Author: admin
ನವೆಂಬರ್ 24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ನೀಡಿದರು. ನಿಯೋಗದಲ್ಲಿ ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ್ ರೈ ದರ್ಬೆ, ಅಜಿತ್ ಹೆಗ್ಡೆ, ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.
ಶುದ್ಧ ಭಾರತೀಯ ಸಾಂಪ್ರದಾಯಿಕ ಉಡುಗೆ ಧೋತಿ ಎಂದರೆ ಹಳೆಯ ಕಾಲದ ಧಿರಿಸು ಎಂದು ಮೂಗು ಮುರಿಯುತ್ತಿರುವ ಕಾಲ ಬದಲಾಗಿದೆ. ಇತ್ತೀಚೆಗಂತು ಧೋತಿ ಪ್ಯಾಶನ್ ಲೋಕದಲ್ಲಿ ಮಿಂಚುತ್ತಿದ್ದು ಸಂಪ್ರದಾಯ ಬದ್ಧ ಉಡುಗೆಯಾದರೂ ಮಾಡರ್ನ್ ಲುಕ್ ಪಡೆದುಕೊಂಡಿದೆ. ಧೋತಿ ಸಂಪ್ರದಾಯದ ಚೌಕಟ್ಟಿನೊಳಗೆ ನಲಿಯುತ್ತಿರುವ ಕಾಲದಲ್ಲೇ ಪ್ಯಾಶನ್ ಜಗತ್ತಿಗೂ ಲಗ್ಗೆ ಇಟ್ಟಿದ್ದು ವಿಶೇಷ. ಚಿಣ್ಣರಿಂದ ವೃದ್ದರವರೆಗೂ ಎಲ್ಲರೂ ಇಷ್ಟ ಪಡುವ ಧೋತಿ ಆಧುನಿಕತೆಯ ಅಟ್ಟಹಾಸದಲ್ಲಿ ನಲುಗಿ ಹೋಗದೆ ದಿನೆ ದಿನೆ ಹೆಚ್ಚು ಮಾನ್ಯತೆ ಪಡೆಯುತ್ತಿರುವುದು ಆಶ್ಚರ್ಯವಾದರೂ ವಾಸ್ತವ. ಪ್ಯಾಶನ ಪ್ರಿಯರ ಅಭಿರುಚಿಗೆ ಒಪ್ಪುವಂತಹ ಡಿಸೈನ್ ಬಟ್ಟೆಗಳು ಯಶಸ್ಸು ಪಡೆಯುತ್ತಿದ್ದರೂ ಈ ಎಲ್ಲವುದರ ನಡುವೆಯು ಸರಳತೆ, ಸ್ವಚ್ಛತೆ, ಶಿಸ್ತು, ನಮ್ಮ ಸಂಸ್ಕೃತಿ ಹಾಗೂ ಸ್ವಾಭಿಮಾನದ ಪ್ರತೀಕವಾಗಿ ಗರಿಗೆದರಿ ಆದಿಯಿಂದಲೂ ತನ್ನ ಸ್ಥಾನ ಉಳಿಸಿಕೊಂಡ ಧೋತಿ ಅಪಾರ ಬೇಡಿಕೆ ಗಿಟ್ಟಿಸಿಕೊಂಡಿದೆ. ಈಗಂತೂ ಪ್ಯಾಶನ್ ಲೋಕದಲ್ಲಿ ದಿನಕ್ಕೊಂದು ಹೊಸ ಟ್ರೆಂಡ್ ಹರಿದಾಡಿದರೂ ಧೋತಿ ಬಗ್ಗೆ ಜನರಿಗೆ ಹೊಸ ಆಕರ್ಷಣೆ ಹಾಗೂ ಆಸಕ್ತಿ ಮೂಡಿರುವುದು ಈ ಉದ್ಯಮದ ಪ್ರಗತಿಯ ಗುಟ್ಟು. …
