Author: admin
ದಿನಾಂಕ 26.2.2023ರ ಭಾನುವಾರ ಸಾಗರದ ಎಸ್.ಎ.ಎನ್ ನಗರದ ಬಂಟರ ಸಂಘದ ಕಚೇರಿಯಲ್ಲಿ, ಬಂಟರ ಯಾನೆ ನಾಡವರ ಸಂಘದ ವತಿಯಿಂದ ಜನಪ್ರಿಯ ಶಾಸಕರಾದ ಹರತಾಳು ಹಾಲಪ್ಪನವರಿಗೆ ಸನ್ಮಾನಿಸಲಾಯಿತು. ಈ ಹಿಂದೆ ಸಾಗರ ಬಂಟರ ಸಂಘದ ಕಟ್ಟಡಕ್ಕೆ 30 ಲಕ್ಷ ರೂಪಾಯಿಗಳ ಅನುದಾನವನ್ನು ಶಾಸಕರು ನೀಡಿದ್ದರು. ಇದಕ್ಕಾಗಿ ಬಂಟ ಸಮಾಜ ಬಾಂಧವರೆಲ್ಲ ಒಟ್ಟುಗೂಡಿ ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಸಕ ಹರತಾಳು ಹಾಲಪ್ಪನವರು ಮಾತನಾಡಿ ಬಂಟರು ಶ್ರಮಜೀವಿಗಳು, ಪ್ರಪಂಚದಾದ್ಯಂತ ಬಂಟರ ಸಮುದಾಯಕ್ಕೆ ಅವರದೇ ಆದಂತ ಗೌರವವಿದ್ದು ವಿವಿಧ ರೀತಿಯ ಉದ್ಯಮಗಳಲ್ಲಿ ಅವರು ಅವರನ್ನು ತೊಡಗಿಸಿಕೊಂಡಿದ್ದಾರೆ ಎಂದರು. ಸಾಗರ ಬಂಟರ ಸಂಘದ ಕಟ್ಟಡವನ್ನು ಪೂರ್ಣಗೊಳಿಸಲು ಇನ್ನೂ ಹೆಚ್ಚಿನ ರೀತಿಯಲ್ಲಿ ಅನುದಾನ ನೀಡುವುದಾಗಿ ತಿಳಿಸಿದರು. ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ ಶಾಸಕರಿಗೆ ಸಮಾಜದ ವತಿಯಿಂದ ಕೃತಜ್ಞತೆ ಸಲ್ಲಿಸಿದರು. ಸಾಗರ ಬಂಟರ ಸಮಾಜ ಸಾಗರ ತಾಲೂಕಿನಲ್ಲಿ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆಯನ್ನು ಸಮಾಜಮುಖಿಯಾಗಿ ನಡೆಸಲು ಅನುದಾನ ಹಾಗೂ ಸ್ಥಳಾವಕಾಶವನ್ನು ನೀಡಬೇಕಾಗಿ ಕೋರಿದರು. ಸಂಘದ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಪುಂಜಾಲಕಟ್ಟೆ ಘಟಕದ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮ ನ,21ರಂದು ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವರ ಪ್ರೀತ್ಯರ್ಥವಾಗಿ ನಡೆಯುವ ಯಕ್ಷಗಾನ ಸೇವೆ ಉತ್ತಮ ಕಾರ್ಯವಾಗಿದೆ. ಕಲಾವಿದರ ಕುರಿತು ಸಂಪೂರ್ಣ ಕಾಳಜಿ ವಹಿಸುವ ಕಾರ್ಯ ನಡೆಸುತ್ತಿರುವ ಯಕ್ಷಧ್ರುವ ಟ್ರಸ್ಟ್ ಅಭಿನಂದನೀಯ ಎಂದು ಅವರು ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಯಕ್ಷಗಾನ ಭಾಗವತ ಸತೀಶ್ ಶೆಟ್ಟಿ ಪಟ್ಲಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನದ ಬೆಳವಣಿಗೆಗೆ ಕಲಾಭಿಮಾನಿಗಳು ನೀಡುವ ಪ್ರೋತ್ಸಾಹ, ಪರಿಶ್ರಮ ಅಭಿನಂದನೀಯ ಎಂದ ಅವರು ಪುಂಜಾಲಕಟ್ಟೆ ಘಟಕ ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು. ಟ್ರಸ್ಟ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಯಕ್ಷಗಾನದ ಕಲಾವಿದರಿಗೆ ಚೈತನ್ಯ ನೀಡುವ ಕಾರ್ಯವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನಡೆಸುತ್ತಿದೆ, ಈಗಾಗಲೆ 38 ಘಟಕಗಳು ರಚನೆಯಾಗಿದ್ದು,…
