Author: admin
ಮಂಗಳೂರು, ಮಣಿಪಾಲಕ್ಕೆ ಮಾತ್ರ ಸೀಮಿತವಾಗಿದ್ದ ಮಲ್ಟಿಫ್ಲೆಕ್ಸ್ ಸಿನಿಮಾ ಥಿಯೇಟರ್ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮೂರು ಸಿನಿಮಾ ಹಾಲ್ ಗಳೊಂದಿಗೆ ಮಾಚ್೯ 25 ಶುಕ್ರವಾರದಿಂದ ಸುರತ್ಕಲ್ ಹೃದಯಭಾಗದಲ್ಲಿರುವ ಅಭಿಷ್ ಮಾಲ್ ನಲ್ಲಿ ಶುಭಾರಂಭಗೊಳ್ಳಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮಾಲಕ ಶಶಿಧರ್ ಕೋಡಿಕಲ್ ಅವರು, “ಸುರತ್ಕಲ್, ಪಡುಬಿದ್ರೆ, ಮೂಲ್ಕಿ, ಬಜಪೆ ಕಾಟಿಪಳ್ಳ ಕೃಷ್ಣಾಪುರ ಸುತ್ತಮುತ್ತಲಿನ ಗ್ರಾಮೀಣ ಭಾಗಗಳ ಜನರಿಗೆ ಮಲ್ಟಿ ಫ್ಲೆಕ್ಸ್ ನಲ್ಲಿ ಕೂತು ಕುಟುಂಬ ಸಮೇತ ಸಿನಿಮಾ ನೋಡುವ ಕನಸನ್ನು ಸುರತ್ಕಲ್ ನಲ್ಲಿ ಸಿನಿ ಗ್ಯಾಲಕ್ಸಿ ಚಿತ್ರಮಂದಿರ ನನಸು ಮಾಡಲಿದೆ. ಸಿನಿಗ್ಯಾಲಕ್ಸಿಯಲ್ಲಿ ಹವಾನಿಯಂತ್ರಿತ ಮೂರು ಪರದೆಗಳಿವೆ. ಉತ್ತಮ ತಂತ್ರಜ್ಞಾನ, ಸೌಂಡ್, ವಿಡಿಯೋ ಗುಣಮಟ್ಟ ಯಾವುದರಲ್ಲೂ ರಾಜಿ ಮಾಡಿಕೊಳ್ಳದೆ ಮೂರು ಪ್ರತ್ಯೇಕ ಸಿನಿಮಾ ಹಾಲ್ ಗಳನ್ನು ನಿರ್ಮಿಸಿದ್ದು ಒಟ್ಟು 417 ಆಸನ ಸಾಮರ್ಥ್ಯ ಹೊಂದಿದೆ” ಎಂದು ಶಶಿಧರ್ ಕೋಡಿಕಲ್ ಹೇಳಿದರು. ಯು ಎಫ್ ಒ ತಂತ್ರಜ್ಞಾನದೊಂದಿಗೆ ಸಿನಿಮಾ ಹಾಲ್ ತಯಾರಾಗಿದ್ದು ರಾಕರ್, ಗೋಲ್ಡ್ ಸೋಫಾ ಸೀಟ್ಸ್, ಕುಟುಂಬಕ್ಕಾಗಿ ಖಾಸಗಿ ಕ್ಲಬ್ ಕ್ಲಾಸ್ ಸೀಟ್ಸ್…
ಬದುಕಿನ ಪಯಣವನ್ನು ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಕಾಪು ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ಕೆ ಪ್ರಭಾಕರ್ ಶೆಟ್ಟಿಯವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಪ್ರಾರ್ಥಿಸುತ್ತಿದ್ದೇವೆ.