ಹಿರಿಯಡ್ಕ ಬಂಟರ ಸಂಘ(ರಿ.) ಹಿರಿಯಡ್ಕ ಇದರ ವಾರ್ಷಿಕ ಸಮ್ಮಿಲನ ಸಮಾರಂಭವು ಹಿರಿಯಡ್ಕದಲ್ಲಿ ನಿತೀಶ್ ಕುಮಾರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮುಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೀಮಣಿ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಮಾಜಿ ಅಧ್ಯಕ್ಷರೂ ನಿವೃತ್ತ ಮುಖ್ಯೋಪಧ್ಯಾಯರೂ ಆಗಿರುವ ಕುದಿ ವಸಂತ ಶೆಟ್ಟಿ ಉದ್ಘಾಟಕರ ವ್ಯಕ್ತಿ ಪರಿಚಯ ಮಾಡಿದರು. ಕಾರ್ಯಕ್ರಮದಲ್ಲಿ ಹಿರಿಯಡ್ಕದಲ್ಲಿ ಸಾರ್ಥಕ 45 ವರ್ಷಗಳ ವೈದ್ಯಕೀಯ ಸೇವೆ ಸಲ್ಲಿಸಿರುವ ದೇವದಾಸ್ ಕಾಮತ್ ಸುಧಾ ದೇವದಾಸ್ ಕಾಮತ್, ಹಾಗೂ ಉದಯೋನ್ಮಖ ಲೇಖಕಿ ನೀತಾ ರಾಜೇಶ್ ಶೆಟ್ಟಿ, ಕ್ರೀಡಾ ಸಾಧಕಿ ಸ್ವಸ್ತಿ ಶೆಟ್ಟಿಯವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು ಮತ್ತು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಗೌರವಿಸಲಾಯಿತು. ಪ್ರಾಸ್ತಾವಿಕವಾಗಿ ಸಂಘದ ಪ್ರಥಮ ಅಧ್ಯಕ್ಷರಾದ ವಿಶ್ವನಾಥ ರೈ ಮಾತನಾಡಿದರು, ಸಂಘದ ಉಪಾಧ್ಯಕ್ಷರಾದ ರವೀಂದ್ರನಾಥ್ ಶೆಟ್ಟಿ ಸ್ವಾಗತಿಸಿದರು. ಸಂಜನಾ ರೈ ಹಾಗೂ ಸುರೇಶ್ ಶೆಟ್ಟಿ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಂದ್ಯಾ ಶೆಟ್ಟಿ ವಂದಿಸಿದರು. ನೀತಾ ರಾಜೇಶ್ ಶೆಟ್ಟಿ…
ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಾಲಯದ ಹೊಸ ಆಡಳಿತ ಮಂಡಳಿ ಏಪ್ರಿಲ್ 2 ರಂದು ಮಲಬಾರ್ ದೇವಸ್ವಂ ಬೋರ್ಡಿನ ಅಧಿಕಾರಿ ರಘು ಹಾಗೂ ಊರ ಹತ್ತು ಸಮಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಮತ್ತು ಕಾನೂನು ಬದ್ಧವಾಗಿ ನೂತನ ಸಮಿತಿ ಅಧಿಕಾರ ವಹಿಸಿಕೊಂಡಿತು. ಮುಂದಿನ ಮೊಕ್ತೇಸರರಾಗಿ ಉದ್ಯಮಿ, ಸಮಾಜಸೇವಕ ತಾರಾನಾಥ ರೈ ಪಡ್ಡoಬೈಲು ಗುತ್ತು, ಟ್ರಸ್ಟಿಗಳಾಗಿ ರಘುರಾಮ ರೈ ಕಟ್ಟತ್ತಾಡೆ, ಸುಧಾಕರ ಕಲ್ಲಗದ್ದೆ, ಚನಿಯಪ್ಪ ಪರಗುಡ್ಡೆ, ರಿತೇಶ್ ಕಿರಣ್ ಕಾಟುಕುಕ್ಕೆ ಆಯ್ಕೆಯಾದರು.
