Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ ಪುನರಾಯ್ಕೆಗೊಂಡರು. ಸಂಚಾಲಕರಾಗಿ ವಿನಯ ಆಚಾರ್ಯ ಹೊಸಬೆಟ್ಟು ಉಪಾಧ್ಯಕ್ಷರಾಗಿ ಎಮ್ ಜಿ ರಾಮಚಂದ್ರ ರಾವ್, ಲೀಲಾಧರ ಶೆಟ್ಟಿ ಕಟ್ಲ, ರವಿ ಶೆಟ್ಟಿ, ಪಿ. ಕೃಷ್ಣಮೂರ್ತಿ ಸುರತ್ಕಲ್, ನಾರಾಯಣ ಶೆಟ್ಟಿ ಕಟ್ಲ, ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಜೊತೆ ಕಾರ್ಯದರ್ಶಿಗಳಾಗಿ ಗುಣಶೇಖರ್ ಶೆಟ್ಟಿ, ಜಯ ದೇವಾಡಿಗ, ಸುಧಾಕರ ಶೆಟ್ಟಿ ಕಟ್ಲ, ಸತೀಶ್ ಶೆಟ್ಟಿ ಬಾಳಿಕೆ, ಅನಂತ್ ರಾಜ್ ಶೆಟ್ಟಿಗಾರ್, ಮಹಾಬಲ ಭಂಡಾರಿ, ರಾಮಚಂದ್ರ ಕುಳಾಯಿ, ಪ್ರದೀಪ್ ಶೆಟ್ಟಿ ಬಾಳಿಕೆ, ಅಶ್ವಿತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ನಾಗರಾಜ್ ಕಡಂಬೋಡಿ, ಪುಷ್ಪರಾಜ್ ಶೆಟ್ಟಿ…
ಎರಡು ವರ್ಷಗಳಿಗೊಮ್ಮೆ ಪಡುಬಿದ್ರಿಯ ಬ್ರಹ್ಮಸ್ಥಾನದಲ್ಲಿ ನಡೆಯುವಂತಹ ಢಕ್ಕೆಬಲಿ ಎಂಬ ಸೇವೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಏಳು ಉತ್ಸವಗಳಲ್ಲಿ ಒಂದು. ಏಕೆಂದರೆ ಇಲ್ಲಿ ಯಾವುದೇ ವಿಕೃತಿಗಳಿಲ್ಲದ ಸೊಬಗಿನ ಪ್ರಕೃತಿ ಇದೆ. ಸಂಜೆಯಾಗುತ್ತಿದ್ದಂತೆ ಅಲಂಕಾರ ಪ್ರಾರಂಭವಾಗುತ್ತದೆ. ನಡು ಇರುಳಲ್ಲಿ ನಿಸರ್ಗ ಪೂರ್ಣ ಸೊಬಗಿನಿಂದ ವಿಜೃಂಭಿಸುತ್ತದೆ. ಆಗ ಕಟ್ಟುಕಟ್ಟಳೆಗಳು ನೆರವೇರುತ್ತದೆ. ಬೆಳಗಾಗುತ್ತಿದ್ದಂತೆ ಆರಾಧನೆ ಮುಗಿಯುತ್ತದೆ. ಪ್ರಕೃತಿ ಮತ್ತೆ ಅಲಂಕರಣಗಳನ್ನು ಕಳಚಿಕೊಂಡು ನೈಜ ಸ್ಥಿತಿಗೆ ಬರುತ್ತದೆ. ಇಂತಹ ರೂಪಾoತರವು ಆರಾಧನಾ ಪರ್ವದಲ್ಲಿ ಮಾತ್ರ ಕಾಣಬಹುದಾದ ಇಲ್ಲಿಯ ವೈಶಿಷ್ಟ. ಇದೇ ಬರುವ ಫೆಬ್ರವರಿ 11 ರಂದು ಶನಿವಾರ ಪಡುಬಿದ್ರಿ ಶ್ರೀ ಖಡ್ಗೆಶ್ವರಿ ಬ್ರಹ್ಮಸ್ಥಾನದಲ್ಲಿ ಶ್ರೀಮತಿ ಮತ್ತು ಶ್ರೀ ಉಮೇಶ್ ಶೆಟ್ಟಿ ಪೇಟೆಮನೆ ಹಾಗೂ ಕುಟುಂಬಸ್ಥರಿಂದ ಢಕ್ಕೆಬಲಿ ಸೇವೆಯು ಶ್ರೀ ಸನ್ನಿಧಿಯ ಪ್ರೇರಣೆಯಂತೆ ಜರುಗಲಿದೆ. ಅದೇ ದಿನ ಮದ್ಯಾಹ್ನ ಗಂಟೆ 12.30 ರಿಂದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕೂಡ ನಡೆಯಲಿದೆ. ಬಳಿಕ ಗಂಟೆ 4 ಕ್ಕೆ ದೇವಸ್ಥಾನದಿಂದ ಫಲಪುಷ್ಪ ತಾಂಬೂಲ…