ವಿದ್ಯಾಗಿರಿ (ಮೂಡುಬಿದಿರೆ): ಕೃಷಿ, ಸಂಘಟನೆ, ಸಾಂಸ್ಕೃತಿಕ, ಧಾರ್ಮಿಕ, ವಿದ್ಯಾ ಕ್ಷೇತ್ರ ಹಾಗೂ ಸಮಾಜ ಸೇವೆಗಳಲ್ಲಿ ಸಕ್ರಿಯರಾಗಿದ್ದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಮಂಗಳವಾರ ನಿಧನರಾದರು. ಅವರಿಗೆ 107 ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ಮಿಜಾರುಗುತ್ತು ಮನೆತನದಲ್ಲಿ 1916ರ ಆಗಸ್ಟ್ 15ರಂದು ಜನಿಸಿದ ಅವರು, ಆದರ್ಶ ಕೃಷಿಕರಾಗಿ ಬದುಕು ಕಂಡವರು. ದಕ್ಷಿಣ ಕನ್ನಡದಲ್ಲಿ ಯಶಸ್ವಿಯಾಗಿ ಅಡಿಕೆ, ತೆಂಗು ಹಾಗೂ ಕ್ಯಾವೆಂಡಿಸ್ ಬಾಳೆ ಕೃಷಿಯನ್ನು ಪರಿಚಯಿಸಿದವರಲ್ಲಿ ಪ್ರಮುಖರಾಗಿದ್ದಾರೆ. ಮಿಜಾರು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸ್ಥಾಪಕರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ ಅವರು, ಮೂಡುಬಿದಿರೆ ಶೈಕ್ಷಣಿಕ ಕ್ರಾಂತಿಗೆ ಅರಿವಿನ ಸ್ಫೂರ್ತಿಯ ಸೆಲೆಯಾಗಿದ್ದರು. ಕೃಷಿ ಕ್ರೀಡೆಯ ಹಿರಿಯ ಪ್ರೋತ್ಸಾಹಕರಾಗಿದ್ದ ಅವರು, ಮಿಜಾರು ಕೋಟಿ ಚೆನ್ನಯ ಜೋಡುಕೆರೆ ಕಂಬಳವನ್ನು ಪರಿಚಯಿಸಿದ ಕೀರ್ತೀ ಇವರಿಗೆ ಸಲ್ಲುತ್ತದೆ. ಬದುಕಿನ ಸಂಧ್ಯಾಕಾಲದವರೆಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ನಿಕಟವರ್ತಿಯಾಗಿದ್ದ ಆನಂದ ಆಳ್ವರು, ನಾಗಮಂಡಲ, ಬ್ರಹ್ಮಕಲಶ, ದೈವಾರಾಧನೆ ಸೇರಿದಂತೆ ಧರ್ಮ ಮತ್ತು…
ತುಳು ಕೂಟ ಪುಣೆ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ ಶ್ರೀ ದಿನೇಶ್ ಶೆಟ್ಟಿ ಕಳತ್ತೂರು ಅಶ್ವತ್ಥಗುತ್ತು ಇವರು ದಿನಾಂಕ 19.10.2023 ರಂದು ನಡೆದ ಮಹಾಸಭೆಯಲ್ಲಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಶ್ರೀ ದಿನೇಶ್ ಶೆಟ್ಟಿ ಕಳತ್ತೂರು ಹಾಗೂ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ ಪುತ್ತೂರು ಇವರುಗಳನ್ನು ಸಭೆಯಲ್ಲಿ ಗಣ್ಯಾತಿ ಗಣ್ಯರು ಅಭಿನಂದಿಸಿದರು. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ, ಸ್ಥಾಪಕಾಧ್ಯಕ್ಷ ಜಯ ಶೆಟ್ಟಿ, ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಹೆಗ್ಡೆ, ಡಾ. ಸುಧಾಕರ್ ಶೆಟ್ಟಿ, ಸಂತೋಷ್ ಶೆಟ್ಟಿ ಎಣ್ಣೆಹೊಳೆ ಉಪಸ್ಥಿತರಿದ್ದರು.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೆಶ್ ರೈ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವು ತುಂಬಾನೇ ಯಶಸ್ಸು ಕಂಡಿದೆ. ದೇಶ ಕಾಯೋ ವೀರ ಯೋಧರಿಗೂ, ರಾಜ್ಯದಲ್ಲಿ ಆರಕ್ಷಕರಾಗೋರಿಗೂ ಮಾತ್ರವಲ್ಲದೆ ನಾಡಿನ ಉತ್ತಮ ಪ್ರಜೆಗಳನ್ನು ತಯಾರು ಪಡಿಸುವಂತಹ ಶಿಕ್ಷಕ ವೃಂದವನ್ನೂ ಕೂಡ ಸಿದ್ದಪಡಿಸಿಕೊಡುತ್ತಿರುವ ಅಕಾಡೆಮಿ ಅಧ್ಯಕ್ಷರಿಗೆ ನನ್ನ ಸಹಸ್ರ ವಂದನೆಗಳು ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಸೆ.28 ರಂದು ಸುಳ್ಯದಲ್ಲಿ ಪ್ರಾರಂಭಗೊಂಡ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಇದರ ಮೊದಲ ಶಾಖೆಯನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿದರು. ಬುದ್ದಿವಂತರ ಜಿಲ್ಲೆ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡದಿಂದಲೇ ಮುಂದಿನ ದಿನಗಳಲ್ಲಿ ಐ.