ಬ್ಯಾಂಕಿಂಗ್ ಉದ್ಯಮದ ಉಗಮ ಸ್ಥಾನ, ತೊಟ್ಟಿಲು, ತವರೂರು ಎಂದೇ ಖ್ಯಾತಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾಂಕಿಂಗ್ ದಿಗ್ಗಜರುಗಳಲ್ಲಿ ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಅವಿಸ್ಮರಣೀಯ. ಒಬ್ಬ ವ್ಯಕ್ತಿ ಸಮಾಜಕ್ಕೆ ಸಲ್ಲಿಸಿದ ಮಹತ್ವದ ಸೇವೆಯನ್ನು ಮುಂದಿನ ಜನಾಂಗ ನೆನಪಿನಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿಯೂ ಇದೊಂದು ಪ್ರಬುದ್ಧ ಸಿದ್ಧಾಂತವೆಂದರೂ ತಪ್ಪಾಗಲಾರದು. ಅವರ ಜನ್ಮ ದಿನ ಇರುವುದು ಏಪ್ರಿಲ್ ತಿಂಗಳಲ್ಲಿ. (ಎಪ್ರಿಲ್ 30) ಅವರನ್ನು ಸ್ಮರಿಸುವುದು ನಿಜಕ್ಕೂ ಔಚಿತ್ಯಪೂರ್ಣ. 1962 ರಿಂದ 1979ರವರೆಗೆ ವಿಜಯ ಬ್ಯಾಂಕ್‌ನ ಅಧ್ಯಕ್ಷರಾಗಿ ಅನೇಕ ಸಾಧನೆಗಳನ್ನು ಮಾಡಿ ಬ್ಯಾಂಕ್‌ಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮಹಾನ್ ಚೇತನ. ಇಂದು ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ದೊಂದಿಗೆ ವಿಲೀನವಾದರೂ ಸುಂದರಾಮ ಶೆಟ್ಟಿ ಹೆಸರು ಬ್ಯಾಂಕ್‌ನೊಂದಿಗೆ ಅಚ್ಚಳಿಯದೇ ಉಳಿದಿದೆ. ರಾಜಮರ್ಜಿಯ ಸಮೃದ್ಧ ಮನೆತನದಲ್ಲಿ ಹುಟ್ಟಿದರೂ ಕೆಳವರ್ಗದ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಹೃದಯ ಸುಂದರರಾಮ ಶೆಟ್ಟಿ ಅವರಿಗಿತ್ತು. ಅವರಿಗೆ ಬ್ಯಾಂಕ್‌ನ ಲಾಭವನ್ನು ಹೆಚ್ಚಿಸುವುದೊಂದೇ ಉದ್ಯಮದ ಉದ್ದೇಶವಾಗಿರಲಿಲ್ಲ. ಉದ್ಯಮವು ಸಮಾಜದ ಅನೇಕರಿಗೆ ಉದ್ಯೋಗಾವಕಾಶಗಳನ್ನು ನೀಡುವುದರೊಂದಿಗೆ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದಾನಿಗಳಾದ ಬೆಂಗಳೂರಿನ ಉದ್ಯಮಿ ಸುನಿಲ್ ಆರ್. ಶೆಟ್ಟಿ ಅವರಿಂದ ಕೊಡಮಾಡಿದ ನೂತನ ಬ್ರಹ್ಮರಥದ ಪುರಪ್ರವೇಶ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಫೆ. 15 ಹಾಗೂ 16 ರಂದು ನಡೆಯಲಿದೆ. ಫೆ.15 ರಂದು ಕುಂಭಾಶಿ. ಕೋಟೇಶ್ವರ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು ವಂಡ್ಸೆ, ಚಿತ್ತೂರು, ಈಡೂರು, ಜಡ್ಕಲ್ ಹಾಲ್ಕಲ್ ಮಾರ್ಗವಾಗಿ ಪುರಮೆರವಣಿಗೆಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ರಥ ಸಾಗುವ ಮಾರ್ಗದಲ್ಲಿ ಅಲ್ಲಿನ ಮುಖ್ಯ ದೇಗುಲಗಳ ವತಿಯಿಂದ ನೂತನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪುಣೆ ತುಳು ಕನ್ನಡಿಗರ ಆಶೋತ್ತರದಂತೆ ನೂತನ ಸಂಸ್ಥೆಯೊಂದರ ಉದಯವಾಗಿದ್ದು ನೂತನ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿ ತುಳು ಕನ್ನಡಿಗರ ಕಣ್ಮಣಿ, ಪುಣೆ ತುಳು ಕೂಟದ ಮಾಜಿ ಅಧ್ಯಕ್ಷ, ಸಮಾಜಸೇವಕ, ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಮಿಯ್ಯಾರ್ ರಾಜ್ ಕುಮಾರ್ ಎಂ ಶೆಟ್ಟಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾದರು. ನಗರದ ವಾರ್ಜೆಯಲ್ಲಿರುವ ಹೋಟೆಲ್ ಕನಿಷ್ಕಾ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಈ ಆಯ್ಕೆಯನ್ನು ನಡೆಸಲಾಯಿತು. ಮಿಯ್ಯಾರ್ ರಾಜ್ ಕುಮಾರ್ ಎಂ ಶೆಟ್ಟಿ ಪುಣೆಯಲ್ಲಿ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡ ಮೇರು ವ್ಯಕ್ತಿತ್ವದ ವ್ಯಕ್ತಿ. ಪುಣೆಯಲ್ಲಿ ಉದ್ಯಮ ರಂಗದಲ್ಲಿ ಯಶಸ್ಸನ್ನು ಸಾಧಿಸಿದ ರಾಜ್ ಕುಮಾರ್ ಎಂ ಶೆಟ್ಟಿಯವರು 2010 ರಿಂದ 2014 ರ ವರೆಗೆ ಪುಣೆ ತುಳುಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪುಣೆ ತುಳುಕೂಟದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಮಹಾನ್ ಸಾಧಕನೆಂದರೆ ತಪ್ಪಾಗಲಾರದು. ಯಾಕೆಂದರೆ ತುಳುನಾಡ ಭಾಷೆ, ಸಂಸ್ಕೃತಿಯ ಆರಾಧಕರಾಗಿದ್ದ ರಾಜ್ ಕುಮಾರ್ ಶೆಟ್ಟಿಯವರು ಪುಣೆ ತುಳುಕೂಟದ ಚುಕ್ಕಾಣಿಯನ್ನು ವಹಿಸಿಕೊಂಡು ಪುಣೆಯಲ್ಲಿರುವ ತುಳುನಾಡ ಬಾಂಧವರೆಲ್ಲರನ್ನು ಜಾತಿ ಮತ…
ಶ್ರೀ ಅಯ್ಯಪ್ಪಸ್ವಾಮಿ ಯಕ್ಷಗಾನ ಮಂಡಳಿಯ 7 ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮನೋರಂಜನೆಯಂಗವಾಗಿ “ಸುಧನ್ವಾರ್ಜುನ “ಯಕ್ಷಗಾನ ಪ್ರದರ್ಶನವು ಫೆ.12 ರಂದು ರವಿವಾರ ಸಂಜೆ ಗಂಟೆ 3 ರಿಂದ ಪುಣೆ ಕನ್ನಡ ಸಂಘದ ಕನ್ನಡ ಮಾಧ್ಯಮ ಹೈಸ್ಕೂಲ್ ನ ದಿ . ಗುಂಡೂರಾಜ್ ಎಂ ಶೆಟ್ಟಿ ಸಭಾಗೃಹದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪುಣೆ ಕನ್ನಡ ಸಂಘದ ಅಧ್ಯಕ್ಷರಾದ ಕುಶಲ್ ಹೆಗ್ಡೆ, ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸುಭಾಷ್ ಶೆಟ್ಟಿ, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕಡ್ತಲ, ಬಂಟ್ಸ್ ಅಸೋಸಿಯೇಷನ್ ಪುಣೆ ಮಾಜಿ ಅಧ್ಯಕ್ಷರಾದ ಕಟ್ಟಿಂಗೇರಿಮನೆ ಸುಭಾಶ್ಚಂದ್ರ ಹೆಗ್ಡೆ, ತುಳುಕೂಟದ ಗೌರವಾಧ್ಯಕ್ಷರಾದ ತಾರಾನಾಥ ಕೆ ರೈ ಮೇಗಿನಗುತ್ತು, ಶ್ರೀ ಗುರುದೇವಾ ಸೇವಾ ಬಳಗದ…