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಹಳೆಯಂಗಡಿ, ಜೆಸಿಐ ಸುರತ್ಕಲ್ ಮತ್ತು ಕೆಎಂಸಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಾಚ್೯ 20 ಭಾನುವಾರ ಬೆಳಿಗ್ಗೆ 9 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ರಕ್ತದಾನ ಶಿಬಿರವನ್ನು ಸುರತ್ಕಲ್ ಶೆಟ್ಟೀಸ್ ಕ್ಲಿನಿಕ್ ನ ಡಾ. ಟಿ ಆರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಹಳೆಯಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸುರತ್ಕಲ್ ಜೆಸಿಐ ಅಧ್ಯಕ್ಷೆ ರಾಜೇಶ್ವರಿ ಡಿ ಶೆಟ್ಟಿ, ನಾಗೇಶ್ ಕುಮಾರ್ ಎನ್ ಜೆ ಉಪಸ್ಥಿತರಿರಲಿದ್ದಾರೆ ಎಂದು ವೈದ್ಯಕೀಯ ಸಮಿತಿಯ ಸಂಚಾಲಕ ಪ್ರತಾಪ್ ಶೆಟ್ಟಿ ತಿಳಿಸಿದ್ದಾರೆ.
ಆಹಾರ ನಮ್ಮೆಲ್ಲರ ಪ್ರಾಥಮಿಕ ಆವಶ್ಯಕತೆ. ಆದರೆ ಒಪ್ಪೊತ್ತಿನ ಆಹಾರ ಸಿಗದೆ ಹಸಿವಿನಿಂದ ದಿನದೂಡುವವರು ಇನ್ನೂ ವಿಶ್ವದಲ್ಲಿದ್ದಾರೆ ಎಂದರೆ ಮಾನವರ ಅಥವಾ ಮಾನವೀಯತೆಯ ಸೋಲು ಎಂದರೆ ಅದು ಅತಿಶಯೋಕ್ತಿಯಾಗದು. ಇದಕ್ಕೆ ಪ್ರಮುಖ ಕಾರಣ ಬಡತನವಾಗಿದ್ದರೂ, ಪ್ರತೀವರ್ಷ ಸಾವಿರಾರು ಟನ್ ಆಹಾರ ಧಾನ್ಯ, ವಸ್ತುಗಳು ಪೋಲಾಗುತ್ತಿರುವುದನ್ನು ನಿರ್ಲಕ್ಷಿಸಲಾಗದು. ನಾವು ಪ್ರತಿನಿತ್ಯ ವ್ಯರ್ಥ ಮಾಡುವ ಆಹಾರ, ಹಸಿವಿನಿಂದ ಬಳಲುತ್ತಿರುವ ವ್ಯಕ್ತಿಯ ಹೊಟ್ಟೆ ತುಂಬಿಸಬಹುದು ಎಂಬುದನ್ನು ಎಂದಿಗೂ ಮರೆಯಬಾರದು. ಹಸಿವಿನಿಂದ ಪ್ರತೀ ವರ್ಷ 50 ಲಕ್ಷ ಮಕ್ಕಳು ಸಾವು! ಭೂಮಿಯ ಮೇಲಿನ ಪ್ರತಿಯೊಬ್ಬರಿಗೂ ಆಹಾರ ಸೇವಿಸುವ ಹಕ್ಕಿದೆ. ಸಮೀಕ್ಷೆಯೊಂದರ ಪ್ರಕಾರ ಜಗತ್ತಿನಲ್ಲಿ ಪ್ರತೀ ವರ್ಷ 5 ದಶಲಕ್ಷ ಮಕ್ಕಳು ಹಸಿವಿನಿಂದ ಸಾವಿಗೀಡಾಗು ತ್ತಿದ್ಧಾರೆ. ಈ ಪೈಕಿ 5 ವರ್ಷದ ಒಳಗಿನ ಮಕ್ಕಳೇ ಹೆಚ್ಚು. ಏಕೆಂದರೆ ಮಕ್ಕಳಿಗೆ ಪೌಷ್ಟಿಕ ಆಹಾರದ ಕೊರತೆಯಿದೆ. ಬಡ ರಾಷ್ಟ್ರಗಳಲ್ಲಿ ಶೇ. 50ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ಧಾರೆ. ಹೀಗಾಗಿಯೇ ವಿಶ್ವದ 40 ದೇಶಗಳಲ್ಲಿ ಹಸಿವಿನಿಂದ ಬಳಲುವವರ ಸಂಖ್ಯೆಯನ್ನು ಕಡಿಮೆ ಮಾಡುವ ಸಂಕಲ್ಪದೊಂದಿಗೆ ವಿಶ್ವ ಆಹಾರ ದಿನವನ್ನು…
ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಅ.8ರಿಂದ 16 ರ ತನಕ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಟ್ರೋಪಿ 2023-24 ಕ್ರಿಕೇಟ್ ಪಂದ್ಯಾಟದಲ್ಲಿ ಆಡಲು ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ ಅವರು ಆಯ್ಕೆಗೊಂಡಿದ್ದಾರೆ. ಬೆಂಗಳೂರಿನ ಅಕ್ಷಯನಗರದಲ್ಲಿರುವ ಸೈಂಟ್ ಆನ್ಸ್ ಐಸಿಎಸ್ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ ಎಸ್ಸೆಸ್ಸೆಲ್ಸಿ ವಿದ್ಯಾಭ್ಯಾಸ ಪಡೆಯುತ್ತಿರುವ ಶ್ರೀನಿತಿಯವರು ಪುತ್ತೂರಿನ ಸಾಲ್ಮರ ಕರೆಮೂಲೆ ನಿವಾಸಿ, ಪ್ರಸ್ತುತ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮಕ್ಕಂದೂರುವಿನ ಹೆಮ್ಮೆತ್ತಾಳು ಗ್ರಾಮದವರಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಬಿ.ಜಿ. ಪ್ರಕಾಶ್ ರೈ ಹಾಗೂ ಪುತ್ತೂರು ತಾಲೂಕಿನ ನುಳಿಯಾಲು ವಿನುತಾ ಪ್ರಕಾಶ್ ರೈ ದಂಪತಿ ಪುತ್ರಿ. ಕರ್ನಾಟಕ ರಾಜ್ಯ ಕ್ರಿಕೆಟ್ ಎಸೋಸಿಯೇಶನ್ ವತಿಯಿಂದ 19 ವರ್ಷದೊಳಗಿನ ಮಹಿಳೆಯರ ರಾಜ್ಯ ಕ್ರಿಕೇಟ್ ತಂಡದ ಆಯ್ಕೆ ನಡೆದಿದ್ದು, ಬೆಂಗಳೂರಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಡಗೈ ಸ್ಪಿನ್ನರ್ ಆಗಿರುವ ಶ್ರೀನಿತಿ ಪಿ.ರೈ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಕಲಿಕೆಯಲ್ಲೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಶ್ರೀನಿತಿ ಅವರು ಕ್ರಿಕೇಟ್ ಜತೆಗೆ ಬ್ಯಾಡ್ಮಿಂಟನ್,ವಾಲಿಬಾಲ್ ಪಂದ್ಯಾಟಗಳಲ್ಲಿಯೂ…
ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಹೆಬ್ರಿ ಬಂಟರ ಸಂಘದ ಅಧ್ಯಕ್ಷ, ಯೋಗಪಟು ಸೀತಾನದಿ ವಿಠ್ಠಲ್ ಶೆಟ್ಟಿಯವರಿಗೆ ಅಮೃತ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಬ್ರಿ ತಾಲೂಕು ಕ್ರೀಡಾ ಭಾರತಿ ಗೌರವ ಅಧ್ಯಕ್ಷರಾದ ಗುರುದಾಸ್ ಶೆಣೈ, ಅಂತಾರಾಷ್ಟ್ರೀಯ ಕ್ರೀಡಾಪಟು ಉದಯಕುಮಾರ್ ಶೆಟ್ಟಿ, ಪ್ರಿನ್ಸಿಪಾಲ್ ಅಮರೇಶ್ ಶೆಟ್ಟಿ, ಆಡಳಿತಾಧಿಕಾರಿ ರಾಘವೇಂದ್ರ, ಕ್ರೀಡಾ ಭಾರತಿ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ವಿಜಯಾ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ಮುಂಡಾಳಗುತ್ತು ರಾಮಕೃಷ್ಣ ರೈಯವರ ಉತ್ತರಕ್ರಿಯೆಯು ಜು. ೧೯ ರಂದು ಪುತ್ತೂರು ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಿತು. ಈ ಸಂಧರ್ಭದಲ್ಲಿ ಶ್ರದ್ಧಾಂಜಲಿ ಸಭೆ ಜರಗಿತು. ಪುತ್ತೂರು ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಚಿಲ್ಮೆತ್ತಾರು ಜಗಜೀವನ್ದಾಸ್ ರೈ ಮತ್ತು ವಿಜಯಾ ಬ್ಯಾಂಕ್ ನಿವೃತ್ತ ಅಧಿಕಾರಿ ಅರಿಯಡ್ಕ ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆರವರುಗಳು ನುಡಿನಮನ ಸಲ್ಲಿಸಿದರು. ಮುಂಡಾಳಗುತ್ತು ರಾಮಕೃಷ್ಣ ರೈಯವರ ಪತ್ನಿ ಅರಿಯಡ್ಕ ಸುಚೇತಾ ಆರ್ ರೈ, ಮಕ್ಕಳಾದ ಪ್ರೀತಿ ಶೆಟ್ಟಿ, ಸುಪ್ರಿಯ ಶೆಟ್ಟಿ, ಅಳಿಯ ಪವನ್ ಶೆಟ್ಟಿ, ಮೊಮ್ಮಗಳು ಕಿಶಾ ಶೆಟ್ಟಿ, ಸಹೋದರಿ ಮುಂಡಾಳಗುತ್ತು ಲಕ್ಷ್ಮೀ ರಾಮಯ್ಯ ರೈ, ಸಹೋದರ ಮುಂಡಾಳಗುತ್ತು ಮನೋಹರ್ ರೈ, ಮುಂಡಾಳಗುತ್ತು ಹರಿಪ್ರಸಾದ್ ರೈ , ಅನಿತಾ ಹೇಮನಾಥ ಶೆಟ್ಟಿ, ವನಿತಾ ಸುಧಾಕರ ಶೆಟ್ಟಿ, ಸರಿತಾ ಸಂದೀಪ್ ರೈ, ಶಿಲ್ಪ ಹರಿಪ್ರಸಾದ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಭಾರತೀಯ…
ಬಹುನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಬಿಡುಗಡೆ ಜೂನ್ 23 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಯಶ್ ಶೆಟ್ಟಿ ಅವರು, “ಸರ್ಕಸ್ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಬರುತ್ತಿದ್ದೇನೆ. ತುಳು ರಂಗಭೂಮಿಯ ಹಿರಿಯ ಕಲಾವಿದರ ಜೊತೆ ನಟಿಸಿರುವುದು ತುಂಬಾ ಖುಷಿ ಕೊಟ್ಟಿದೆ. ಬಾಲ್ಯದಲ್ಲಿ ಅವರ ನಾಟಕಗಳನ್ನು ನೋಡಲು ಕಿಲೋ ಮೀಟರ್ ಗಟ್ಟಲೆ ನಡೆಯುತ್ತಿದ್ದೆ, ಇಂದು ಅವರ ಜೊತೆ ನಟಿಸಿದ್ದೇನೆ” ಎಂದರು. ಕುಸೇಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ, “ಸರ್ಕಸ್ ತುಳು ಚಿತ್ರದಲ್ಲಿ ಹಾಸ್ಯಕ್ಕೆ ಬಹಳಷ್ಟು ಪ್ರಾಧಾನ್ಯತೆಯಿದೆ. ಇದು ತುಳುನಾಡು ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಸದ್ದು ಮಾಡಲಿದೆ. ರೂಪೇಶ್ ಶೆಟ್ಟಿ ಅವರು ಈ ಚಿತ್ರದಲ್ಲಿ ಕಷ್ಟಪಟ್ಟು ದುಡಿದಿದ್ದಾರೆ. ಅವರ ಶ್ರಮ ಸಾರ್ಥಕವಾಗಲು ನೀವೆಲ್ಲರೂ ಸಿನಿಮಾ ನೋಡಬೇಕು” ಎಂದರು. ಅರವಿಂದ್ ಬೋಳಾರ್ ಮಾತಾಡುತ್ತಾ, “ಸರ್ಕಸ್ ಸಿನಿಮಾದಲ್ಲಿ ಹಾಸ್ಯದ ಜೊತೆ ಫ್ಯಾಮಿಲಿ ಕುಳಿತು ನೋಡುವಂತಹ ಚಂದದ…
ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ಬುಧವಾರ ತಡರಾತ್ರಿ 23 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿದ್ದು ಆರೆಸ್ಸೆಸ್ ತೆಕ್ಕೆಗೆ ಬಂದಿದೆ. ಬೈಂದೂರು ತಾಲೂಕಿನ ಬಿಜೂರಿನ ಗಂಟಿಹೊಳೆಯ ಗುರುರಾಜ್ ಶೆಟ್ಟಿ ಬೈಂದೂರು ಬಿಜೆಪಿಯ ಟಿಕೆಟ್ ಘೋಷಣೆಯಾಗುವ ಮೂಲಕ ಅಧಿಕೃತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ. ಕೆಳ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗುರುರಾಜ್ ಗಂಟಿಹೊಳೆ ಅರೆಸ್ಸೆಸ್ ಸ್ವಯಂ ಸೇವಕರಾಗಿದ್ದಾರೆ. ಹಲವಾರು ವರ್ಷಗಳ ಕಾಲ ತನ್ನ ಕುಟುಂಬವನ್ನೇ ತೊರೆದು ಸಂಘಕ್ಕಾಗಿ ಸೇವೆ ಸಲ್ಲಿಸಿದ ಅವರು ಸುಳ್ಯ, ಪುತ್ತೂರು ಭಾಗಗಳಲ್ಲಿ ಪ್ರಚಾರಕರಾಗಿದ್ದವರು. ಪ್ರಸ್ತುತ ಶಿಕ್ಷಣ ಸಂಸ್ಥೆಯೊಂದರ ವಿಶ್ವಾಸ್ಥರಾಗಿರುವ ಗುರುರಾಜ್ ಸಾಲ ಮಾಡಿ ಹಲವಾರು ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಿದ್ದಾರೆ.
ದೇಹವೆಂದರೆ ಮೂಳೆ ಮಾಂಸಗಳ ತುಡಿಕೆ, ಮನಸ್ಸಲ್ಲಿ ಆಸೆ ತುಂಬಿದ ಕಣಜ, ಮೋಹದಿಂದ ದುಃಖವು ಸಹಜ, ನಶ್ವರ ಕಾಯ ನಂಬದಿರಯ್ಯ, ತ್ಯಾಗದಿ ಪಡೆವ ಸುಖ ಶಾಶ್ವತ. ಅನ್ಯರಿಗೆ ಅಹಿತವಾಗದಂತೆ ನಮ್ಮ ಆಸೆಗಳನ್ನು ಪೂರೈಸಿಕೊಂಡರೆ ಅದು ಸಂಸ್ಕಾರ, ತಮ್ಮ ಹಿತವನ್ನು ಸಾಧಿಸುತ್ತಾ ಅನ್ಯರ ಹಿತವನ್ನೂ ಸಾಧಿಸುತ್ತಾ ಬಯಸಿ ಸಾಧಿಸಿದರೆ ಅದು ಸಾಧನೆ, ತಮ್ಮ ಹಿತವನ್ನು ಬದಿಗೊತ್ತಿ ಪರರ ಹಿತವನ್ನೂ ಸಾಧಿಸುವುದು ತ್ಯಾಗ. ಈ ವಾಣಿ ಉದ್ಗರಿಸಲೋಸುಗ. ಏಕೆಂದರೆ ಕುಡುಂಬೂರು ಎಂದಾಗ ನಮ್ಮೆಲ್ಲರ ಜ್ಞಾನಕ್ಕೆ ನಿಲುಕುವಂತ ತ್ಯಾಗದ ಅಮರ ಚೇತನ ಕೀರ್ತಿಶೇಷ ಪಂಜ ನಲ್ಯಗುತ್ತು ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟರು. ತುಳುನಾಡಿನ ಕೃಷಿ ಕ್ಷೇತ್ರಗಳಲ್ಲೊಂದು ಹೆಸರುವಾಸಿಯಾದ ಹಚ್ಚಹಸುರಿನ ಪ್ರದೇಶ ಕುಡುಂಬೂರು. 1960 -70ರ ದಶಕದಲ್ಲಿ ಈ ಕುಡುಂಬೂರು ಪ್ರದೇಶವು ಕರ್ನಾಟಕ ಸರ್ಕಾರದ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿ ಕೈಗಾರಿಕೆಯ ಉದ್ದೇಶದಿಂದ ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟು ಪ್ರದೇಶದ ಜನರಿಗೆ ಪರಿಹಾರ ಬಿಡುಗಡೆಗೊಂಡು ಕೃಷ್ಣಾಪುರ ಕಾಟಿಪಳ್ಳ ಪ್ರದೇಶದಲ್ಲಿ ಪುನರ್ವಸತಿಗೆ ಜಾಗ ಮಂಜೂರಾದರೂ ನಂತರದ ದಿನಗಳಲ್ಲಿ ಸುಮಾರು ಇಪ್ಪತ್ತು ವರುಷಗಳ…