Author: admin
ಮುಂಬಯಿಯ ಹೆಸರಾಂತ ಉದ್ಯಮಿ, ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಬಂಟರತ್ನ ಪ್ರಶಸ್ತಿ ಪುರಸ್ಕೃತ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈ ಲಿಮಿಟೆಡ್ ನ ಸಿಎಂಡಿ ಡಾ| ಆರ್. ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ಹೆಚ್ಚಿನ ದೇಣಿಗೆಯನ್ನು ನೀಡಿ ಸಂಪೂರ್ಣ ಸಹಕಾರ ನೀಡಿದ್ದಾರೆ. ಈ ಮೊದಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಲ್ಲಿ ನಿರ್ದೇಶಕರಾಗಿದ್ದ ಡಾ| ಆರ್.ಕೆ ಶೆಟ್ಟಿಯವರು ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈಯ ತುಳು ಕನ್ನಡಿಗರ ಪ್ರತಿಷ್ಠಿತ ಹಣಕಾಸು ಸಲಹೆಗಾರರೆಂದೇ ಪ್ರಸಿದ್ಧಿ ಪಡೆದ ಅಂತರಾಷ್ಟ್ರೀಯ ಖ್ಯಾತಿಯ ಆರ್ಥಿಕ ತಜ್ಞ, ಪ್ರಸಿದ್ಧ ಜೀವವಿಮಾ ಸಲಹೆಗಾರ ಡಾ| ಆರ್ ಕೆ ಶೆಟ್ಟಿ ಅವರಿಗೆ ಇತ್ತೀಚಿಗೆ ಭಾರತೀಯ ಜೀವವಿಮಾ ನಿಗಮದ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ…
ಪ್ರತೀ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ. ಆದರೆ ಇಂದಿನ ಜೀವನ ಶೈಲಿಯಲ್ಲಿ ನಾವು ಇಂದ್ರಿಯ ಉಪಕಾರವನ್ನು ಮರೆತು, ಅವುಗಳಿಗೆ ಹಿತವಲ್ಲದ ವಿಷಯಗಳಲ್ಲಿ ತೊಡಗಿಕೊಂಡಿದ್ದೇವೆ. ಕಣ್ಣು ಸೌಂದರ್ಯವನ್ನು, ಕಿವಿ ಸುಶ್ರಾವ್ಯತೆಯನ್ನು, ನಾಸಿಕ ಸುವಾಸನೆಯನ್ನು, ನಾಲಿಗೆ ರುಚಿಯನ್ನು ಹಾಗೂ ತ್ವಚೆ ಕೋಮಲತೆಯನ್ನು ಬಯಸುತ್ತದೆ. ಈ ಪಂಚೇಂದ್ರಿಯಗಳ ಪ್ರಜ್ಞಾಪೂರ್ವಕ ಸಂತೃಪ್ತಿಯ ಮೂಲಕ ಸಮಗ್ರ ಆರೋಗ್ಯವನ್ನು ಪಡೆಯಬಹುದು ಎಂದು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈ ಹೇಳಿದರು. ಅವರು ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ‘ಪ್ರಾಣ’ ಪ್ರಕೃತಿ ಚಿಕಿತ್ಸಾ ಸ್ಪಾ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಭೂತಗಳ ಸಮನ್ವಯ ಹಾಗೂ ಇಂದ್ರಿಯಗಳ ಸಾತ್ವಿಕ ಶಾಂತಿ ದೈಹಿಕ ವಿಶ್ರಾಂತಿಯ ಜೊತೆಗೆ ಮಾನಸಿಕ ಸ್ಥಿತಪ್ರಜ್ಞೆಗೂ ದಾರಿ ಮಾಡುತ್ತದೆ. ಈ ಕೇಂದ್ರದ ಮೂಲಕ ಸಮೃದ್ಧ ಸಮುದಾಯದ ಆರೋಗ್ಯದ ಬೆಳವಣಿಗೆ ಸಾಧ್ಯವಾಗಲಿ ಎಂದು ಅವರು ಆಶಿಸಿದರು. ಖ್ಯಾತ ಗಾಯಕಿ…
ನವೆಂಬರ್ 23 ರಿಂದ ಯಕ್ಷಾಂಗಣ ತಾಳಮದ್ದಳೆ ಸಪ್ತಾಹ: ಸಂಘಟನಾ ಪರ್ವ, ವಿವಿಧ ತಂಡಗಳಿಂದ ಅಪರೂಪದ ಪ್ರಸಂಗಗಳ ಪ್ರಸ್ತುತಿ
ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾಲಯ ಡಾ| ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಈ ಬಾರಿ ನಡೆಸುವ 13ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – ತ್ರಯೋದಶ ಸರಣಿ’ಯು ಇದೇ ನವೆಂಬರ್ ತಿಂಗಳ 23 ರಿಂದ 29ರವರೆಗೆ ಜರಗಲಿದೆ. ನಿರಂತರ ಏಳು ದಿನಗಳ ಕಾರ್ಯಕ್ರಮವನ್ನು ನಗರದ ವಿಶ್ವವಿದ್ಯಾಲಯ ಕಾಲೇಜು ರವೀಂದ್ರ ಕಲಾ ಭವನದಲ್ಲಿ ಏರ್ಪಡಿಸಲಾಗಿದೆ. ಸಂಘಟನಾ ಪರ್ವ ಎಂಬ ಹೆಸರಿನ ಸಪ್ತಾಹದಲ್ಲಿ ಜಿಲ್ಲೆಯ ವಿವಿಧ ತಂಡಗಳಿಂದ ತಾಳಮದ್ದಳೆ ಕ್ಷೇತ್ರಕ್ಕೆ ಅಪರೂಪವೆನಿಸಿದ ಕೆಲವು ಯಕ್ಷಗಾನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಇತ್ತೀಚೆಗೆ ಕದ್ರಿ ದೇವಳದ ವಠಾರದಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 23 ರಂದು ಆದಿತ್ಯವಾರ ಅಪರಾಹ್ನ ಗಂಟೆ 2ರಿಂದ ‘ಮಿತ್ತಲೋಕೊದ ಪೆತ್ತ’ ತುಳು ತಾಳಮದ್ದಳೆಯೊಂದಿಗೆ…
ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಹಾಗೂ ಸ್ಟೆಮ್ ವಿಷಯಗಳ ಐದು ದಿನಗಳ ರಾಷ್ಟ್ರೀಯ ಮಟ್ಟದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮನಸ್ಸು ಸಕಾರಾತ್ಮಕವಾಗಿ ವರ್ತಿಸಿದಾಗ ಎಲ್ಲವೂ ಧನಾತ್ಮಕವಾಗಿ ಮೂಡಿಬರುತ್ತದೆ. ಪ್ರತೀ ಕೆಲಸದಲ್ಲೂ ನಂಬಿಕೆ ಮತ್ತು ನಿಷ್ಠೆ ಅತೀ ಮುಖ್ಯ. ಅದೇ ಸದ್ಗುಣ ವ್ಯಕ್ತಿಯನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯುತ್ತದೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೂಲಕ ನೀವು ಕಲಿತಿರುವ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಿ. ಈ ಕಾರ್ಯಗಾರದಲ್ಲಿ ಪಡೆದ ಕೌಶಲ್ಯವನ್ನು ಆಳವಡಿಸಿಕೊಂಡು, ಬದುಕನ್ನು ರೂಪಿಸುವಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಕರೆ ಕೊಟ್ಟರು. ಆಳ್ವಾಸ್ ಶಿಕ್ಷಣ…
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ‘ಬಂಜಾರ’ ಪ್ರಕಾಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಸಮಿತಿಯ ಮೊದಲ ಸಭೆಯಲ್ಲಿಯೇ ಚರ್ಚೆ ಮಾಡಲಾಯಿತು. ಈಗಾಗಲೇ ಉದ್ಯಮಿಗಳಿಂದ 13.75 ಕೋಟಿ ರೂ. ದೇಣಿಗೆಯ ವಾಗ್ದಾನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ದೇವಳದ ಜೀರ್ಣೋದ್ದಾರ ಮತ್ತು ಅಭಿವೃದ್ಧಿಯ ಕುರಿತು 25 ಮಂದಿ ಪ್ರಮುಖರನ್ನೊಳಗೊಂಡ ಜೀರ್ಣೋದ್ದಾರ ಸಮಿತಿ ರಚನೆ ಮಾಡಿ ದೇವಳದ ಕಚೇರಿ ಸಭಾಂಗಣದಲ್ಲಿ ಅ. 25ರಂದು ಸಂಜೆ ನಡೆದ ಪ್ರಥಮ ಸಭೆಯ ಕೊನೆಯಲ್ಲಿ ಅವರು ಪ್ರತಿಕಾ ಮಾಧ್ಯಮದವರ ಜೊತೆ ಮಾತನಾಡಿದರು. ಈಗಾಗಲೇ ವಾಗ್ದಾನ ಬಂದಿದೆ. ಸುಮಾರು 60 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ದಾರ ನಡೆಯಲಿವೆ. ಇದರಲ್ಲಿ ಸರಕಾರದಿಂದ ರೂ. 11 ಕೋಟಿ ಪ್ರತ್ಯೇಕ ಬರಲಿದೆ. ಮುಂದಿನ ಎರಡು ವರ್ಷದಲ್ಲಿ ದೇವಸ್ಥಾನದ ಪೂರ್ಣ ಜೀರ್ಣೋದ್ದಾರ ಆಗಲಿದೆ ಎಂದವರು ತಿಳಿಸಿದರು. ಮಹಾಲಿಂಗೇಶ್ವರನಿಗೆ ಸೇರಿದ ಜಾಗ ಯಾವುದೆಲ್ಲ ಇದೆಯೋ ಅದೆಲ್ಲವೂ ಮಹಾಲಿಂಗೇಶ್ವರನಿಗೆ ಸೇರಬೇಕೆಂಬುದು ನಮ್ಮ ಆಶಯವಾಗಿತ್ತು. ಸುಮಾರು ಶೇಕಡ 60ರಷ್ಟು ಈ ಕೆಲಸ ಆಗಿದೆ. ಕುಟುಂಬ…
ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು. ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್ಸಿಸಿ, ಎನ್ಎಸ್ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಘಟನೆಗಳಲ್ಲಿ…
ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ : ವಿದ್ಯಾರಣ್ಯದ ಕೆ. ಅದ್ವಿಕ್ ಶೆಟ್ಟಿ ಹಾಗೂ ದ್ರಿಶಾ ಎಚ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ
ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ ಅಂಕಗಣಿತ (ಮೆಂಟಲ್ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ವಿದ್ಯಾರಣ್ಯ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. 5ನೇ ತರಗತಿಯ ಕೆ. ಅದ್ವಿಕ್ ಶೆಟ್ಟಿ, 6ನೇ ತರಗತಿಯ ದ್ರಿಶಾ ಎಚ್ ಶೆಟ್ಟಿ ಒಂದನೇ ವಿಭಾಗದ ಸ್ಪರ್ಧೆಯಲ್ಲಿ ಮೊದಲ ಸ್ಥಾನದೊಂದಿಗೆ ವಿಜೇತರಾದ ವಿದ್ಯಾರ್ಥಿಗಳು. ಕೆ. ಅದ್ವಿಕ್ ಶೆಟ್ಟಿ ಹೆಸ್ಕತ್ತೂರು ಕೃಷ್ಣ ಶೆಟ್ಟಿ ಹಾಗೂ ದೀಪಾ ದಂಪತಿಯ ಪುತ್ರ. ದ್ರಿಶಾ ಎಚ್ ಶೆಟ್ಟಿ ಜನ್ನಾಡಿಯ ಹರ್ಷವರ್ಧನ್ ಶೆಟ್ಟಿ ಹಾಗೂ ಸೌಮ್ಯ ಹೆಚ್ ಶೆಟ್ಟಿ ದಂಪತಿಯ ಪುತ್ರಿ. ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ ಲಿ. ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ ವಿಜೇತ…
ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ತನ್ನ ಪಾದರಕ್ಷೆಗಳನ್ನು ನೀಡಿ ಹೇಳಿದ “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ. ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರೂ ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ. ಈ ವಿಚಾರವಾಗಿ ಸಂಬಂಧಿಕರು,…
ವಿದ್ಯಾರ್ಥಿ ಜೀವನದಲ್ಲಿ ಸಮುದಾಯ ಪ್ರಜ್ಞೆಯನ್ನು ಬೆಳೆಸಿಕೊಂಡು ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗಿ, ತನ್ನ ವ್ಯಕ್ತಿತ್ವದ ವಿಕಸನದೊಂದಿಗೆ ಜೀವನವನ್ನು ಪ್ರಕಾಶಗೊಳಿಸುವ ಮೌಲ್ಯಯುತ ಯೋಜನೆ ರಾ.ಸೇ.ಯೋ ಆಗಿದೆ ಉಪನ್ಯಾಸಕ ಶ್ರೀ ಸಂತೋಷ್ ನೆಲ್ಲಿಕಾರು ಹೇಳಿದರು. ಮಡಿಬೆಟ್ಟು ಅನುದಾನಿತ ಹಿ.ಪ್ರಾ.ಶಾಲೆ ಕಣಜಾರಿನಲ್ಲಿ ನಡೆಯುತ್ತಿರುವ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾ.ಸೇ.ಯೋ.ಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ ಕೊಡವೂರು ಮಾತನಾಡಿ, ಈ ಶಿಬಿರದಲ್ಲಿ ಕಳೆದ ಅನುಭವಗಳು ಜೀವಮಾನವಿಡಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು. ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟಿನ ಟ್ರಸ್ಟಿಯವರಾದ ಶ್ರೀ ವಿಕ್ರಂ ಹೆಗ್ಡೆಯವರು ಮಾತನಾಡಿ, ಶಿಬಿರವು ಮೌಲ್ಯಯುತ ಜೀವನಕ್ಕೆ ದಾರಿ ಮಾಡಿ ಕೊಡುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ತೆರೆದಿದೆ. ಇದರ ಸದುಪಯೋಗವನ್ನು ಶಿಬಿರಾರ್ಥಿ ಪಡೆದುಕೊಂಡಲ್ಲಿ ಯಶಸ್ವಿ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ನೀರೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಪ್ರಭುಗಳು ಧ್ವಜಾರೋಹಣವನ್ನು…
ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. 10% ನಿಂದ 50%ನ ವರೆಗೆ ರಿಯಾಯಿತಿ ಸಿಗಲಿದೆ. ಈ ವಿಶೇಷ ಮೇಳವು ದಿನಾಂಕ 01-11-2025 ರಿಂದ 09-11-2025 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9.00 ರಿಂದ ಸಂಜೆ ಸಮಯ 9.00ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ ನಾಡು ನುಡಿ ಮತ್ತು…















