Author: admin
ಕಲ್ಲು, ಮಣ್ಣು, ಮರ ಹೀಗೆ ಪ್ರಕೃತಿಯೆ ದೇವರೆಂದು ಆರಾಧನೆ ಮಾಡಲು ಜಗತ್ತಿಗೆ ತೋರಿಸಿಕೊಟ್ಟವರು ತುಳುನಾಡಿನ ಹಿರಿಯರು ಎಂದು ತುಳು ಜಾನಪದ ವಿದ್ಯಾರ್ಥಿ ವಿಜೇತ್ ಎಂ ಮಂಜನಾಡಿ ನುಡಿದರು. ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ “ಅಯೋಧ್ಯ” ಚೇಳ್ಯಾರುಗುತ್ತುವಿನಲ್ಲಿ ನಡೆದ ಯುಗಾದಿ ಭಾವ ಗಾನ ಯಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ತುಳುನಾಡಿನಲ್ಲಿ ಪ್ರಕೃತಿ, ದೈವ, ದೇವರ ಮೇಲಿನ ನಂಬಿಕೆ ಅಪಾರ. ಇದು ಇಲ್ಲಿನ ಶಕ್ತಿ ಎಂದರು. ಯುಗಾದಿ ಎಂಬುದು ನಮ್ಮ ತುಳುವರ ವರ್ಷದ ಆರಂಭ ಹಿಂದಿನ ಕಾಲದಲ್ಲಿ ಯುಗಾದಿಯ ಬಿಸು ಹಬ್ಬವನ್ನು ವಿಶೇಷ ರೀತಿಯಲ್ಲಿ ಅಚರಿಸಲಾಗುತ್ತಿತ್ತು ಎಂದರು. ಕಾರ್ಯಕ್ರಮವನ್ನು ಹಿರಿಯ ಜಾನಪದ ವಿದ್ವಾಂಸರಾದ ಡಾ. ವೈ. ಎನ್ ಶೆಟ್ಟಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅ.ಭಾ.ಸಾ.ಪ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶೈಲೇಶ್, ಜಿಲ್ಲಾ ಸಮಿತಿ ಸಂಚಾಲಕ ಸುಂದರ ಶೆಟ್ಟಿ ಇಳಂತಿಲ, ದಿವಾಕರ ಸಾಮಾನಿ ಚೇಳ್ಯಾರುಗುತ್ತು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅ.ಭಾ.ಸಾ.ಪ ದಕ್ಷಿಣ ಕನ್ನಡ ಜಿಲ್ಲಾ…
ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕ್ಲಬ್ ಕಾರ್ಕಳ ಸದಸ್ಯರ ಮಕ್ಕಳನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟೇರಿಯನ್ ಡಾ. ಪ್ರಭಾ ಹಾಗೂ ರೋಟೇರಿಯನ್ ನಿರಂಜನ್ ಜೈನ್ ಅವರ ಪುತ್ರ ಆಶಯ್ ಜೈನ್ ಅವರು 98.83% ಅಂಕಗಳೊಂದಿಗೆ 6ನೇ ರಾಂಕ್ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಹಾಗೆಯೇ ರೋಟೇರಿಯನ್ ಶ್ರೀಮತಿ ಪ್ರೀತಿ ಶೆಟ್ಟಿ ಮತ್ತು ರೋಟೇರಿಯನ್ ದಿವಾಕರ್ ಶೆಟ್ಟಿ ಅವರ ಪುತ್ರಿ ಶರಧಿ ಶೆಟ್ಟಿ ಅವರು 98.33% ಅಂಕಗಳೊಂದಿಗೆ 10ನೇ ರಾಂಕ್ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಶ್ರೀಮತಿ ಅಶ್ವಿನಿ ಮತ್ತು ರೋಟೇರಿಯನ್ ವೇಣುಗೋಪಾಲ್ ಅವರ ಪುತ್ರ ಶ್ರೀವತ್ಸ ವಿ ಅವರು 94% ಅಂಕಗಳನ್ನು ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಾಧಕರನ್ನು ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹಾಗೂ ಸದಸ್ಯರು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಕಾರ್ಯಕ್ರಮದಲ್ಲಿ ರೋಟರಿ ಸದಸ್ಯರು, ಪೋಷಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಜ್ಞಾನಸುಧಾದಂತಹ ಶ್ರೇಷ್ಠ ಶಿಕ್ಷಣ ಸಂಸ್ಥೆಗಳನ್ನು ಹುಟ್ಟು ಹಾಕಿ ಇದೀಗ ತನ್ನೂರಿನ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಮಹತ್ಕಾರ್ಯಕ್ಕೆ ಮುಂದಾಗಿರುವುದು ಶ್ರೇಷ್ಠ ಕಾರ್ಯವೆಂದು ಮಾಜಿ ಮುಖ್ಯಮಂತ್ರಿ ಡಾ| ಎಂ ವೀರಪ್ಪ ಮೊಯಿಲಿ ಹೇಳಿದರು. ಅವರು ಏಪ್ರಿಲ್ 14 ರಂದು ಅಜೆಕಾರು ಜ್ಞಾನಸುಧಾ ಪಿ.ಯು ಕಾಲೇಜು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತರಾಗದೆ ಜ್ಞಾನ ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆ ಕ್ರಾಂತಿಯನ್ನೇ ಸೃಷ್ಟಿಸಿದೆ. ಇಲ್ಲಿನ ವಿದ್ಯಾರ್ಥಿಗಳು ಸಾಧನೆ ತೋರಿ ಕೇವಲ ರಾಜ್ಯ, ದೇಶಕ್ಕೆ ಸೀಮಿತವಾಗದೇ ಇಡೀ ಜಗತ್ತಿಗೆ ಜ್ಞಾನಸುಧಾದ ಸುಗಂಧವನ್ನು ಪಸರಿಸಿದ್ದಾರೆ. ಇದು ಕಾರ್ಕಳಕ್ಕೆ ಹೆಮ್ಮೆ. ಸರಿಯಾದ ಅವಕಾಶ ಸಿಕ್ಕರೆ ಪ್ರತಿಯೊಬ್ಬ ಮಗುವೂ ಬುದ್ಧಿವಂತನಾಗಿ ಬೆಳೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಮಾಜದಿಂದ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು ಎಂದು ಮೊಯಿಲಿಯವರು ಹೇಳಿದರು. ಗಣಿತದಲ್ಲಿ ಸಂಶೋಧನೆ ಮಾಡುವ ಹಂಬಲ ವ್ಯಕ್ತಪಡಿಸಿದ ಜ್ಞಾನಸುಧಾದ ವಿದ್ಯಾರ್ಥಿಯನ್ನು ಮೊಯಿಲಿ ಪ್ರಶಂಸಿಸಿದರು. ಇಂಜಿನಿಯರಿಂಗ್‌ನಂತಹ ಸಾಂಪ್ರದಾಯಿಕ ವೃತ್ತಿಗಳ ಆಚೆಗೂ ಸಂಶೋಧನಾ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡುವಂತಹ ವೇದಿಕೆಯನ್ನು…