ಎ.ಎಸ್, ಐ.ಪಿ.ಎಸ್ ಹುದ್ದೆಗಳು ಸೃಷ್ಟಿಯಾಗಬೇಕು, ಇಲ್ಲವೆಂದಾದರೆ ಬುದ್ದಿವಂತರ ಜಿಲ್ಲೆಯೆಂದು ಕರೆಸಿಕೊಂಡು ಏನು ಪ್ರಯೋಜನ ಎಂದ ಅವರು, ಶೀಘ್ರದಲ್ಲೇ ವಿದ್ಯಾಮಾತಾ ಶಾಖೆ ಮಂಗಳೂರು, ಬಳಿಕ ಉಡುಪಿ ಯಲ್ಲೂ ಪ್ರಾರಂಭವಾಗಲಿ ಎಂದು ಹಾರೈಸಿದರು. ಪುತ್ತೂರು ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮಾನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಯಶಸ್ವಿ ಸಾಧನೆ…
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ (ರಿ) ಮಂಗಳೂರು, ಇದರ ವಾರ್ಷಿಕ ಮಹಾಸಭೆ ಮಂಗಳೂರು ಬಾವುಟ ಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಹಾಲಿ ಅಧ್ಯಕ್ಷ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ 2023-25ರ ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಕರ್ನಲ್ ಜಯಚಂದ್ರನ್, ಕಾರ್ಯದರ್ಶಿಯಾಗಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಜೊತೆ ಕಾರ್ಯದರ್ಶಿಯಾಗಿ ಜೆಡಬ್ಲ್ಯೂಒ ಬಾಲಚಂದ್ರ, ಕೋಶಾಧಿಕಾರಿಯಾಗಿ ಪಿಒ ಸುಧೀರ್ ಪೈ ಮತ್ತು 20 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಫ್ಟಿನೆಂಟ್ ಕರ್ನಲ್ ಪ್ರಭಾಕರ್ ರೈಯವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಸಂಘದ ಚಟುವಟಿಕೆಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವ ಕರ್ನಲ್ ಭಂಡಾರಿ, ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಮತ್ತು ಸಾರ್ಜೆಂಟ್ ಭಗವಾನ್ ದಾಸ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬ್ರಿಗೇಡಿಯರ್ ಐ ಎನ್ ರೈ ಮತ್ತು ಕರ್ನಲ್ ಶರತ್ ಭಂಡಾರಿಯವರು ಮಾಜಿ ಸೈನಿಕರಿಗೆ ಉಪಲಬ್ಧವಿರುವ ಸವಲತ್ತುಗಳ ಬಗ್ಗೆ ಮಾಹಿತಿ ಮತ್ತು ಸಲಹೆಗಳನ್ನು ನೀಡಿದರು. ನೂತನ ಅಧ್ಯಕ್ಷ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ, ಬೊರಿವಿಲಿ ಎಜುಕೇಶನ್ ನ ಕಾರ್ಯಧ್ಯಕ್ಷ ಡಾ. ಪಿ ವಿ ಶೆಟ್ಟಿಯವರ 60 ನೇ ಹುಟ್ಟುಹಬ್ಬದ ಪ್ರಯುಕ್ತ ಬೊರಿವಿಲಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿದರು. ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಹರೀಶ್ ಶೆಟ್ಟಿಯವರು ಡಾ. ಪಿ ವಿ ಶೆಟ್ಟಿ ದಂಪತಿಯನ್ನು ಹೂಗುಚ್ಚ ನೀಡಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾಪೋಷಕ ಬಿ ವಿವೇಕ್ ಶೆಟ್ಟಿ, ಪೋಷಕರಾದ ಸುಧಾಕರ್ ಹೆಗ್ಡೆ, ಶ್ರೀಮತಿ ರಂಜಿನಿ ಸುಧಾಕರ್ ಹೆಗ್ಡೆ, ಪದ್ಮನಾಭ್ ಪಯ್ಯಡೆ, ರವಿ ಶೆಟ್ಟಿ ಸಾಯಿ ಪ್ಯಾಲೇಸ್, ರತ್ನಾಕರ್ ಶೆಟ್ಟಿ ಮುಂಡ್ಕೂರು, ವಿಜಯ ಭಂಡಾರಿ ಮತ್ತು ಜಯ ಎ ಶೆಟ್ಟಿ ಶಿಮಂತೂರು ಉಪಸ್ಥರಿದ್ದು ಡಾ. ಪಿ ವಿ ಶೆಟ್ಟಿ ದಂಪತಿಯನ್ನು ಅಭಿನಂದಿಸಿದರು.