ಜಗತ್ತಿನಲ್ಲೇ ಪಶ್ಚಿಮ ಘಟ್ಟಗಳೆಂದರೆ ಅದು ಜೀವವೈವಿಧ್ಯದ ಆಗರ. ಇಲ್ಲಿರುವ ಜೀವಸಂಕುಲಗಳ ವೈವಿಧ್ಯತೆ ಪ್ರಪಂಚದ ಬೇರೆಲ್ಲೂ ಕಂಡುಬರುವುದಿಲ್ಲ. ಅದೇ ರೀತಿ ಇಲ್ಲಿನ ಸಸ್ಯ ಸಂಕುಲಗಳ ವೈವಿಧ್ಯತೆ ಕೂಡ. ಪಶ್ಚಿಮಘಟ್ಟಗಳ ದಟ್ಟವಾದ ಶೋಲಾ ಅರಣ್ಯಗಳ ಮಧ್ಯೆ ಮಧ್ಯೆ ಕಂಡುಬರುವ Montane grassland ಅನ್ನುವ ವಿಶಿಷ್ಟ ಬಗೆಯ ಹುಲ್ಲುಗಾವಲುಗಳ ಈ ವ್ಯವಸ್ಥೆ ತುಂಬಾ ಅಪರೂಪದ ಭೂಲಕ್ಷಣವಾಗಿದೆ. ದಟ್ಟಾರಣ್ಯದ ಮಧ್ಯೆ ಅಲ್ಲಲ್ಲಿ ಹುಲ್ಲುಗಾವಲುಗಳು ಕಂಡುಬರುವುದರಿಂದ ಇದನ್ನು ಭೂ ವಿಜ್ಞಾನಿಗಳು ಶೋಲಾ ಮೊಸಾಯಿಕ್ ಅಂತ ಕರೆಯುತ್ತಾರೆ. ಬಹುಶಃ ನಮ್ಮ ಕೊಯ್ಲದ ಸುಮಾರು ಏಳುನೂರು ಎಕರೆಯಷ್ಟು ವಿಶಾಲವಾದ ಈ ಹುಲ್ಲುಗಾವಲು ಕೂಡ ಪಶ್ಚಿಮ ಘಟ್ಟದ ಈ ಶೋಲಾ ಮೊಸಾಯಿಕ್ ನ ಭಾಗವೇ. ಕೊಯ್ಲದ ಈ ಹುಲ್ಲುಗಾವಲೀಗ ನಾಗರಿಕ ಸಮಾಜದ ಮಧ್ಯೆಯೇ ಇರುವುದರಿಂದ ಮತ್ತು ಸರ್ವಋತು ರಸ್ತೆಗಳು, ವಿದ್ಯುಚ್ಛಕ್ತಿ ಇತ್ಯಾದಿ ಎಲ್ಲಾ ಆಧುನಿಕ ಸೌಲಭ್ಯಗಳೂ ಇರುವ ಸ್ಥಳವಾದುದರಿಂದ ಅಧ್ಯಯನ ಕೇಂದ್ರ ಸ್ಥಾಪನೆಗೆ ಅತ್ಯಂತ ಸೂಕ್ತವಾದ ಜಾಗವಾಗಿದೆ. ಇಲ್ಲಿ ಈಗ ಪಶುವೈದ್ಯಕೀಯ ಕಾಲೇಜು ಹೇಗೂ ಸ್ಥಾಪನೆಯಾಗಿರುವುದರಿಂದ ಇದನ್ನೊಂದು ಉನ್ನತ ಅಧ್ಯಯನ ಕೇಂದ್ರವನ್ನಾಗಿ, ತೋಟಗಾರಿಕಾ,…
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-2025 ರ ಸಾಲಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಅಜಿತ್ ಕುಮಾರ್ ರೈ ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಭಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸವೋತೊಮುಖ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಮಾಲಾಡಿ ಅಜಿತ್ ಕುಮಾರ್ ರೈ ನುಡಿದರು. ಮುಖ್ಯ ಚುನಾವಣಾಧಿಕಾರಿ ವಕೀಲರಾದ ಬಿ ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲರಾದ ಬಿಪಿನ್ ರೈ, ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಚೇಳಾರ್ ಗುತ್ತು ಉಪಸ್ಥಿತರಿದ್ದರು