Author: admin

ಗಣಿತನಗರ: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿ ರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ಅರ್ನ್‍ಲರ್ನ್ ಬಿಸ್‍ನೆಸ್ ಪೈರ್ ಉದ್ಘಾಟನೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಂಸ್ಥೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳೇ ಮುನ್ನಡೆಸುವ ಅರ್ನ್‍ಲರ್ನ್ ಬಿಸ್‍ನೆಸ್ ಪೈರನ್ನು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ…

Read More

ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ಮಕ್ಕಳ ಚಿಕಿತ್ಸಾ ವಿಭಾಗ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇವರು ಆಯೋಜಿಸಿದ ಆರೋಗ್ಯಕರ ಶಿಶು ಸ್ಪರ್ಧೆ ಮತ್ತು ತಪಾಸಣಾ ಶಿಬಿರವು ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಡಾ. ಪ್ರಜ್ಞಾ ಮಲ್ಯರವರು ಪುಟ್ಟ ಮಗುವಿನ ಆರೋಗ್ಯದ ಬಗ್ಗೆ ವೈದ್ಯರ ಸೂಕ್ತ ಸಲಹೆ ಪಡೆದು ಜಾಗೃತಿ ವಹಿಸಬೇಕು ಎಂದರು. ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಚಿಕ್ಕ ಮಗುವಿನ ಆರೋಗ್ಯದ ಬಗ್ಗೆ ಪೋಷಕರು ಜಾಗೃತಿ ವಹಿಸುವುದರಿಂದ ಮುಂದೆ ಸುದೃಢ ಮನಸ್ಸಿನ ಆರೋಗ್ಯವಂತ ಯುವ ಪೀಳಿಗೆಯನ್ನು ಕಾಣಬಹುದು ಎಂದರು. ಡಾ. ಆಶಾ ಹೆಗ್ಡೆ ಮಕ್ಕಳ ಆರೋಗ್ಯದ ಕುರಿತು ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸರ್ಟಿಫಿಕೇಟ್ ಮತ್ತು ಗಿಫ್ಟ್ ಹಾಂಪರ್ಸ್ ನೀಡಲಾಯಿತು. ವೇದಿಕೆಯಲ್ಲಿ…

Read More

ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರು. ಬಾಲಕರ ವಿಭಾಗದಲ್ಲಿ ಆಳ್ವಾಸ್‌ನ ಸಾಗರ್ ದ್ವಿತೀಯ, ವರುಣ್ ತೃತೀಯ, ಸಮರ್ಥ ನಾಲ್ಕನೇ ಸ್ಥಾನ, ವಿನಯ್ ಐದನೇ ಸ್ಥಾನ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‌ನ ನಾಗಿಣಿ ಪ್ರಥಮ, ಚರಿಷ್ಮಾ ದ್ವಿತೀಯ, ಜಾಹ್ನವಿ ತೃತೀಯ ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

“ನವ್ನೂಮೇಶ್-೨೦೨೫” ಐ.ಎಂ.ಜೆ ಇನ್ಸ್ಟಿಟ್ಯೂಷನ್ ಮೂಡ್ಲಕಟ್ಟೆ, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ‘ಅಂತರ್ ಕಾಲೇಜು ಪೆಸ್ಟ್-೨೦೨೫’ ಉಡುಪಿ ಜಿಲ್ಲಾ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ೩೬ ಕಾಲೇಜುಗಳಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ತಂಡವು ಪ್ರಶಸ್ತಿಗಳ ಜೊತೆಗೆ ಪ್ರಶಸ್ತಿಗಳನ್ನು ಪಡೆದು, ಪ್ರಶಸ್ತಿಗಳ ಸರಮಾಲೆಯೊಂದಿಗೆ ಉಡುಪಿ ಜಿಲ್ಲೆಗೆ ಸಮಗ್ರ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರ ಜೊತೆಗೆ ಸೈನ್ಸ್ ಸ್ಟಿçಮ್ ಪ್ರಥಮ, ಕಲ್ಚರಲ್ ಸ್ಟಿçÃಮ್ ಪ್ರಥಮ ಪ್ರಶಸ್ತಿಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು, ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.

Read More

ಸುಬ್ರಮಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ನೆಟ್ ಬಾಲ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ತಂಡದಲ್ಲಿ ನಿಖಿತಾ, ಹರ್ಷಿತಾ, ಸಂಧ್ಯಾ, ಹೇಮ, ದಿವ್ಯ ಪ್ರತಿನಿಧಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಕ ಪ್ರೇಮಾನಾಥ ಶೆಟ್ಟಿ ಕಾವು ಕ್ರೀಡಾಪಟುಗಳನ್ನು ಗೌರವಿಸಿದರು.

Read More

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಪ್ರದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಾಗಿ ಸಮಾಜದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳ ಜೀವನದ ಆಶಾಕಿರಣವಾಗಿ ಈಡೀ ರಾಜ್ಯವೇ ಹೆಮ್ಮೆಯಿಂದ ಗುರುತಿಸಿಕೊಂಡ ವಿದ್ಯಾಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಮಾತ್ರವಲ್ಲದೆ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಈಡೀ ರಾಷ್ಟವೇ ಗುರುತಿಸುವಂತಹ ಅದ್ಭುತ ಸಾಧನೆಯನ್ನು ಗಳಿಸಿದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ದಿನಾಂಕ ೦೭-೧೧-೨೦೨೫ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು, ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯಶ್ಚಿತ್ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಮೊದಲು ಹಲವಾರು ಕ್ರೀಡೆಗಳಾದ ಪುಟ್ಬಾಲ್, ವಾಲಿಬಾಲ್, ಥ್ರೋಬಾಲ್, ಕರಾಟೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುವುದು ಎಕ್ಸಲೆಂಟ್‌ನ ಸಾಧನೆ. ಈ ಸಾಧನೆಯ ಜೊತೆಗೆ ಬಾಕ್ಸಿಂಗ್ ಪಂದ್ಯದಲ್ಲಿಯೂ…

Read More

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ 22 ನೇ ವಾರ್ಷಿಕೋತ್ಸವ ಸಮಾರಂಭವು ನವೆಂಬರ್ 9 ರವಿವಾರದಂದು ಅಪರಾಹ್ನ ಘಂಟೆ 2.30 ರಿಂದ ಬಾಣೆರ್ ನಲ್ಲಿರುವ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಶ್ರೀ ಗುರುದೇವ ದತ್ತ ಸಂಸ್ಥಾನಮ್ ಶ್ರೀ ದತ್ತಗುರು ವೀರಾಂಜನೇಯ ಸ್ವಾಮಿ ಕ್ಷೇತ್ರ ಒಡಿಯೂರಿನ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾದ್ವಿ ಮಾತಾನಂದಮಯೀಯವರು ದಿವ್ಯ ಉಪಸ್ಥಿತರಿರುವರು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಪಾದುಕ ಪೂಜೆ, ಗುರುವಂದನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಒಡಿಯೂರಿನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಮತ್ತು ಸಾದ್ವಿ ಮಾತಾನಂದಮಯಿಯವರು ಅಶೀರ್ವಚನದ ಮೂಲಕ ಜ್ಞಾನ ಸಂದೇಶ ನೀಡಲಿದ್ದಾರೆ. ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತು…

Read More

ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಪಿ ಶೆಟ್ಟಿ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಸಂಗೀತಾ ಪಿ ಶೆಟ್ಟಿ ದಂಪತಿಯರ ಪುತ್ರಿ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯಾದಗಿರಿ ಜಿಲ್ಲೆ ಶಹಾಪುರದ ದಿಗ್ಗಿ ರೋಡ್ ಸರಕಾರಿ ಮಾದರಿ ಪದವಿ ಪೂರ್ವ ಕಾಲೇಜು ದಿಗ್ಗಿ ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ (ನ.4 ಮತ್ತು ನ.5) ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ…

Read More

ರೋಟರಿ ಕ್ಲಬ್ ಕಾರ್ಕಳ, ರೋಟರಿ ಆನ್ಸ್ ಕ್ಲಬ್ ಕಾರ್ಕಳ ಆಶ್ರಯದಲ್ಲಿ ಆರೋಗ್ಯಕ್ಕಾಗಿ ಸ್ವಚ್ಛತೆ ಮತ್ತು ಹದಿಹರೆಯದ ಸಮಸ್ಯೆಗಳ ಮಾಹಿತಿ ಕಾರ್ಯಕ್ರಮವು ಎಸ್.ವಿ.ಟಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಆರೋಗ್ಯವಂತ ಸಮಾಜಕ್ಕೆ ಸ್ವಚ್ಛ ಸಮಾಜ ಅತೀ ಮುಖ್ಯವಾಗಿದೆ. ಆದುದರಿಂದ ಸ್ವಚ್ಛತೆ ಬಗ್ಗೆ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ರೊ. ಡಾ. ದಿಶಾ ಕಿಶನ್ ರವರು ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ಮೂಲಕ ಹಾಗೂ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೋಟರಿ ಡಿಸ್ಟ್ರಿಕ್ಟ್ ಛೇರ್ಮನ್ ಹರಿಪ್ರಕಾಶ್ ಶೆಟ್ಟಿ, ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಮಾಲಿನಿ, ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಯಶವಂತಿ ಯಶೋಧರ್ ಅತಿಥಿಗಳನ್ನು ಪರಿಚಯಿಸಿದರು. ರೋಟರಿ ಕ್ಲಬ್ಬಿನ ಸದಸ್ಯರಾದ ವಿಜೇಂದ್ರ ಕುಮಾರ್ ಸುರೇಶ ನಾಯಕ್, ವಸಂತ್ ಎಂ, ಹರಿಚಂದ್ರ…

Read More

ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಗಳಿಸಿದರು. ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮದುಲಿಂಗ ಎಂ (60 ಕೆ.ಜಿ. ವಿಭಾಗ)- ಚಿನ್ನ, ವಸಂತ್ ಕುಮಾರ್ ಸಿ.ಜಿ. (79 ಕೆ.ಜಿ. ವಿಭಾಗ)- ಚಿನ್ನ, ಸಾಯಿ ಹಿತೇಶ್ (94 ಕೆ.ಜಿ. ವಿಭಾಗ)- ಚಿನ್ನ, ಹರ್ಷ ಸಿ.ಆರ್ (110+ ಕೆ.ಜಿ. ವಿಭಾಗ)-ಚಿನ್ನ ಹಾಗೂ ಹರ್ಷಿತಾ (69 ಕೆ.ಜಿ. ವಿಭಾಗ) ಕಂಚಿನ ಪದಕದೊಂದಿಗೆ ಒಟ್ಟು 4 ಚಿನ್ನ ಹಾಗೂ 1 ಕಂಚಿನ ಪದಕ ಗಳಿಸಿದರು. ವಿಟಿಯು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್‌ನ ನೈದಿಲ್ ಪೂಜಾರಿ (70 ಕೆ.ಜಿ. ವಿಭಾಗ) ಚಿನ್ನದ ಪದಕದೊಂದಿಗೆ ಮಿಸ್ಟರ್ ವಿಟಿಯು ‘ಮೋಸ್ಟ್ ಮಸ್ಕುಲರ್ ಮ್ಯಾನ್’ ಪಟ್ಟ ಪಡೆದರು. ಸೋಹಮ್ ಕುಡಚಿ (85 ಕೆ.ಜಿ. ವಿಭಾಗ) ಚಿನ್ನದ ಪದಕ ಪಡೆದರೆ, ಜಗದೀಶ್ ಗೌಡ (85 ಕೆಜಿ ವಿಭಾಗ)- ಬೆಳ್ಳಿಯ ಪದಕ, ವಸಂತ್…

Read More