ಕಾಪು ಕ್ಷೇತ್ರ ನನ್ನ ಹುಟ್ಟೂರು. ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಮಾಜ ಸೇವೆಯ ಮೂಲಕವಾಗಿ ಬೆಳೆದು ಬಂದಿರುವ ನನಗೆ ಬಿಜೆಪಿ ರಾಜಕೀಯ ಶಕ್ತಿ ಕೊಟ್ಟು ಶಾಸಕನಾಗಿ ಸ್ಪರ್ಧಿಸಲು ಅವಕಾಶ ಕೊಟ್ಟು, ಜನರ ಸಮಸ್ಯೆಗಳಿಗೆ ಸ್ಪಂಧಿಸುವ ದಾರಿಯನ್ನು ತೋರಿಸಿಕೊಟ್ಟಿದೆ. ನನ್ನ ಊರಿನ ಜನತೆ ನನ್ನ ಗೆಲುವಿಗಾಗಿ ಕೈ ಜೋಡಿಸಿದರೆ, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರನ್ನು ಎಲ್ಲಿಯೂ ಸೋಲಲು ಬಿಡಲಾರೆ, ತಲೆ ತಗ್ಗಿಸಲು ಬಿಡುವುದಿಲ್ಲ. ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಜನಸೇವೆ ಮಾಡುತ್ತೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಮತಯಾಚನೆ ನಡೆಸಿ, ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬಿಲ್ಲವ ಸಮಾಜದ ಏಳಿಗೆಯೂ ಸೇರಿದಂತೆ ಸಮಸ್ತ ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕಾಗಿ ಬಿಜೆಪಿ ಸರಕಾರವು ಹಲವಾರು ಕೊಡುಗೆಗಳನ್ನು ನೀಡಿದೆ.…
ಶ್ರೀ ಕಟೀಲು ಮೇಳದಲ್ಲಿ ಕಳೆದ 42 ವರ್ಷ ಗಳಿಂದ ನಿರಂತರ ಯಕ್ಷಗಾನ ಕಲಾ ಸೇವೆ ಮಾಡುತ್ತಿರುವ ಅನುಭವಿ ಕಲಾವಿದ, ಮೇಳದ ಪ್ರಬಂಧಕ ಶ್ರೀ ಶ್ರೀಧರ ಪಂಜಾಜೆ ಅವರಿಗೆ 13, ಮೇ ಶನಿವಾರ ಕದ್ರಿ ಕಂಬಳ ಗುತ್ತು ನಲ್ಲಿ, ಡಾ.ಬಿ. ನಿಶಾಕಾಂತ ಶೆಟ್ಟಿ ಅವರ ಕಟೀಲು ಮೇಳದ ಸೇವೆ ಆಟದ ಸಂದರ್ಭದಲ್ಲಿ, ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಲಾಗುವುದು ಎಂದು ಸಂಯೋಜಕ ಕದ್ರಿ ನವನೀತ ಶೆಟ್ಟಿ ತಿಳಿಸಿದ್ದಾರೆ. ಪುಂಡು ವೇಷಧಾರಿಯಾಗಿ ಪೌರಾಣಿಕ ಪಾತ್ರಗಳ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಶ್ರೀಧರ್ ಅವರು