ಚಿತ್ರ, ವರದಿ : ಕಿರಣ್ ಬಿ ರೈ ಕರ್ನೂರು ಪುಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಇವರ ಪರಿಕಲ್ಪನೆಯೊಂದಿಗೆ ಕರ್ನಾಟಕದ ೬೭ ನೇ ರಾಜ್ಯೋತ್ಸವವನ್ನು ಒಂದು ವಿಶೇಷ ರೀತಿಯಲ್ಲಿ ಆಚರಿಸಿ ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ನಮ್ಮ ಭಾಷಾ ಅಸ್ಮಿತತೆಯೊಂದಿಗೆ ಒಗ್ಗೂಡಿಸುವ ಉದ್ದೇಶ ಹೊಂದಿದ ಕೋಟಿ ಕಂಠ ಗಾಯನ ಎನ್ನುವುದು ಒಂದು ಅರ್ಥಪೂರ್ಣವಾದ ಕಾರ್ಯಕ್ರಮವಾಗಿದ್ದು ನಾವು ಪುಣೆಯಲ್ಲಿರುವ ಕನ್ನಡಿಗರೆಲ್ಲ ಸೇರಿಕೊಂಡು ಈ ಸಂಭ್ರಮದಲ್ಲಿ ಭಾಗಿಗಳಾಗುತ್ತಿರುವುದು ನಮಗೆಲ್ಲ ಹೆಮ್ಮೆಯ ಕ್ಷಣಗಳಾಗಿವೆ . ಇದೊಂದು ಸತ್ಚಿಂತನೆಯ ಕಾರ್ಯಕ್ರಮವಾಗಿದ್ದು ನಾವು ಮಹಾರಾಷ್ಟ್ರದ ಮಣ್ಣಿನಲ್ಲಿದ್ದರೂ ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯೊಂದಿಗೆ ಬೆರೆತುಕೊಂಡು ನಮ್ಮ ನಾಡಿನ ಭಾಷೆ ಹಾಗೂ ಸಂಸ್ಕೃತಿಯನ್ನೂ ಪೋಷಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ . ಇಂತಹ ಕಾರ್ಯಕ್ರಮ ನಮ್ಮ ರಾಜ್ಯೋತ್ಸವದ ಮೆರಗನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ನುಡಿದರು . ಅವರು ಕರ್ನಾಟಕ…
ನಿವೃತ್ತ ಶಿಕ್ಷಕಿ ಪುಷ್ಪಲತಾ ಬಾಲಕೃಷ್ಣ ಶೆಟ್ಟಿ ಅವರಿಗೆ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸುರತ್ಕಲ್ ವಲಯ ಸಂಘಟನೆಯ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಪುಷ್ಪಲತಾ ಶೆಟ್ಟಿ ಅವರು ಮಹಿಳಾ ವೇದಿಕೆಯ ಮಾಜೀ ಕಾರ್ಯದರ್ಶಿಯಾಗಿ ದುಡಿದಿದ್ದರು. ಮಹಿಳಾ ವೇದಿಕೆ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಮಹಿಳಾ ವೇದಿಕೆಯನ್ನು ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇವರ ಹಿರಿತನ ಮತ್ತು ಮಹಿಳಾ ವೇದಿಕೆಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಅವರನ್ನು ಮಹಿಳಾ ವೇದಿಕೆಯಿಂದ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಪುಷ್ಪಲತಾ ಶೆಟ್ಟಿ ಅವರು ಮಾತನಾಡಿ ಮಹಿಳಾ ವೇದಿಕೆ ಇಂದು ಸಂಘಟನಾತ್ಮಕವಾಗಿ ಬೆಳೆದಿದೆ. ಮಹಿಳೆಯರ ಒಗ್ಗಟ್ಟು ಇದೇ ರೀತಿ ಮುಂದುವರಿಯಲಿ. ಸಂಘದ ಬೆಳವಣಿಗೆಗೆ ಮಹಿಳಾ ವೇದಿಕೆ ಸಹಕಾರಿಯಾಗಿ ಕೆಲಸ ಮಾಡಲಿ ಎಂದರು. ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ ಸಂಘ ಮತ್ತು ಸಂಘಟನೆ ವಿಚಾರದಲ್ಲಿ ಕಾರ್ಯಾಗಾರ ನಡೆಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ವೇದಿಕೆಯ ಉಪಾಧ್ಯಕ್ಷೆ…
ಮೆಲೋಡಿ ಹಾಡುಗಳು ಎಂದಿಗೂ ಜನರ ಜೀವನದ ಅವಿಭಾಜ್ಯ ಅಂಗವಾಗಿರುತ್ತವೆ. ಎಲ್ಲಾ ಕಾಲದಲ್ಲೂ ಎಲ್ಲರನ್ನೂ ಆಕರ್ಷಿಸುವ ಹಲವಾರು ಮೆಲೋಡಿ ಹಾಡುಗಳ ಗುಂಪಿಗೆ “ರವಿಕೆ ಪ್ರಸಂಗ” ಚಿತ್ರದ “ಮನಸಲಿ ಜೋರು ಕಲರವ” ಎಂಬ ಅದ್ಭುತವಾದ ಮೆಲೋಡಿ ಹಾಡನ್ನು ನೂರಾರು ಎವರ್ ಗ್ರೀನ್ ಸೂಪರ್ ಹಿಟ್ ಮೆಲೋಡಿ ಹಾಡುಗಳನ್ನು ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಈ ವರ್ಷದ ಅತ್ಯುತ್ತಮ ಮೆಲೋಡಿ ಹಾಡುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಎಲ್ಲಾ ಅಂಶಗಳನ್ನು ಹೊಂದಿರುವ ಈ ಹಾಡಿಗೆ ಕಿರಣ್ ಕಾವೇರಪ್ಪ ಅವರ ಅದ್ಭುತ ಸಾಹಿತ್ಯ, ಮಾನಸ ಹೊಳ್ಳ ಅವರು ಮಧುರವಾದ ಧ್ವನಿ ಹಾಗೂ ವಿನಯ್ ಶರ್ಮಾ ಅವರ ಇಂಪಾದ ಸಂಗೀತ ಇದೆ. ಸಂತೋಷ್ ಕೊಡಂಕೇರಿ ಅವರ ಚಿತ್ರಕಥೆ ನಿರ್ದೇಶನದಲ್ಲಿ, ಪಾವನ ಸಂತೋಷ್ ಅವರ ಕಥೆ ಸಂಭಾಷಣೆ ಇರುವ “ರವಿಕೆ ಪ್ರಸಂಗ” ಚಿತ್ರವನ್ನು “ದೃಷ್ಟಿ ಮಿಡಿಯಾ & ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿಲಾಗಿದೆ. ಚಿತ್ರದ ಎಲ್ಲಾ ಕೆಲಸಗಳು ಮುಕ್ತಾಯವಾಗಿದ್ದು ಬಿಡುಗಡೆಯ ಹೊಸ್ತಿಲಲ್ಲಿ ಜನರನ್ನು ರಂಜಿಸಲಿದೆ.
ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ವಿಶ್ವ ಬಂಟ ಸಮ್ಮೇಳನದ ಸಮಾರೋಪ ಸಮಾರಂಭ ಅಮ್ಮಣ್ಣಿ ರಾಮಣ್ಣ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ರವಿವಾರ ಸಂಜೆ ನೆರವೇರಿತು. ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನಾನು ಬಹಳ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಆಡು ಮುಟ್ಟದ ಸೊಪ್ಪಿಲ್ಲ, ಬಂಟರು ಮುಟ್ಟದ ಕ್ಷೇತ್ರವೇ ಇಲ್ಲ. ಕೈಗಾರಿಕೋದ್ಯಮ, ಬ್ಯಾಂಕಿಂಗ್ ಕ್ಷೇತ್ರ, ಸಿನಿಮಾ, ಕಲೆ, ಕೃಷಿ, ಹೋಟೆಲ್ ಹೀಗೆ ಎಲ್ಲದರಲ್ಲೂ ಬಂಟರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ನಮ್ಮ ದೇಶಕ್ಕೆ ಕೀರ್ತಿಯನ್ನು ತಂದವರು ಬಂಟರು. ಅವರನ್ನು ಎಷ್ಟು ಹೊಗಳಿದರೂ ಅತಿಶಯವಾಗಲಾರದು. ಎಲ್ಲರನ್ನು ಪ್ರೀತಿಸಿ ಗೌರವಿಸುವ ಬಂಟರ ಸಮ್ಮೇಳನ ಯಶಸ್ವಿಯಾಗಲಿ” ಎಂದರು. “ಮಂಗಳೂರು ಬೆಂಗಳೂರು ಕಾರಿಡಾರ್ ಆದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ವೇಗವಾಗಿ ಅಭಿವೃದ್ಧಿಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಟ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ನಾವು ಕೊಟ್ಟ ಮಾತಿನಂತೆ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆಪ್ಟೆಂಬರ್ 10 ಬೆಳಿಗ್ಗೆ ಗಂಟೆ 10.00ಕ್ಕೆ ಮೂಡಬಿದಿರೆಯ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ನೂತನ ಕಂಬಳ ಜಿಲ್ಲಾ ಸಮಿತಿ ರಚನೆ ಹಾಗೂ 2023-24 ನೇ ಋತುವಿನ ವಿವಿಧ ಕಂಬಳದ ದಿನಾಂಕಗಳನ್ನು ಅದೇ ದಿನ ನಿರ್ಧರಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.೧೩ ರಂದು ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆಟಿದ ಕೂಟ ಹಾಗೂ ಚಿನ್ನದ ಪದಕ ನೀಡಿ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಜು. ೧೮ ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿದ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಶಾಸಕ ಆಶೋಕ್ ರೈ ಅವರ ಅಭಿನಂದನಾ ಸಮಾರಂಭವು ಅಭೂತ ಪೂರ್ವ ಯಶಸ್ಸು ಕಂಡಿದ್ದು, ಇದೇ ರೀತಿಯಲ್ಲಿ ಮಂದೆಯೂ ಬಂಟ ಸಮಾಜ ಬಾಂಧವರು ಹೆಚ್ಚಿನ ಪ್ರೋತ್ಸಾಹವನ್ನು ನೀಡುವಂತೆ ವಿನಂತಿಸಿದರು. ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈರವರು ಮಾತನಾಡಿ ಬಂಟರ ಸಂಘದಿಂದ ಸಮಾಜದಲ್ಲಿ ಸಾಧನೆ ಮಾಡಿದವರು ತುಂಬಾ ಮಂದಿ ಇದ್ದಾರೆ ಅವರನ್ನು ಗುರುತಿಸಲು ಇನ್ನೂ ಹೆಚ್ಚಿನ ಮಂದಿ ದಾನಿಗಳು ಮುಂದೆ ಬರುವಂತೆ ವಿನಂತಿಸಿದರು. ಬಂಟರ ಯಾನೆ…
