊ ಪಟ್ಟೊ ಕೃತಿ ಪರಿಚಯ ನಡೆಸಿ ಅಭಿಪ್ರಾಯ ಮಂಡಿಸಿದರು. ಶ್ರೀನಿವಾಸ ಪೆರಿಕ್ಕಾನ ಉಪಸ್ಥಿತರಿದ್ದರು. ಲೇಖಕಿ ರಾಜಶ್ರೀ ಟಿ. ರೈ ಅವರಿಗೆ ಗೌರವ ಸಲ್ಲಿಸಲಾಯಿತು. ಗ್ರಂಥಾಲಯ ಕಾರ್ಯದರ್ಶಿ ರವಿ ವಾಣಿನಗರ ಸ್ವಾಗತಿಸಿದರು. ಉಪಾಧ್ಯಕ್ಷೆ ಚಂದ್ರಾವತಿ ಎಂ. ವಂದಿಸಿದರು.
‘ಭಾರತದ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡ ಕಲಿಕೆಯ ಅವಕಾಶವಿರುವುದು ಹೆಮ್ಮೆಯ ವಿಷಯ. ಹೊರನಾಡು ಮುಂಬೈಯಲ್ಲಿದ್ದುಕೊಂಡು ಕನ್ನಡಿಗರು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ವಿಶ್ವವಿದ್ಯಾಲಯದ ಮೂಲಕ ಕನ್ನಡ ನುಡಿಗೆ ಕೈಲಾದ ಕೊಡುಗೆ ನೀಡಲು ಸಾಧ್ಯವಾಗುತ್ತಿರುವುದು ನಮ್ಮ ಭಾಗ್ಯವೇ ಸರಿ. ಇಲ್ಲಿ ಕಲಿಯಲು ಬರುವ ವಿದ್ಯಾರ್ಥಿಗಳು ಉತ್ತಮ ಲೇಖಕರಾಗಿ ಹೊರಹೊಮ್ಮಬೇಕು, ಮುಂಬೈ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಶಾಶ್ವತವಾಗಿ ದಾಖಲಾಗಿ ಹೆಸರು ಗಳಿಸಬೇಕು’ ಎಂದು ಮುಂಬೈ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಜಿ.ಎನ್. ಉಪಾಧ್ಯ ಅವರು ಕರೆ ನೀಡಿದರು. ಮುಂಬೈ ವಿಶ್ವವಿದ್ಯಾಲಯದ ರಾನಡೆ ಭವನದಲ್ಲಿ ಜೂನ್ 22ರಂದು ನಡೆದ ಎರಡನೆಯ ವರ್ಷದ ಎಂ.ಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಹೊಸ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಯಾವುದೇ ವಯೋಮಿತಿಯಿಲ್ಲದೆ, ಯಾವುದೇ ಕ್ಷೇತ್ರದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಇಲ್ಲಿ ಕನ್ನಡ ಎಂ. ಎ. ಮಾಡಲು ಅವಕಾಶವಿದೆ. ನಮ್ಮಲ್ಲಿ ಬರುವ ವಯಸ್ಕರಾದ ಪ್ರಬುದ್ಧ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ ಬಹು…
ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯ ಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ 2024-25ನೇ ಉಚಿತ ಯಕ್ಷಗಾನ ತರಬೇತಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸಾವಿರಾರು ಮಕ್ಕಳಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನದಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ ಎಂದರು.ಶಾಲೆಯ ಮಕ್ಕಳಿಗೆ ಸಾಂಸ್ಕೃತಿಕ ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟ್ ಉದ್ದೇಶವಾಗಿದೆ ಎಂದರು. ಹಿರಿಯ ಕಲಾವಿದರ ಪೈಕಿ ಕೆಲವರು ಶಾಲಾ ಶಿಕ್ಷಣ ಪಡೆಯದಿದ್ದರೂ ರಂಗದಲ್ಲಿ ಅದ್ಭುತ ಭಾಷಾ ಪಾಂಡಿತ್ಯ, ವಾಕ್ಚಾತುರ್ಯದ ಮೂಲಕ…
ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಕೋಡಿಕಲ್ ಗುರುನಗರದ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ (ಎಸ್ ಎನ್ ಡಿಪಿ)ದಲ್ಲಿ ವಿಶ್ವಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಋಷಿ ಪರಂಪರೆಯಿಂದ ಪರಿಚಿತವಾದ ಯೋಗ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಇಡೀ ವಿಶ್ವಕ್ಕೆ ಪಸರಿಸಿದೆ. ನಿರಂತರ ಯೋಗಾಭ್ಯಾಸದಿಂದ ಬದುಕಿಗೆ ಸ್ಫೂರ್ತಿ ದೊರೆಯುತ್ತದೆ ಎಂದರು. ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ ಪ್ರಭಾಕರ ಶರ್ಮ, ಕೋಡಿಕಲ್ ಎಸ್ ಎನ್ ಡಿಪಿ ಮಂದಿರದ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಕಾರ್ಪೊರೇಟರ್ ಗಳಾದ ಕಿರಣ್ ಕೋಡಿಕಲ್, ಮನೋಜ್ ಕೋಡಿಕಲ್ ಮುಖ್ಯ ಅತಿಥಿಗಳಾಗಿದ್ದರು. ಸನ್ಮಾನ ಕಾರ್ಯಕ್ರಮ : ರೆಡ್ ಕ್ರಾಸ್ ನ ಖಜಾಂಚಿ ಮೋಹನ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ…
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು. ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ಪತ್ರಕರ್ತರಿಗೆ ಹತ್ತು ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಪ್ರೆಸ್ ಕ್ಲಬ್, ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ, ಗಿರಿಧರ ಶೆಟ್ಟಿ, ಮಂಗಳೂರು ಸಿಟಿ ರೋಟರ್ಯಾಕ್ಟ್ ಕ್ಲಬ್…