ಕಲ್ಲಾಡಿ ವಿಠ್ಠಲ ಶೆಟ್ಟಿ ಅವರ ಪ್ರೇರಣೆ, ಮಾರ್ಗದರ್ಶನ ದಲ್ಲಿ ಯಕ್ಷಗಾನ ಕಲಿತು, ಮೇಳ ಸೇರಿದವರು.15 ವರ್ಷಗಳಿಂದ ಕಟೀಲು ಮೇಳದ ಪ್ರಭಂದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕದ್ರಿ ಶ್ರೀ ಮಂಜುನಾಥ ಯಕ್ಷಗಾನ ಸಂಘದಲ್ಲಿ ತಾಳಮದ್ದಳೆ ಅರ್ಥಧಾರಿಯಾಗಿ, ಸಂಘಟಕನಾಗಿ, ಮಂಗಳೂರು ನಗರದ ಹವ್ಯಾಸಿ ವಲಯದ ಹಿರಿಯ ಅರ್ಥಧಾರಿ ಗಳಾಗಿದ್ದ ಕೀರ್ತಿಶೇಷ ಕದ್ರಿ ಕಂಬಳ ಗುತ್ತು ಬಾಲಕೃಷ್ಣ…
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟನ ಆಯ್ಕೆ ನಡೆಯುವುದು ಬಂಟ ಸಮುದಾಯದ ಮಧ್ಯೆಯೇ. ಅದು ಇತ್ತೀಚಿನ ಟ್ರೆಂಡ್. ಅದಕ್ಕೇ ಈ ಕ್ಷೇತ್ರ ಖ್ಯಾತಿ. ಯಾಕೆಂದರೆ, 1985 ರಿಂದ ನಿರಂತರವಾಗಿ 8 ಅವಧಿಗೆ ಬಂಟ ಸಮುದಾಯದವರೇ ಶಾಸಕರಾಗಿ ಪ್ರತಿನಿಧಿಸಿದ್ದಾರೆ. ಸುಳ್ಯ ಪ.ಜಾತಿ ಮೀಸಲು ಕ್ಷೇತ್ರವಾಗಿರುವ ಕಾರಣ ಒಂದೇ ಸಮುದಾಯದವರು ಆಯ್ಕೆ ಯಾಗುವುದು ಸಾಮಾನ್ಯ. ಆದರೆ ಬಂಟವಾಳ ಕ್ಷೇತ್ರದಲ್ಲೂ ನಿರಂತರವಾಗಿ ಒಂದೇ ಸಮುದಾಯವರು ಶಾಸಕರಾಗುತ್ತಿರುವುದು ಜಿಲ್ಲೆಯಲ್ಲಿ ವಿಶೇಷ. 1985ರಲ್ಲಿ ಬಿ.ರಮಾನಾಥ ರೈ ಅವರು ಶಾಸಕರಾಗಿದ್ದು, 89, 94, 99, 2008 ಹಾಗೂ 2013ರಲ್ಲಿ ಗೆದ್ದರು. 2004ರಲ್ಲಿ ಬಿ.ನಾಗರಾಜ ಶೆಟ್ಟಿ, 2018ರಲ್ಲಿ ರಾಜೇಶ್ ಉಳಿಪ್ಪಾಡಿಗುತ್ತು ವಿಜಯಿಯಾದರು. ಇವರು ಮೂವರೂ ಒಂದೇ ಸಮುದಾಯದವರು. ಇದರೊಂದಿಗೆ ವಿಶೇಷವೆಂದರೆ 1989ರಿಂದ ಪಕ್ಷಗಳು ಬಿಜೆಪಿ ಹಾಗೂ ಕಾಂಗ್ರೆಸ್ ಎಂದಾದರೂ ಎರಡೂ ಕಡೆಯಿಂದ ಪರಸ್ಪರ ಜಿದ್ದಾಜಿದ್ದಿಗೆ ಇಳಿಯುವವರು ಬಂಟ ಸಮುದಾಯದವರೇ. ಬಿ.ರಮಾನಾಥ ರೈ ಅವರ ವಿರುದ್ಧ 1989ರಲ್ಲಿ ಎಚ್.ನಾರಾಯಣ ರೈ, 1994 ಹಾಗೂ 1999ರಲ್ಲಿ ಶಕುಂತಳಾ ಟಿ.ಶೆಟ್ಟಿ, 2004 ಹಾಗೂ 2008ರಲ್ಲಿ ಬಿ.ನಾಗರಾಜ ಶೆಟ್ಟಿ,…