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇಲ್ಲಿ ಪದಗ್ರಹಣ ಸಮಾರಂಭ ಮತ್ತು ಮಹಿಳಾ ವೇದಿಕೆಗೆ 25 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮಾಜಿ ಅಧ್ಯಕ್ಷರುಗಳನ್ನು ಅಭಿನಂದಿಸುವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ದಿವಂಗತ ಮಾಜಿ ಅಧ್ಯಕ್ಷೆ ಪುಷ್ಪಾ ಶೇಣವ ಅವರು ಮಹಿಳಾ ವೇದಿಕೆಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಅಂಜನಾ ಶೆಟ್ಟಿ, ಮಮತಾ ಶೆಟ್ಟಿ, ಆಶಾ ಆರ್ ಶೆಟ್ಟಿ, ಚಂದ್ರಕಲಾ ಬಿ ಶೆಟ್ಟಿ, ಬೇಬಿ ಎನ್ ಶೆಟ್ಟಿ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪುಷ್ಪ ಶೇಣವ ಅವರ ಸ್ಮರಣಿಕೆಯನ್ನು ಅವರ ಪುತ್ರಿ ಸರಾಯು ಶೆಟ್ಟಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ 2021-23 ನೇ ಸಾಲಿನಲ್ಲಿ ಅಧ್ಯಕ್ಷೆಯಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿರುವ ಚಿತ್ರಾ ಜೆ ಶೆಟ್ಟಿ ಅವರ ಸಂಘಟನಾ ಕಾರ್ಯವನ್ನು ಶ್ಲಾಘಿಸಿ ಸನ್ಮಾನಿಸಲಾಯಿತು. 2023-25 ನೇ ಸಾಲಿನ ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಅಧ್ಯಕ್ಷೆ ಭವ್ಯಾ…
ಈಗಾಗಲೇ ಹಲವಾರು ಚಿತ್ರೋತ್ಸವದಲ್ಲಿ ಪ್ರಶಂಸೆಗೆ ಒಳಗಾದ ಬಹ್ಮಕಮಲ ಸಿನಿಮಾಕ್ಕೆ ಮತ್ತೊಂದು ಗರಿ ಬಂದಿದೆ. ಹೌದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಬ್ರಹ್ಮಕಮಲ ಚಿತ್ರ ಮಾಡಿದ್ದಾರೆ. ಬ್ರಹ್ಮಕಮಲ ಚಿತ್ರ ಬಿಡುಗಡೆಗೂ ಮುಂಚೆ ಸಾಕಷ್ಟು ಫಿಲ್ಮ್ ಫೆಸ್ಟಿವಲ್ಗಳಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸಿನಿ ವಿಮರ್ಶಕರ ಮೆಚ್ಚುಗಗೆ ಪಾತ್ರವಾಗಿದೆ. ಈಗಾಗಲೇ ಫ್ರಾನ್ಸ್ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ. ಇಂಡೋ ಸಿಂಗಪುರ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅದ್ವಿತಿ ಶೆಟ್ಟಿಗೂ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ. ದಾದಾ ಸಾಹೇಬ್ ಫಾಲ್ಕೆ, ಅರುಣೋದಯ, ಕಲಕರಿ, ಚಲನಚಿತ್ರೋತ್ಸವಗಳನ್ನು…