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : ಉಡುಪಿ ಜಿಲ್ಲೆಯ ಆಯ್ದ ಕನ್ನಡ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ
ದೀಕ್ಷಿತ್ ರೈಯವರ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಪುತ್ತೂರಿನ ಅಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಆಯ್ದ ಕನ್ನಡ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ತರಗತಿ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಸ್ಪೋಕನ್ ಇಂಗ್ಲಿಷ್ ಸಶಕ್ತೀಕರಣ ಕಾರ್ಯಕ್ರಮ ಒಪ್ಪಂದ ಅನ್ವಯ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯು ಸಿ.ಎಸ್.ಆರ್ ಅನ್ವಯ ಅಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಒಂದು ವರ್ಷದ ಸ್ಪೋಕನ್ ಇಂಗ್ಲಿಷ್ ಸಶಕ್ತೀಕರಣ ಕಾರ್ಯಕ್ರಮ ಜಾರಿಗೆ ತರಲು ಪರಸ್ಪರ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಗುರುತಿಸಿದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಸಂವಹನ ಕೌಶಲ್ಯ ಒದಗಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮವು 2026ರ…
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯ ಕುರಿತು ಸುರತ್ಕಲ್ ಬಂಟರ ಸಂಘದಲ್ಲಿ ಸಭೆಯನ್ನು ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಇವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಹೊರೆಕಾಣಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಡಾ| ಕೆ ಪ್ರಕಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸಹಿತ ಬೇರೆ ಜಿಲ್ಲೆಗಳಿಂದಲೂ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ದೇವತಾ ಕಾರ್ಯಕ್ಕೆ ಹೊರೆಕಾಣಿಕೆಯನ್ನು ಕಳುಹಿಸಲು ಎಲ್ಲಾ ಬಂಟರ ಸಂಘಗಳಿಗೆ ಮನವಿ ಪತ್ರ ಬಂದಿರುತ್ತದೆ. ಈ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಸಂಘ ಕೂಡಾ ಬಹಳಷ್ಟು ಮುತುವರ್ಜಿ ವಹಿಸಿ ಇಂದಿನ ಸಭೆಯನ್ನು…
ಹೊಸದಿಲ್ಲಿಯ ವಿನೋದ್ ನಗರ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಮೈದಾನದಲ್ಲಿ ಅಡ್ವೆಂಚರ್ ಆಂಡ್ ಮಾಸ್ಟರ್ ಸ್ಪೋರ್ಟ್ಸ್ ಫೆಡರೇಶನ್ ವತಿಯಿಂದ ಆಯೋಜನೆಗೊಂಡ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಸದಾನಂದ ಆಳ್ವ ತೇವು ಅವರು 400 ಮೀಟರ್ ಓಟದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಕೋಚ್ ರವಿ ಶಂಕರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರು ವಿಧಾನಸೌಧ ಕಚೇರಿಯಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಕಾರ್ಕಳದ ಸಾಣೂರಿನ ಹೆಮ್ಮೆಯ ಕ್ರೀಡಾ ಪ್ರತಿಭೆ ಆಯುಷ್ ಶೆಟ್ಟಿಯವರನ್ನು ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ, ವಿನಯಕುಮಾರ್ ಸೊರಕೆ, ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಯುವ ಮುಖಂಡ ಅಶ್ವಿತ್ ಜೈನ್, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶ್ರೀಮತಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಪೈನಲ್ ಪ್ರವೇಶಗೈದು 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) : ರಮೇಶ್ ರವರಿಗೆ ರೂ. 2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ವೈದ್ಯಕೀಯ ನೆರವು
ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿ ಅಸಹಾಯಕರಾಗಿದ್ದ ಕಾರ್ಕಳದ ಕಾಬೆಟ್ಟು ನಿವಾಸಿ ರಮೇಶ್ ಅವರಿಗೆ ಸಹೃದಯ ದಾನಿಗಳ ಸಹಾಯದ ಕೋರಿಕೆಯನ್ನು ಮಾಡಿರುವಂತೆ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಮೂಲಕ ದಾನಿಗಳ ಸಹಕಾರದಿಂದ ಸಂಗ್ರಹವಾದ ಒಟ್ಟು ರೂ. 2.00 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಶಾಸಕರಾದ ವಿ. ಸುನೀಲ್ ಕುಮಾರ್ ಮತ್ತು ಸ್ಥಳೀಯ ಪ್ರಮುಖರಾದ ವಿಜಯ್ ಶೆಟ್ಟಿ, ನಿರಂಜನ್ ಜೈನ್, ಸುನೀಲ್ ಕೋಟ್ಯಾನ್, ದಿನೇಶ್ ಶೆಟ್ಟಿ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ ಅವರು ರಮೇಶ್ ಅವರ ಮನೆಗೆ ತೆರಳಿ ಹಸ್ತಾಂತರ ಮಾಡಿ ಬಳಿಕ ಆವರ ಆರೋಗ್ಯ ವಿಚಾರಿಸಲಾಯಿತು.
ಏಪ್ರಿಲ್ 26ರಂದು ಮೂಲ್ಕಿ ಮೂಡುಬಿದಿರೆ ವಲಯ ಹಗ್ಗ ಜಗ್ಗಾಟ ಸ್ವರ್ಧೆ : ಡಾ| ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ
ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಮೂಲ್ಕಿ ಮೂಡುಬಿದಿರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ವರ್ಧೆ ಏಪ್ರಿಲ್ 26ರಂದು ಬೆಳಿಗ್ಗೆ 11 ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್, ಚರ್ಚ್ ಬಳಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ಅಧ್ಯಕ್ಷ ಡಾ| ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ಹೇಳಿದರು. ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಗ್ಗಜಗ್ಗಾಟ ಸ್ವರ್ಧೆಯಲ್ಲಿ ಜಯ ಗಳಿಸಿದವರಿಗೆ ಮೊದಲನೇ ಬಹುಮಾನ 30,000 ಮತ್ತು ಟ್ರೋಫಿ, ಎರಡನೇ ಬಹುಮಾನ 20,000 ಮತ್ತು ಟ್ರೋಫಿ, ಮೂರನೇ ಬಹುಮಾನ 10,000 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 5,000 ರೂ ನಗದು ಮತ್ತು ಟ್ರೋಫಿ ನೀಡಲಾಗುವುದು. ನೋಂದಣಿಗೆ ಏಪ್ರಿಲ್ 23 ಕೊನೆಯ ದಿನವಾಗಿದೆ. ಪಂದ್ಯಾಟದಲ್ಲಿ 30 ಪುರುಷ 20 ಮಹಿಳಾ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಳೆದ 16…
ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಕ್ರಮವಾಗಿ 10 ಹಾಗೂ 17 ಬಾರಿ ಚಾಂಪಿಯನ್ಸ್ ಪಟ್ಟ ಪಡೆದುಕೊಂಡಿತು. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಸೋಲಿಸಿ 10ನೇ ಬಾರಿ ರತ್ನವರ್ಮ ಹೆಗ್ಗಡೆ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ತಂಡದ ಧನುಷ್ ಉತ್ತಮ ಹಿಡಿತಗಾರ ಹಾಗೂ ಸಾಯಿ ಪ್ರಸಾದ ಉತ್ತಮ ದಾಳಿಗಾರ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಮಹಿಳೆಯರ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಪರಾಭವಗೊಳಿಸಿ ರೆವರೆಂಟ್ ಫಾದರ್ ಪತ್ರಾವೋ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು 17ನೇ ಬಾರಿ ತನ್ನದಾಗಿಸಿಕೊಂಡಿತು. ಆಳ್ವಾಸ್‌ನ ವಿನುಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದರೆ, ಸುಶ್ಮಿತಾ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದರು. ವಿಜೇತ ಅವಳಿ ತಂಡವನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್…















